ಆಧಾರ ಇಲ್ಲದಿದ್ದರೆ ಉದ್ಯೋಗ ರದ್ದು ಭೀತಿ; ಕೇಂದ್ರದಿಂದ ತಿಂಗಳ ಗಡುವು

Team Udayavani, Jul 10, 2017, 3:45 AM IST

Ban10071701Medn-REVISED.jpg

ಬೆಂಗಳೂರು: ರಾಜ್ಯ ಮತ್ತು ಕೇಂದ್ರಗಳೆರಡೂ ಸರ್ಕಾರದ ಬಹುತೇಕ ಯೋಜನೆಗಳಿಗೆ ಆಧಾರ್‌ ಕಡ್ಡಾಯಗೊಳಿಸಿವೆ. ಆದರೆ ರಾಜ್ಯದಲ್ಲಿ ಸರ್ಕಾರದ ಜನಪ್ರಿಯ ಯೋಜನೆಗಳಲ್ಲಿ ಒಂದಾದ “ಉದ್ಯೋಗ ಖಾತರಿ’ಯಲ್ಲಿ 44 ಲಕ್ಷ ಜನ ಫ‌ಲಾನುಭವಿಗಳು ಇನ್ನೂ ಆಧಾರ್‌ ಕಾರ್ಡ್‌ ಇಲ್ಲದೇ ನಿರಾತಂಕವಾಗಿ ಹಣ ಪಡೆಯುತ್ತಿರುವ ಸಂಗತಿ ಬೆಳಕಿಗೆ ಬಂದಿದೆ. 

ಇದನ್ನ ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಸರ್ಕಾರ ನರೇಗ ಯೋಜನೆಗೆ ಆಧಾರ್‌ ಕಾರ್ಡ್‌ ನೋಂದಣಿ ಮಾಡದ ಫ‌ಲಾನುಭವಿಗಳನ್ನೇ ರದ್ದುಪಡಿಸುವ ಎಚ್ಚರಿಕೆಯ ಸಂದೇಶವನ್ನು ರಾಜ್ಯ ಸರ್ಕಾರಕ್ಕೆ ರವಾನಿಸಿದೆ.

ಕೇಂದ್ರ ಸರ್ಕಾರದ ಈ ನಿಲುವಿನಿಂದಾಗಿ ಆಧಾರ್‌ ನೋಂದಣಿ ಮಾಡದಿದ್ದರೆ ರಾಜ್ಯದ 44 ಲಕ್ಷ ಫ‌ಲಾನುಭವಿಗಳು ಉದ್ಯೋಗ ಖಾತರಿಯ ಜಾಬ್‌ ಕಾರ್ಡ್‌ಗಳನ್ನೇ ಕಳೆದುಕೊಳ್ಳುವ ಭೀತಿ ಎದುರಿಸುವಂತಾಗಿದೆ. ಎಲ್ಲ ಉದ್ಯೋಗ ಖಾತರಿ ಫ‌ಲಾನುಭವಿಗಳು ಕಡ್ಡಾಯವಾಗಿ ಆಧಾರ್‌ ಕಾರ್ಡ್‌ ಹೊಂದಬೇಕು ಹಾಗೂ ಆ ಆಧಾರ್‌ ಸಂಖ್ಯೆಯನ್ನು ಫ‌ಲಾನುಭವಿಗಳ ಬ್ಯಾಂಕ್‌ ಖಾತೆಗೆ ಜೋಡಣೆ ಮಾಡಲು ಒಂದು ತಿಂಗಳು ಗಡುವನ್ನು ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯ, ರಾಜ್ಯ ಸರ್ಕಾರಕ್ಕೆ ವಿಧಿಸಿದೆ. 

ಈ ಅವಧಿಯಲ್ಲಿ ನರೇಗ ಯೋಜನೆಗೆ ಆಧಾರ್‌ ಜೋಡಣೆ ಮಾಡಲು ವಿಫ‌ಲವಾದಲ್ಲಿ ಸಂಬಂಧಪಟ್ಟ ಫ‌ಲಾನುಭವಿಗಳ ಹೆಸರನ್ನು ಉದ್ಯೋಗ ಖಾತರಿ ಯೋಜನೆಯಿಂದ ಕೇಂದ್ರ ಸರ್ಕಾರ ಕೈಬಿಡುವ ಅಪಾಯವಿದೆ.

ಆಧಾರ್‌ ನೋಂದಣಿಗಾಗಿ ರಾಜ್ಯ ಸರ್ಕಾರಗಳಿಗೆ ತಿಂಗಳ ಗಡುವು ನೀಡಿರುವ ಮೋದಿ ಸರ್ಕಾರ ಅದಕ್ಕಾಗಿ ಜು.25ರಿಂದ ಸೆ.10ರವರೆಗೆ ಗ್ರಾಮ ಪಂಚಾಯಿತಿ ಮತ್ತು ಬ್ಲಾಕ್‌ ಮಟ್ಟದಲ್ಲಿ ವಿಶೇಷ ಶಿಬಿರಗಳನ್ನು ಏರ್ಪಡಿಸಿ ನರೇಗಾಕ್ಕೆ ಫ‌ಲಾನುಭವಿಗಳ ಆಧಾರ್‌ ಸಂಖ್ಯೆಯನ್ನ ಕಡ್ಡಾಯವಾಗಿ ಜೋಡಣೆ ಮಾಡುವಂತೆ ರಾಜ್ಯ ಸರ್ಕಾರಗಳಿಗೆ ಸೂಚನೆ ನೀಡಿದೆ.

ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ (ನರೇಗಾ) ಯೋಜನೆಯಡಿ ರಾಜ್ಯದಲ್ಲಿ 53.78 ಲಕ್ಷ ಜಾಬ್‌ಕಾರ್ಡ್‌ಗಳಿದ್ದು, ಅದರಲ್ಲಿ 1.38 ಕೋಟಿ ಫ‌ಲಾನುಭವಿಗಳಿದ್ದಾರೆ. ಈ ಪೈಕಿ 94.38 ಲಕ್ಷ, ಅಂದರೆ ಶೇ. 68.32ರಷ್ಟು ಫ‌ಲಾನುಭವಿಗಳು ಆಧಾರ್‌ ಸಂಖ್ಯೆ ಹೊಂದಿದ್ದು, 43.76 ಲಕ್ಷ ಫ‌ಲಾನುಭವಿಗಳಿಗೆ ಆಧಾರ್‌ ಸಂಖ್ಯೆ ಇಲ್ಲ.

ಉದ್ಯೋಗ ಖಾತರಿಯ ವೇತನವನ್ನು “ನೇರ ನಗದು ವರ್ಗಾವಣೆ’ (ಡಿಬಿಟಿ) ಮೂಲಕ ನೇರವಾಗಿ ಫ‌ಲಾನುಭವಿಯ ಬ್ಯಾಂಕ್‌ ಖಾತೆಗೆ ಜಮೆ ಮಾಡುವ ವ್ಯವಸ್ಥೆ ಇದೆ. ಇದಕ್ಕೆ ಫ‌ಲಾನುಭವಿಯ ಬ್ಯಾಂಕ್‌ ಖಾತೆಗೆ ಆಧಾರ್‌ ಸಂಖ್ಯೆ ಜೋಡಿಸುವುದು ಕಡ್ಡಾಯಗೊಳಿಸಲಾಗಿದೆ. ಆದರೆ, 1.38 ಕೋಟಿ ಫ‌ಲಾನುಭವಿಗಳ ಪೈಕಿ 80.73 ಲಕ್ಷ ಮಂದಿ ಬ್ಯಾಂಕ್‌ ಖಾತೆಗೆ ಜೊತೆಗೆ ಆಧಾರ್‌ ಸಂಖ್ಯೆ ಹೊಂದಿದ್ದಾರೆ.

ರಾಜ್ಯದಲ್ಲಿ ಆಯಾ ಜಿಲ್ಲೆಯ ಒಟ್ಟು ಫ‌ಲಾನುಭವಿಗಳ ಪೈಕಿ ಬೆಳಗಾವಿ ಜಿಲ್ಲೆಯಲ್ಲಿ ಅತಿ ಹೆಚ್ಚು 3.91 ಲಕ್ಷ, ಕೊಪ್ಪಳ 2.91 ಲಕ್ಷ, ಬಳ್ಳಾರಿ 2.54 ಲಕ್ಷ, ವಿಜಯಪುರ 2.36 ಲಕ್ಷ ಮತ್ತು ಚಿತ್ರದುರ್ಗ ಜಿಲ್ಲೆಯ 2.15 ಲಕ್ಷ ಫ‌ಲಾನುಭವಿಗಳಿಗೆ ಆಧಾರ್‌ ಸಂಖ್ಯೆ ಇಲ್ಲ. ಅದೇ ರೀತಿ ರಾಯಚೂರು ಜಿಲ್ಲೆ ಶೇ.94.07, ಉಡುಪಿ ಶೇ. 90.31, ಬೆಂಗಳೂರು ಗ್ರಾಮಾಂತರ ಶೇ.80.29, ಹಾಸನ ಶೇ. 76.52 ಮತ್ತು ಧಾರವಾಡ ಶೇ.76.44ರಂತೆ ಅತಿ ಹೆಚ್ಚು ಫ‌ಲಾನುಭವಿಗಳು ಆಧಾರ್‌ ಸಂಖ್ಯೆ ಹೊಂದಿದ್ದಾರೆ.

