ವರ್ಷಗಳು ಕಳೆದರೂ ವಿಸ್ತರಣೆ ಭಾಗ್ಯವಿಲ್ಲ

Team Udayavani, May 3, 2019, 11:08 AM IST

blore-5

ಬೆಂಗಳೂರು: ನಗರದಲ್ಲಿ ಸಂಚಾರ ದಟ್ಟಣೆಯ ಸವಾಲು ಎದುರಿಸುತ್ತಿರುವ ಬಳ್ಳಾರಿ ರಸ್ತೆ ಹಾಗೂ ಜಯಮಹಲ್ ರಸ್ತೆಗಳ ವಿಸ್ತರಣೆಗೆ ಯೋಜನೆ ರೂಪಿಸಿ ಹಲವು ವರ್ಷಗಳು ಕಳೆದಿದ್ದು, ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಯೋಜನೆ ನನೆಗುದಿದೆ ಬೀಳುವಂತಾಗಿದೆ.

ಬಳ್ಳಾರಿ ರಸ್ತೆ ಹಾಗೂ ಜಯಮಹಲ್ ರಸ್ತೆಗಳಲ್ಲಿ ನಿತ್ಯ ಸಂಚಾರ ದಟ್ಟಣೆ ಇದ್ದು, ಬೆಳಗ್ಗೆ ಹಾಗೂ ಸಂಜೆ ಸಮಯದಲ್ಲಿ ವಾಹನ ಸವಾರರು ಗಂಟೆಗಟ್ಟಲೇ ರಸ್ತೆಯಲ್ಲಿ ನಿಲ್ಲಬೇಕಾಗಿದೆ. ಅದಕ್ಕೆ ಪರಿಹಾರ ಕಂಡುಕೊಳ್ಳಲು ಪಾಲಿಕೆಯಿಂದ ರಸ್ತೆ ಅಗಲೀಕರಣ ಯೋಜನೆ ಕೈಗೆತ್ತಿಕೊಂಡರೂ ಒಂದಿಲ್ಲೊಂದು ವಿಘ್ನಗಳು ಎದುರಾಗುತ್ತಲೇ ಇವೆ.

ಬಳ್ಳಾರಿ ರಸ್ತೆ ಮೂಲಕ ನಗರದಿಂದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ, ಹೆಬ್ಟಾಳ, ಯಲಹಂಕ ಹಾಗೂ ಬಳ್ಳಾರಿ ಸೇರಿದಂತೆ ಹಲವು ಭಾಗಗಳಿಗೆ ನಿತ್ಯ ಲಕ್ಷಾಂತರ ವಾಹನಗಳು ಸಂಚರಿಸುತ್ತವೆ. ಆದರೆ, ರಸ್ತೆಗಳು ಕಿರಿದಾಗಿರುವುದರಿಂದ ಹಲವು ವರ್ಷಗಳಿಂದಲೂ ದಟ್ಟಣೆ ಸಮಸ್ಯೆ ಮುಂದುವರಿದಿದ್ದು, ಸಮಸ್ಯೆಗೆ ಪರಿಹಾರ ಒದಗಿಸುವಂತೆ ಜನರು ಹಲವು ವರ್ಷಗಳಿಂದ ಪಾಲಿಕೆಯನ್ನು ಒತ್ತಾಯಿಸುತ್ತಲೇ ಇದ್ದಾರೆ.

