ನ್ಯಾಯವೇ ಪ್ರೇಮಿಗಳ ಬೆಸೆದರೂ ಪೋಷಕರಿಂದ ವಿಭಜಿಸೋ ಕೆಲಸ


Team Udayavani, Feb 21, 2017, 11:24 AM IST

highcourt.jpg

ಬೆಂಗಳೂರು: ಪ್ರೀತಿಸಿ ಮದುವೆಯಾದ ಜೋಡಿಯನ್ನು ಹೈಕೋರ್ಟ್‌ ಒಂದುಗೂಡಿಸಿತು. ಆದರೆ, ನ್ಯಾಯಾಲಯದಿಂದ ಹೊರಬರುತ್ತಿದ್ದಂತೆ ವಧುವನ್ನು ಪೋಷಕರು ಬಲವಂತದಿಂದ ಕರೆದೊಯ್ದರು. ವರನ ದೂರಿನ ಮೇರೆಗೆ ತಕ್ಷಣ ಕಾರ್ಯೋನ್ಮುಖರಾದ ಪೊಲೀಸರು ವಧುವನ್ನು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದರು. 

ಇಂಥದ್ದೊಂದು ಸಿನೀಮಿಯ ರೀತಿಯ ಘಟನೆಗೆ ಸೋಮವಾರ ಹೈಕೋರ್ಟ್‌ ಸಾಕ್ಷಿಯಾಯಿತು. ಪ್ರೀತಿಸಿ ಮದುವೆಯಾದ ನವದಂಪತಿಗೆ ರಕ್ಷಣೆ ನೀಡಲು ನ್ಯಾಯಾಲಯ ಸೂಚನೆ ನೀಡಿದೆ.  ಚಿಂತಾಮಣಿ ಮೂಲದ ವರ ಮತ್ತು ದೊಡ್ಡಬಳ್ಳಾಪುರದ ವಧು ಪ್ರೀತಿಸಿ ಸ್ವಯಂ ಪ್ರೇರಣೆಯಿಂದ 2016ರ ನ.24ರಂದು ಮದುವೆಯಾಗಿದ್ದರು. ವಧುವಿನ ತಾಯಿ ನ.30ರಂದು ಯಲಹಂಕ ಟೌನ್‌ ಪೊಲೀಸರಿಗೆ ಮಗಳು ನಾಪತ್ತೆಯಾಗಿದ್ದಾಳೆ ಎಂದು ದೂರು ನೀಡಿದ್ದರು.

ತರುವಾಯ ಹೈಕೋರ್ಟ್‌ಗೆ ಹೇಬಿಯಸ್‌ ಕಾರ್ಪಸ್‌ ಅರ್ಜಿ ದಾಖಲಿದ್ದರು. ಮಗಳನ್ನು  ಯುವಕನೊಬ್ಬ ಅಕ್ರಮವಾಗಿ ಬಂಧನದಲ್ಲಿಟ್ಟುಕೊಂಡಿದ್ದಾನೆ ಎಂದು ದೂರಿದ್ದರು. ಈ ದೂರಿನ ವಿಚಾರಣೆಯನ್ನು ಸೋಮವಾರ ಕೈಗೆತ್ತಿಕೊಂಡ ಹೈಕೋರ್ಟ್‌, ನವದಂಪತಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಸೂಚಿದ್ದರಿಂದ ಯಲಹಂಕ ಪೊಲೀಸರು ಹಾಜರುಪಡಿಸಿದ್ದರು. ವಿಚಾರಣೆ ಸಂದರ್ಭದಲ್ಲಿ ವಧು, ವರನನ್ನು ಪ್ರೀತಿಸುತ್ತಿರುವುದಾಗಿ ಮತ್ತು ತಾನು ವಯಸ್ಕಳಾಗಿದ್ದು, ಸ್ವ ಇಚ್ಛೆಯಿಂದ ಆತನ ಜತೆ ಹೋಗಿರುವುದಾಗಿ ಹೇಳಿಕೆ ನೀಡಿದ್ದಳು.

