ಸರ್ಕಾರ ಉಳಿಸಲು ಸುಳ್ಳು ಹೇಳಿಕೆ
Team Udayavani, Mar 22, 2019, 6:35 AM IST
ಬೆಂಗಳೂರು: “ರಾಜ್ಯ ಸರ್ಕಾರವನ್ನು ಉಳಿಸುವ ಸಲುವಾಗಿ ಬಿಜೆಪಿ ಮುಖಂಡರಿಂದ ಐದು ಕೋಟಿ ರೂ. ಪಡೆದಿದ್ದಾಗಿ ಹೇಳಿಕೆ ನೀಡಿದ್ದೆ’ ಎಂದು ಶಾಸಕ ಶ್ರೀನಿವಾಸಗೌಡ ಎಸಿಬಿ ಅಧಿಕಾರಿಗಳ ಎದುರು ಹೇಳಿಕೆ ದಾಖಲಿಸಿದ್ದಾರೆ.
ಆಪರೇಷನ್ ಕಮಲ ಕಾರ್ಯಾಚರಣೆಯಡಿ ಬಿಜೆಪಿ ಮುಖಂಡರಿಂದ ಮುಂಗಡವಾಗಿ ಐದು ಕೋಟಿ ರೂ. ಪಡೆದ ಆರೋಪ ಪ್ರಕರಣ ಸಂಬಂಧ ಕೋಲಾರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಶಾಸಕ ಕೆ.ಶ್ರೀನಿವಾಸಗೌಡ ಗುರುವಾರ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ)ದ ಕಚೇರಿಗೆ ಹಾಜರಾಗಿದ್ದು, ತಮ್ಮ ಹೇಳಿಕೆ ದಾಖಲಿಸಿದ್ದಾರೆ.
ಬೆಳಗ್ಗೆ 11 ಗಂಟೆ ಸುಮಾರಿಗೆ ಕಚೇರಿಗೆ ಆಗಮಿಸಿದ ಶ್ರೀನಿವಾಸ ಗೌಡ ಅವರನ್ನು ಎಸಿಬಿ ಅಧಿಕಾರಿಗಳು ಸತತ ಒಂದೂವರೆ ಗಂಟೆಗಳ ಕಾಲ ವಿಚಾರಣೆ ನಡೆಸಿದರು. ಬಿಜೆಪಿ ಮುಖಂಡರು 5 ಕೋಟಿ ರೂ.ಅನ್ನು ತಮ್ಮ ಮನೆಗೆ ತಂದಿಟ್ಟಿರುವುದಾಗಿ ಹೇಳಿಕೆ ನೀಡಿದ ಕುರಿತ ಪ್ರಶ್ನೆಗಳಿಗೆ ಶಾಸಕರು ಉತ್ತರಿಸಿದ್ದಾರೆ.
“ಮೈತ್ರಿ ಸರ್ಕಾರ ರಚನೆಯಾದ ಬಳಿಕ ಬಿಜೆಪಿ ನಡೆಸುತ್ತಿದ್ದ ಆಪರೇಷನ್ ಕಮಲ ತಪ್ಪಿಸಲು, ಸರ್ಕಾರ ಉಳಿಸಲು ಬಿಜೆಪಿಯಿಂದ ಮುಂಗಡವಾಗಿ ಐದು ಕೋಟಿ ರೂ. ಪಡೆದಿದ್ದಾಗಿ ಹೇಳಿಕೆ ನೀಡಿದ್ದೆ ಅಷ್ಟೇ. ಬೇರೆ ಯಾವುದೇ ಉದ್ದೇಶವಿಲ್ಲ. ನಾನು ಜೆಡಿಎಸ್‌ನ ನಿಷ್ಠಾವಂತ ಕಾರ್ಯಕರ್ತ. ಹಣ ಇತರೆ ಯಾವುದರಿಂದಲೂ ನನಗೆ ಆಮಿಷವೊಡ್ಡಲು ಸಾಧ್ಯವಿಲ್ಲ’ ಎಂದು ಹೇಳಿಕೆ ದಾಖಲಿಸಿದ್ದಾರೆ ಎಂದು ಎಸಿಬಿ ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru; ಪಟಾಕಿ ಬಾಕ್ಸ್ ಮೇಲೆ ಕುಳ್ಳಿರಿಸಿ ಸ್ನೇಹಿತರ ಹುಚ್ಚಾಟ: ಯುವಕ ಸಾ*ವು
ತಂದೆ, ಮಗು ಸಾವು: ಬೆಸ್ಕಾಂ ಎಂಜಿನಿಯರ್ ವಿರುದ್ಧದ ಕೇಸು ರದ್ದತಿಗೆ ಹೈಕೋರ್ಟ್ ನಕಾರ
Arrested: ರಾಜಸ್ಥಾನದಿಂದ ಫ್ಲೈಟ್‌ನಲ್ಲಿ ಬಂದು ಕಾರು ಕದಿಯುತ್ತಿದ್ದವನ ಸೆರೆ; ಆರೋಪಿ ಬಂಧನ
Bengaluru: ಅತಿ ವೇಗವಾಗಿ ಬಂದ ಕಾರು ಬೈಕ್‌ಗೆ ಡಿಕ್ಕಿ: ಫುಡ್ ಡೆಲಿವರಿ ಬಾಯ್ ಸಾವು
Bengaluru: ಊರಿಂದ ವಾಪಸ್ಸಾದವರಿಗೆ ಸಂಚಾರ ದಟ್ಟಣೆ ಬಿಸಿ
MUST WATCH
ಹೊಸ ಸೇರ್ಪಡೆ
Bantwal: ತುಂಬೆ ಶ್ರೀಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕನ್ನ; ಲಕ್ಷಾಂತರ ಮೌಲ್ಯದ ನಗನಗದು ಲೂಟಿ
Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ
ಅಂಗಡಿಯಲ್ಲಿ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ
Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ
ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.