ನಕಲಿ ಆಯುರ್ವೇದ ಔಷಧಿ: ವೃದ್ದರಿಗೆ ವಂಚನೆ

ವಂಚಕ ತಂಡ ಪೊಲೀಸರ ಬಲೆಗೆ ! ವಯೋವೃದ್ದರನ್ನು ಟಾರ್ಗೆಟ್‌ ಮಾಡಿ ನಂಬಿಸಿ, ದೋಖಾ

Team Udayavani, Feb 18, 2021, 2:05 PM IST

Fake Ayurvedic Medicine

ಬೆಂಗಳೂರು: ನಕಲಿ ಆಯುರ್ವೇದ ಔಷಧಿಗಳನ್ನು ಮಾರಾಟ ಮಾಡಿ ವೃದ್ಧರಿಂದ ಹಣ ಪಡೆದು ವಂಚಿಸುತ್ತಿದ್ದ ತಂಡವನ್ನು ಬಂಧಿಸುವಲ್ಲಿ ತಿಲಕ್‌ನಗರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಸಂಜಿತ್‌ (30) ಮಂಜುನಾಥ (40) ಶಿವಲಿಂಗ ಗೌತಮ್‌ (42) ರಮಾಕಾಂತ್‌ ಅಮಿತ್‌ (37) ಕಿಶನ್‌ ( 23) ಬಂಧಿತರು. ಪ್ರಕರಣದ ಪ್ರಮುಖ ಆರೋಪಿ ಕಲ್ಲೋಳಪ್ಪ ಗುರಪ್ಪ ಬಾಗಲಕೋಟಿ ಎಂಬಾತ ಮತ್ತೂಂದು ಪ್ರಕರಣದಲ್ಲಿ ಬಾಗಲಕೋಟೆ ಪೊಲೀಸರ ವಶದಲ್ಲಿದ್ದಾನೆ. ಆತನನ್ನು ಹೆಚ್ಚಿನ ವಿಚಾರಣೆಗಾಗಿ ವಶಕ್ಕೆ ಪಡೆಯಲಾಗುವುದು ಎಂದು ಪೊಲೀಸರು ತಿಳಿಸಿದರು.

ಆರೋಪಿಗಳು ತಂಡ ಆಸ್ಪತ್ರೆಗಳ ಬಳಿ ಬರುವ ವೃದ್ಧರನ್ನು ಟಾರ್ಗೆಟ್‌ ಮಾಡಿಕೊಂಡು ಅವರನ್ನು ಪರಿಚಯಿಸಿಕೊಳ್ಳುತ್ತಿದ್ದರು. ಮಂಡಿ ನೋವು ಸೇರಿ ವಯೋಸಹಜ ಕಾಯಿಲೆಗಳಿಗೆ ಆಯುರ್ವೇದಿಕ್‌ ಔಷಧಿಗಳನ್ನು ನೀಡುತ್ತೇವೆ. ಶೇ. 100 ರೋಗಗಳು ವಾಸಿಯಾಗಲಿವೆ. ರೋಗ ವಾಸಿಯಾಗದಿದ್ದರೆ ಹಣ ವಾಪಾಸ್‌ ಕೊಡುವುದಾಗಿ ನಂಬಿಸಿ ಹಣ ಪಡೆಯುತ್ತಿದ್ದರು. ಬಳಿಕ ವೃದ್ಧರಿಂದ ಹಣ ಪಡೆದು ನಕಲಿ ಆಯುರ್ವೇದಿ ಔಷಧಿಗಳನ್ನು ನೀಡಿ ವಂಚಿಸುತ್ತಿದ್ದರು. ಒಂದೇ ಏರಿಯಾದಲ್ಲಿ ತಿಂಗಳು, ಎರಡು ತಿಂಗಳು ಇದ್ದು ಪುನಃ ಕಚೇರಿಯನ್ನು ಮುಚ್ಚಿಕೊಂಡು ಮತ್ತೂಂದು ಏರಿಯಾಕ್ಕೆ ಸ್ಥಳಾಂತರಗೊಳ್ಳುತ್ತಿದ್ದರು ಎಂದು ತನಿಖೆಯಲ್ಲಿ ಗೊತ್ತಾಗಿದೆ ಎಂದು ಪೊಲೀಸರು ಹೇಳಿದರು.

