ಫೇಸ್‌ಬುಕ್‌, ವಾಟ್ಸ್‌ಆ್ಯಪ್‌ಗೆ ಇಲಾಖೆ ಗೌಪ್ಯಮಾಹಿತಿ


Team Udayavani, Oct 15, 2018, 6:00 AM IST

14.jpg

ಬೆಂಗಳೂರು: ಸರ್ಕಾರಿ ಆದೇಶ, ಇಲಾಖೆ ಗೌಪ್ಯ ಮಾಹಿತಿ ಸೇರಿ ಪ್ರಮುಖ ದಾಖಲೆಗಳು ಮೇಲಾಧಿಕಾರಿಗಳ ಅನುಮತಿ ಇಲ್ಲದೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾ ಡುತ್ತಿರುವುದು ಕಾಲೇಜು ಶಿಕ್ಷಣ ಇಲಾಖೆಯ ನಿದ್ದೆಗೆಡಿಸಿದೆ. ಹೀಗಾಗಿ, ಅನಧಿಕೃತವಾಗಿ ಇಲಾಖೆಯ ಮಾಹಿತಿಗಳನ್ನು 
ವಾಟ್ಸ್‌ಆ್ಯಪ್‌, ಫೇಸ್‌ಬುಕ್‌, ಟ್ವಿಟರ್‌ಗಳಲ್ಲಿ ಪ್ರಚಾರ ಮಾಡುವ ಅಧಿಕಾರಿ ಅಥವಾ ಸಿಬ್ಬಂದಿ ವಿರುದ್ಧ ಕ್ರಮ ತೆಗೆದುಕೊಳ್ಳಲು ಇಲಾಖೆ ಮುಂದಾಗಿದೆ.

ಸರ್ಕಾರದ ಸೂಚನೆ, ಯೋಜನೆ ಅಥವಾ ಕಾರ್ಯಕ್ರಮ, ಸಭಾ ನಡವಳಿ, ತುರ್ತು ಸಭೆ, ಅಧಿಕಾರಿಗಳು ಮತ್ತು ಸಚಿವರ ಪ್ರವಾಸ, ಇತ್ಯಾದಿ ಮಾಹಿತಿಗಳನ್ನು ಸಂಬಂಧಪಟ್ಟ ಅಧಿಕಾರಿಗಳಿಗೆ ಹಾಗೂ ಕಾಲೇಜಿನ ಪ್ರಾಂಶುಪಾಲರಿಗೆ ತಲುಪಿಸಲು ಇಲಾಖೆಯಲ್ಲಿ ಪ್ರತ್ಯೇಕವಾದ ವ್ಯವಸ್ಥೆ ಇದೆ.
ವೆಬ್‌ಸೈಟ್‌, ದೂರವಾಣಿ, ಅಂಚೆ ಅಥವಾ ಇ-ಮೇಲ್‌ ಮೂಲಕ ಕೇಂದ್ರ ಕಚೇರಿಯಿಂದ ಅಧಿಕಾರಿಗಳಿಗೆ ಹಾಗೂ ಪ್ರಾಂಶುಪಾಲರಿಗೆ ಮಾಹಿತಿ ರವಾನೆ ಮಾಡಲಾಗುತ್ತದೆ. ಇದನ್ನು ಹೊರತುಪಡಿಸಿ ಬೇರಾವುದೇ ಮಾಹಿತಿ ಸಾಮಾಜಿಕ ಜಾಲತಾಣಗಳಲ್ಲಿ ಹಾಕಲು ಮೇಲಾಧಿಕಾರಿಗಳ ಅನುಮತಿ 
ಪಡೆಯಬೇಕು. ಆದರೆ, ಇಲಾಖೆಯ ಕೆಲವು ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗ ಮೇಲಾಧಿಕಾರಿಗಳ ಅನುಮತಿ ಇಲ್ಲದೇ ಆದೇಶ, ಟಿಪ್ಪಣಿ ಹಾಳೆ, ಪತ್ರಗಳು ಮತ್ತು ಗೌಪ್ಯ ಮಾಹಿತಿಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿ ಬಿಡುತ್ತಿರುವ ಬಗ್ಗೆ ಇಲಾಖೆಗೆ ದೂರು ಬಂದಿದೆ. ಇದರ ಪತ್ತೆಗೂ ಬೇಕಾದ ಕ್ರಮ ತೆಗೆದುಕೊಳ್ಳಲಾಗುತ್ತಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಹೇಳುತ್ತಾರೆ.

ಅಲ್ಲದೆ, ಅಧಿಕಾರಿಗಳು ಅಥವಾ ಸಿಬ್ಬಂದಿ ಹೊರತುಪಡಿಸಿ ಬೇರ್ಯಾರು ಕೂಡ ಆದೇಶ ಅಥವಾ ಗೌಪ್ಯ ಮಾಹಿತಿ ಸಾಮಾಜಿಕ ಜಾಲತಾಣಗಳಲ್ಲಿ ಬಹಿರಂಗಪಡಿಸಲು ಸಾಧ್ಯವಿಲ್ಲ. ಕೆಲವೊಂದು ಮಾಹಿತಿ ತೀರ ಗೌಪ್ಯವಾದುದರಿಂದ ಅಧಿಕಾರಿಗಳು ಕಾಪಾಡಿಕೊಳ್ಳಬೇಕು. ಆದೇಶಗಳು ಇಲಾಖೆಯ ವೆಬ್‌ಸೈಟ್‌ನಲ್ಲಿ ಅಧಿಕೃತವಾಗಿ ಹೊರಡಿಸುವ ಮೊದಲೇ ಸಾಮಾಜಿಕ ಜಾಲತಾಣಗಳಲ್ಲಿ ನೀಡುವುದು ಸರಿಯಲ್ಲ. ಇದು ದುರ್ಬಳಕೆಯಾಗುವ ಜತೆಗೆ ತಪ್ಪು ಸಂದೇಶ ರವಾನೆಯಾಗುವ ಸಾಧ್ಯತೆಯೂ ಇದೆ ಎನ್ನುತ್ತಾರೆ.