ವಧುವಿನ ಹೇಳಿಕೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಆಕೆಯ ತಾಯಿ ಮಗಳನ್ನು ತನ್ನ ವಶಕ್ಕೆ ನೀಡಬೇಕು ಎಂದು ಮನವಿ ಮಾಡಿದರು. ವಾದ-ಪ್ರತಿವಾದ ಆಲಿಸಿದ ನ್ಯಾಯಮೂರ್ತಿ ಬಿ.ಎಸ್‌.ಪಾಟೀಲ ಮತ್ತು ನ್ಯಾ.ಬಿ.ವಿ.ನಾಗರತ್ನ ವಿಭಾಗೀಯ ಪೀಠ, ವಧು-ವರರು ವಯಸ್ಕ ರಾಗಿದ್ದು, ಇಷ್ಟಪಟ್ಟು ಮದುವೆಯಾಗಿದ್ದಾರೆ. ಕಾನೂನು ಪ್ರಕಾರ ಅವರ ಮದುವೆಗೆ ಮಾನ್ಯತೆ ಯಿದೆ. ನ್ಯಾಯಾಲಯ ಅವರ ವಿವಾಹವನ್ನು ರದ್ದುಪಡಿಸಲಾಗದು ಎಂದು ಹೇಳಿತು. ಅಲ್ಲದೇ, ಈ ಬಗ್ಗೆ ಮಾತುಕತೆ ನಡೆಸಿ ಸಂಜೆ ನ್ಯಾಯಾಲಯಕ್ಕೆ ನಿರ್ಧಾರ ಹೇಳುವಂತೆ ತಿಳಿಸಿತು. 

ವಧುವನ್ನು ಹೊತ್ತೂಯ್ದ ಪೋಷಕರು: ನ್ಯಾಯಾಲಯದಿಂದ ಹೊರಬರುತ್ತಿದ್ದಂತೆ ವಧುವನ್ನು ಆಕೆಯ ಕುಟುಂಬಸ್ಥರು ಬಲವಂತಾಗಿ ಕಾರಿನಲ್ಲಿ ಕರೆದೊಯ್ಯಲು ಮುಂದಾದಾಗ ವರ ವಿರೋಧ ವ್ಯಕ್ತಪಡಿಸಿದ ವರನ ಮೇಲೆ ಹಲ್ಲೆ ನಡೆಸಲಾಯಿತು. ಮಾಹಿತಿ ಪಡೆದ ತಕ್ಷಣ ಪೊಲೀಸರು ಸ್ಥಳಕ್ಕೆ ಬರುವಷ್ಟರಲ್ಲಿ ವಧುವನ್ನು ಕರೆದೊಯ್ಯಲಾಗಿತ್ತು. ಕಾರ್ಯಪ್ರವೃತ್ತರಾದ ಯಲಹಂಕ ಮತ್ತು ವಿಧಾನಸೌಧ ಠಾಣಾ ಪೊಲೀಸರು ವಧುವನ್ನು ವಶಕ್ಕೆ ಪಡೆದು ಸಂಜೆ ನ್ಯಾಯಾಲಯಕ್ಕೆ ಹಾಜರುಪಡಿಸಿದರು. ಘಟನೆ ಬಗ್ಗೆ ಮಾಹಿತಿ ಪಡೆದ ನ್ಯಾಯಾಲಯವು ದಂಪತಿಗೆ ರಕ್ಷಣೆ ನೀಡಿ ಮಂಗಳವಾರ ಮಧ್ಯಾಹ್ನ 2.30ಕ್ಕೆ ನ್ಯಾಯಾಲಯಕ್ಕೆ ಮತ್ತೆ ಹಾಜರುಪಡಿಸುವಂತೆ ನಿರ್ದೇಶಿಸಿತು.

ಟಾಪ್ ನ್ಯೂಸ್

Mulki-kambla

Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್‌. ಸಂತೋಷ್‌ ಹೆಗ್ಡೆ

udupi-Bar-Asso

Udupi: ಸುಪ್ರೀಂ, ಹೈಕೋರ್ಟ್‌ಗಳ ತೀರ್ಪು ಆನ್‌ಲೈನ್‌ನಲ್ಲಿ ಲಭ್ಯ: ನ್ಯಾ.ಸೂರಜ್‌

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

4

Bengaluru: ಹಫ್ತಾ ನೀಡಲು ವ್ಯಾಪಾರಿಗೆ ಜೈಲಿನಿಂದಲೇ ಧಮ್ಕಿ!

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

virat-Hotel

BBMP Notice: ವಿರಾಟ್‌ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Accident-logo

Siddapura: ಕಾರು ಸ್ಕೂಟಿಗೆ ಢಿಕ್ಕಿ; ಸವಾರರು ಗಂಭೀರ

Car-Palti

Sulya: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

Thief

Kaup: ಉದ್ಯಾವರ: ಮನೆಯ ಬೀಗ ಮುರಿದು ಸೊತ್ತು ಕಳವು

Accident-logo

Putturu: ಬೈಕ್‌-ಪಿಕಪ್‌ ಢಿಕ್ಕಿ: ಇಬ್ಬರು ಸವಾರರಿಗೆ ಗಂಭೀರ ಗಾಯ

Arrest

Bantwala: ನಾವೂರು: ಅತ್ಯಾಚಾರ; ಆರೋಪಿಗೆ ನ್ಯಾಯಾಂಗ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.