ಪತಿ – ಪತ್ನಿ ನಡುವೆ ಶುರುವಾದ ಕೌಟುಂಬಿಕ ಕಲಹ ಕೊಲೆಯಲ್ಲಿ ಅಂತ್ಯ
Team Udayavani, Apr 2, 2022, 11:46 AM IST
ಸಾಂದರ್ಭಿಕ ಚಿತ್ರ
ಬೆಂಗಳೂರು: ನಿರ್ಮಾಣ ಹಂತದ ಕಟ್ಟಡದಲ್ಲಿ ಕೆಲಸ ಮಾಡುತ್ತಿದ್ದ ದಂಪತಿ ನಡುವೆ ಕಲಹ ಉಂಟಾಗಿ, ಪತಿಯೇ ಪತ್ನಿಯನ್ನು ಹೊಡೆದು ಕೊಂದಿರುವ ಘಟನೆ ವಿಧಾನಸೌಧ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಪಶ್ಚಿಮ ಬಂಗಾಳ ಮೂಲದ ಸಂಚಿ ಉರವ್ (36) ಕೊಲೆಯಾದ ಮಹಿಳೆ. ಈ ಸಂಬಂಧ ಆಕೆಯ ಪತಿ ಪೂಲ್ ಚಂದ್ ಉರವ್(40) ನನ್ನು ಬಂಧಿಸಲಾಗಿದೆ.
ಪಶ್ಚಿಮ ಬಂಗಾಳ ಮೂಲದ ದಂಪತಿ ನಗರದಲ್ಲಿ ಬಿಸುರಾಯ್ ಎಂಬ ಗುತ್ತೆಗೆದಾರನ ಬಳಿ ಕಟ್ಟಡ ನಿರ್ಮಾಣ ಕೆಲಸಕ್ಕೆ ಹೋಗುತ್ತಿದ್ದರು. ವಿಧಾನಸೌಧ ಸಮೀಪದ ಹೋಟೆಲ್ ಪಕ್ಕದಲ್ಲಿರುವ ಕಟ್ಟಡ ನೆಲ ಮಹಡಿಯಲ್ಲಿ ದಂಪತಿ ಹಾಗೂ ಇತರೆ ಆರು ಮಂದಿ ಕಾರ್ಮಿಕರು ವಾಸವಾಗಿದ್ದರು. ಸಂಚಿ ಉರವ್ ಆರೇಳು ಕಾರ್ಮಿಕರಿಗೆ ಅಡುಗೆ ಮಾಡುವ ಕೆಲಸ ಮಾಡುತ್ತಿದ್ದರು. ಈ ನಡುವೆ ದಂಪತಿ ನಡುವೆ ಕೌಟುಂಬಿಕ ವಿಚಾರಕ್ಕೆ ಗಲಾಟೆ ಆರಂಭವಾಗಿದ್ದು, ನಿತ್ಯ ಜಗಳ ಮಾಡುತ್ತಿದ್ದರು. ಈ ವಿಚಾರ ತಿಳಿದ ದೂರುದಾರದ ಶ್ರೀಧರ್‌ಗೆ ದಂಪತಿಗೆ, ಪದೇ ಪದೆ ಜಗಳ ಮಾಡುತ್ತಿದ್ದರೆ, ಕೆಲಸಕ್ಕೆ ಬರಬೇಡಿ ಎಂದು ಎಚ್ಚರಿಕೆ ನೀಡಿದ್ದರು. ಹೀಗಾಗಿ ದಂಪತಿ ಕೆಲ ದಿನಗಳಲ್ಲಿ ಕೆಲಸ ತೊರೆಯುವುದಾಗಿ ಹೇಳಿದ್ದರು.
