ಫೇಸ್‌ಬುಕ್‌ ಲೈವ್‌ನಲ್ಲಿ ಪ್ರಥಮ್‌ ಆತ್ಮಹತ್ಯೆ ಪ್ರಹಸನ


Team Udayavani, Apr 6, 2017, 12:36 PM IST

pratham-biggboss.jpg

ಬೆಂಗಳೂರು: ಬಿಗ್‌ಬ್ಯಾಸ್‌ ಖ್ಯಾತಿಯ ಪ್ರಥಮ್‌ ನಿದ್ದೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬುಧವಾರ ಮುಂಜಾನೆ ನಾಲ್ಕು ಗಂಟೆ ಸಮಯದಲ್ಲಿ  ಈ ಘಟನೆ ನಡೆದಿದೆ. ಆತ್ಮಹತ್ಯೆ ಯತ್ನಕ್ಕೂ ಮುನ್ನ ಪ್ರಥಮ್‌ ಫೇಸ್‌ಬುಕ್‌ ಲೈವ್‌ ವಿಡಿಯೋ ಮಾಡಿದ್ದರು.

ವಿಡಿಯೋ ಮಾಡುತ್ತಲೇ ಪ್ರಥಮ್‌ ಎರಡು ನಿದ್ದೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಇದನ್ನು ಕಂಡ ಕೆಲವರು ಕೂಡಲೇ ಅವರ ಆಪ್ತರು ಹಾಗೂ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ನಂತರ ಮನೆಗೆ ಧಾವಿಸಿ ಅಸ್ವಸ್ಥಗೊಂಡ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.  ಪ್ರಥಮ್‌ ಅವರ ವಿಡಿಯೋ ವೈರಲ್‌ ಆಗಿದ್ದರಿಂದ ರಾಜ್ಯಾದ್ಯಂತ ಸುದ್ದಿಯಾಯಿತು. 

ಬಿಗ್‌ಬಾಸ್‌ ರಿಯಾಲಿಟಿ ಶೋನಲ್ಲಿ ವಿಜೇತನಾಗಿದ್ದರಿಂದ ಗಳಿಸಿದ್ದ ಬಹುಮಾನ ಹಣ ತನಗೂ ನೀಡುವಂತೆ ಸ್ನೇಹಿತ ಲೋಕೇಶ್‌ ಎಂಬಾತ ಕಿರುಕುಳ ನೀಡುತ್ತಿದ್ದರಿಂದ ಬೇಸರಗೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾಗಿ ಪ್ರಥಮ್‌ ವಿಡಿಯೋದಲ್ಲಿ ತಿಳಿಸಿದ್ದಾರೆ. ಅಲ್ಲದೆ, ಕೆಲವು ದೃಶ್ಯ ಮಾಧ್ಯಮಗಳ ವಿರುದ್ಧವೂ ಕಿರುಕುಳ ಆರೋಪ ಮಾಡಿದ್ದಾರೆ.

ಏನಿದು ಹಣದ ಜಗಳ?: ಪ್ರಥಮ್‌ ಹಾಗೂ ಸಿನಿಮಾ ನಿರ್ದೇಶಕ ಲೋಕೇಶ್‌ ಎಂಬಾಧಿತನ ನಡುವೆ ಹಣಕಾಸಿನ ವಿಚಾರವಾಗಿ ಜಗಳವಾಗಿತ್ತು. ಈ ವಿಚಾರವಾಗಿ ಲೋಕೇಶ್‌ನನ್ನು ಪ್ರಥಮ್‌ ಮೊಬೈಲ್‌ನಲ್ಲಿ ಅವಾಚ್ಯವಾಗಿ ನಿಂದಿಸಿದ್ದರು. ಇದರ ಜತೆಗೆ, ಕೆಲವರು ನನ್ನ ಹೆಸರು ಹೇಳಿಕೊಂಡು ಪ್ರಚಾರ ಪಡೆದುಕೊಳ್ಳುತ್ತಿದ್ದಾರೆ ಎಂದು ಪ್ರಥಮ್‌ ಸೆಲ್ಫಿ ವಿಡಿಯೋ ಮಾಡಿ ಫೇಸ್‌ಬುಕ್‌ಗೆ ಹಾಕಿದ್ದರು. 

