ನಕಲಿ ಮತ ಹಾಕಿದರೆ ಕಠಿಣ ಕ್ರಮ
Team Udayavani, Apr 22, 2018, 12:21 PM IST
ಬೆಂಗಳೂರು: ನಕಲಿ ಮತದಾರರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಹೇಳಿದ್ದಾರೆ.
ಚುನಾವಣಾ ಆಯೋಗ, ಕರ್ನಾಟಕ ಮಾಧ್ಯಮ ಅಕಾಡೆಮಿ, ಕರ್ನಾಟಕ ಚಿತ್ರಕಲಾ ಪರಿಷತ್ ಹಾಗೂ ವ್ಯಂಗ್ಯಚಿತ್ರಕಾರರ ಸಂಘದ ಸಹಯೋಗದಲ್ಲಿ ಮತದಾರರ ಜಾಗೃತಿಗೆ ಚಿತ್ರಕಲಾ ಪರಿಷತ್ತಿನಲ್ಲಿ ಶನಿವಾರ ಹಮ್ಮಿಕೊಂಡಿದ್ದ ವ್ಯಂಗ್ಯಚಿತ್ರಗಳು ಮತ್ತು ಪ್ರಚಾರ ಸಾಮಾಗ್ರಿಗಳ ಪ್ರದರ್ಶನ ಹಾಗೂ ವ್ಯಂಗ್ಯಚಿತ್ರ ರಚನೆ ಕಾರ್ಯಾಗಾರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಅಂತಿಮ ಮತದಾರರ ಪಟ್ಟಿ ಪ್ರಕಾರ ಬೆಂಗಳೂರಿನಲ್ಲಿ ಸುಮಾರು 89 ಲಕ್ಷ ಮತದಾರರಿದ್ದಾರೆ. ಆದರೆ, ಇದರಲ್ಲಿ ನಕಲಿ ಮತದಾರರು ಇರುವ ಬಗ್ಗೆ ದೂರುಗಳು ಕೇಳಿ ಬರುತ್ತಿವೆ. ಮತದಾರರ ಪಟ್ಟಿಯ ಪರಿಪೂರ್ಣತೆ ಮತ್ತು ಪಾವಿತ್ರ್ಯತೆ ಕಾಪಾಡಿಕೊಳ್ಳಲು ಆಯೋಗ ಬದ್ಧವಾಗಿದೆ.
ಸಾಕಷ್ಟು ಸಂಖ್ಯೆಯಲ್ಲಿ ನಕಲಿ ಮತದಾರರ ನೋಂದಣಿಯಾಗಿದೆ, ಒಂದು ಧರ್ಮ ಮತ್ತು ಸಮುದಾಯದ ಹೆಸರುಗಳನ್ನು ಮತದಾರರ ಪಟ್ಟಿಯಿಂದ ತೆಗೆದು ಹಾಕಲಾಗಿದೆ ಎಂಬ ದೂರು ಮತ್ತು ಆರೋಪಗಳು ಕೇಳಿ ಬರುತ್ತಿವೆ. ಈ ಬಗ್ಗೆ ಪರಿಶೀಲನೆ ನಡೆಸಿ ತಪ್ಪು ಕಂಡು ಬಂದರೆ ಸಂಬಂಧಪಟ್ಟವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು.
