ರೈತರ ಬವಣೆಗೆ ಸರಕಾರಗಳಿಂದ ಪರಿಹಾರ ಸಿಕ್ಕಿಲ್ಲ: ಡಿ.ವಿ.ಎಸ್.
Team Udayavani, Nov 19, 2017, 6:35 AM IST
ಬೆಂಗಳೂರು: ಆಡಳಿತ ನಡೆಸಿದ ಸರಕಾರಗಳು ರೈತರ ಬವಣೆಗೆ ಪರಿಹಾರ ಒದಗಿಸುವ ಪ್ರಯತ್ನ ಮಾಡಲಿಲ್ಲ. ಅದರಲ್ಲಿ ಯಶಸ್ವಿಯೂ ಆಗಲಿಲ್ಲ ಎಂದು ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ ಅಭಿಪ್ರಾಯಪಟ್ಟರು.
ಬೆಂಗಳೂರು ಕೃಷಿ ವಿವಿಯಿದಿಂದ ಜಿಕೆವಿಕೆ ಆವರಣದಲ್ಲಿ ನಡೆಯುತ್ತಿರುವ ಕೃಷಿ ಮೇಳ-2017ರ 3ನೇ ದಿನವಾದ ಶನಿವಾರ ಹಾಸನ, ಮಂಡ್ಯ ಮತ್ತು ಕೋಲಾರ ಜಿಲ್ಲೆಗಳ ಜಿಲ್ಲಾಮಟ್ಟದ ಹಾಗೂ ತಾಲೂಕು ಮಟ್ಟದ ಅತ್ಯುತ್ತಮ ರೈತ ಮತ್ತು ರೈತ ಮಹಿಳೆ ಪ್ರಶಸ್ತಿ ಪ್ರದಾನ ಮಾಡಿ ಅವರು ಮಾತನಾಡಿದರು.
ಸಮಾಜದಲ್ಲಿ ಬದುಕಲು ರೈತರಿಗೆ ಒಂದು ಉತ್ತಮ ವೇದಿಕೆ ಮತ್ತು ವ್ಯವಸ್ಥೆ ಅಗತ್ಯವಿದೆ. ಅದರಲ್ಲಿ ಭವಿಷ್ಯದ ಪರಿಕಲ್ಪನೆಯಲ್ಲಿ ಸ್ವಾಭಿಮಾನ, ಸ್ವಂತಿಕೆಯಿಂದ ಬದುಕಬಲ್ಲೆ ಎಂದು ಧೈರ್ಯ ತುಂಬುವ ಕೆಲಸವಾಗಬೇಕು. ಯಾವುದೇ ಸರಕಾರಗಳು ಮಾಡದ ಆ ಕೆಲಸವನ್ನು ಇಂತಹ ಕೃಷಿ ಮೇಳಗಳು ನಿರ್ವಹಿಸುತ್ತಿವೆ. ಯುವಜನರಲ್ಲಿ ಕೃಷಿಯಿಂದ ಸ್ವಾಭಿಮಾನದ ಬದುಕು ರೂಪಿಸಿಕೊಳ್ಳಬಲ್ಲೆ ಎಂಬ ಆತ್ಮಸ್ಥೈರ್ಯ ನೀಡುವ ಕೆಲಸವಾಗುತ್ತಿರುವುದು ಪ್ರಶಂಸಾರ್ಹ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NIA ವಿಶೇಷ ನ್ಯಾಯಾಲಯ; ಶರಣಾದ ಆರು ನಕ್ಸಲರಿಗೆ ಜ.31ರವರೆಗೆ ನ್ಯಾಯಾಂಗ ಬಂಧನ
Naxal; ರಾಜ್ಯದಲ್ಲಿ 99 % ನಕ್ಸಲಿಸಂ ಅಂತ್ಯಗೊಂಡಿದೆ: ಡಾ.ಜಿ.ಪರಮೇಶ್ವರ್
Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್
Shimoga: ತ್ಯಾವರೆಕೊಪ್ಪ ಧಾಮದಲ್ಲಿ ಮೃತಪಟ್ಟ ಹೆಣ್ಣು ಹುಲಿ ಅಂಜನಿ
Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.