ಗ್ರೂಪ್‌ ಅಡ್ಮಿನ್‌ ವಿರುದ್ಧವೂ ಕ್ರಮ
ಇಲಾಖಾ ವ್ಯಾಪ್ತಿಯ ಬೆಂಗಳೂರಿನ ಕೇಂದ್ರ ಕಚೇರಿ, ವಿಭಾಗೀಯ ಮಟ್ಟದ ಕಚೇರಿ, ಜಿಲ್ಲಾ ಕಚೇರಿ ಮತ್ತು ಕಾಲೇಜುಗಳಲ್ಲಿ ಇರುವ ಕಡತದೊಳಗಿನ ಆದೇಶ, ಟಿಪ್ಪಣಿ ಹಾಳೆ, ಪತ್ರಗಳು, ಗೌಪ್ಯ ಮಾಹಿತಿ, ಅಧಿಕಾರಿಗಳ ಪ್ರವಾಸದ ಕಾರ್ಯಕ್ರಮ ಹಾಗೂ ಇತರೆ ದಾಖಲೆಗಳನ್ನು ಹಿರಿಯ ಅಧಿಕಾರಿಗಳ ಒಪ್ಪಿಗೆ ಇಲ್ಲದೆ, ಸಾಮಾಜಿಕ ಜಾಲತಾಣಗಳಲ್ಲಿಬಿತ್ತರಿಸುವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುತ್ತದೆ. ಸೈಬರ್‌ ಕ್ರೈಂ ನಿಯಮಾನುಸಾರ  ವಾಟ್ಸ್‌ಆ್ಯಪ್‌ ಅಡ್ಮಿನ್‌ಗಳ ವಿರುದ್ಧವೂ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಇಲಾಖೆ ಎಚ್ಚರಿಕೆ ನೀಡಿದೆ.

ಯಾವುದೇ ಮಾಹಿತಿ ಇಲಾಖೆ ಅಥವಾ ಮೇಲಾಧಿಕಾರಿಗಳ ಅನುಮತಿ ಇಲ್ಲದೇ ಸಾಮಾಜಿಕ ಜಾಲತಾಣಗಳಲ್ಲಿ ಬಿತ್ತರಿಸುವಂತಿಲ್ಲ. ಇಂಥ ಮಾಹಿತಿ ನೀಡಲು ನಮ್ಮಲ್ಲಿ ಪ್ರತ್ಯೇಕ ವ್ಯವಸ್ಥೆ ಇದೆ. ಕಡತಗಳಲ್ಲಿನ ಆದೇಶ ಅಥವಾ ಗೌಪ್ಯ ಮಾಹಿತಿ ಸಾಮಾಜಿಕ ಜಾಲತಾಣಕ್ಕೆ ಹಾಕುವುದು ಕಾನೂನಿಗೆ ವಿರುದ್ಧವಾದುದು.
● ಎಂ.ಶಿಲ್ಪಾ, ಮುಖ್ಯ ಆಡಳಿತಾಧಿಕಾರಿ, ಕಾಲೇಜು ಶಿಕ್ಷಣ ಇಲಾಖೆ

*ರಾಜು ಖಾರ್ವಿ ಕೊಡೇರಿ

ಟಾಪ್ ನ್ಯೂಸ್

Ajit Pawar

BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್

01

Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ

DVG-Rail

Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್‌!

ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

1-wqewq

UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ

ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ

Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ

Congress is taking revenge by forming SIT: Araga Jnanendra

Shimoga: ಎಸ್ಐಟಿ ರಚನೆ ಮೂಲಕ ಕಾಂಗ್ರೆಸ್ ಹಗೆ ತೀರಿಸಿಕೊಳ್ಳುತ್ತಿದೆ: ಆರಗ ಜ್ಞಾನೇಂದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DVG-Rail

Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್‌!

ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ

Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ

Anandapura: ಸಾಲದ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ

Anandapura: ಸಾಲದ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ

Shimoga; Congress – Statement against Muslims: Sumoto case against KS Eshwarappa

Shimoga; ಕಾಂಗ್ರೆಸ್-ಮುಸ್ಲಿಮರ ವಿರುದ್ದ ಹೇಳಿಕೆ: ಈಶ್ವರಪ್ಪ ವಿರುದ್ದ ಸುಮೋಟೋ ಪ್ರಕರಣ

10-thirthahalli

Thirthahalli: ಶಾಸಕ ಸ್ಥಾನವನ್ನು ಗಿರವಿ ಇಟ್ಟರಾ ಆರಗ ಜ್ಞಾನೇಂದ್ರ ?

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Ajit Pawar

BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್

01

Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ

1-qweqwe

ವಿಡಿಯೋ | Mangaluru; ಕದ್ರಿ ಪೊಲೀಸ್ ಠಾಣೆ ಬಳಿ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕಾರು

1-ssss

J-K: ಭೀಕರ ಅಪಘಾ*ತದಲ್ಲಿ SUV ಚಲಾಯಿಸುತ್ತಿದ್ದ 17 ರ ಹುಡುಗರಿಬ್ಬರು ಮೃ*ತ್ಯು

DVG-Rail

Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.