ಕೋವಿಡ್‌ ನಿಯಂತ್ರಣಕ್ಕೆ ತಜ್ಞರ ಸಲಹೆ

Team Udayavani, Apr 17, 2021, 12:29 PM IST

Expert advice on covid control

ಬೆಂಗಳೂರು: ಮೊಬೈಲ್‌ ಘಟಕಗಳ ಮೂಲಕ ಅರ್ಹರಿಗೆ ಲಸಿಕೆ ಹಾಕಿಸುವುದು. ಸ್ಥಳೀಯವಾಗಿ ವೈದ್ಯರ ತಂಡ ರಚಿಸಿ ಅರ್ಹರಿಗೆ ಸಚಿವರ ಕಚೇರಿಯಿಂದ ಔಷಧ ವಿತರಿಸಬಹುದು. ಕಾಲ್‌ ಸೆಂಟರ್‌ ಆರಂಭಿಸಬಹುದು. ಕೋವಿಡ್‌ ಸೋಂಕಿನ ಯಾವುದೇ ರೀತಿಯ ಲಕ್ಷಣ ಕಂಡುಬಂದರೂ ನಿರ್ಲಕ್ಷಿಸದೆ ವೈದ್ಯರ ಸಲಹೆ ಪಡೆಯುವಂತೆ ವ್ಯಾಪಕ ಜಾಗೃತಿ ಮೂಡಿಸಬಹುದು. ಕೋವಿಡ್‌ ನಿಯಂತ್ರಣ, ಸಮಪರ್ಕ ನಿರ್ವಹಣೆಗಾಗಿ ಮಣಿಪಾಲ್‌ ಆಸ್ಪತ್ರೆಯ ಶಾಸ್ವಕೋಶ ತಜ್ಞ ಡಾ.ಸತ್ಯನಾರಾಯಣ ಮೈಸೂರು ಅವರು ನೀಡಿರುವ ಪ್ರಮುಖ ಸಲಹೆಗಳಿವು.

ಸಚಿವ ಕೆ.ಗೋಪಾಲಯ್ಯ ಅವರು ಕೋವಿಡ್‌ ಹಾಗೂ ನಿಯಂತ್ರಣ ಕುರಿತಂತೆ ಮಹಾಲಕ್ಷ್ಮೀ ಲೇಔಟ್‌ ಕ್ಷೇತ್ರದ ಜನರಿಗಾಗಿ ಹಮ್ಮಿಕೊಂಡಿದ್ದ ವಿಡಿಯೋ ಸಂವಾದದಲ್ಲಿ ತಜ್ಞ ವೈದ್ಯರು ಸಲಹೆ, ಮಾರ್ಗದರ್ಶನ ನೀಡುವ ಜತೆಗೆ ಗೊಂದಲ ನಿವಾರಿಸುವ ಪ್ರಯತ್ನ ಮಾಡಿದರು.

ಡಾ.ಸತ್ಯನಾರಾಯಣ ಮೈಸೂರು ಮಾತನಾಡಿ, ಮುಖ್ಯವಾಗಿ ಅಪಾರ್ಟ್‌ಮೆಂಟ್‌ ಸೇರಿದಂತೆ ಜನವಸತಿ ಹೆಚ್ಚಾಗಿರುವ ಕಡೆ ಮೊಬೈಲ್‌ ಘಟಕಗಳ ಮೂಲಕ ಅರ್ಹರಿಗೆ ಲಸಿಕೆ ಹಾಕಿಸಲು ಒತ್ತು ನೀಡಬೇಕು. ಕ್ಷೇತ್ರ ವ್ಯಾಪ್ತಿಯ ಆಸ್ಪತ್ರೆ, ನರ್ಸಿಂಗ್‌ ಹೋಂ, ಕೋವಿಡ್‌ ಕೇರ್‌ ಸೆಂಟರ್‌ಗಳನ್ನು ಒಟ್ಟುಗೂಡಿಸಿ ಸರಿಯಾದ ಮಾಹಿತಿಯನ್ನು ಜನರಿಗೆ ತಿಳಿಸಲು ಕಾಲ್‌ ಸೆಂಟರ್‌ ಆರಂಭಿಸ ಬಹುದು. ಸೋಂಕಿತರು ಆಸ್ಪತ್ರೆಗೆ ದಾಖಲಾಗುವುದಾ ದರೆ ಸಂಬಂಧಪಟ್ಟ ಆಸ್ಪತ್ರೆಗೆ ಮೊದಲೇ ಮಾಹಿತಿ ನೀಡಿ ಚಿಕಿತ್ಸೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳುವ ವ್ಯವಸ್ಥೆ ರೂಪಿಸಬಹುದು.

