Bengaluru: ಹಸುಗೂಸನ್ನೂ ಕೊಲ್ಲಲು ಯತ್ಲಿಸಿದ ತಂದೆಯ ಹತ್ಯೆ
Team Udayavani, Dec 18, 2024, 12:14 PM IST
ಬೆಂಗಳೂರು: ಮದ್ಯದ ಅಮಲಿನಲ್ಲಿ ಗಲಾಟೆ ಮಾಡಿ, ಬೈಕ್‌ಗೆ ಬೆಂಕಿ ಹಚ್ಚಿದಲ್ಲದೆ, 20 ದಿನಗಳ ತನ್ನ ಹಸುಗೂಸು ಕೊಲ್ಲುವುದಾಗಿ ಚಾಕು ಹಿಡಿದು ಬೆದರಿಕೆ ಹಾಕಿದ ಭಾವನನ್ನು ಭಾಮೈದರೇ ಚಾಕುವಿನಿಂದ ಇರಿದು ಹತ್ಯೆಗೈದಿರುವ ಘಟನೆ ಸಿದ್ದಾಪುರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಈ ಸಂಬಂಧ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.
ಸಿದ್ದಾಪುರ ನಿವಾಸಿ ಸಲ್ಮಾನ್ ಖಾನ್(30) ಹತ್ಯೆಯಾದವ. ಕೃತ್ಯ ಎಸಗಿದ ಸಲ್ಮಾನ್ ಖಾನ್‌ನ ಭಾಮೈದರಾದ ಉಮರ್ ಖಾನ್, ಸೈಯದ್ ಅನ್ವರ್ ಹಾಗೂ ಅವರ ಸ್ನೇಹಿತ ಶೊಯೇಬ್ ಅವರನ್ನು ಬಂಧಿಸಲಾಗಿದೆ.
ಮಂಗಳವಾರ ಮುಂಜಾನೆ 5.15ರ ಸುಮಾರಿಗೆ ದುರ್ಘಟನೆ ನಡೆದಿದೆ. ಕೊಲೆಯಾದ ಸಲ್ಮಾನ್ ಖಾನ್ ಬೀರು ತಯಾರಿಕಾ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದು, ಒಂದೂವರೆ ವರ್ಷದ ಹಿಂದೆ ಆಯಿಷಾ ಎಂಬಾಕೆಯನ್ನು ಪ್ರೀತಿಸಿ ಮದುವೆಯಾಗಿದ್ದ. ದಂಪತಿಗೆ 20 ದಿನಗಳ ಹಿಂದೆ ಮಗವೊಂದು ಜನಿಸಿತ್ತು. ಈ ಮಧ್ಯೆ ಸಲ್ಮಾನ್ ಖಾನ್ ನಾಲ್ಕೈದು ತಿಂಗಳಿಂದ ವಿಪರೀತಿ ಮದ್ಯ ವ್ಯಸನಿಯಾಗಿದ್ದು, ಕೆಲಸಕ್ಕೂ ಸರಿಯಾಗಿ ಹೋಗುತ್ತಿರಲಿಲ್ಲ. ಕುಡಿದು ಬಂದು ಪತ್ನಿ ಮೇಲೂ ಹಲ್ಲೆ ನಡೆಸುತ್ತಿದ್ದ. ಈ ಬಗ್ಗೆ ಹಿರಿಯರು ಬುದ್ದಿವಾದ ಹೇಳಿದರೂ, ಪದೇ ಪದೇ ಪತ್ನಿ ಮೇಲೆ ಹಲ್ಲೆ ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದರು.
ಬೈಕ್‌ಗೆ ಬೆಂಕಿ ಹಚ್ಚಿದ ಸಲ್ಮಾನ್ ಖಾನ್: ಈ ಮಧ್ಯೆ ಸಲ್ಮಾನ್ ಖಾನ್ ಕೆಲ ದಿನಗಳ ಹಿಂದೆ ಸ್ಥಳೀಯ ನಿವಾಸಿ ಶೋಯೆಬ್ ಎಂಬಾತನ ಜತೆ ಕ್ಷುಲ್ಲಕ ವಿಚಾರಕ್ಕೆ ಜಗಳ ಮಾಡಿಕೊಂಡಿದ್ದ. ಈ ವೇಳೆ ಪತ್ನಿ ಆಯಿಷಾ ಸಹೋದರರು, ರಾಜಿ-ಸಂಧಾನ ಮಾಡಿದ್ದರು. ಆಗ ಶೋಯೆಬ್ ಪರವಾಗಿಯೇ ಎಲ್ಲರೂ ಮಾತನಾಡಿದ್ದರು. ಅದರಿಂದ ಕೋಪಗೊಂಡಿದ್ದ ಸಲ್ಮಾನ್, ಸೋಮವಾರ ತಡರಾತ್ರಿ ಮದ್ಯದ ಅಮಲಿನಲ್ಲಿ ಆಯಿಷಾ ಸೋದರ ಸಂಬಂಧಿಯ ಬೈಕ್‌ಗೆ ಬೆಂಕಿ ಹಚ್ಚಿದ್ದ. ಆಗ ಸ್ಥಳೀಯರು 112ಗೆ ಕರೆ ಮಾಡಿ ಮಾಹಿತಿ ನೀಡಿದ್ದರು. ಪೊಲೀಸರು ಸ್ಥಳಕ್ಕೆ ಹೋಗುವಷ್ಟರಲ್ಲಿ ಸಲ್ಮಾನ್ ಪರಾರಿಯಾಗಿದ್ದ ಎಂದು ಪೊಲೀಸರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Udupi: ಧೂಳು ತಿನ್ನುತ್ತಿದೆ ಉಡುಪಿ ಉಪ ವಿಭಾಗ ಪ್ರಸ್ತಾವ
Coastalwood: ರೂಪೇಶ್ ಶೆಟ್ಟಿ ನಿರ್ದೇಶನದ “ಜೈ” ಸಿನಿಮಾದ ಎರಡನೇ ಹಂತದ ಚಿತ್ರೀಕರಣ ಮುಕ್ತಾಯ
Kundapura: ರಾಷ್ಟ್ರೀಯ ಹೆದ್ದಾರಿ; ಮುಗಿಯದ ಕಿರಿಕಿರಿ
Mangaluru; ಕೆಲರೈ- ವಾಮಂಜೂರು ಸಂಪರ್ಕ ರಸ್ತೆ ಅವ್ಯವಸ್ಥೆ
Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.