ಅರ್ಥಪೂರ್ಣ ಆಚರಣೆಯಲ್ಲಿ ವಿಫಲ
Team Udayavani, Oct 25, 2017, 1:01 PM IST
ಬೆಂಗಳೂರು: ವಿಧಾನಸೌಧ ವಜ್ರಮಹೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಮಂಗಳವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.
ಮೆಜೆಸ್ಟಿಕ್‌ನ ಕೆಂಪೇಗೌಡ ಬಸ್ ನಿಲ್ದಾಣದ ಆವರಣದಲ್ಲಿ ಎರಡು ಕತ್ತೆಗಳಿಗೆ “ವಿಧಾನಸೌಧಕ್ಕೆ ವಜ್ರಮಹೋತ್ಸವ’ ಎಂಬ ಫಲಕಗಳನ್ನು ನೇತುಹಾಕಿ ಅವುಗಳಿಗೆ ಶಾಲು ಹೊದಿಸಿ, ಗಂಧದ ಹಾರ ಹಾಕುವ ಮೂಲಕ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನಸೌಧಕ್ಕೆ 60 ವರ್ಷಗಳಾಗಿರುವುದರಿಂದ ಹಿರಿಯ ಶಾಸಕರು, ಅಧಿಕಾರಿಗಳನ್ನು ಆಹ್ವಾನಿಸಿ ಗೌರವಿಸುವ ಕೆಲಸ ಮಾಡಬೇಕಿತ್ತು. ಮಾಜಿ ಶಾಸಕನಾದ ನನಗೂ ಯಾವುದೇ ಆಹ್ವಾನ ನೀಡಿಲ್ಲ. ಒಟ್ಟಾರೆಯಾಗಿ ವಿಧಾನಸೌಧ ವಜ್ರಮಹೋತ್ಸವನ್ನು ಅರ್ಥಪೂರ್ಣವಾಗಿ ಆಚರಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿದರು.
ವಜ್ರಮಹೋತ್ಸವ ಸಂಬಂಧ ಸರ್ಕಾರ ಸರ್ವಪಕ್ಷಗಳ ನಾಯಕರ ಸಭೆ ಕರೆದು ಚರ್ಚಿಸಿ, ಶಾಸಕರ ಸಮಿತಿಗಳನ್ನು ನೇಮಿಸಬೇಕಿತ್ತು. ಆದರೆ, ಇದ್ಯಾವುದನ್ನು ಮಾಡದೆ, ತರಾತುರಿಯಲ್ಲಿ ಕಾರ್ಯಕ್ರಮ ಹಮ್ಮಿಕೊಂಡಿದೆ ಎಂದು ದೂರಿದರು. ಇನ್ನು ವಿಧಾನಸೌಧ ವಜ್ರಮಹೋತ್ಸವದ ನೆನಪಿನಲ್ಲಿ ಡಾಕ್ಯುಮೆಂಟರಿ ರೂಪಿಸಲಾಗುತ್ತಿದೆ. ಇದರಲ್ಲಿ ವಿಧಾನಸೌಧಕ್ಕೆ ಅಪಚಾರವಾದರೆ, ಉಗ್ರ ಹೋರಾಟ ನಡೆಸಲಾಗುವುದು ಎಂದು ಅವರು ಎಚ್ಚರಿಸಿದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.