ಜ್ವರ ಕಾಣಿಸಿಕೊಂಡ ಆರಂಭದಲ್ಲಿ ನಿರ್ಲಕ್ಷಿಸಿ ಏಳು ದಿನಗಳ ಬಳಿಕ ಉಲ್ಬಣಿಸಿದ್ದರೆ ಚಿಕಿತ್ಸೆ ಕ್ಲಿಷ್ಟಕರವಾಗಲಿದೆ. ಅಗತ್ಯವಿದ್ದವರಿಗೆ ವೆಂಟಿಲೇಟರ್‌ಸಹಿತ ಹಾಸಿಗೆ ಸಿಗುವಂತೆ ಮೇಲ್ವಿಚಾರಣೆ ನಡೆಸ ಬೇಕು. ಹೋಂ ಕ್ವಾರಂಟೈಟನ್‌ನಲ್ಲಿ ಇರುವವರಿಗೆ ಇಸ್ಕಾನ್‌ನಿಂದ ಕೆಲ ದಿನದ ಮಟ್ಟಿಗೆ ಊಟ ಪೂರೈಸುವಂತಾದರೆ ಉತ್ತಮ ಎಂದರು.

ಜೂಮ್‌ ಆ್ಯಪ್‌ನಲ್ಲಿ ಪಾಲ್ಗೊಂಡಿದ್ದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಯುಕ್ತ ಡಾ.ಕೆ.ವಿ. ತ್ರಿಲೋಕ್‌ ಚಂದ್ರ, ಬೆಂಗಳೂರಿನಲ್ಲಿ ನಿತ್ಯ 10,000 ಹೊಸ ಪ್ರಕರಣ ವರದಿಯಾಗುತ್ತಿದ್ದು, ಇಲಾಖೆ ಮೇಲೆ ಒತ್ತಡ ಹೆಚ್ಚಾಗುತ್ತಿದೆ. ಎಲ್ಲರೂ ಕೈಜೋಡಿಸಿದರಷ್ಟೇ ಕೋವಿಡ್‌ ಎರಡನೇ ಅಲೆ ನಿಯಂತ್ರಿಸಲು ಸಾಧ್ಯ ಎಂದರು.

ತಜ್ಞರಾದ ಡಾ. ಮಹೇಂದ್ರ, ಬಿಬಿಎಂಪಿ ಆರೋಗ್ಯ ವಿಭಾಗದ ಶಿವಸ್ವಾಮಿ, ಮಂಜುಳಾ ಪಾಲ್ಗೊಂಡಿದ್ದರು. ಸಂವಾದದಲ್ಲಿ ಮಾಜಿ ಶಾಸಕ ನೆ.ಲ. ನರೇಂದ್ರಬಾಬು, ಮಾಜಿ ಉಪಮೇಯರ್‌ ಎಸ್‌. ಹರೀಶ್‌ ಇತರರಿದ್ದರು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್‌. ರಾಜಣ್ಣ

Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್‌. ರಾಜಣ್ಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಹಸುಗೂಸನ್ನೂ ಕೊಲ್ಲಲು ಯತ್ಲಿಸಿದ ತಂದೆಯ ಹತ್ಯೆ

Bengaluru: ಹಸುಗೂಸನ್ನೂ ಕೊಲ್ಲಲು ಯತ್ಲಿಸಿದ ತಂದೆಯ ಹತ್ಯೆ

4

Arrested: ದುಬೈ ಸೈಬರ್‌ ವಂಚಕರಿಗೆ ನೆರವು: 10 ಮಂದಿ ಸೆರೆ

Bengaluru: ಪೊಲೀಸರಿಂದ ಅಪ್ರಾಪ್ತೆಯ ಫೋಟೋ ಕೇಸ್‌: ನೋಟಿಸ್‌

Bengaluru: ಪೊಲೀಸರಿಂದ ಅಪ್ರಾಪ್ತೆಯ ಫೋಟೋ ಕೇಸ್‌: ನೋಟಿಸ್‌

Bengaluru: ಪೊಲೀಸರ ಬೇಟೆ; 26 ಕೋಟಿ ರೂ. ಮಾದಕ ವಸ್ತು ವಶ

Bengaluru: ಪೊಲೀಸರ ಬೇಟೆ; 26 ಕೋಟಿ ರೂ. ಮಾದಕ ವಸ್ತು ವಶ

Bengaluru: ಟೆಕಿ ಅತುಲ್‌ನಂತೆ ಪತ್ನಿ ಕಿರುಕುಳ ತಾಳದೆ ಕಾರ್ಮಿಕ ಆತ್ಮಹತ್ಯೆ

Bengaluru: ಟೆಕಿ ಅತುಲ್‌ನಂತೆ ಪತ್ನಿ ಕಿರುಕುಳ ತಾಳದೆ ಕಾರ್ಮಿಕ ಆತ್ಮಹತ್ಯೆ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.