ತಂದೆ, ಮಗು ಸಾವು: ಬೆಸ್ಕಾಂ ಎಂಜಿನಿಯರ್ ವಿರುದ್ಧದ ಕೇಸು ರದ್ದತಿಗೆ ಹೈಕೋರ್ಟ್ ನಕಾರ
Team Udayavani, Nov 4, 2024, 10:52 AM IST
ಬೆಂಗಳೂರು: ನಗರದ ವಿಶ್ವೇಶ್ವರಯ್ಯ ಬಡಾವಣೆಯಲ್ಲಿ 2022ರಲ್ಲಿ ಟ್ರಾನ್ಸ್ಫಾರ್ಮರ್ ಸ್ಫೋಟಗೊಂಡು ತಂದೆ- ಮಗು ಸಾವಿಗೆ ಕಾರಣವಾದ ಆರೋಪದಲ್ಲಿ ಬೆಸ್ಕಾಂನ ಕಿರಿಯ ಎಂಜಿನಿಯರ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದುಪಡಿಸಲು ಹೈಕೋರ್ಟ್ ನಿರಾಕರಿಸಿದೆ.
ಪ್ರಕರಣ ಸಂಬಂಧ ಜ್ಞಾನ ಭಾರತಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಎಫ್ಐಆರ್ ಮತ್ತು ಈ ಸಂಬಂಧ ವಿಚಾರಣಾ ನ್ಯಾಯಾಲಯದ ನ್ಯಾಯಿಕ ಪ್ರಕ್ರಿಯೆಗಳನ್ನು ಪ್ರಶ್ನಿಸಿ ಬೆಸ್ಕಾಂ ಕಿರಿಯ ಎಂಜಿನಿಯರ್ ಮಹಾಂತೇಶ್ ಎಸ್ ನಾಗೂರ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಆದೇಶ ನೀಡಿದೆ.
ಘಟನೆ ಅತ್ಯಂತ ಅಪಾಯಕಾರಿಯಾಗಿದ್ದು, ಮೃತರ ಕುಟುಂಬಸ್ಥರಿಗೆ ಪರಿಹಾರ ನೀಡಲಾಗಿದೆ ಎಂಬ ಕಾರಣಕ್ಕೆ ಪ್ರಕರಣ ರದ್ದುಪಡಿಸಲಾಗದು. ಅರ್ಜಿದಾರರು ವಿಚಾರಣೆ ಎದುರಿಸಿ ಆರೋಪದಿಂದ ಮುಕ್ತರಾಗಿ ಹೊರಬರ ಬೇಕಿದೆ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.
ಟ್ರಾನ್ಸ್ ಫಾರ್ಮರ್ಗಳ ನಿರ್ವಹಣೆ ಮಾಡುವ ಕಾರ್ಯ ಗುತ್ತಿಗೆದಾರರದ್ದಾಗಿರಲಿದೆ. ಘಟನೆಗೂ ಅರ್ಜಿದಾರರಿಗೂ ಯಾವುದೇ ಸಂಬಂಧವಿಲ್ಲ. ಹೀಗಾಗಿ ಪ್ರಕರಣ ರದ್ದುಪಡಿ ಸಬೇಕು ಎಂದು ಅರ್ಜಿದಾರರ ಪರ ವಕೀಲರು ಕೋರಿದ್ದರು. ಇದಕ್ಕೆ ಸರ್ಕಾರದ ಪರ ವಕೀಲರು ಆಕ್ಷೇಪಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್ ರನ್ ಆರಂಭಿಸಿದ ಸಿ.ಟಿ.ರವಿ
Healt: ಶಿಶುವಿನ ಹಾಲು ಹಲ್ಲುಗಳು ನೀವು ತಿಳಿದಿರಬೇಕಾದ 9 ಲಕ್ಷಣಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.