ರಾಜಿ ತೆರಿಗೆದಾರರಿಗೆ ಜಿಎಸ್ಟಿ ಅಡಿ ನೋಂದಣಿ ಅವಧಿ ವಿಸ್ತರಣೆ
Team Udayavani, Jul 23, 2017, 6:50 AM IST
ಬೆಂಗಳೂರು: ರಾಜಿ ತೆರಿಗೆ ವ್ಯಾಪ್ತಿಗೆ ಒಳಪಡುವವರಿಗೆ ಜಿಎಸ್ಟಿಯಡಿ ನೋಂದಣಿಗೆ ನೀಡಿದ್ದ ಗಡುವು ಜುಲೈ
21ಕ್ಕೆ ಮುಕ್ತಾಯವಾಗಿತ್ತು. ಈಗ ಕೇಂದ್ರ ಸರ್ಕಾರ ಆಗಸ್ಟ್ 16ರ ವರೆಗೆ ಅವಧಿ ವಿಸ್ತರಿಸಿದೆ.
ವಾರ್ಷಿಕ 75 ಲಕ್ಷ ರೂ. ಮಿತಿಯೊಳಗೆ ವ್ಯವಹಾರ ನಡೆಸುವವರು ರಾಜಿ ತೆರಿಗೆ ವ್ಯಾಪ್ತಿಗೆ ಒಳಪಡುತ್ತಾರೆ. ಈ ಪೈಕಿ ವರ್ತಕರು ಶೇ.1, ಉತ್ಪಾದಕರು ಶೇ.2 ಹಾಗೂ ಹೋಟೆಲ್ ಉದ್ಯಮದವರು ಶೇ.5 ತೆರಿಗೆಯನ್ನು ಮೂರು ತಿಂಗಳಿಗೊಮ್ಮೆ ಪಾವತಿಸಬೇಕು. ಈ ತೆರಿಗೆಯನ್ನು ಗ್ರಾಹಕರಿಂದ ಸಂಗ್ರಹಿಸದೆ ವರ್ತಕರು, ಉತ್ಪಾದಕರು,
ಹೋಟೆಲ್ ಉದ್ಯಮದವರೇ ಭರಿಸಬೇಕೆಂಬ ನಿಯಮವಿದೆ. ರಾಜಿ ತೆರಿಗೆ ವ್ಯಾಪ್ತಿಯಲ್ಲಿ ಇರುವವರು ಜಿಎಸ್ಟಿಯಡಿ ನೋಂದಣಿ ಮಾಡಿಕೊಳ್ಳಲು ಜು.21 ಕಡೆಯ ದಿನವಾಗಿತ್ತು. ಎಲ್ಲರೂ ಜಿಎಸ್ಟಿಯಡಿ ನೋಂದಾಯಿಸಿಕೊಳ್ಳಲು ಅನುಕೂಲವಾಗುವಂತೆ ಕೇಂದ್ರ ಸರ್ಕಾರ ಅವಧಿ ವಿಸ್ತರಿಸಿದೆ. ಅದರಂತೆ ರಾಜ್ಯ ವಾಣಿಜ್ಯ ತೆರಿಗೆ ಇಲಾಖೆಯೂ ಅಧಿಸೂಚನೆ ಹೊರಡಿಸಿದೆ ಎಂದು ವಾಣಿಜ್ಯ ತೆರಿಗೆ ಇಲಾಖೆ ಜಂಟಿ ಆಯುಕ್ತ ಬಿ.ವಿ.ಮುರಳಿಕೃಷ್ಣ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಯಚೂರಲ್ಲಿ ಮತ್ತೋರ್ವ ಬಾಣಂತಿ, ಹಸುಗೂಸು ಸಾವು
Mysuru: ಕೆಆರ್ಎಸ್ ರಸ್ತೆಗೆ “ಸಿದ್ದರಾಮಯ್ಯ ಆರೋಗ್ಯ ಮಾರ್ಗ’ ನಿಶ್ಚಿತ: ಲಕ್ಷ್ಮಣ್
Hosanagara: ರಸ್ತೆ ಅಪಘಾತದಲ್ಲಿ ಪತಿ ಮೃತಪಟ್ಟ ಸುದ್ದಿ ಕೇಳಿ ಆತ್ಮಹತ್ಯೆಗೆ ಶರಣಾದ ಪತ್ನಿ
Poster Campaign: ಸಚಿವ ಪ್ರಿಯಾಂಕ್ ವಿರುದ್ಧ ಬಿಜೆಪಿ ಪೋಸ್ಟರ್ ಆಂದೋಲನ;ಎಫ್ಐಆರ್ ದಾಖಲು
Belagavi: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಯ್ಕೆ ವಿಚಾರದ ಬಗ್ಗೆ ಸತೀಶ ಜಾರಕಿಹೊಳಿ ಹೇಳಿದ್ದೇನು?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Borewell Tragedy: ಹತ್ತು ದಿನಗಳ ಕಾರ್ಯಾಚರಣೆ… ಕೊನೆಗೂ ಬದುಕಿ ಉಳಿಯಲಿಲ್ಲ ಚೇತನಾ
ರಾಯಚೂರಲ್ಲಿ ಮತ್ತೋರ್ವ ಬಾಣಂತಿ, ಹಸುಗೂಸು ಸಾವು
Borewell Tragedy: 10 ದಿನದ ಕಾರ್ಯಾಚರಣೆ ಬಳಿಕ ಬದುಕಿ ಬಂದ ಬಾಲೆ, ಇದು ಪವಾಡ ಎಂದ ಪೋಷಕರು
Mysuru: ಯೋಗಾನರಸಿಂಹಸ್ವಾಮಿ ದೇಗುಲದಲ್ಲಿ ಭಕ್ತರಿಗೆ 2 ಲಕ್ಷ ಲಡ್ಡು ವಿತರಣೆ
Mysuru: ಕೆಆರ್ಎಸ್ ರಸ್ತೆಗೆ “ಸಿದ್ದರಾಮಯ್ಯ ಆರೋಗ್ಯ ಮಾರ್ಗ’ ನಿಶ್ಚಿತ: ಲಕ್ಷ್ಮಣ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.