Bengaluru; ರಾಮೇಶ್ವರಂ ಕೆಫೆಯಲ್ಲಿ ಸ್ಫೋಟ; ಐವರಿಗೆ ಗಾಯ
Team Udayavani, Mar 1, 2024, 3:18 PM IST
ಬೆಂಗಳೂರು: ನಗರದ ಕುಂದಲಹಳ್ಳಿಯಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ಶುಕ್ರವಾರ ಸ್ಫೋಟ ಸಂಭವಿಸಿದ ಬಗ್ಗೆ ವರದಿಯಾಗಿದೆ. ಪ್ರಾಥಮಿಕ ವರದಿಗಳ ಪ್ರಕಾರ, ಘಟನೆಯಲ್ಲಿ ಐದು ಜನರು ಗಾಯಗೊಂಡಿದ್ದಾರೆ.
ಗ್ರೀನ್ ಅವೆನ್ಯೂ ರಸ್ತೆಯಲ್ಲಿರುವ ಕೆಫೆಯ ಬ್ರೂಕ್‌ಫೀಲ್ಡ್ ಶಾಖೆಯಲ್ಲಿ ಮಧ್ಯಾಹ್ನ 1.30ರ ಸುಮಾರಿಗೆ ಸ್ಫೋಟ ಸಂಭವಿಸಿದೆ. ಸ್ಫೋಟಕ್ಕೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ.
ಘಟನೆಯಲ್ಲಿ ಗಾಯಗೊಂಡವರ ಪೈಕಿ ಮೂವರು ಕೆಫೆ ಸಿಬ್ಬಂದಿಗಳು ಎಂದು ವರದಿಯಾಗಿದೆ.
ಸ್ಫೋಟದ ಬಗ್ಗೆ ಮಾಹಿತಿ ಪಡೆದ ಅಗ್ನಿಶಾಮಕ ಮತ್ತು ರಕ್ಷಣಾ ಸೇವೆಗಳ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದಾರೆ. ಪೊಲೀಸರು ತನಿಖೆ ಆರಂಭಿಸಿದ್ದಾರೆ.
#WATCH | An explosion occurred at The Rameshwaram Cafe in Whitefield, Bengaluru. Injuries reported. Details awaited. pic.twitter.com/9Ay3zBq3vr
— ANI (@ANI) March 1, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.