ದಟ್ಟಣೆ ಸಮಸ್ಯೆ ಪರಿಹಾರಿಸುವ ಉದ್ದೇಶದಿಂದ ಪಾಲಿಕೆ ಬಳ್ಳಾರಿ ರಸ್ತೆ ಹಾಗೂ ಜಯಮಹಲ್ ರಸ್ತೆ ಅಗಲೀಕರಣ ಕಾಮಗಾರಿಗೆ ಕೆಲವು ವರ್ಷಗಳ ಹಿಂದೆಯೇ ಚಾಲನೆ ನೀಡಿದೆ. ಆದರೆ, ಒಂದಲ್ಲ ಒಂದು ಸಮಸ್ಯೆಯಿಂದ ಯೋಜನೆಗೆ ಹಿನ್ನೆಡೆಯಾಗುತ್ತಿದ್ದು, ಜನರು ದಟ್ಟಣೆ ಸಮಸ್ಯೆಯಿಂದ ಬೇಸತ್ತಿದ್ದಾರೆ. ಹಿಂದಿನ ಸರ್ಕಾರ ಯೋಜನೆಗೆ ಅನುಮೋದನೆ ನೀಡಿದರೂ, ರಸ್ತೆ ಅಗಲೀಕರಣ ಕಾಮಗಾರಿ ಮಾತ್ರ ಆರಂಭವಾಗಿಲ್ಲ. ಇದರ ನಡುವೆ ಅರಮನೆ ಮೈದಾನ ಜಾಗಕ್ಕೆ ಟಿಡಿಆರ್‌ ನೀಡುವಲ್ಲಿ ಅಕ್ರಮ ನಡೆದಿದೆ ಎಂಬ ಆರೋಪಗಳು ಕೇಳಿಬಂದಿವೆ.

ಪಾರ್ಕಿಂಗ್‌, ಬೀದಿ ವ್ಯಾಪಾರಕ್ಕೆ ಬಳಕೆ: ಜಯಮಹಲ್ ಹಾಗೂ ಬಳ್ಳಾರಿ ರಸ್ತೆಯಲ್ಲಿ ಪಾಲಿಕೆಯಿಂದ ವಿಸ್ತರಿಸಿರುವ ರಸ್ತೆಯು ವಾಹನ ಸವಾರರಿಗಿಂತಲೂ ಖಾಸಗಿ ವಾಹನಗಳ ನಿಲುಗಡೆ ಹಾಗೂ ಬೀದಿ ವ್ಯಾಪಾರಿಗಳಿಗೆ ಹೆಚ್ಚು ಅನುಕೂಲವಾಗಿದೆ. ಪಾಲಿಕೆಯಿಂದ ಎರಡೂ ರಸ್ತೆಗಳಲ್ಲಿ ರಸ್ತೆ ಅಗಲೀಕರಣ ಮಾಡಲಾಗಿದ್ದು, ಕಾಮಗಾರಿ ಪೂರ್ಣಗೊಳ್ಳದ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ರಸ್ತೆ ಬಳಕೆಗೆ ಯೋಗ್ಯವಿಲ್ಲದಂತಾಗಿದೆ.

ಟಿಡಿಆರ್‌ ನೀಡುವ ಬಗ್ಗೆ ಗೊಂದಲ: ಮೇಖ್ರೀ ವೃತ್ತದಿಂದ ಬಿಡಿಎ ಜಂಕ್ಷನ್‌ವರೆಗೆ 45 ಮೀಟರ್‌, ಮೇಖ್ರೀವೃತ್ತದಿಂದ ಫ‌ನ್‌ವಲ್ಡ್ರ್ವರೆಗೆ 45 ಮೀಟರ್‌ ಹಾಗೂ ಅಲ್ಲಿಂದ ದಂಡು ರೈಲ್ವೆ ನಿಲ್ದಾಣದವರಿಗೆ 30 ಮೀಟರ್‌ ರಸ್ತೆಯನ್ನು ಅಗಲೀಕರಣ ಮಾಡಲು ಪಾಲಿಕೆ ಯೋಜನೆ ರೂಪಿಸಿದೆ. ಯೋಜನೆಗಾಗಿ ಒಟ್ಟಾರೆಯಾಗಿ 15.39 ಎಕರೆ ಜಮೀನು ಅಗತ್ಯವಿದ್ದು, ಇದಕ್ಕಾಗಿ 1300 ಕೋಟಿ ರೂ. ಟಿಡಿಆರ್‌ ನೀಡಬೇಕಾಗುತ್ತದೆ ಎಂದು ಅಧಿಕಾರಿಗಳು ಹೇಳುತ್ತಾರೆ. ಆದರೆ, ಅರಮನೆ ಮೈದಾನದ ಒಡೆತನ ವಿಚಾರಕ್ಕೆ ಸಂಬಂಧಿಸಿದ ಪ್ರಕರಣ ನ್ಯಾಯಾಲಯದಲ್ಲಿರುವುದು ಯೋಜನೆಗೆ ಹಿನ್ನಡೆಯುಂಟು ಮಾಡುತ್ತಿದೆ.

