ಗ್ರಾಪಂನಲ್ಲಿ ಮಲತ್ಯಾಜ್ಯ ಸಂಸ್ಕರಣೆ: ದೇಶದಲ್ಲೇ ಮೊದಲು
Team Udayavani, Jun 21, 2022, 2:01 PM IST
ಬೆಂಗಳೂರು: ನಗರ ಜಿಲ್ಲಾ ಪಂಚಾಯ್ತಿ ವ್ಯಾಪ್ತಿಯ ರಾಜಾನುಕುಂಟೆ ಗ್ರಾಮ ಪಂಚಾಯ್ತಿಯಲ್ಲಿ ಮಲತಾಜ್ಯ ಸಂಸ್ಕರಣಾ ಘಟಕ ಶೀಘ್ರದಲ್ಲೇ ಸ್ಥಾಪನೆಯಾಗಲಿದೆ. ಯಲಹಂಕ ತಾಲೂಕು ವ್ಯಾಪ್ತಿಯ ನಾಲ್ಕೈದು ಗ್ರಾಮ ಪಂಚಾಯ್ತಿಗಳನ್ನು ಕೇಂದ್ರೀಕರಿಸಿ ಈ ಮಲ ತಾಜ್ಯ ಸಂಸ್ಕರಣಾ ಘಟಕವನ್ನು ನಿರ್ಮಿಸಲಾಗಿದ್ದು, ದೇಶದಲ್ಲೆ ಗ್ರಾಮ ಪಂಚಾಯ್ತಿ ಮಟ್ಟದಲ್ಲಿ ನಿರ್ಮಾಣವಾಗುತ್ತಿರುವ ಮೊದಲ ಮಲ ತಾಜ್ಯ ಸಂಸ್ಕರಣಾ ಘಟಕ ಎಂಬ ಹಿರಿಮೆಗೆ ಇದು ಪಾತ್ರವಾಗಲಿದೆ.
ಪಂಚಾಯ್ತಿ ವ್ಯಾಪ್ತಿಯ ಹಳ್ಳಿಗಳನ್ನು ಕೇಂದ್ರೀಕರಿಸಿ ಈ ಯೋಜನೆ ರೂಪಿಸಲಾಗಿದೆ. ನಗರದಲ್ಲಿ ಇರುವಂತೆ ಗ್ರಾಮೀಣ ಪ್ರದೇಶಗಳಲ್ಲಿ ಮಲತಾಜ್ಯ ನಿರ್ವಹಣೆ ಸಂಪರ್ಕ ಕೊಳವೆ ಮಾರ್ಗಗಳಿಲ್ಲ. ಆ ಹಿನ್ನೆಲೆಯಲ್ಲಿ ಹಳ್ಳಿಗಳಲ್ಲಿ ಶೌಚಾಲಯಗಳನ್ನು ಗಮನದಲ್ಲಿಟ್ಟು ಕೊಂಡು ಕೇಂದ್ರ ಸರ್ಕಾರದ ಸ್ವತ್ಛ ಭಾರತ ಮಿಷನ್ ಮತ್ತು ಗ್ರಾಮೀಣ ಕುಡಿಯುವ ನೀರು ನೈರ್ಮಲ್ಯ ಇಲಾಖೆ ಇದೀಗ ಸಿಡಿಡಿ ಸಂಸ್ಥೆಯ ಸಹಯೋಗದಲ್ಲಿ ಹೊಸ ಪ್ರಯತ್ನಕ್ಕೆ ಹೆಜ್ಜೆಯಿರಿಸಿದೆ.