ಈ ಮಧ್ಯೆ ಮಾ.26ರಂದು ಬಿಸುರಾಯ್, ಶ್ರೀಧರ್‌ಗೆ ಕರೆ ಮಾಡಿ, ಸಂಚಿ ಉರವ್ ಎರಡು ದಿನಗಳಿಂದ ಮನೆಯಿಂದ ಹೊರಗಡೆ ಬಂದಿಲ್ಲ. ಹೋಗಿ ನೋಡಿದಾಗ ಮಾತನಾಡದೆ ಮಲಗಿದ್ದಾರೆ ಎಂದು ತಿಳಿಸಿದ್ದರು. ಕೂಡಲೇ ಗಾಬರಿಗೊಂಡು ಸ್ಥಳಕ್ಕೆ ಬಂದು ನೋಡಿದಾಗ, ಆಕೆಯ ಮುಖದ ಮೇಲೆ ಕಪ್ಪು ಕಲೆಯಾಗಿತ್ತು. ಬಾಯಿಂದ ನೊರೆ ಬಂದಿದೆ. ಅಲ್ಲದೆ, ಅಲ್ಲಿನ ಸೆಕ್ಯೂರಿಟಿ ಗಾರ್ಡ್‌ಗೆ ಕೇಳಿದಾಗ ಬೆಳಗ್ಗೆ 6 ಗಂಟೆಯಿಂದ ಪೂಲ್ ಚಂದ್ ಕಾಣಿಸುತ್ತಿಲ್ಲ ಎಂದು ಹೇಳಿದ್ದರು. ಈ ಹಿನ್ನೆಲೆ ಯಲ್ಲಿ ಶ್ರೀಧರ್ ವಿಧಾನಸೌಧ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ಈ ಹಿನ್ನೆಲೆಯಲ್ಲಿ ಕೊಲೆ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಪತ್ತೆ ಹಚ್ಚಿ ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.
ವಿಚಾರಣೆಯಲ್ಲಿ ಆರೋಪಿ ಪತಿ, ಪತ್ನಿಯ ಮುಖ ಹಾಗೂ ಕೆನ್ನೆ ಭಾಗಕ್ಕೆ ಬಲವಾಗಿ ಹೊಡೆದಿದ್ದು, ಆಕೆ ಮೃತಪಟ್ಟಿದ್ದಾಳೆ. ಅಲ್ಲದೆ, ಆಕೆಯ ವರ್ತನೆಯಿಂದ ಬೇಸತ್ತು ಕೃತ್ಯ ಎಸಗಿದ್ದೇನೆ ಎಂದು ಹೇಳಿಕೆ ನೀಡಿದ್ದಾನೆ ಎಂದು ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru; ಪಟಾಕಿ ಬಾಕ್ಸ್ ಮೇಲೆ ಕುಳ್ಳಿರಿಸಿ ಸ್ನೇಹಿತರ ಹುಚ್ಚಾಟ: ಯುವಕ ಸಾ*ವು
ತಂದೆ, ಮಗು ಸಾವು: ಬೆಸ್ಕಾಂ ಎಂಜಿನಿಯರ್ ವಿರುದ್ಧದ ಕೇಸು ರದ್ದತಿಗೆ ಹೈಕೋರ್ಟ್ ನಕಾರ
Arrested: ರಾಜಸ್ಥಾನದಿಂದ ಫ್ಲೈಟ್‌ನಲ್ಲಿ ಬಂದು ಕಾರು ಕದಿಯುತ್ತಿದ್ದವನ ಸೆರೆ; ಆರೋಪಿ ಬಂಧನ
Bengaluru: ಅತಿ ವೇಗವಾಗಿ ಬಂದ ಕಾರು ಬೈಕ್‌ಗೆ ಡಿಕ್ಕಿ: ಫುಡ್ ಡೆಲಿವರಿ ಬಾಯ್ ಸಾವು
Bengaluru: ಊರಿಂದ ವಾಪಸ್ಸಾದವರಿಗೆ ಸಂಚಾರ ದಟ್ಟಣೆ ಬಿಸಿ
MUST WATCH
ಹೊಸ ಸೇರ್ಪಡೆ
MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್
Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ
MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ
Mangaluru: ಪರಿಶಿಷ್ಟ ಜಾತಿ ಪಟ್ಟಿಗೆ ಮರುಸೇರ್ಪಡೆ ಆಗ್ರಹಿಸಿ ಕುಡುಬಿ ಸಮಾಜದವರಿಂದ ಜಾಥಾ
Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.