FIR: ಸಿಎಂ ಆಪ್ತ ಕಾರ್ಯದರ್ಶಿ ಹೆಸರಲ್ಲಿ ನಕಲಿ ಲೆಟರ್‌ಹೆಡ್; ಎಫ್ಐಆರ್
Team Udayavani, Dec 12, 2023, 1:04 PM IST
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಆಪ್ತ ಕಾರ್ಯದರ್ಶಿಗಳ ಹೆಸರಿನಲ್ಲಿ ನಕಲಿ ಲೆಟರ್ ಹೆಡ್ ಸೃಷ್ಟಿಸಿದ ಪ್ರಕರಣ ಸಂಬಂಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಸಿದ್ದರಾಮಯ್ಯ ಅವರ ಆಪ್ತ ಕಾರ್ಯದರ್ಶಿ ಡಾ.ವೆಂಕಟೇಶಯ್ಯ ಕೊಟ್ಟ ದೂರಿನ ಮೇರೆಗೆ ವಿಧಾನಸೌಧ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ನಕಲಿ ಲೆಟರ್ ಹೆಡ್ ಸೃಷ್ಟಿಸಿ ಸಿಎಂ ಕಚೇರಿಯಿಂದ ಲೋಕೋಪಯೋಗಿ ಸಚಿವರಿಗೆ ಕಡತ ಕಳುಹಿಸಲಾಗಿತ್ತು. ಈ ಕಡತದಲ್ಲಿ ರಾಜೇಂದ್ರ ಹೆಸರಿನಲ್ಲಿ ಸಹಿ ಹಾಕಲಾಗಿದ್ದು, ಅಂಕಿತ್ ಎಂಬಾತನಿಗೆ ಮುಖ್ಯಮಂತ್ರಿಗಳ ಆದೇಶದ ಮೇರೆಗೆ ಇಲಾಖೆಯಲ್ಲಿ ತಾತ್ಕಾಲಿಕ ಕೆಲಸ ನೀಡುವಂತೆ ಉಲ್ಲೇಖೀಸಲಾಗಿದೆ. ಆದರೆ ಮುಖ್ಯ ಮಂತ್ರಿಗಳ ಆಪ್ತ ಕಾರ್ಯದರ್ಶಿಗಳ ಕಚೇರಿಯಲ್ಲಿ ರಾಜೇಂದ್ರ ಎಂಬ ವ್ಯಕ್ತಿ ಇಲ್ಲ. ನಕಲಿ ಪತ್ರ ಸೃಷ್ಟಿಸಿ ಮುಖ್ಯಮಂತ್ರಿಗಳ ಆಪ್ತ ಕಾರ್ಯದರ್ಶಿಗಳು ಹಾಗೂ ಮುಖ್ಯ ಮಂತ್ರಿಗಳ ಹೆಸರನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎನ್ನಲಾದ ರಾಜೇಂದ್ರ ಹಾಗೂ ಅಂಕಿತ್ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ಉಲ್ಲೇಖೀಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BBK11: 13ನೇ ವಾರದಲ್ಲಿ ವೀಕ್ಷಕರ ಗಮನ ಸೆಳೆದಿದ್ದ ಖ್ಯಾತ ಸ್ಪರ್ಧಿಯೇ ಎಲಿಮಿನೇಟ್
RBI: ಯುಪಿಐ ಮೂಲಕ ಡಿಜಿಟಲ್ ವ್ಯಾಲೆಟ್ ಹಣ ಬಳಕೆಗೆ ಅಸ್ತು
Madikeri: ಗುಂಡು ಹೊಡೆದು ಕಾರ್ಮಿಕನ ಕೊ*ಲೆ; ವ್ಯಕ್ತಿ ಬಂಧನ
Daily Horoscope: ಅಪಾತ್ರರಿಗೆ ಸಲಹೆ ನೀಡಿ ಅವಮಾನ ಹೊಂದದಿರಿ, ಭವಿಷ್ಯದ ಕುರಿತು ಚಿಂತನೆ
THAAD System: ಹೌತಿ ದಾಳಿ ತಡೆಗೆ ಇಸ್ರೇಲ್‌ನಿಂದ “ಥಾಡ್’ ವ್ಯವಸ್ಥೆ ಬಳಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.