ಕೌಟುಂಬಿಕ ಕಲಹ: ಮಕ್ಕಳಿಗೆ ವಿಷವುಣಿಸಿ ಯೋಧ ಆತ್ಮಹತ್ಯೆ


Team Udayavani, Aug 3, 2017, 11:45 AM IST

soldier-sucide.jpg

ಬೆಂಗಳೂರು: ಕೌಟುಂಬಿಕ ಕಲಹಕ್ಕೆ ಬೇಸತ್ತು ಸೇನಾ ಯೋಧರೊಬ್ಬರು ತನ್ನ ಇಬ್ಬರು ಮಕ್ಕಳಿಗೆ ವಿಷ ಉಣಿಸಿ ತಾವೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೆಣ್ಣೂರಿನ ಚಳ್ಳಕೆರೆಯಲ್ಲಿ ನಡೆದಿದೆ. ಹರೀಶ್‌ ಕುಮಾರ್‌ (32), ಮಕ್ಕಳಾದ ರಜಿತ್‌ (6) ಮತ್ತು ಕೃತಿಕಾ (4) ಮೃತರು. ನಗರದವರೇ ಆದ ಹರೀಶ್‌ ಅಸ್ಸಾಂನ ಸೇನಾ ವಲಯದಲ್ಲಿ ಕೆಲ ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದರು. ಎಂಟು ವರ್ಷಗಳ ಹಿಂದೆ ಸಂಗೀತಾ ಎಂಬುವರನ್ನು ವಿವಾಹವಾಗಿದ್ದರು.

ದಂಪತಿಗೆ ರಜಿತ್‌ ಮತ್ತು ಕೃತಿಕಾ ಎಂಬ ಮಕ್ಕಳಿದ್ದರು. ಸಂಗೀತಾ ಅತ್ತೆ, ಮಾವ ಮತ್ತು ಮಕ್ಕಳೊಂದಿಗೆ ಚಳ್ಳಕೆರೆಯಲ್ಲಿ ವಾಸವಿದ್ದರು. ಒಂದು ತಿಂಗಳ ಹಿಂದೆ ಹರೀಶ್‌ ತಂದೆ ಮೃತಪಟ್ಟಿದ್ದರು. ತಂದೆ ಸಾವಿನಲ್ಲಿ ಪಾಲ್ಗೊಳ್ಳುವ ಸಲುವಾಗಿ ರಜೆಯ ಮೇಲೆ ಹರೀಶ್‌ ನಗರಕ್ಕೆ ಬಂದಿದ್ದರು. ದಂಪತಿ ನಡುವೆ ಕ್ಷುಲ್ಲಕ ಕಾರಣಕ್ಕೆ ಹತ್ತು ದಿನಗಳ ಹಿಂದೆ ಜಗಳವಾಗಿತ್ತು.

ಇದರಿಂದ ಹರೀಶ್‌ ಮಾನಸಿಕವಾಗಿ ನೊಂದಿದ್ದರು. ಸೋಮವಾರ ರಾತ್ರಿ ಎಂದಿನಂತೆ ಊಟ ಮುಗಿಸಿದ ಹರೀಶ್‌ ಮಕ್ಕಳೊಂದಿಗೆ ಕೊಠಡಿಗೆ ತೆರಳಿ ಬಾಗಿಲು ಹಾಕಿಕೊಂಡಿದ್ದರು. ಮಕ್ಕಳೊಂದಿಗೆ ಪತಿ ಮಲಗಿರಬಹುದೆಂದು ಪತ್ನಿ ಸಂಗೀತಾ ಭಾವಿಸಿದ್ದರು. ತಡರಾತ್ರಿ ಮಕ್ಕಳಿಗೆ ವಿಷ ನೀಡಿ ತಾವು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಳಗ್ಗೆ 8ಗಂಟೆಯಾದರೂ ಮಕ್ಕಳು ಹಾಗೂ ಪತಿ ಹರೀಶ್‌ ಕೊಠಡಿಯಿಂದ ಹೊರ ಬಂದಿರಲಿಲ್ಲ.

ಅನುಮಾನಗೊಂಡ ಪತ್ನಿ ಸಂಗೀತಾ ಸಾಕಷ್ಟು ಬಾರಿ ಕೂಗಿದರೂ ಹರೀಶ್‌ ಬಾಗಿಲು ತೆರೆದಿಲ್ಲ. ಬಳಿಕ ಬಾಗಿಲು ಒಡೆದು ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ ಎಂದು ಹೆಣ್ಣೂರು ಪೊಲೀಸರು ತಿಳಿಸಿದ್ದಾರೆ. ಮೃತ ಹರೀಶ್‌ ಆತ್ಮಹತ್ಯೆಗೂ ಮುನ್ನ ಡೆತ್‌ನೋಟ್‌ ಬರೆದಿಟ್ಟಿದ್ದು, “ಮಕ್ಕಳು ಮತ್ತು ನನ್ನ ಸಾವಿಗೆ ಯಾರು ಕಾರಣರಲ್ಲ’ ಎಂದು ಬರೆದಿದ್ದಾರೆ.

