ನಕಲಿ ಇ-ಮೇಲ್ ಕಳುಹಿಸಿ 5 ಲಕ್ಷ ರೂ. ವಂಚನೆ
Team Udayavani, Mar 5, 2022, 12:19 PM IST
ಬೆಂಗಳೂರು: ನಕಲಿ ಇ-ಮೇಲ್ ವಿಳಾಸ ಬಳಸಿ ಖಾಸಗಿ ಕಂಪನಿ ಉದ್ಯೋಗಿಯಿಂದ ಸೈಬರ್ ವಂಚಕರು 5 ಲಕ್ಷ ರೂ. ದೋಚಿದ್ದಾರೆ. ಈ ಸಂಬಂಧ ಮುನ್ನೇನಕೊಳಲು ನಿವಾಸಿ ಶ್ರೀರಾಮ್ ಎಂಬುವವರು ವೈಟ್ ಫೀಲ್ಡ್ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಖಾಸಗಿ ಕಂಪನಿ ಉದ್ಯೋಗಿಯಾಗಿರುವ ಶ್ರೀರಾಮ್, ಪ್ರಾಪರ್ಟಿಸ್ ಪ್ರೈವೇಟ್ ಲಿಮಿಡೆಟ್ ವೊಂದರಲ್ಲಿ ಫ್ಲ್ಯಾಟ್ ಖರೀದಿಗೆ ಚಿಂತಿಸಿದ್ದರು. ಈ ಮಧ್ಯೆ 2021ರ ಜುಲೈನಲ್ಲಿ ಆ ಕಂಪನಿಯ ಹೆಸರ ಬಳಸಿಕೊಂಡು ಅಶೋಕ್‌ಕುಮಾರ್ ಎಂಬ ನಕಲಿ ಇ-ಮೇಲ್ ವಿಳಾಸದಿಂದ ಫ್ಲ್ಯಾಟ್ ಖರೀದಿ ವಿಚಾರ ಪ್ರಸ್ತಾಪಿಸಿ ಸಂದೇಶ ಕಳುಹಿಸಿದ್ದಾರೆ. ಅಲ್ಲದೆ, ಫ್ಲ್ಯಾಟ್ ಬೇಕಾದಲ್ಲಿ ಈ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆ ಮಾಡಬೇಕೆಂದು ಸೂಚಿಸಿದ್ದಾರೆ.ಅದನ್ನು ನಂಬಿದ ಶ್ರೀರಾಮ್, ಹಂತ-ಹಂತವಾಗಿ 5,31,379 ರೂ. ವರ್ಗಾವಣೆ ಮಾಡಿದ್ದಾರೆ. ಅನಂತರ ಕಂಪನಿ ಸಂಪರ್ಕಿಸಿದಾಗ ನಕಲಿ ಎಂಬುದು ಗೊತ್ತಾಗಿದೆ.
ಕೂಡಲೇ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ತನಿಖೆ ನಡೆಯುತ್ತಿದೆ ಎಂದು ಪೊಲೀಸರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf: ರೈತರಿಗೆ ನೀಡಿರುವ ನೋಟಿಸ್ ತಕ್ಷಣ ವಾಪಸ್: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ
Kannada Rajyotsava: ಪಾಲಿಕೆ ಆಡಳಿತದಲ್ಲಿ ಸಂಪೂರ್ಣ ಕನ್ನಡ: ತುಷಾರ್
Bengaluru: ಅಕ್ರಮವಾಗಿ ಪಟಾಕಿ ಮಾರಾಟ; 2 ದಿನಗಳಲ್ಲಿ 56 ಕೇಸು ದಾಖಲು
Deepavali: ಐಟಿ ಸಿಟಿಯಲ್ಲಿ ಬೆಳಕಿನ ಹಬ್ಬದ ರಂಗು
Bengaluru: ಬ್ಯಾಗ್ ಪರಿಶೀಲನೆ ವೇಳೆ ವಿಮಾನ ನಿಲ್ದಾಣ ಸಿಬ್ಬಂದಿಗೆ ಬೆದರಿಕೆ: ಕೇಸ್
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.