ರಾಜ್ಯಕ್ಕೆ ಬಂದ ಲೋಕಸಭೆ ಸಭಾಧ್ಯಕ್ಷರಿಗೆ ಅಗೌರವ ಸಲ್ಲ: ಹೆಚ್.ಡಿ.ಕುಮಾರಸ್ವಾಮಿ
Team Udayavani, Sep 24, 2021, 8:42 PM IST
ಬೆಂಗಳೂರು: ಲೋಕಸಭೆ ಸಭಾಧ್ಯಕ್ಷರು ಹಾಗೂ ಅವರು ಅಲಂಕರಿಸಿರುವ ಪೀಠಕ್ಕೆ ಅಗೌರವ ತೋರಬಾರದು ಎನ್ನುವ ಒಂದೇ ಕಾರಣಕ್ಕೆ ಇಂದು ನಡೆದ ವಿಧಾನಮಂಡಲ ಜಂಟಿ ಅಧಿವೇಶನ ಕಲಾಪದಲ್ಲಿ ಜೆಡಿಎಸ್ ಪಕ್ಷದ ಶಾಸಕರು ಪಾಲ್ಗೊಂಡಿದ್ದರು ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರು ಹಾಗೂ ಮಾಜಿ ಮುಖ್ಯಮಂತ್ರಿಗಳೂ ಆದ ಎಚ್.ಡಿ.ಕುಮಾರಸ್ವಾಮಿ ಹೇಳಿದರು.
ಕಲಾಪದ ನಂತರ ಮಾಧ್ಯಮಗಳ ಜತೆ ಮಾತನಾಡಿದ ಅವರು, “ರಾಜ್ಯದ ಸಂಸದೀಯ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ರಾಜ್ಯ ವಿಧಾನಸಭೆಯ ಸಭಾಧ್ಯಕ್ಷರು ಲೋಕಸಭೆಯ ಸಭಾಧ್ಯಕ್ಷರನ್ನು ಆಹ್ವಾನಿಸಿ ಜಂಟಿ ಅಧಿವೇಶವನ್ನು ಆಯೋಜಿಸಿದ್ದಾರೆ. ಇಂಥ ಅಪರೂಪದ ಸಂದರ್ಭದಲ್ಲಿ ಗೈರು ಹಾಜರಾಗುವುದು ಎಂದರೆ ಲೋಕಸಭಾಧ್ಯಕ್ಷರ ಪೀಠಕ್ಕೆ ಅಗೌರವ ತೋರಿದಂತೆ. ಹೀಗೆ ಆಗುವುದು ಬೇಡ ಹಾಗೂ ಸಂಸದೀಯ, ಪ್ರಜಾಪ್ರಭುತ್ವ ಮೌಲ್ಯಗಳನ್ನು ಎತ್ತಿಹಿಡಿಯುವ ಏಕೈಕ ಉದ್ದೇಶದಿಂದ ಕಲಾಪದಲ್ಲಿ ನಮ್ಮ ಪಕ್ಷ ಭಾಗವಹಿಸಿತು”ಎಂದರು.
ಸಂಸದೀಯ ವ್ಯವಸ್ಥೆಯಲ್ಲಿ ಈ ರೀತಿಯಲ್ಲಿ ಲೋಕಸಭೆಯ ಅಧ್ಯಕ್ಷರು ವಿಧಾನ ಮಂಡಲ ಜಂಟಿ ಕಲಾಪವನ್ನು ಉದ್ದೇಶಿಸಿ ಮಾತನಾಡಲು ಅವಕಾಶ ಇಲ್ಲ ಎನ್ನುವ ಬಗ್ಗೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ ಅವರು, ಈ ಬಗ್ಗೆ ಸಾಂವಿಧಾನಿಕ ತಜ್ಞರೇ ಉತ್ತರ ನೀಡಲಿ ಎಂದರು.
ಇನ್ನು, ಕಾಂಗ್ರೆಸ್ ಪಕ್ಷದ ಸದಸ್ಯರು ಜಂಟಿ ಕಲಾಪವನ್ನು ಬಹಿಷ್ಕರಿಸಿದ್ದರಲ್ಲಾ ಎಂಬ ಪ್ರಶ್ನೆಗೆ, ಅದು ಆ ಪಕ್ಷಕ್ಕೆ ಬಿಟ್ಟ ವಿಚಾರ. ನಮ್ಮ ಪಕ್ಷದ ನಿಲುವನ್ನು ನಾವು ತೆಗೆದುಕೊಂಡಿದ್ದೇವೆ ಎಂದು ಉತ್ತರಿಸಿದರು.
ಸದನದ ಕಲಾಪದ ಬಗ್ಗೆ ಹೊರಗೆ ಮಾತನಾಡುವುದು ಸರಿಯಲ್ಲ. ಕಲಾಪ ಹೇಗೆ ನಡೆಯುತ್ತಿದೆ ಎಂಬುದು ರಾಜ್ಯ ಜನತೆಗೆ ಚೆನ್ನಾಗಿ ಗೊತ್ತಾಗುತ್ತಿದೆ. ಎಲ್ಲವನ್ನೂ ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. ಆದರೆ, ಕಲಾಪದ ಬಗ್ಗೆ ಬಹಿರಂಗವಾಗಿ ಮಾತನಾಡಿ ಸದನಕ್ಕೆ ಅಗೌರವ ತೋರುವ ಅಥವಾ ಸದನ ಪಾವಿತ್ರ್ಯತೆಗೆ ಧಕ್ಕೆ ತರಬಾರದು ಎನ್ನುವುದು ನನ್ನ ನಿಲುವು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಭಾರತದ ಸ್ವಾತಂತ್ರ್ಯೋತ್ಸವ ಅಮೃತ ಮಹೋತ್ಸವದ ಅಂಗವಾಗಿ ‘ಪ್ರಜಾಪ್ರಭುತ್ವ ಮತ್ತು ಸಂಸದೀಯ ಮೌಲ್ಯಗಳ ರಕ್ಷಣೆಯ ಕುರಿತಾಗಿ ಇದೇ ಪ್ರಥಮ ಬಾರಿಗೆ ಕರ್ನಾಟಕ ವಿಧಾನಮಂಡಲ ಜಂಟಿ ಅಧಿವೇಶನವನ್ನುದ್ದೇಶಿಸಿ ಲೋಕಸಭೆ ಸಭಾಧ್ಯಕ್ಷರಾದ ಓಂ ಬಿರ್ಲಾ ಅವರು ಭಾಷಣ ಮಾಡಿದ್ದ ಮಾತನಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್ ಆಕ್ರೋಶ
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.