ಕಾಡುತ್ತಿದೆ ಒಳಚರಂಡಿ ನೀರಿನ ದುರ್ವಾಸನೆ

ಯಶವಂತಪುರ ಕೈಗಾರಿಕಾ ಪ್ರದೇಶದ ಬಹುತೇಕ ಭಾಗಗ ಳಲ್ಲಿ ಒಳಚರಂಡಿ ನೀರು ಹೊರಬರುತ್ತಿರುವುದರಿಂದ ಸುತ್ತಮುತ್ತಲಿನ ಭಾಗಗಳಲ್ಲಿ ತೀವ್ರ ದುರ್ವಾಸನೆ ಹರಡಿದೆ. ಇನ್ನು ಮಳೆ ಆರಂಭವಾಗಿರುವ ಹಿನ್ನೆಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ಒಳಚರಂಡಿ ತ್ಯಾಜ್ಯವೂ ರಸ್ತೆಗೆ ಬರುತ್ತಿದ್ದು ಜನರು ಸಂಚರಿಸಲು ಆಗದಂತಹ ಪರಿಸ್ಥಿತಿ ನಿರ್ಮಾಣವಾ ಗಿದೆ ಎಂದು ಇಲ್ಲಿನ ಖಾಸಗಿ ಕಂಪೆನಿಯ ಉದ್ಯೋಗಿ ಸತೀಶ್‌ ನಾಯಕ್‌ ಎಂಬುವರು ಆರೋಪಿಸಿದ್ದಾರೆ.

ಲಕ್ಷಾಂತರ ವೆಚ್ಚದಲ್ಲಿ ಮರಗಳ ಹಸ್ತಾಂತರ

ಜಯಮಹಲ್ ರಸ್ತೆ ವಿಸ್ತರಣೆಗಾಗಿ 112 ಮರಗಳನ್ನು ತೆರವುಗೊಳಿಸಲು ಪಾಲಿಕೆ ಮುಂದಾದಾಗ ಪರಿಸರ ಪ್ರೇಮಿಗಳಿಂದ ತೀವ್ರ ವಿರೋಧ ವ್ಯಕ್ತವಾಗಿತ್ತು. ಆ ಹಿನ್ನೆಲೆಯಲ್ಲಿ ಪಾಲಿಕೆಯಿಂದ 52ಕ್ಕೂ ಹೆಚ್ಚಿನ ಮರಗಳನ್ನು ಸ್ಥಳಾಂತರ ಮಾಡಲು ಪಾಲಿಕೆ ಯೋಜನೆ ರೂಪಿಸಿತ್ತು. ಮೊದಲ ಹಂತವಾಗಿ 15 ಮರಗಳನ್ನು ತೆಗೆದು ಅರಮನೆ ಮೈದಾನದಲ್ಲಿ ಮರುನಾಟಿ ಮಾಡಲಾಗಿತ್ತು. ಈ ವೇಳೆ ಪ್ರತಿ ಮರ ಸ್ಥಳಾಂತರಕ್ಕೆ ಪಾಲಿಕೆ 50 ಸಾವಿರ ರೂ. ವೆಚ್ಚ ಮಾಡಿತ್ತಾದರೂ ಯೋಜನೆ ಮಾತ್ರ ಪೂರ್ಣಗೊಂಡಿಲ್ಲ.