ಘಟನೆ ನಡೆದ ವೇಳೆ ಮೃತ ಹರೀಶ್‌ರ ಪತ್ನಿ ಹಾಗೂ ತಾಯಿ ಮನೆಯಲ್ಲಿಯೇ ಇದ್ದರು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ. ಮಕ್ಕಳಿಗೆ ಯಾವುದರಲ್ಲಿ ವಿಷ ನೀಡಿದ್ದಾರೆ ಎಂಬುದು ಖಚಿತವಾಗಿಲ್ಲ ಎಂದು ಡಿಸಿಪಿ ಅಜಯ್‌ ಹಿಲೋರಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Google Map: ಗೂಗಲ್‌ ಮ್ಯಾಪ್‌ ನಂಬಿ ಗಡಿ ದಾಟಿದ ಪೊಲೀಸರನ್ನೇ ಹಿಡಿದು ಹಾಕಿದ ಗ್ರಾಮಸ್ಥರು

Google Map: ಗೂಗಲ್‌ ಮ್ಯಾಪ್‌ ನಂಬಿ ಗಡಿ ದಾಟಿದ ಪೊಲೀಸರನ್ನೇ ಹಿಡಿದು ಹಾಕಿದ ಗ್ರಾಮಸ್ಥರು

Pritish Nandy: ಖ್ಯಾತ ಕವಿ, ಚಲನಚಿತ್ರ ನಿರ್ಮಾಪಕ ಪ್ರಿತೀಶ್ ನಂದಿ ನಿಧನ

Pritish Nandy: ಖ್ಯಾತ ಕವಿ, ಚಲನಚಿತ್ರ ನಿರ್ಮಾಪಕ ಪ್ರಿತೀಶ್ ನಂದಿ ನಿಧನ

Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!

Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್‌: ವಿ.ನಾರಾಯಣನ್‌

ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್‌: ವಿ.ನಾರಾಯಣನ್‌

Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು

Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು

naxal-file

Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್‌ ನಿಶ್ಶಬ್ದ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BNg-Mureder

Brutal: ಪತ್ನಿ, ಇಬ್ಬರು ಮಕ್ಕಳನ್ನು ಮಚ್ಚಿನಿಂದ ಕೊಚ್ಚಿ ಕೊಂದ ಪತಿ!

Naxals-Meet-Cm

Naxals Surrender: ಮುಖ್ಯಮಂತ್ರಿ ಸಮ್ಮುಖ ಶಸ್ತ್ರಾಸ್ತ್ರ ತ್ಯಜಿಸಿ ಶರಣಾದ 6 ನಕ್ಸಲರು

Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ

Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ

3

Atul Subhash Case: ಮೊಮ್ಮಗನನ್ನು ಟೆಕಿ ಅತುಲ್‌ ತಾಯಿಯ ಸುಪರ್ದಿಗೆ ವಹಿಸಲು ಸುಪ್ರೀಂ ನಕಾರ

BBMP-ED

illegal Investigation: ಬಿಬಿಎಂಪಿ ಮುಖ್ಯ ಎಂಜಿನಿಯರ್‌ ಕಚೇರಿ ಮೇಲೆ ಇ.ಡಿ. ದಾಳಿ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Google Map: ಗೂಗಲ್‌ ಮ್ಯಾಪ್‌ ನಂಬಿ ಗಡಿ ದಾಟಿದ ಪೊಲೀಸರನ್ನೇ ಹಿಡಿದು ಹಾಕಿದ ಗ್ರಾಮಸ್ಥರು

Google Map: ಗೂಗಲ್‌ ಮ್ಯಾಪ್‌ ನಂಬಿ ಗಡಿ ದಾಟಿದ ಪೊಲೀಸರನ್ನೇ ಹಿಡಿದು ಹಾಕಿದ ಗ್ರಾಮಸ್ಥರು

Pritish Nandy: ಖ್ಯಾತ ಕವಿ, ಚಲನಚಿತ್ರ ನಿರ್ಮಾಪಕ ಪ್ರಿತೀಶ್ ನಂದಿ ನಿಧನ

Pritish Nandy: ಖ್ಯಾತ ಕವಿ, ಚಲನಚಿತ್ರ ನಿರ್ಮಾಪಕ ಪ್ರಿತೀಶ್ ನಂದಿ ನಿಧನ

Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!

Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್‌: ವಿ.ನಾರಾಯಣನ್‌

ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್‌: ವಿ.ನಾರಾಯಣನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.