ರೈತರ ಆತ್ಮಹತ್ಯೆಗಳಿಗೆ ಆಡಳಿತ ವ್ಯವಸ್ಥೆಗಳೇ ಕಾರಣ
Team Udayavani, Jan 29, 2018, 6:30 AM IST
ಬೆಂಗಳೂರು: ದೇಶದಲ್ಲಿ ಸಂಭವಿಸುತ್ತಿರುವ ರೈತರ ಆತ್ಮಹತ್ಯೆಗಳಿಗೆ ಆಡಳಿತ ವ್ಯವಸ್ಥೆಯೇ ಕಾರಣ ಎಂದು ಶಾಸಕ ಕೆ.ಎಸ್ ಪುಟ್ಟಣ್ಣಯ್ಯ ಆರೋಪಿಸಿದರು.
ಅಂತಾರಾಷ್ಟ್ರೀಯ ಲಯನ್ಸ್ ಸಂಸ್ಥೆಗಳ ಒಕ್ಕೂಟ ರವಿವಾರ ಕುವೆಂಪು ಕಲಾಕ್ಷೇತ್ರದಲ್ಲಿ ಆಯೋಜಿಸಿದ್ದ ಪ್ರಾಂತೀಯ ಸಮ್ಮಿಲನ ಕಾರ್ಯಕ್ರಮದಲ್ಲಿ ” ಹಸಿವು ನೀಗಿಸುವಲ್ಲಿ ರೈತರ ಕೊಡುಗೆ’ ವಿಚಾರದ ಕುರಿತು ಅವರು ಮಾತನಾಡಿದರು.
ದೇಶದಲ್ಲಿ ಇದುವರೆಗೂ ಏಳು ಲಕ್ಷ ಮಂದಿ ಬೆಳೆನಾಶ, ಆರ್ಥಿಕ ಅಭದ್ರತೆ, ಸಾಲಬಾಧೆ ಸಹಿತ ವಿವಿಧ ಕಾರಣಗಳಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರೈತರಿಗೆ ಅಗತ್ಯವಾದ ಆರ್ಥಿಕ ಭದ್ರತೆ ಯೋಜನೆಗಳನ್ನು ಇದಕ್ಕೆ ಆಳುವ ಆಡಳಿತ ವ್ಯವಸ್ಥೆಗಳೇ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸದಿರುವುದೇ ಕಾರಣ ಎಂದು ಆಕ್ರೋಶವ್ಯಕ್ತಪಡಿಸಿದರು.
ದೇಶದಲ್ಲಿ ಶೇ 66 ರಷ್ಟು ಉದ್ಯೋಗ ಸೃಷ್ಟಿಸುವುದು ಕೃಷಿ ವಲಯ. ರೈತ ಬೆಳೆದ ಉತ್ಪನ್ನಗಳಿಂದ ತಾನೇ ಸಾವಿರಾರು ಉದ್ಯಮಗಳು ನೆಲೆ ನಿಲ್ಲುವುದು, ಉದ್ಯೋಗ ಸೃಷ್ಟಿಯಾಗುವುದು. ಆದರೆ ಈ ಸತ್ಯವನ್ನು ಯಾವ ಸರಕಾರಗಳು ಅರ್ಥಮಾಡಿಕೊಳ್ಳುವುದಿಲ್ಲ ಎಂದು ಅಸಮಾ ಧಾನ ವ್ಯಕ್ತಪಡಿಸಿದ ಅವರು, ಸರಕಾರಿ ನೌಕರರಿಗೆ ಆರ್ಥಿಕ ಭದ್ರತೆಗೆ ವೇತನಾ ಆಯೋಗಗಳು ರಚನೆಯಾಗುತ್ತವೆ. ರೈತರಿಗೆ ಆರ್ಥಿಕ ಭದ್ರತೆ ಒದಗಿಸುವ ಯಾವ ಆಯೋಗಗಳು ಇಲ್ಲ ಎಂದು ಟೀಕಿಸಿದರು.
ಐಐಎಸ್ ಅಧಿಕಾರಿಗಳು ಆತ್ಮಹತ್ಯೆ ಮಾಡಿ ಕೊಂಡರೆ ಸಿಬಿಐ ತನಿಖೆಗೆ ಆದೇಶಿಸುವ ಸರಕಾರಗಳು, ರೈತರ ಆತ್ಮಹತ್ಯೆ ಪ್ರಕರಣಗಳ ತನಿಖೆಯನ್ನು ಸಿಬಿಐಗೆ ಏಕೆ ವಹಿಸುವುದಿಲ್ಲ ಎಂದವರು ಪ್ರಶ್ನಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ
Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’
HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ
BSY ಸಿಎಂ ಸ್ಥಾನ ಕಳೆದುಕೊಳ್ಳಲು ರೇವಣ್ಣ ಕಾರಣ: ಜಿಟಿಡಿ ಆರೋಪ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.