ಟಾಪ್ ನ್ಯೂಸ್

SriLanka ನೌಕಾಪಡೆಯಿಂದ 17 ತಮಿಳುನಾಡಿನ ಮೀನುಗಾರರ ಬಂಧನ; ಬಿಡುಗಡೆಗೆ ಸ್ಟಾಲಿನ್ ಮನವಿ

SriLanka ನೌಕಾಪಡೆಯಿಂದ ತಮಿಳುನಾಡಿನ 17 ಮೀನುಗಾರರ ಬಂಧನ; ಬಿಡುಗಡೆಗೆ ಸ್ಟಾಲಿನ್ ಮನವಿ

12-google-search

Year Ender 2024: ಗೂಗಲ್ ನಲ್ಲಿ ಈ ವರ್ಷ ಅತೀ ಹೆಚ್ಚು ಹುಡುಕಲ್ಪಟ್ಟ ವಿಷಯ ಯಾವುದು ಗೊತ್ತಾ?

Jaipur: 13 ಮಂದಿಯನ್ನು ಬಲಿ ಪಡೆದ ದುರಂತದಲ್ಲಿ LPG ಟ್ಯಾಂಕರ್ ಚಾಲಕ ಬದುಕುಳಿದಿದ್ದೇ ರೋಚಕ

ಪಾರ್ಟಿಗೆ ಕರೆದು ಬಟ್ಟೆ ಬಿಚ್ಚಿಸಿ, ಮೂತ್ರ ವಿಸರ್ಜಿಸಿ ಅವಮಾನ… ಮನನೊಂದ ಬಾಲಕ ಆತ್ಮಹತ್ಯೆ

OTT Release Date: ಸೂಪರ್‌ ಹಿಟ್‌ ʼಭೈರತಿ ರಣಗಲ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

OTT Release Date: ಸೂಪರ್‌ ಹಿಟ್‌ ʼಭೈರತಿ ರಣಗಲ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Yearender 2024:ಸುಶೀಲ್‌ ಕುಮಾರ್‌ ಮೋದಿ To ಬಾಬಾ-2024ರಲ್ಲಿ ವಿಧಿವಶರಾದ ರಾಜಕೀಯ ಮುಖಂಡರು

Yearender 2024:ಸುಶೀಲ್‌ ಕುಮಾರ್‌ ಮೋದಿ To ಬಾಬಾ-2024ರಲ್ಲಿ ವಿಧಿವಶರಾದ ರಾಜಕೀಯ ಮುಖಂಡರು

Tollywood: ಸಂಧ್ಯಾ ಥಿಯೇಟರ್‌ ಕಾಲ್ತುಳಿತ ಪ್ರಕರಣ; ಅಲ್ಲು ಅರ್ಜುನ್‌ ಬೌನ್ಸರ್‌ ಬಂಧನ

Tollywood: ಸಂಧ್ಯಾ ಥಿಯೇಟರ್‌ ಕಾಲ್ತುಳಿತ ಪ್ರಕರಣ; ಅಲ್ಲು ಅರ್ಜುನ್‌ ಬೌನ್ಸರ್‌ ಬಂಧನ

4-mng-2

Mangaluru: ಹೆಲಿಕಾಪ್ಟರ್ ಸಂಚಾರ: ಸ್ಥಳ ಬದಲಾವಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap: 2 ಲಾರಿಗಳ ಮಧ್ಯೆ ಸಿಲುಕಿ ಚಾಲಕ ಸಾವು; ಕೇಸ್‌