ಕೆಲವು ತಿಂಗಳ ಹಿಂದೆ ಜಯನಗರದ ಅಥ್ರೋಪೆಡಿಕ್‌ ಸೆಂಟರ್‌ ವೊಂದರ ಮುಂಭಾಗ ರವಿ ಬಿ.ಆರ್‌  ಅನುಕರ್‌ ಎಂಬುವವರನ್ನು ಪರಿಚಯ ಮಾಡಿಕೊಂಡಿದ್ದ ಆರೋಪಿಗಳು ಅವರ ಸೊಂಟ, ಕಾಲು ನೋವಿಗೆ ಔಷಧಿ ನೀಡುತ್ತೇವೆ ಎಂದು ನಂಬಿಸಿದ್ದರು. ಬಳಿಕ ರಾಜಾಜಿನಗರದಲ್ಲಿರುವ “ಧನ್ವಂತರಿ  ಅಥೋìಪೆಡಿಕ್‌’ ಹೆಸರಿನ ಸೆಂಟರ್‌ಗೆ ಕರೆದುಕೊಂಡು ಹೋಗಿದ್ದರು. ಅಲ್ಲಿ ಆರೋಪಿ ಕಲ್ಲೋಳಪ್ಪ ತಾನೇ ವೈದ್ಯ ಎಂದು ಬಿಂಬಿಸಿಕೊಂಡು ನಮ್ಮ ಚಿಕಿತ್ಸೆಗೆ 2.59 ಲಕ್ಷ ರೂ. ಖರ್ಚಾಗಲಿದೆ. ಅಷ್ಟು ಹಣ ನೀಡಿದರೆ  ಚಿಕಿತ್ಸೆ ಹಾಗೂ ಔಷಧಿ ನೀಡುತ್ತೇವೆ ಎಂದು ನಂಬಿಸಿದ್ದರು. ಸೊಂಟ, ಕಾಲು ನೋವು ವಾಸಿಯಾಗದಿದ್ದರೆ ಹಣ ವಾಪಸ್‌ ಕೊಡುವುದಾಗಿ ತಿಳಿಸಿದ್ದರು. ಇದನ್ನು ನಂಬಿದ್ದ ರವಿ ಅವರು 2.59 ಲಕ್ಷ ರೂ. ನೀಡಿ ಔಷಧಿ ಪಡೆದಿದ್ದರು.

ಆರೋಪಿಗಳು ನೀಡಿದ್ದ ಔಷಧಿ ಪಡೆದುಕೊಂಡರೂ ನೋವು ಕಡಿಮೆಯಾಗಿರಲಿಲ್ಲ. ಹೀಗಾಗಿ ರವಿ ಅವರು  ಧನ್ವಂತರಿ ಅಥ್ರೋಪೆಡಿಕ್‌ ಹತ್ತಿರ ಹೋದಾಗ ಕ್ಲಿನಿಕ್‌ ಬಾಗಿಲು ಮುಚ್ಚಿರುವುದು ಗೊತ್ತಾಗಿದೆ. ಹೀಗಾಗಿ ತಾವು ಮೋಸ ಹೋಗಿರುವುದನ್ನು ಅರಿತು ಫೆ.10ರಂದು ಪ್ರಕರಣ ದಾಖಲಿಸಿದ್ದರು.  ಈ ದೂರಿನ ಅನ್ವಯ  ತನಿಖೆ ನಡೆಸಿದ ಇನ್ಸ್‌ಪೆಕ್ಟರ್‌ ಜಿ.ಎಸ್‌ ಅನಿಲ್‌ ಕುಮಾರ್‌ ನೇತೃತ್ವದ ತಂಡ, ಆರೋಪಿಗಳನ್ನು ಬಂಧಿಸಿ 50 ಸಾವಿರ ರೂ.ನಗದು ಜಪ್ತಿ ಮಾಡಿಕೊಂಡಿದೆ. ಆರೋಪಿಗಳ ವಿಚಾರಣೆ ವೇಳೆ ಐದು ಮಂದಿಗೆ ವಂಚಿಸಿರುವುದು ಪತ್ತೆಯಾಗಿದ್ದು, ಈ ಬಗ್ಗೆ ತನಿಖೆ ಮುಂದುವರಿಸಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದರು.

