ಸಂಪುಟ ವಿಸ್ತರಣೆಗೆ ಕಾದು ಕುಳಿತ ಆಕಾಂಕ್ಷಿಗಳು


Team Udayavani, Jun 29, 2018, 6:40 AM IST

congress-700.jpg

ಬೆಂಗಳೂರು: ರಾಜ್ಯ ವಿಧಾನ ಮಂಡಲದ ಬಜೆಟ್‌ ಅಧಿವೇಶನ ಆರಂಭವಾಗುವ ಮೊದಲೇ ಸಂಪುಟ
ವಿಸ್ತರಣೆಯಾಗಬಹುದು ಎಂದು ಹೇಳಲಾಗಿದ್ದು, ಹೈಕಮಾಂಡ್‌ನಿಂದ ಸಚಿವರಾಗಲು ಕರೆ ಬರಬಹುದೆಂಬ ವಿಶ್ವಾಸದಲ್ಲಿ ಸಚಿವಾಕಾಂಕ್ಷಿಗಳು ಕಾದು ಕುಳಿತಿದ್ದಾರೆ.

ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಈಗಾಗಲೇ ಐವರನ್ನು ಸಂಪುಟಕ್ಕೆ ಸೇರಿಸಿಕೊಳ್ಳಲು ಒಪ್ಪಿಗೆ ಸೂಚಿಸಿದ್ದಾರೆ ಎನ್ನಲಾಗಿದ್ದು, ರಾಜ್ಯ ಉಸ್ತುವಾರಿ ಕೆ.ಸಿ. ವೇಣುಗೋಪಾಲ್‌, ಲೋಕಸಭೆಯಲ್ಲಿ ಕಾಂಗ್ರೆಸ್‌ ಸಂಸದೀಯ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ ಸಂಪುಟ ವಿಸ್ತರಣೆಗೆ ಅಧಿಕೃತ ದಿನಾಂಕ ನಿಗದಿ ಮಾಡಬೇಕಿದೆ ಎಂದು ತಿಳಿದು ಬಂದಿದೆ.

ಮೊದಲ ಹಂತದಲ್ಲಿ ಸಂಪುಟದಲ್ಲಿ ಸ್ಥಾನ ವಂಚಿತರಾಗಿರುವ ಎಂ.ಬಿ. ಪಾಟೀಲ್‌, ಭದ್ರಾವತಿ ಶಾಸಕ ಬಿ.ಕೆ. ಸಂಗಮೇಶ್‌, ಕುಂದಗೋಳ ಶಾಸಕ ಸಿ.ಎಸ್‌.ಶಿವಳ್ಳಿ, ಸಂಡೂರು ಶಾಸಕ ತುಕಾರಾಂ ಹಾಗೂ ಒಕ್ಕಲಿಗರ ಕೋಟಾದಲ್ಲಿ ರಾಮಲಿಂಗಾ ರೆಡ್ಡಿ ಅಥವಾ ಎಂ. ಕೃಷ್ಣಪ್ಪ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳಲು ನಿರ್ಧರಿಸಲಾಗಿದೆ ಎಂದು ತಿಳಿದು ಬಂದಿದೆ. 

ಈ ಜೂನ್‌ 29 ಅಥವಾ 30ರಂದು ಸಂಪುಟ ವಿಸ್ತರಣೆಯಾಗಬಹುದೆಂದು ಸಚಿವಾಕಾಂಕ್ಷಿಗಳು ಹೈಕಮಾಂಡ್‌ ಗ್ರೀನ್‌ ಸಿಗ್ನಲ್‌ಗೆ ಕಾದು ಕುಳಿತಿದ್ದಾರೆ.

ಈಮಧ್ಯೆ, ಸಂಪುಟ ಸೇರ್ಪಡೆಗೆ ವಿಳಂಬ ನೀತಿ ಅನುಸರಿಸುತ್ತಿರುವ ಬಗ್ಗೆ ಎಂ.ಬಿ. ಪಾಟೀಲ್‌ ಗುರುವಾರ ತಮ್ಮನ್ನು ಭೇಟಿ ಮಾಡಿದ್ದ ಮಾಜಿ ಸಚಿವ ಸತೀಶ್‌ ಜಾರಕಿಹೊಳಿ ಹಾಗೂ ಗ್ರಾಮೀಣಾಭಿವೃದಿಟಛಿ ಸಚಿವ ಕೃಷ್ಣ ಬೈರೇಗೌಡ ಅವರ ಎದುರು ಅಸಮಾಧಾನ ಹೊರ ಹಾಕಿದ್ದಾರೆ ಎನ್ನಲಾಗಿದೆ.

