ಕೌಟುಂಬಿಕ ಕಲಹ: ಬಿಬಿಎಂಪಿ ಆಸ್ಪತ್ರೆ ವೈದ್ಯೆ ಆತ್ಮಹತ್ಯೆ
Team Udayavani, Oct 17, 2018, 12:53 PM IST
ಬೆಂಗಳೂರು: ಕೌಟುಂಬಿಕ ಕಲಹಕ್ಕೆ ಬೇಸತ್ತು ಬಿಬಿಎಂಪಿ ವೈದ್ಯೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಂದಿನಿ ಲೇಔಟ್‌ನಲ್ಲಿ ನಡೆದಿದೆ. ನಂದಿನಿ ಲೇಔಟ್‌ನ ಸಾಕಮ್ಮ ಲೇಔಟ್ ನಿವಾಸಿ ಅಶ್ವಿನಿ (32) ಮೃತ ವೈದ್ಯೆ. ಕೃಷ್ಣಾನಂದ ನಗರದ ಬಿಬಿಎಂಪಿ ಆಸ್ಪತ್ರೆಯಲ್ಲಿ ಅಶ್ವಿನಿ ವೈದ್ಯರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಕೌಟುಂಬಿಕ ವಿಚಾರಕ್ಕೆ ಬೇಸತ್ತು ಸೋಮವಾರ ಮಧ್ಯಾಹ್ನ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಹೇಳಿದರು.
ವೈದ್ಯೆ ಅಶ್ವಿನಿ ಮೂರು ವರ್ಷಗಳ ಹಿಂದೆ ಬೌರಿಂಗ್ ಆಸ್ಪತ್ರೆಯಲ್ಲಿ ವೈದ್ಯರಾಗಿರುವ ಡಾ. ಲೋಹಿತ್ ಎಂಬುವವರನ್ನು ವಿವಾಹವಾಗಿದ್ದರು. ಆರಂಭದಲ್ಲಿ ಅನ್ಯೂನ್ಯವಾಗಿದ್ದ ದಂಪತಿ, ಬಳಿಕ ಇಬ್ಬರ ನಡುವೆ ಮನಸ್ತಾಪ ಉಂಟಾಗಿ ಕಳೆದ ಒಂದೂವರೆ ವರ್ಷಗಳಿಂದ ಪ್ರತ್ಯೇಕವಾಗಿ ಜೀವನ ನಡೆಸುತ್ತಿದ್ದರು. ಹೀಗಾಗಿ ಅಶ್ವಿನಿ ಸಾಕಮ್ಮ ಲೇಔಟ್‌ನಲ್ಲಿರುವ ಪೋಷಕರ ಜತೆ ವಾಸವಾಗಿದ್ದರು.
ಕೆಲ ತಿಂಗಳ ಹಿಂದಷ್ಟೇ ವಿಚ್ಛೇದನ ಕೋರಿ ಪತಿ ಲೋಹಿತ್ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ಇದರಿಂದ ನೊಂದಿದ್ದ ಅಶ್ವಿನಿ ಸೋಮವಾರ ಬೆಳಗ್ಗೆ 11.30ರ ಸುಮಾರಿಗೆ ತಮ್ಮ ಮನೆಯ ತಮ್ಮ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಅಪರಾಹ್ನ 12.30 ಗಂಟೆಯಾದರೂ ಪುತ್ರಿ ತಿಂಡಿಗೆ ಬಾರದೆ ಇರುವುದರಿಂದ ಪೋಷಕರು ಕೊಠಡಿಯ ಬಾಗಿಲು ತೆರೆದಾಗ ಆತ್ಮಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ. ಘಟನಾ ಸ್ಥಳದಲ್ಲಿ ಯಾವುದೇ ಡೆತ್‌ನೋಟ್ ಪತ್ತೆಯಾಗಿಲ್ಲ. ಪತಿ ಲೋಹಿತ್ ಹಾಗೂ ಇವರ ಪೋಷಕರ ವಿರುದ್ಧ ಅಶ್ವಿನಿ ಪೋಷಕರು ಕಿರುಕುಳದ ಆರೋಪದಡಿ ಪ್ರಕರಣ ದಾಖಲಿಸಿದ್ದಾರೆ. ಪ್ರಕರಣ ನಂದಿನಿ ಲೇಔಟ್ ಠಾಣೆಯಲ್ಲಿ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಬೆಂಗಳೂರಲ್ಲಿ ಶೀಘ್ರ ಪ್ರತಿ ಕೆಜಿ ಈರುಳ್ಳಿ ಬೆಲೆ 100?
Bengaluru: ಏರ್ಪೋರ್ಟ್ ಟಿ-2ಗೆ ವರ್ಟಿಕಲ್ ಗಾರ್ಡನ್ ರಂಗು
Bengaluru: ಬೀದಿ ನಾಯಿಗೆ ಊಟ ಹಾಕಿದ ಮಹಿಳೆ ಮೇಲೆ ಹಲ್ಲೆ ಯತ್ನ
Bengaluru: 19 ಕಡೆ ಫ್ಲಿಪ್ ಕಾರ್ಟ್, ಅಮೆಜಾನ್ ವ್ಯಾಪಾರಸ್ಥರಿಗೆ ಇ.ಡಿ. ದಾಳಿ ಬಿಸಿ
Bengaluru: ಪೀಣ್ಯದಲ್ಲಿ 12 ಕೋಟಿ ರೂ. ಮೌಲ್ಯದ ಆಸ್ತಿ ವಶಕ್ಕೆ ಪಡೆದ ಅಭಿವೃದ್ಧಿ ಪ್ರಾಧಿಕಾರ
MUST WATCH
ಹೊಸ ಸೇರ್ಪಡೆ
Waqf Property: ಸಚಿವ ಜಮೀರ್ ಅಶ್ವಮೇಧ ಕುದುರೆ ತಡೆದಿದ್ದೇನೆ: ಶಾಸಕ ಯತ್ನಾಳ್
ಐತಿಹಾಸಿಕ ಮುಡಗೇರಿ ಗ್ರಾಮ ನಿರ್ಲಕ್ಷ್ಯ; ಸೋದೆ ಅರಸರ ಕೋಟೆ ಪಳೆಯುಳಿಕೆ
BGT Series: ಚೇತೇಶ್ವರ ಪೂಜಾರ ಅಂದು ತಿಂದ ಪೆಟ್ಟಿನ ನೋವು ಭಾರತೀಯರು ಮರೆಯುವುದುಂಟೇ?
Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ
ಹಾವೇರಿ-ಸಿದ್ದರಾಮಯ್ಯ ಪಂಜರದ ಗಿಳಿ: ಕೇಂದ್ರ ಸಚಿವ ಸೋಮಣ್ಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.