ಇದನ್ನು ಟೀಕಿಸಿ ಲೋಕೇಶ್‌ ಕೂಡ ಸೆಲ್ಫಿ ವಿಡಿಯೋ ಹಾಗೂ ಪ್ರಥಮ್‌ ನಿಂದನೆ ಮಾಡಿದ್ದ ಆಡಿಯೋವನ್ನು ಫೇಸ್‌ಬುಕ್‌ನಲ್ಲಿ ಪ್ರಕಟಿಸಿದ್ದರು. ಇದೇ ವಿಚಾರವಾಗಿ ಪ್ರಥಮ್‌ ಮತ್ತು ಲೋಕೇಶ್‌ ನಡುವೆ ಜಗಳವಾಗಿತ್ತು. ವಿಡಿಯೋ ಮತ್ತು ಆಡಿಯೋ ಅಳಿಸದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಲೋಕೇಶ್‌ಗೆ ಪ್ರಥಮ್‌ ಬೆದರಿಕೆಯೊಡ್ಡಿದ್ದರು. ಇದರಿಂದ ಗಾಬರಿಗೊಂಡ ಲೋಕೇಶ್‌ ಆಡಿಯೋ ಮತ್ತು ವಿಡಿಯೋವನ್ನು ಅಳಿಸಿದ್ದರು.

ಇದೇ ವಿಚಾರವಾಗಿ ಮಂಗಳವಾರ ರಾತ್ರಿ 11 ಗಂಟೆ ಸುಮಾರಿಗೆ ಲೋಕೇಶ್‌ಗೆ ಕರೆ ಮಾಡಿದ್ದ ಪ್ರಥಮ್‌ ಕುರುಬರಹಳ್ಳಿ ವೃತ್ತದ ಬಳಿ ಬರುವಂತೆ ತಿಳಿಸಿದ್ದ. ಅದರಂತೆ ಸ್ಥಳಕ್ಕೆ ಬಂದ ಲೋಕೇಶ್‌ ಜತೆ ಪ್ರಥಮ್‌ ಜಗಳ ತೆಗೆದ್ದರು ಎನ್ನಲಾಗಿದೆ. ಈ ವೇಳೆ ಕೆರಳಿದ ಪ್ರಥಮ್‌ ಲೋಕೇಶ್‌ ಮೇಲೆ ಹಲ್ಲೆ ನಡೆಸಿದ್ದಾರೆ. ಈ ಹಿನ್ನೆಲೆಯಲ್ಲಿ ಲೋಕೇಶ್‌ ಬಸವೇಶ್ವರನಗರ ಠಾಣೆಗೆ ಪ್ರಥಮ್‌ ವಿರುದ್ಧ ದೂರು ನೀಡಿದ್ದರು.

ತನ್ನ ವಿರುದ್ಧ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿರುವುದು ಮಾಧ್ಯಮಗಳಲ್ಲಿ ಪ್ರಕಟವಾಗುತ್ತಿದ್ದಂತೆ ಪ್ರಥಮ್‌ ಫೇಸ್‌ಬುಕ್‌ ಲೈವ್‌ನಲ್ಲಿ ಸ್ನೇಹಿತ ಲೋಕೇಶ್‌ ಹಾಗೂ ಕೆಲ ದೃಶ್ಯಮಾಧ್ಯಮಗಳ ವಿರುದ್ಧ ಹರಿಹಾಯ್ದು ನಿದ್ದೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ಹೇಳಲಾಗಿದೆ. 

ಫೇಸ್‌ಬುಕ್‌ ಲೈವ್‌ನಲ್ಲಿ ಪ್ರಥಮ್‌ ಹೇಳಿರುವುದಿದು: ಆತ್ಮಹತ್ಯೆ ಯತ್ನಕ್ಕೂ ಮುಂಚೆ ಭಾವನಾತ್ಮಕವಾಗಿ ಮಾತನಾಡಿರುವ ಪ್ರಥಮ್‌, ಯಾಕೋ ನನಗೆ ಈ ಬಟ್ಟೆ ಹಾಕಿಕೊಳ್ಳಬೇಕು ಎನಿಸಿತು. ಇದು “ಬಿಗ್‌ಬಾಸ್‌’ನಲ್ಲಿ ಗೆದ್ದಾಗ ಧರಿಸಿದ್ದ ಬಟ್ಟೆ. ಸ್ವಲ್ಪ ಮಾತನಾಡಬೇಕು ಎನಿಸಿತು. ಬೇಸರವಾಗಿದ್ದರೆ ಕ್ಷಮಿಸಿ.