ಅತೃಪ್ತ ಶಾಸಕರು ಈಗಲೂ ಸಂಪರ್ಕದಲ್ಲಿದ್ದು, ಶೀಘ್ರ ಸೂಕ್ತ ನಿರ್ಧಾರ ತೆಗೆದುಕೊಳ್ಳದಿದ್ದರೆ, ಜುಲೈ 15ರ ನಂತರ ಅತೃಪ್ತ ಶಾಸಕರ ಜತೆ ಚರ್ಚಿಸಿ ಮುಂದಿನ ತೀರ್ಮಾನ ಕೈಗೊಳ್ಳಬೇಕಾಗುತ್ತದೆ ಎಂಬ ಸಂದೇಶ ರವಾನಿಸಿದ್ದಾರೆಂದು ತಿಳಿದು ಬಂದಿದೆ.

ಐವರು ಶಾಸಕರನ್ನು ಸಂಪುಟಕ್ಕೆ ಸೇರಿಸಿಕೊಂಡರೆ, ಎರಡು ಖಾತೆಗಳನ್ನು ಹೊಂದಿರುವ ಡಿ.ಕೆ.ಶಿವಕುಮಾರ್‌, ಕೃಷ್ಣಬೈರೇಗೌಡ, ಯು.ಟಿ. ಖಾದರ್‌,ರಾಜಶೇಖರ ಪಾಟೀಲ್‌ ಹಾಗೂ ಜಯಮಾಲಾ ತಮ್ಮ ಬಳಿ ಹೆಚ್ಚುವರಿಯಾಗಿ ಹೊಂದಿರುವ ಖಾತೆಗಳನ್ನು ಬಿಟ್ಟುಕೊಡಬೇಕಾಗುತ್ತದೆ. ಈ ನಡುವೆ ಶುಕ್ರವಾರ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ಕೆ.ಸಿ.ವೇಣುಗೋಪಾಲ್‌ ಬೆಂಗಳೂರಿಗೆ ಆಗಮಿಸುತ್ತಿದ್ದು, ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಕೂಡ ಪ್ರಕೃತಿ ಚಿಕಿತ್ಸೆ ಮುಗಿಸಿಕೊಂಡು ಬೆಂಗಳೂರಿಗೆ ಆಗಮಿಸಿರುವುದರಿಂದ, ಸಂಪುಟ ವಿಸ್ತರಣೆ ಕುರಿತು ಚರ್ಚಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

ಸಂಪುಟ ವಿಸ್ತರಣೆ ಆದಷ್ಟು ಶೀಘ್ರವಾಗಿ ಆಗಬೇಕಿದೆ. ಎಂ.ಬಿ.ಪಾಟೀಲ್‌ ಸೇರಿ ಎಲ್ಲರ ಒತ್ತಾಯವೂ ಇದೇ ಆಗಿದೆ.
ಇದರ ಬಗ್ಗೆ ಪಕ್ಷದ ನಾಯಕರು ಸೂಕ್ತ ತೀರ್ಮಾನ ಕೈಗೊಳ್ಳುತ್ತಾರೆ.