ಹಳ್ಳಿಗಳಲ್ಲಿ ಶೌಚಾಲಯಗಳು ತುಂಬಿ ಕೆಲವು ಸಲ ಗಬ್ಬುನಾರಲು ಶುರುವಾಗುತ್ತವೆ. ಇದರಿಂದಾಗಿ ಹಳ್ಳಿಜನರ ಆರೋಗ್ಯದ ಮೇಲೂ ಪರಿಣಾಮ ಬೀಳುವ ಸಾಧ್ಯತೆ ಅಧಿಕವಿರುತ್ತದೆ. ಆ ಹಿನ್ನೆಲೆಯಲ್ಲಿ ಹಳ್ಳಿ ಜನರಿಗೆ ಅನುಕೂಲವಾಗಲಿ ಎಂಬ ಉದ್ದೇಶದಿಂದ ಬೆಂಗಳೂರು ನಗರ ಜಿಲ್ಲಾ ಪಂಚಾಯ್ತಿ ರಾಜಾನು ಕುಂಟೆ ಗ್ರಾಮ ಪಂಚಾಯ್ತಿಯಲ್ಲಿ ನೂತನ ಮಲತಾಜ್ಯ ಸಂಸ್ಕರಣಾ ಘಟಕ ನಿರ್ಮಿಸಲಾಗಿದೆ. ಯಲಹಂಕ ತಾಲೂಕು ವ್ಯಾಪ್ತಿಯ ರಾಜಾನು ಕುಂಟೆ ಗ್ರಾಮ ಪಂಚಾಯ್ತಿ, ಸಿಂಗನಾಹಕನಹಳ್ಳಿ ಗ್ರಾಮ ಪಂಚಾಯ್ತಿ, ಅರಕೆರೆ ಗ್ರಾಮ ಪಂಚಾಯ್ತಿ, ಗಂಟಿಗಾನ ಹಳ್ಳಿ ಗ್ರಾಮ ಪಂಚಾಯ್ತಿ ಸೇರಿದಂತೆ ಇನ್ನೂ ಕೆಲವು ಗ್ರಾಮ ಪಂಚಾಯ್ತಿಗಳನ್ನು ಸೇರಿಸಿ ಈ ಘಟಕವನ್ನು ನಿರ್ಮಾಣ ಮಾಡಲಾಗಿದೆ ಎಂದು ಬೆಂಗಳೂರು ನಗರ ಜಿಲ್ಲಾ ಪಂಚಾಯ್ತಿಯ ಸ್ವಚ್ಛ ಭಾರತ್ ಮಿಷನ್ ಯೋಜನೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಕೇಂದ್ರ, ರಾಜ್ಯ ಸರ್ಕಾರದ ಅನುದಾನ: ರಾಜಾನುಕುಂಟೆಯಲ್ಲಿ 1 ಎಕರೆ 15 ಗುಂಟೆ ಪ್ರದೇಶದಲ್ಲಿ 44 ಲಕ್ಷ ರೂ. ವೆಚ್ಚದಲ್ಲಿ ಮಲತಾಜ್ಯ ಸಂಸ್ಕರಣಾ ಘಟಕ ನಿರ್ಮಿಸಲಾಗಿದೆ. ಕೇಂದ್ರ ಸರ್ಕಾರದ ಸ್ವಚ್ಛ ಭಾರತ್ ಮಿಷನ್ ಮತ್ತು ರಾಜ್ಯ ಸರ್ಕಾರದ ಗ್ರಾಮೀಣ ಕುಡಿಯುವ ನೀರು ನೈರ್ಮಲ್ಯ ಇಲಾಖೆಯಡಿ ಯೋಜನೆ ರೂಪಿಸಲಾಗಿದೆ. ಘಟಕ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಶೇ.70 ರಷ್ಟು ಮತ್ತು ರಾಜ್ಯ ಸರ್ಕಾರ ಶೇ.30ರಷ್ಟು ಅನುದಾನ ನೀಡಲಿದೆ. ಗ್ರಾಮೀಣ ಪ್ರದೇಶದಲ್ಲಿ ಇಂತಹ ಘಟಕಗಳು ಅಗತ್ಯವಾಗಿದೆ. ಕೆಲವು ಸಲ ಶೌಚೌಲಯಗಳು ತುಂಬಿಕೊಂಡು ನಾರುತ್ತಿರುತ್ತವೆ. ಇಂತಹ ಸಮಸ್ಯೆಗಳು ಎದುರಾಗದಿರಲಿ ಎಂಬ ಉದ್ದೇಶದಿಂದ ಈ ಘಟಕವನ್ನು ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ನಿರ್ಮಿಸಲಾಗಿದೆ. ಈಗಾಗಲೇ ಘಟಕ ನಿರ್ಮಾಣ ಕಾರ್ಯ ಅಂತಿಮಗೊಂಡಿದ್ದು ಶೀಘ್ರದಲ್ಲೆ ಲೋಕಾರ್ಪಣೆಗೊ ಳ್ಳಲಿದೆ.ಅದಕ್ಕಾಗಿಯೆ ಎಲ್ಲ ರೀತಿಯ ತಯಾರಿ ಕೂಡ ನಡೆದಿದೆ ಎಂದು ಹೇಳಿದ್ದಾರೆ.