“ಬಿಗ್‌ಬಾಸ್‌’ನಲ್ಲಿ ಗೆದ್ದ ಹಣ ಬಂದಿದೆ, ನಾನು ಮೊದಲೇ ಕಮಿಟ್‌ ಆಗಿದ್ದ ಪ್ರಕಾರ 50 ಲಕ್ಷ ರೂ. ಒಂದು ರೂ. ಕೂಡ ನನಗೆ ಬೇಡ ಅಂತ. ಈಗಲೂ ಅದೇ ಮಾತಿಗೆ ಬದ್ಧ. ನನಗೆ ಇತ್ತೀಚೆಗೆ ಮಾನಸಿಕವಾಗಿ ತುಂಬಾ ಡಿಸ್ಟರ್ಬ್ ಆಗುತ್ತಿದೆ. ಕೆಲವರು ತುಂಬಾ ಹರ್ಟ್‌ ಮಾಡುತ್ತಿದ್ದಾರೆ. ನಾನು ಮಾನಸಿಕ ಹಿಂಸೆಯಲ್ಲಿದ್ದೇನೆ.

ನಾನು ಏನೇ ಮಾಡಿದರೂ, ಬೇರೆ ರೀತಿ ಪ್ರಚಾರ ಮಾಡುತ್ತಿದ್ದಾರೆ’ ಎನ್ನುತ್ತಲೇ ಕಣ್ಣೀರಿಟ್ಟಿದ್ದು, “ಲೋಕಿ ನನಗೆ ತುಂಬಾ ಹರ್ಟ್‌ ಮಾಡುತ್ತಿದ್ದೀಯಾ. ತುಂಬಾ ನೋವು ಕೊಡುತ್ತಿದ್ದೀಯಾ, ತುಂಬಾ ಚಿತ್ರಹಿಂಸೆ ಕೊಡುತ್ತಿದ್ದೀಯಾ… ಇನ್ನು ನನ್ನ ಕೈಯಲ್ಲಿ ಬದುಕೋಕೆ ಆಗಲ್ಲ, ನನಗೆ ಏನೇ ಆದರೂ ನೀನೇ ಕಾರಣ’ ಎಂದೂ ಹೇಳಿರುವುದು ದಾಖಲಾಗಿದೆ.

ಪ್ರಥಮ್‌ ವಿರುದ್ಧ ದೂರು?
ಸುಪ್ರೀಂಕೋರ್ಟ್‌ ತೀರ್ಪು ಪ್ರಕಾರ ಆತ್ಮಹತ್ಯೆ ಮಾಡಿಕೊಳ್ಳುವುದು ಅಪರಾಧ. ಹೀಗಾಗಿ, ಪ್ರಥಮ್‌ ವಿರುದ್ಧ ಪೊಲೀಸರು ದೂರು ದಾಖಲಿಸುವ ಸಾಧ್ಯತೆಯಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಪ್ರಥಮ್‌ ಹಲ್ಲೆ ನಡೆಸಿದ್ದಾರೆ ಎಂದು ಸಿನಿಮಾ ನಿರ್ದೇಶಕ ಲೋಕೇಶ್‌ ದೂರು ನೀಡಿದ್ದಾರೆ. ಸದ್ಯ ಪ್ರಥಮ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗುಣಮುಖರಾದ ಬಳಿಕ ಪ್ರಥಮ್‌ ಹೇಳಿಕೆ ಆಧರಿಸಿ ತನಿಖೆ ನಡೆಸಲಾಗುವುದು.
-ಎಂ.ಎನ್‌.ಅನುಚೇತ್‌, ಡಿಸಿಪಿ

ಟಾಪ್ ನ್ಯೂಸ್

Maharashtra; Ekmath hey to safe hey says Shivsena

Maharashtra: ಏಕ್‌ನಾಥ್‌ ಹೇ ತೋ ಸೇಫ್ ಹೇ: ಶಿಂಧೆ ಶಿವಸೇನೆ ಹೊಸ ಮಂತ್ರ

Ullal: ಎಂಡಿಎಂಎ ಸಾಗಾಟ: ಮೂವರ ಬಂಧನ

Ullal: ಎಂಡಿಎಂಎ ಸಾಗಾಟ: ಮೂವರ ಬಂಧನ

ವಿಷಸೇವಿಸಿ ಆತ್ಯಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ,ಚಿಕಿತ್ಸೆಗೆ ಸ್ಪಂದಿಸದೆ ಸಾವು

