ಸಾರಿಗೆ ಸಂಸ್ಥೆಯಿಂದ ಸಂಕ್ರಾಂತಿಗೆ ಹೆಚ್ಚುವರಿ ಬಸ್
Team Udayavani, Jan 12, 2018, 6:00 AM IST
ಬೆಂಗಳೂರು: ಮಕರ ಸಂಕ್ರಾಂತಿ ಅಂಗವಾಗಿ ಪ್ರಯಾಣಿಕರ ಅನುಕೂಲಕ್ಕಾಗಿ ಕೆಎಸ್‌ಆರ್‌ಟಿಸಿ, ಜ.12 ಮತ್ತು 13ರಂದು ಸುಮಾರು 200ರಿಂದ 300 ವಿಶೇಷ ಬಸ್‌ಗಳ ಸೇವೆ ಕಲ್ಪಿಸಿದೆ.
ಹಬ್ಬಕ್ಕೆ ನಗರದಿಂದ ರಾಜ್ಯದ ವಿವಿಧೆಡೆ ಮತ್ತು ಅಂತರರಾಜ್ಯಗಳಿಗೆ ತೆರಳುವವರಿಗಾಗಿ ಈ ಹೆಚ್ಚುವರಿ ಸೇವೆಗಳನ್ನು ಕಲ್ಪಿಸಲಾಗಿದ್ದು, ಸಾಮಾನ್ಯ, ವೇಗದೂತ, ಕರ್ನಾಟಕ ವೈಭವ, ರಾಜಹಂಸ, ಐರಾವತ, ಐರಾವತ ಕ್ಲಬ್ ಕ್ಲಾಸ್ ಹಾಗೂ ಡೈಮಂಡ್ ಕ್ಲಾಸ್ ಬಸ್‌ಗಳು ಕಾರ್ಯಾಚರಣೆ ಮಾಡಲಿವೆ. ಈ ಬಸ್‌ಗಳು ಕೆಂಪೇಗೌಡ ಬಸ್ ನಿಲ್ದಾಣ,
ಮೈಸೂರು ರಸ್ತೆ ಬಸ್ ನಿಲ್ದಾಣ ಮತ್ತು ಶಾಂತಿನಗರದ ಬಿಎಂಟಿಸಿ ಟಿಟಿಎಂಸಿ ಬಸ್ ನಿಲ್ದಾಣದಿಂದ ಆಚರಣೆ
ಮಾಡಲಿವೆ. ಪ್ರಯಾಣಿಕರ ಒತ್ತಡಕ್ಕೆ ಅನುಗುಣವಾಗಿ ಈ ಹೆಚ್ಚುವರಿ ಬಸ್‌ಗಳ ಸೇವೆ ಇರಲಿದೆ.
ಮೆಜೆಸ್ಟಿಕ್, ಮೈಸೂರು ರಸ್ತೆ ಬಸ್ ನಿಲ್ದಾಣ, ಶಾಂತಿನಗರ, ವಿಜಯನಗರ, ಜೆ.ಪಿ. ನಗರ, ಜಯನಗರ 4ನೇ ಬ್ಲಾಕ್,
ಜಾಲಹಳ್ಳಿ ಕ್ರಾಸ್, ನವರಂಗ್ (ರಾಜಾಜಿನಗರ), ಮಲ್ಲೇಶ್ವರ 18ನೇ ಅಡ್ಡರಸ್ತೆ, ಕೆಂಗೇರಿ ಉಪನಗರ ನಗರದ ಮತ್ತಿತರ ಸ್ಥಳಗಳಿಂದ ಬಸ್‌ಗಳು ಕಾರ್ಯಾಚರಣೆ ಮಾಡಲಿವೆ.
ನಗರದಿಂದ ಧರ್ಮಸ್ಥಳ, ಕುಕ್ಕೆಸುಬ್ರಹ್ಮಣ್ಯ, ಶೃಂಗೇರಿ, ಹೊರನಾಡು, ಶಿವಮೊಗ್ಗ, ಮಡಿಕೇರಿ, ಮಂಗಳೂರು,
ದಾವಣಗೆರೆ, ಗೋಕರ್ಣ, ಕೊಲ್ಲೂರು, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಕಾರವಾರ, ಬಳ್ಳಾರಿ, ಹೊಸಪೇಟೆ, ಕಲಬುರಗಿ, ರಾಯಚೂರು ಮುಂತಾದ ಸ್ಥಳಗಳಿಗೆ ಹಾಗೂ ಹೈದರಾಬಾದ್, ಚೆನ್ನೈ, ಊಟಿ, ಕೊಡೈಕೆನಾಲ್, ಸೇಲಂ,ತಿರುಚಿನಾಪಳ್ಳಿ, ಪುದುಕೋಟೆ, ಮಧುರೈ, ಪಣಜಿ, ಶಿರಡಿ,ಮುಂಬೈ, ಎರ್ನಾಕುಲಂ, ಪಾಲ್ಗಾಟ್, ತಿರುವನಂತಪುರ ಸೇರಿದಂತೆ ಮತ್ತಿತರ ನೆರೆ ರಾಜ್ಯಗಳ ಸ್ಥಳಗಳಿಗೆ ವಿಶೇಷ ಬಸ್‌ಗಳ ವ್ಯವಸ್ಥೆ ಕಲ್ಪಿಸಲಾಗಿದೆ.
ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಸಾರಿಗೆಗಳಿಗೆ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಸೌಲಭ್ಯ ಕಲ್ಪಿಸಲಾಗಿದೆ. ಇ-ಟಿಕೆಟ್ ಬುಕಿಂಗ್‌ಗೆ www.ksrtc.in ಸಂಪರ್ಕಿಸಬಹುದು. ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಕಾಯ್ದಿರಿಸಿದರೆ ಶೇ.5ರಷ್ಟು ಮತ್ತು ಹೋಗುವ-ಬರುವ ಪ್ರಯಾಣದ ಟಿಕೇಟ್‌ನ್ನು ಒಟ್ಟಿಗೆ ಕಾಯ್ದಿರಿಸಿದರೆ, ಬರುವ ಪ್ರಯಾಣ ದರದಲ್ಲಿ ಶೇ.10ರಷ್ಟು ರಿಯಾಯ್ತಿ ನೀಡಲಾಗುವುದು ಎಂದು ಕೆಎಸ್‌ಆರ್‌ಟಿಸಿ ಪ್ರಕಟಣೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಸಿದ್ದರಾಮಯ್ಯ ಈಗ ದ್ವೇಷ ರಾಜಕಾರಣ ಮಾಡುತ್ತಿದ್ದಾರೆ: ಯತ್ನಾಳ್ ಟೀಕೆ
ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?
B.S.Yediyurappa ಮೇಲೆ ಅಭಿಯೋಜನೆ ಅಸ್ತ್ರ!: ಏನಿದು 12 ಕೋಟಿ ರೂ. ಲಂಚ ಪ್ರಕರಣ?
Panchayat Raj University; ಇನ್ನು ಸಿಎಂ ಕುಲಾಧಿಪತಿ!: ರಾಜ್ಯಪಾಲರ ಅಧಿಕಾರಕ್ಕೆ ಕೊಕ್
Agriculture; ರಾಜ್ಯದ ರೈತರು, ಜನತೆಗೆ ಶುಭ ಸುದ್ದಿ: ಈ ಬಾರಿ ಬಂಪರ್ ಇಳುವರಿ!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.