ಮತದಾರರಲ್ಲಿ ಜಾಗೃತಿ ಮೂಡಿಸಲು ಆಯೋಗದಿಂದ ಜನರಿಗೆ ತಕ್ಷಣ ಅರ್ಥಮಾಡಿಸುವಂತಹ ಮತ್ತು ಆಕರ್ಷಕ ಮಾಧ್ಯಮಗಳನ್ನು ಬಳಸಲಾಗುತ್ತಿದೆ. ವ್ಯಂಗ್ಯಚಿತ್ರಗಳಿಗೆ ತನ್ನದೇ ಆದ ಮಹತ್ವವಿದೆ. ಇವುಗಳಿಗೆ ಜನ ಬೇಗ ಮಾರುಹೋಗುತ್ತಾರೆ. ದೊಡ್ಡ ಲೇಖನ, ಅಂಕಣಗಳು ಹೇಳುವುದನ್ನು ಸಣ್ಣ ಗೆರೆಗಳು ಹೇಳುತ್ತವೆ. ಈ ಹಿನ್ನೆಲೆಯಲ್ಲಿ ವ್ಯಂಗ್ಯಚಿತ್ರಗಳ ಮೂಲಕ ಮತದಾರರಲ್ಲಿ ಜಾಗೃತಿ ಮೂಡಿಸಲು ಪ್ರದರ್ಶನ ಮತ್ತು ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಖ್ಯಾತನಾಮ ವ್ಯಂಗ್ಯಚಿತ್ರಕಾರರ ವ್ಯಂಗ್ಯಚಿತ್ರಗಳ ಪ್ರದರ್ಶನ ಏರ್ಪಡಿಸಲಾಯಿತು. ಅಲ್ಲದೇ ಕೆಲವು ವ್ಯಂಗ್ಯಚಿತ್ರಕಾರರ ಮತದಾರರ ಜಾಗೃತಿ ಬಗ್ಗೆ ಸ್ಥಳದಲ್ಲೇ ವ್ಯಂಗ್ಯಚಿತ್ರಗಳನ್ನು ಬರೆದರು. ಇದನ್ನು ವೀಕ್ಷಿಸಿದ ಮುಖ್ಯ ಚುನಾವಣಾಧಿಕಾರಿ, ಇವುಗಳಲ್ಲಿ ಆಯ್ದ ವ್ಯಂಗ್ಯಚಿತ್ರಗಳನ್ನು ರಾಜ್ಯದ ಬೇರೆ ಬೇರೆ ಭಾಗಗಳಲ್ಲಿ ಮತದಾರರ ಜಾಗೃತಿಗೆ ಬಳಸಿಕೊಳ್ಳಲಾಗುವುದು ಎಂದರು.
ಈ ವೇಳೆ ಅಪರ ಮುಖ್ಯ ಚುನಾವಣಾಧಿಕಾರಿ ಡಾ. ಬಿ.ಆರ್. ಮಮತಾ, ಬಿಬಿಎಂಪಿ ಆಯುಕ್ತ ಮಂಜುನಾಥ ಪ್ರಸಾದ್, ಬೆಂಗಳೂರು ನಗರ ಜಿಲ್ಲಾಧಿಕಾರಿ ದಯಾನಂದ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Egg Thrown: “ಮೊಟ್ಟೆ ಅಟ್ಯಾಕ್’ ಚಿತ್ರದ ರಚನೆ, ನಿರ್ಮಾಣ ಸ್ವತಃ ಅವರದ್ದೇ: ಕುಸುಮಾ
New Products KMF: ಮಾರುಕಟ್ಟೆಗೆ ಬಂತು “ನಂದಿನಿ’ ಇಡ್ಲಿ, ದೋಸೆ ಹಿಟ್ಟು
Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ
Varthur Prakash: ವರ್ತೂರು ಪ್ರಕಾಶ್‌ಗೆ 3 ತಾಸು ಗ್ರಿಲ್, 38 ಪ್ರಶ್ನೆ!
Blackmail: ಸ್ನೇಹಿತೆಯ ವಿಡಿಯೋ, ಫೋಟೋ ಇಟ್ಟುಕೊಂಡು ಹಣಕ್ಕೆ ಬ್ಲ್ಯಾಕ್‌ಮೇಲ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ
Shirva ಹಳೆವಿದ್ಯಾರ್ಥಿ ಸಂಘ; ಡಿ.29: ದಶಮಾನೋತ್ಸವ, ನೂತನ ಉಪಹಾರ ಗೃಹ ಸಮರ್ಪಣೆ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು
MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ
Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.