ಶ್ರೇಷ್ಠತಾ ಕೇಂದ್ರದಿಂದ ಉದ್ಯಮಿಗಳಿಗೆ ಅನುಕೂಲ
Team Udayavani, Mar 6, 2019, 6:20 AM IST
ಬೆಂಗಳೂರು: ದಾಬಸ್‌ಪೇಟೆ ಬಳಿ ಕಾಸಿಯಾದಿಂದ ನಿರ್ಮಿಸಲಾಗುತ್ತಿರುವ ಶ್ರೇಷ್ಠತಾ ಕೇಂದ್ರಕ್ಕೆ 20 ಕೋಟಿ ರೂ.ಗಳ ನೆರವು ಒದಗಿಸುವಂತೆ ಕಾಸಿಯಾ ಮಾಡಿದ ಮನವಿಯನ್ನು ಈಡೇರಿಸುವುದಾಗಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಭರವಸೆ ನೀಡಿದರು. ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘ ಕಾಸಿಯಾದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಕೆಎಸ್‌ಎಫ್‌ಸಿ ಮತ್ತು ಇತರ ಯೋಜನೆಗಳ ಕುರಿತು ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಮಾತನಾಡಿದರು.
ಶ್ರೇಷ್ಠತಾ ಕೇಂದ್ರದಿಂದ ಸಂಶೋಧನೆ ಮತ್ತು ಅಭಿವೃದ್ಧಿಗೆ ಅನುಕೂಲವಾಗಲಿದೆ. ಉದ್ಯಮಿಗಳಿಗೆ ಅನುಕೂಲವಾಗುವ ಎಲ್ಲ ಕಾರ್ಯಗಳನ್ನು ಈಡೇರಿಸಲಾಗುವುದು ಎಂದರು. ಅತೀ ಸಣ್ಣ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ಸಮಸ್ಯೆಗಳನ್ನು ಅರಿಯುವ ಸಂಬಂಧ ಕಾಸಿಯಾ ಸೇರಿ ಇತರ ಉದ್ಯಮಿಗಳ ಒಕ್ಕೂಟದ ಪ್ರತಿನಿಧಿಗಳೊಂದಿಗೆ ಪ್ರತಿ ತಿಂಗಳು ಸಭೆ ನಡೆಸಲಾಗುವುದು.
ಎಲ್ಲ ಕ್ಷೇತ್ರಗಳಿಗೂ ಒತ್ತು ನೀಡುವ ಇಚ್ಛೆ ಇದೆ. ಹೀಗಾಗಿ ಉದ್ಯಮಿಗಳ ಸಮಸ್ಯೆಗಳನ್ನು ಅರಿತು ಪರಿಹರಿಸಲಾಗುವುದು ಎಂದು ಹೇಳಿದರು. ಕರ್ನಾಟಕ ರಾಜ್ಯ ಹಣಕಾಸು ನಿಗಮ(ಕೆಎಸ್‌ಎಫ್‌ಸಿ) ಮೂಲಕ ಉದ್ಯಮಿಗಳಿಗೆ ಶೇ.4 ಬಡ್ಡಿ ದರದಲ್ಲಿ ಹಣಕಾಸು ಸೌಲಭ್ಯ ಒದಗಿಸಲಾಗುತ್ತಿದೆ. ಆದರೆ ಮರುಪಾವತಿ ಅವಧಿ ಐದು ವರ್ಷವಿದ್ದು,
ಇದನ್ನು 10 ವರ್ಷಕ್ಕೆ ವಿಸ್ತರಿಸುವಂತೆ ಉದ್ಯಮಿಗಳು ಮನವಿ ಮಾಡಿದ್ದಾರೆ. ಈ ಸಂಬಂಧ ಅಧಿಕಾರಿಗಳೊಂದಿಗೆ ಚರ್ಚಿಸಲಾಗುವುದು ಎಂದರು. ಕಾಸಿಯಾ ಅಧ್ಯಕ್ಷ ಬಸವರಾಜ ಜವಳಿ, ಶಾಸಕ ವಿ. ಸೋಮಣ್ಣ, ಕಾಸಿಯಾ ನಿಕಟಪೂರ್ವ ಅಧ್ಯಕ್ಷ ಆರ್.ಹನುಮಂತೇಗೌಡ, ಗೌರವ ಪ್ರಧಾನ ಕಾರ್ಯದರ್ಶಿ ರವಿಕಿರಣ್ ಕುಲಕರ್ಣಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ
Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು
Metro: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದು ಸಿಕ್ಕಿಬಿದ್ದ ಆಯುರ್ವೇದಿಕ್ ವೈದ್ಯ
Bengaluru:ಬೈಕ್ ಶೋರೂಂನಲ್ಲಿ ಬೆಂಕಿ ಅವಘಡ; ಸುಟ್ಟು ಹೋದ 50ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳು
New Year: ಎಂ.ಜಿ.ರಸ್ತೆ ಸುತ್ತ 15 ಮೆ.ಟನ್ ಕಸ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Prajwal Devaraj; ಶಿವರಾತ್ರಿಗೆ ʼರಾಕ್ಷಸʼ ಅಬ್ಬರ
Sanju Weds Geetha 2: ಸಂಜು-ಗೀತಾಗೆ ಕಿಚ್ಚ ಸಾಥ್
Explainer:HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್ ಮಾದರಿಯ ಎಚ್ ಎಂಪಿವಿ ವೈರಸ್?
Gadag: ನಿರ್ಮಿತಿ ಕೇಂದ್ರದ ಗುತ್ತಿಗೆ ಆಧಾರಿತ ಇಂಜಿನಿಯರ್ ಆತ್ಮಹ*ತ್ಯೆ
Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್… ರಸ್ತೆಯಲ್ಲೇ ನಡೆಯಿತು ಪವಾಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.