ವಿಷಸೇವಿಸಿ ಆತ್ಯಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ,ಚಿಕಿತ್ಸೆಗೆ ಸ್ಪಂದಿಸದೆ ಸಾವು

Draupadi Murmu addresses the joint House at the Old Parliament House

Old Parliament House: ಭಾರತದ ಸಂವಿಧಾನವು ಜೀವಂತಿಕೆಯ, ಪ್ರಗತಿಪರ ದಾಖಲೆ: ರಾಷ್ಟ್ರಪತಿ

Congress: ದ.ಕ ಗ್ರಾಮ ಪಂಚಾಯತ್‌; 24ರಲ್ಲಿ 19 ಸ್ಥಾನ ಕಾಂಗ್ರೆಸ್‌ ಬೆಂಬಲಿತರಿಗೆ ಗೆಲುವು

Congress: ದ.ಕ ಗ್ರಾಮ ಪಂಚಾಯತ್‌; 24ರಲ್ಲಿ 19 ಸ್ಥಾನ ಕಾಂಗ್ರೆಸ್‌ ಬೆಂಬಲಿತರಿಗೆ ಗೆಲುವು

16-moodbidri

Moodabidri: ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ಪಿ.ನೇಮಿರಾಜ ಹೆಗ್ಡೆ ನಿಧನ

Pakistan: 6 security personnel hit, shoot-at-sight order

Pakistan: 6 ಮಂದಿ ಭದ್ರತಾ ಸಿಬ್ಬಂದಿ ಸಾವು, ಕಂಡಲ್ಲಿ ಗುಂಡು ಆದೇಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು 

Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು 

Drunk and Drive: ಮದ್ಯ ಸೇವಿಸಿ ಚಾಲನೆ: ವಾರದಲ್ಲಿ 71 ಲಕ್ಷ ದಂಡ

Drunk and Drive: ಮದ್ಯ ಸೇವಿಸಿ ಚಾಲನೆ: ವಾರದಲ್ಲಿ 71 ಲಕ್ಷ ದಂಡ

CCB Police: ವಕೀಲೆ ಜೀವಾ ಆತ್ಮಹತ್ಯೆ ಕೇಸ್‌ ಸಿಸಿಬಿಗೆ ವರ್ಗಾವಣೆ

CCB Police: ವಕೀಲೆ ಜೀವಾ ಆತ್ಮಹತ್ಯೆ ಕೇಸ್‌ ಸಿಸಿಬಿಗೆ ವರ್ಗಾವಣೆ

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Maharashtra; Ekmath hey to safe hey says Shivsena

Maharashtra: ಏಕ್‌ನಾಥ್‌ ಹೇ ತೋ ಸೇಫ್ ಹೇ: ಶಿಂಧೆ ಶಿವಸೇನೆ ಹೊಸ ಮಂತ್ರ

2

Malpe: ಬೋಟಿನಲ್ಲಿದ್ದ ಮೀನುಗಾರ ನಾಪತ್ತೆ; ಪ್ರಕರಣ ದಾಖಲು

crime

Padubidri: ಸ್ಕೂಟಿಯಿಂದ ಬಿದ್ದು ಮಹಿಳೆಗೆ ತೀವ್ರ ಗಾಯ

Ullal: ಎಂಡಿಎಂಎ ಸಾಗಾಟ: ಮೂವರ ಬಂಧನ

Ullal: ಎಂಡಿಎಂಎ ಸಾಗಾಟ: ಮೂವರ ಬಂಧನ

ವಿಷಸೇವಿಸಿ ಆತ್ಯಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ,ಚಿಕಿತ್ಸೆಗೆ ಸ್ಪಂದಿಸದೆ ಸಾವು

ವಿಷಸೇವಿಸಿ ಆತ್ಯಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ,ಚಿಕಿತ್ಸೆಗೆ ಸ್ಪಂದಿಸದೆ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.