Road Mishap: 2 ಲಾರಿಗಳ ಮಧ್ಯೆ ಸಿಲುಕಿ ಚಾಲಕ ಸಾವು; ಕೇಸ್‌

Fraud Case: ಟೆಕಿಗೆ ವಂಚನೆ ಕೇಸ್‌; ಆರೋಪಿ ಪತ್ತೆಗೆ ತಂಡ ರಚನೆ

Fraud Case: ಟೆಕಿಗೆ ವಂಚನೆ ಕೇಸ್‌; ಆರೋಪಿ ಪತ್ತೆಗೆ ತಂಡ ರಚನೆ

5

New Year: ಹೊಸ ವರ್ಷಾಚರಣೆಗೆ 7ಲಕ್ಷ ಜನ ಭಾಗಿ ನಿರೀಕ್ಷೆ; ಪರಂ

Fraud case: ಚಿನ್ನಾಭರಣ ವಂಚನೆ ಕೇಸ್‌; ವಿಚಾರಣೆಗೆ ಬಾರದ ವರ್ತೂರ್‌ಗೆ 3ನೇ ನೋಟಿಸ್‌ 

Fraud case: ಚಿನ್ನಾಭರಣ ವಂಚನೆ ಕೇಸ್‌; ವಿಚಾರಣೆಗೆ ಬಾರದ ವರ್ತೂರ್‌ಗೆ 3ನೇ ನೋಟಿಸ್‌ 

Bengaluru: ಕೌಟುಂಬಿಕ ಕಾರಣಕ್ಕೆ ಲಾರಿ ಉದ್ಯಮಿ ಆತ್ಮಹತ್ಯೆ

Bengaluru: ಕೌಟುಂಬಿಕ ಕಾರಣಕ್ಕೆ ಲಾರಿ ಉದ್ಯಮಿ ಆತ್ಮಹತ್ಯೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ದೆಹಲಿ ಪರೇಡ್‌ಗೆ ಬ್ರಹ್ಮ ಜಿನಾಲಯ ಸ್ತಬ್ಧಚಿತ್ರ; ಗತ ವೈಭವ ಸಾರಲಿದೆ ಟ್ಯಾಬ್ಲೊ

ದೆಹಲಿ ಪರೇಡ್‌ಗೆ ಬ್ರಹ್ಮ ಜಿನಾಲಯ ಸ್ತಬ್ಧಚಿತ್ರ; ಗತ ವೈಭವ ಸಾರಲಿದೆ ಟ್ಯಾಬ್ಲೊ

SriLanka ನೌಕಾಪಡೆಯಿಂದ 17 ತಮಿಳುನಾಡಿನ ಮೀನುಗಾರರ ಬಂಧನ; ಬಿಡುಗಡೆಗೆ ಸ್ಟಾಲಿನ್ ಮನವಿ

SriLanka ನೌಕಾಪಡೆಯಿಂದ ತಮಿಳುನಾಡಿನ 17 ಮೀನುಗಾರರ ಬಂಧನ; ಬಿಡುಗಡೆಗೆ ಸ್ಟಾಲಿನ್ ಮನವಿ

12-google-search

Year Ender 2024: ಗೂಗಲ್ ನಲ್ಲಿ ಈ ವರ್ಷ ಅತೀ ಹೆಚ್ಚು ಹುಡುಕಲ್ಪಟ್ಟ ವಿಷಯ ಯಾವುದು ಗೊತ್ತಾ?

Jaipur: 13 ಮಂದಿಯನ್ನು ಬಲಿ ಪಡೆದ ದುರಂತದಲ್ಲಿ LPG ಟ್ಯಾಂಕರ್ ಚಾಲಕ ಬದುಕುಳಿದಿದ್ದೇ ರೋಚಕ

ಪಾರ್ಟಿಗೆ ಕರೆದು ಬಟ್ಟೆ ಬಿಚ್ಚಿಸಿ, ಮೂತ್ರ ವಿಸರ್ಜಿಸಿ ಅವಮಾನ… ಮನನೊಂದ ಬಾಲಕ ಆತ್ಮಹತ್ಯೆ

OTT Release Date: ಸೂಪರ್‌ ಹಿಟ್‌ ʼಭೈರತಿ ರಣಗಲ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

OTT Release Date: ಸೂಪರ್‌ ಹಿಟ್‌ ʼಭೈರತಿ ರಣಗಲ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.