ರೈತರ ಸಾಲ ಮನ್ನಾ: ಬಿಜೆಪಿ ರಾಜಕಾರಣ
Team Udayavani, Oct 12, 2018, 6:40 AM IST
ಬೆಂಗಳೂರು:ರೈತರ ಸಾಲ ಮನ್ನಾ ವಿಚಾರದಲ್ಲಿ ಬಿಜೆಪಿ ರಾಜಕಾರಣ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ರೈತರು ಪಡೆದಿರುವ ಸಾಲದ ಕೊಡಿ ಹಣ ತುಂಬುತ್ತೇವೆ ಎಂದು ಹೇಳಿದರೂ ಮಾಹಿತಿ ಕೊಡುತ್ತಿಲ್ಲ. ನಾನು ಏನು ಮಾಡಬೇಕು ಎಂದು ಪ್ರಶ್ನಿಸಿದರು.
ಆದರೂ ಬ್ಯಾಂಕಗಳ ಬಳಿ ಮಾಹಿತಿ ಪಡೆಯಲು ಅಧಿಕಾರಿಗಳ ತಂಡ ನಿಯೋಜಿಸಿದ್ದು ನವೆಂಬರ್ 1 ರಿಂದ ಹಣ ಬಿಡುಗಡೆ ಮಾಡಲಾಗುವುದು. ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಸಾಲ ಪಡೆದಿರುವ ರೈತರು ಆತಂಕ ಪಡುವ ಅಗತ್ಯವಿಲ್ಲ. ಸರ್ಕಾರ ಘೋಷಿಸಿರುವಂತೆ ಮನ್ನಾ ಆಗಲಿದೆ ಎಂದು ಹೇಳಿದರು.
ಬಿಜೆಪಿಯವರಿಗಂತೂ ಕೇಂದ್ರದಿಂದ ಹಣ ಬಿಡುಗಡೆ ಮಾಡಿಸಲು ಆಗಲಿಲ್ಲ. ರಾಷ್ಟ್ರೀಕೃತ ಬ್ಯಾಂಕುಗಳು ಕೇಂದ್ರದ ಅಧೀನದಲ್ಲಿವೆ. ಬಿಜೆಪಿಯವರು ತಮ್ಮ ಅಧಿಕಾರ ಬಳಸಿ ಮಾಹಿತಿಯನ್ನಾದರೂ ಕೊಡಿಸಲಿ. ಅದು ಬಿಟ್ಟು ರಾಜಕೀಯ ಮಾಡುವುದು ಬೇಡ ಎಂದರು.
ಬಿಜೆಪಿಯವರು ಸಾಲ ಮನ್ನಾಗೆ ಕೇಂದ್ರದಿಂದ ಒಂದು ರೂಪಾಯಿ ತರಲು ಆಗುತ್ತಿಲ್ಲ. ಕೊನೇ ಪಕ್ಷ ಅಪಪ್ರಚಾರ ಮಾಡುವುದನ್ನು ನಿಲ್ಲಿಸಲಿ. ಬ್ಯಾಂಕುಗಳಿಂದ ಮಾಹಿತಿ ತರಿಸಿಕೊಟ್ಟರೆ ನಾನು ಅಬಾರಿ ಎಂದು ಹೇಳಿದರು.
ನಾವು ಸಾಲ ಮನ್ನಾ ಮಾಡಲು ಸಿದ್ಧರಿದ್ದೇವೆ. ರಿಸರ್ವ್ ಬ್ಯಾಂಕ್ ಕಡೆಯಿಂದ ನಿರ್ದೇಶನ ಕೊಡಿಸಿ ಮಾಹಿತಿ ಕೊಡಬೇಕು. 6500 ಕೋಟಿ ರೂ. ಸಾಲ ಮನ್ನಾಗೆ ಇಡಲಾಗಿದ್ದು ನವೆಮಬರ್ 1 ರಿಂದ ಹಂತ ಹಂತವಾಗಿ ಬ್ಯಾಂಕ್‌ಗಳಿಗೆ ಬಿಡುಗಡೆ ಮಾಡಲಾಗುವುದು.
ನಾವು ಬ್ಯಾಂಕ್‌ಗಳಿಗೆ ಹಣ ತುಂಬಬೇಕಾದರೆ ಮಾಹಿತಿ ಬೇಕಾಗುತ್ತದೆ. ರಾಷ್ಟ್ರೀಕೃತ ಬ್ಯಾಂಕ್‌ಗಳು ಪ್ರಧಾನಿ ಮೋದಿ ಹಾಗೂ ಹಣಕಾಸು ಸಚಿವ ಅರುಣ್ ಜೇಟಿÉ ವ್ಯಾಪ್ತಿಗೆ ಬರುತ್ತವೆ. ಡೇಟಾ ಬೇಸ್ ಕೊಡಿಸುವ ಕೆಲಸವನ್ನು ಬಿಜೆಪಿಯವರು ಮಾಡಲಿ. ಸರ್ಕಾರದಲ್ಲಿ ಹಣಕಾಸಿನ ಸಮಸ್ಯೆಯಿಲ್ಲ. ಬ್ಯಾಂಕುಗಳು ತಿಳುವಳಿಕೆ ಪತ್ರ ಕೊಟ್ಟಿದ್ದಾರೆ. ಬ್ಯಾಂಕುಗಳ ಬಳಿ ಮಾಹಿತಿ ಪಡೆಯಲು ಅಧಿಕಾರಿಗಳ ತಂಡ ನಿಯೋಜಿಸಲಾಗಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್ನ ಸದಸ್ಯ ಅರೆಸ್ಟ್
Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್ ಜಾಮೀನ ಮಂಜೂರು
Vijay Hazare; ವಾಸುಕಿ,ಗೋಪಾಲ್ ಬೊಂಬಾಟ್ ಬೌಲಿಂಗ್; ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ
ಗದಗ: ಮಾವು ಬಂಪರ್ ಬೆಳೆ ನಿರೀಕ್ಷೆ- ಬೆಳೆಗಾರರಿಗೆ ಸಂತಸ
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.