ಟಾಪ್ ನ್ಯೂಸ್

1-sp

Farmers; ಕಬ್ಬು ಹಾನಿಗೆ ಪರಿಹಾರ ನಿಧಿ,ತೊಗರಿಗೆ ಬೆಂಬಲ ಬೆಲೆ: ಸಚಿವ ಶಿವಾನಂದ ಪಾಟೀಲ್

1-dee

Sharon Raj ಹ*ತ್ಯೆ ಕೇಸ್: ಪ್ರೇಯಸಿಗೆ ಮರ*ಣ ದಂಡನೆ ವಿಧಿಸಿದ ನ್ಯಾಯಾಲಯ

1-ani

Mangaluru; ಕೋಟೆಕಾರು ಸಹಕಾರಿ ಬ್ಯಾಂಕ್ ದರೋಡೆ : ಮೂವರ ಬಂಧನ

ಕಳಕಮಲ್ಲಯ್ಯ ಕ್ಷೇತ್ರ: ದಕ್ಷಿಣ ಕಾಶಿ ಪ್ರಸಿದ್ಧಿಯ ಸುಕ್ಷೇತ್ರ ಶ್ರೀಕಾಲ ಕಾಲೇಶ್ವರ…

ಕಳಕಮಲ್ಲಯ್ಯ ಕ್ಷೇತ್ರ: ದಕ್ಷಿಣ ಕಾಶಿ ಪ್ರಸಿದ್ಧಿಯ ಸುಕ್ಷೇತ್ರ ಶ್ರೀಕಾಲ ಕಾಲೇಶ್ವರ…

ಇದು ವಿಶ್ವದ ಅತಿ ಎತ್ತರದ ಏಕಶಿಲಾ ಬೆಟ್ಟ… Online ನೋಂದಣಿ ಇಲ್ಲದೆ ಚಾರಣಕ್ಕೆ ಅವಕಾಶವಿಲ್ಲ

ಇದು ವಿಶ್ವದ ಅತಿ ಎತ್ತರದ ಏಕಶಿಲಾ ಬೆಟ್ಟ… Online ನೋಂದಣಿ ಇಲ್ಲದೆ ಚಾರಣಕ್ಕೆ ಅವಕಾಶವಿಲ್ಲ

Satish Jaraki

Congress; ಸುರ್ಜೇವಾಲ ವಿರುದ್ಧ ಸಚಿವರಿಂದಲೇ ದೂರು?: ಸತೀಶ್ ಜಾರಕಿಹೊಳಿ ಹೇಳಿದ್ದೇನು?

1-BP-Harish

BJP Rift; ಯತ್ನಾಳ್ ಪರ ಬ್ಯಾಟಿಂಗ್ ಮಾಡಿದ ಶಾಸಕ ಬಿ.ಪಿ. ಹರೀಶ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sp

Farmers; ಕಬ್ಬು ಹಾನಿಗೆ ಪರಿಹಾರ ನಿಧಿ,ತೊಗರಿಗೆ ಬೆಂಬಲ ಬೆಲೆ: ಸಚಿವ ಶಿವಾನಂದ ಪಾಟೀಲ್

Satish Jaraki

Congress; ಸುರ್ಜೇವಾಲ ವಿರುದ್ಧ ಸಚಿವರಿಂದಲೇ ದೂರು?: ಸತೀಶ್ ಜಾರಕಿಹೊಳಿ ಹೇಳಿದ್ದೇನು?

1-BP-Harish

BJP Rift; ಯತ್ನಾಳ್ ಪರ ಬ್ಯಾಟಿಂಗ್ ಮಾಡಿದ ಶಾಸಕ ಬಿ.ಪಿ. ಹರೀಶ್

School bag

ಜ.21 ರಂದು ಬೆಳಗಾವಿ ತಾಲೂಕಿನ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

Belagavi: ಪ್ರಭಾಕರ ಕೋರೆಯವರನ್ನು ಕಾಂಗ್ರೆಸ್ ಗೆ ಕರೆದಿಲ್ಲ: ಡಿಕೆ ಶಿವಕುಮಾರ್‌ ಸ್ಪಷ್ಟನೆ

Belagavi: ಪ್ರಭಾಕರ ಕೋರೆಯವರನ್ನು ಕಾಂಗ್ರೆಸ್ ಗೆ ಕರೆದಿಲ್ಲ: ಡಿಕೆ ಶಿವಕುಮಾರ್‌ ಸ್ಪಷ್ಟನೆ

MUST WATCH

udayavani youtube

|ಹೂವಿನ ತೋಟದಲ್ಲಿ ಅರಳಿದೆ ರಾಮಾಯಣ ಕಥನ

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

ಹೊಸ ಸೇರ್ಪಡೆ

1-wl

ಅಖಿಲ ಭಾರತ ಅಂತರ್‌ ವಿ.ವಿ.ವೇಟ್‌ಲಿಫ್ಟಿಂಗ್‌:ಮಂಗಳೂರು ವಿವಿ ರನ್ನರ್ ಅಪ್‌

1-sp

Farmers; ಕಬ್ಬು ಹಾನಿಗೆ ಪರಿಹಾರ ನಿಧಿ,ತೊಗರಿಗೆ ಬೆಂಬಲ ಬೆಲೆ: ಸಚಿವ ಶಿವಾನಂದ ಪಾಟೀಲ್

1-dee

Sharon Raj ಹ*ತ್ಯೆ ಕೇಸ್: ಪ್ರೇಯಸಿಗೆ ಮರ*ಣ ದಂಡನೆ ವಿಧಿಸಿದ ನ್ಯಾಯಾಲಯ

1-ani

Mangaluru; ಕೋಟೆಕಾರು ಸಹಕಾರಿ ಬ್ಯಾಂಕ್ ದರೋಡೆ : ಮೂವರ ಬಂಧನ

ಕಳಕಮಲ್ಲಯ್ಯ ಕ್ಷೇತ್ರ: ದಕ್ಷಿಣ ಕಾಶಿ ಪ್ರಸಿದ್ಧಿಯ ಸುಕ್ಷೇತ್ರ ಶ್ರೀಕಾಲ ಕಾಲೇಶ್ವರ…

ಕಳಕಮಲ್ಲಯ್ಯ ಕ್ಷೇತ್ರ: ದಕ್ಷಿಣ ಕಾಶಿ ಪ್ರಸಿದ್ಧಿಯ ಸುಕ್ಷೇತ್ರ ಶ್ರೀಕಾಲ ಕಾಲೇಶ್ವರ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.