ಮಲತಾಜ್ಯ ಸಂಸ್ಕರಣೆ ಘಟಕದಲ್ಲಿ ಗೊಬ್ಬರ ತಯಾರಿಕೆ : ಆಧುನಿಕ ಯಂತ್ರಗಳ ಮೂಲಕ ಮನೆಗಳ ಶೌಚಾಲಯದ ಮಲ ತ್ಯಾಜ್ಯವನ್ನು ಸಂಗ್ರಹಿಸಿ ವಾಹನಗಳ ಮೂಲಕ ಮಲತಾಜ್ಯ ಸಂಸ್ಕರಣಾ ಘಟಕಕ್ಕೆ ರವಾನಿಸಲಾಗುತ್ತದೆ. ಬಳಿಕ ಘಟಕದಲ್ಲಿ ಯಂತ್ರಗಳ ಮೂಲಕ ತಾಜ್ಯವನ್ನು ಬೇರ್ಪಡಿ ಮಾಡಿ ಗೊಬ್ಬರ ತಯಾರಿಸಲಾಗುತ್ತದೆ. ಘಟಕದಲ್ಲಿ ತಯಾರಾಗುವ ಈ ಗೊಬ್ಬರವನ್ನು ಬೆಳೆಗಳಿಗೂ ಉಪಯೋಗಿಸಬಹುದು ಎಂದು ಬೆಂಗಳೂರು ನಗರ ಜಿಪಂಯ ಸಚ್ಛ ಭಾರತ್ ಮಿಷನ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಗ್ರಾಮೀಣ ಪ್ರದೇಶಗಳಲ್ಲಿ ಶೌಚಾಲಯಗಳು ಸಾಮರ್ಥ್ಯಕ್ಕಿಂತೂ ಅಧಿಕವಾಗಿ ಘನ ತ್ಯಾಜ್ಯ ಸಂಗ್ರಹವಾದಾಗ ತುಂಬಿಕೊಂಡು ನಾರುವ ಪರಿಸ್ಥಿತಿ ಅಧಿಕವಿರುತ್ತದೆ. ಆ ಹಿನ್ನೆಲೆಯಲ್ಲಿ ಘಟಕ ನಿರ್ಮಾಣದಿಂದ ಗ್ರಾಮೀಣ ಜನರ ಆರೋಗ್ಯದ ದೃಷ್ಟಿಯಿಂದಲೂ ಅನುಕೂಲವಾಗಲಿದೆ.ರೋಗ-ರುಜೀನಿಗಳಿಂದ ಹಳ್ಳಿಗರನ್ನು ರಕ್ಷಿಸಬಹುದಾಗಿದೆ. ಮಲಹೊರುವ ಅನಿಷ್ಟ ಪದ್ಧತಿ ಕೂಡ ದೂರವಾಗಲಿದೆ ಎಂದು ತಿಳಿಸುತ್ತಾರೆ.
ಹಳ್ಳಿಗಳನ್ನು ಕೇಂದ್ರೀಕರಿಸಿ ಮಲತಾಜ್ಯ ಸಂಸ್ಕರಣಾ ಘಟಕ ನಿರ್ಮಿಸಲಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರದ ಅನುದಾನದಲ್ಲಿ ಈ ಘಟಕವನ್ನು ನಿರ್ಮಿಸಿದ್ದು, ಶೀಘ್ರದಲ್ಲೆ ಕಾರ್ಯಾರಂಭ ಮಾಡಲಿದೆ. – ಎಚ್.ಆರ್.ರಾಜೇಶ್, ಪಿಡಿಒ, ರಾಜಾನುಕುಂಟೆ
-ದೇವೇಶ ಸೂರಗುಪ್ಪ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್.ಅಶೋಕ್
BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?
Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?
High Court: ನಕ್ಸಲ್ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್ ಮನವಿ ಮರು ಪರಿಶೀಲನೆಗೆ ನಿರ್ದೇಶ
ಕಸ್ತೂರಿಂಗನ್ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’
MUST WATCH
ಹೊಸ ಸೇರ್ಪಡೆ
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Naxal ಎನ್‌ಕೌಂಟರ್ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.