– ಕೃಷ್ಣಬೈರೇಗೌಡ,
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ

ಟಾಪ್ ನ್ಯೂಸ್

Kolara-RSS

Kolara: ಹೈಕೋರ್ಟ್‌ ಅನುಮತಿ ಬಳಿಕ ಬಿಗಿ ಭದ್ರತೆಯಲ್ಲಿ ಆರೆಸ್ಸೆಸ್‌ ಪಥಸಂಚಲನ

DVG-CM

Caste Census: ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿ ಮಂಡನೆ: ಸಿಎಂ

Delhi Assembly Elections: ಬಿಜೆಪಿ ಗೆದ್ದರಷ್ಟೇ ದಿಲ್ಲಿ ನಂ.1 ರಾಜಧಾನಿ: ಪ್ರಧಾನಿ ಮೋದಿ

Delhi Assembly Elections: ಬಿಜೆಪಿ ಗೆದ್ದರಷ್ಟೇ ದಿಲ್ಲಿ ನಂ.1 ರಾಜಧಾನಿ: ಪ್ರಧಾನಿ ಮೋದಿ

PM ಮೋದಿ ಉದ್ಘಾಟಿಸಿದ್ದೆಲ್ಲ ಆಪ್‌ನ ಜಂಟಿ ಯೋಜನೆಗಳು: ಕೇಜ್ರಿವಾಲ್‌

PM ಮೋದಿ ಉದ್ಘಾಟಿಸಿದ್ದೆಲ್ಲ ಆಪ್‌ನ ಜಂಟಿ ಯೋಜನೆಗಳು: ಕೇಜ್ರಿವಾಲ್‌

Uttar Pradesh: ಮಹಾಕುಂಭದಲ್ಲಿ ಮುಸ್ಲಿಮರ ಮತಾಂತರ: ಯೋಗಿಗೆ ಮೌಲ್ವಿ ಪತ್ರ

Uttar Pradesh: ಮಹಾಕುಂಭದಲ್ಲಿ ಮುಸ್ಲಿಮರ ಮತಾಂತರ: ಯೋಗಿಗೆ ಮೌಲ್ವಿ ಪತ್ರ

Bangladesh ನ್ಯಾಯಾಂಗ ಸಿಬಂದಿಯ ಭಾರತದಲ್ಲಿನ ತರಬೇತಿ ರದ್ದು

Bangladesh ನ್ಯಾಯಾಂಗ ಸಿಬಂದಿಯ ಭಾರತದಲ್ಲಿನ ತರಬೇತಿ ರದ್ದು

Bhopal: ಭಕ್ತರು ನೀಡಿದ್ದ ದೇಣಿಗೆ ಜತೆಗೆ ಇಸ್ಕಾನ್‌ ಸಿಬಂದಿ ಪರಾರಿ: ದೂರು

Bhopal: ಭಕ್ತರು ನೀಡಿದ್ದ ದೇಣಿಗೆ ಜತೆಗೆ ಇಸ್ಕಾನ್‌ ಸಿಬಂದಿ ಪರಾರಿ: ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kolara-RSS

Kolara: ಹೈಕೋರ್ಟ್‌ ಅನುಮತಿ ಬಳಿಕ ಬಿಗಿ ಭದ್ರತೆಯಲ್ಲಿ ಆರೆಸ್ಸೆಸ್‌ ಪಥಸಂಚಲನ

DVG-CM

Caste Census: ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿ ಮಂಡನೆ: ಸಿಎಂ

BSY1

ಮಹಿಳೆಯರಿಗೆ ಉಚಿತ ಕೊಟ್ಟು, ಪುರುಷರಿಗೆ ಬಸ್‌ ದರ ಏರಿಕೆ ಭಾರ ಸರಿಯಲ್ಲ: ಬಿ.ಎಸ್‌.ಯಡಿಯೂರಪ್ಪ

Na-Desoza

Passes Away: ಹಿರಿಯ ಸಾಹಿತಿ ನಾ.ಡಿ’ಸೋಜಾ ವಿಧಿವಶ

Yathanaa

BJP Inner Politics: ಬಿ.ವೈ.ವಿಜಯೇಂದ್ರ ಬಿಜೆಪಿ ಹಂಗಾಮಿ ರಾಜ್ಯಾಧ್ಯಕ್ಷ: ಬಸನಗೌಡ ಯತ್ನಾಳ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kolara-RSS

Kolara: ಹೈಕೋರ್ಟ್‌ ಅನುಮತಿ ಬಳಿಕ ಬಿಗಿ ಭದ್ರತೆಯಲ್ಲಿ ಆರೆಸ್ಸೆಸ್‌ ಪಥಸಂಚಲನ

DVG-CM

Caste Census: ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿ ಮಂಡನೆ: ಸಿಎಂ

Delhi Assembly Elections: ಬಿಜೆಪಿ ಗೆದ್ದರಷ್ಟೇ ದಿಲ್ಲಿ ನಂ.1 ರಾಜಧಾನಿ: ಪ್ರಧಾನಿ ಮೋದಿ

Delhi Assembly Elections: ಬಿಜೆಪಿ ಗೆದ್ದರಷ್ಟೇ ದಿಲ್ಲಿ ನಂ.1 ರಾಜಧಾನಿ: ಪ್ರಧಾನಿ ಮೋದಿ

PM ಮೋದಿ ಉದ್ಘಾಟಿಸಿದ್ದೆಲ್ಲ ಆಪ್‌ನ ಜಂಟಿ ಯೋಜನೆಗಳು: ಕೇಜ್ರಿವಾಲ್‌

PM ಮೋದಿ ಉದ್ಘಾಟಿಸಿದ್ದೆಲ್ಲ ಆಪ್‌ನ ಜಂಟಿ ಯೋಜನೆಗಳು: ಕೇಜ್ರಿವಾಲ್‌

Uttar Pradesh: ಮಹಾಕುಂಭದಲ್ಲಿ ಮುಸ್ಲಿಮರ ಮತಾಂತರ: ಯೋಗಿಗೆ ಮೌಲ್ವಿ ಪತ್ರ

Uttar Pradesh: ಮಹಾಕುಂಭದಲ್ಲಿ ಮುಸ್ಲಿಮರ ಮತಾಂತರ: ಯೋಗಿಗೆ ಮೌಲ್ವಿ ಪತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.