ವಿಶೇಷ ಶಿಬಿರಕ್ಕೆ ಕೇಂದ್ರದ ಸೂಚನೆ: ಎಲ್ಲ ಬಗೆಯ ಬ್ಯಾಂಕ್‌ ಖಾತೆದಾರರು 2017ರ ಡಿ.31ರೊಳಗೆ ತಮ್ಮ ಖಾತೆಯೊಂದಿಗೆ ಆಧಾರ್‌ ಸಂಖ್ಯೆ ಜೋಡಿಸಬೇಕು ಎಂದು ಕೇಂದ್ರ ಹಣಕಾಸು ಸಚಿವಾಲಯ ನಿರ್ದೇಶನ ಕೊಟ್ಟಿದೆ. ಆದರೆ, ಇಡೀ ದೇಶದಲ್ಲಿ 5 ಕೋಟಿ ಉದ್ಯೋಗ ಖಾತರಿ ಫ‌ಲಾನುಭವಿಗಳು ಆಧಾರ್‌ ಸಂಖ್ಯೆ ಜೋಡಣೆ ಮಾಡಿಲ್ಲ. ಅದರಲ್ಲಿ ಕರ್ನಾಟಕದ 44 ಲಕ್ಷ ಫ‌ಲಾನುಭವಿಗಳು ಸೇರಿದ್ದಾರೆ. ಇವರಿಗಾಗಿ ಜುಲೈ 25ರಿಂದ ಸೆ.10ರವರೆಗೆ ಗ್ರಾಮ ಪಂಚಾಯಿತಿ ಹಾಗೂ ಬ್ಲಾಕ್‌ ಮಟ್ಟದಲ್ಲಿ ವಿಶೇಷ ಶಿಬಿರಗಳನ್ನು ನಡೆಸಬೇಕು, ಶಿಬಿರದ ವಿವರಗಳನ್ನು ಜು.20ರೊಳಗೆ ಕೇಂದ್ರಕ್ಕೆ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿರುವ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯ, ಈ ಅವಧಿಯಲ್ಲಿ ಧಾರ್‌ ಸಂಖ್ಯೆ ಜೋಡಣೆ ಮಾಡಿಕೊಳ್ಳದ ಫ‌ಲಾನುಭವಿಗಳ ಖಾತೆ ರದ್ದುಗೊಳ್ಳುವ ಸಾಧ್ಯತೆಯಿರುತ್ತದೆ ಎಂದು ಎಚ್ಚರಿಕೆ ನೀಡಿದೆ.

“ಆಧಾರ್‌ ಸಂಖ್ಯೆ ಇಲ್ಲದ ಉದ್ಯೋಗ ಖಾತರಿ ಫ‌ಲಾನುಭವಿಗಳಿಗಾಗಿ ವಿಶೇಷ ಶಿಬಿರಗಳನ್ನು ಹಮ್ಮಿಕೊಳ್ಳುವಂತೆ ಕೇಂದ್ರ ಸರ್ಕಾರದಿಂದ ಈಗಷ್ಟೇ ಮಾರ್ಗಸೂಚಿ ಬಂದಿದೆ. ಈ ನಿಟ್ಟಿನಲ್ಲಿ ರಾಜ್ಯದಲ್ಲಿ ಏನು ಮಾಡಬೇಕು ಆನ್ನುವುದರ ರೂಪುರೇಷೆಗಳನ್ನು ಒಂದೆರಡು ದಿನಗಳಲ್ಲಿ ತಯಾರಿಸಲಾಗುವುದು. ಶಿಬಿರದ ಅವಧಿಯಲ್ಲಿ ಎಲ್ಲ ಫ‌ಲಾನುಭವಿಗಳ ಆಧಾರ್‌ ಸಂಖ್ಯೆಯನ್ನು ಅವರ ಬ್ಯಾಂಕ್‌ ಖಾತೆಗಳಿಗೆ ಜೋಡಣೆ ಮಾಡಿಸಲಾಗುವುದು’.
 - ಉಪೇಂದ್ರ ಪ್ರತಾಪ್‌ ಸಿಂಗ್‌, ಆಯುಕ್ತರು, ಉದ್ಯೋಗ ಖಾತರಿ ಯೋಜನೆ.

– ರಫೀಕ್‌ ಅಹ್ಮದ್‌

ಟಾಪ್ ನ್ಯೂಸ್

Ranking: ಐಸಿಸಿ ನೂತನ ರ್‍ಯಾಂಕಿಂಗ್‌ ಪ್ರಕಟ: ಶಾಹೀನ್‌ ಅಫ್ರಿದಿ ಮತ್ತೆ ನಂ.1

Ranking: ಐಸಿಸಿ ನೂತನ ರ್‍ಯಾಂಕಿಂಗ್‌ ಪ್ರಕಟ: ಶಾಹೀನ್‌ ಅಫ್ರಿದಿ ಮತ್ತೆ ನಂ.1

Hockey: ವನಿತಾ ಏಷ್ಯಾ ಚಾಂಪಿಯನ್ಸ್‌ ಹಾಕಿ… ಇಂದು ಭಾರತಕ್ಕೆ ಥಾಯ್ಲೆಂಡ್‌ ಎದುರಾಳಿ

Hockey: ವನಿತಾ ಏಷ್ಯಾ ಚಾಂಪಿಯನ್ಸ್‌ ಹಾಕಿ… ಇಂದು ಭಾರತಕ್ಕೆ ಥಾಯ್ಲೆಂಡ್‌ ಎದುರಾಳಿ

Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…

Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…

T20: ತಿಲಕ್‌ ವರ್ಮ ಸ್ಫೋಟಕ ಶತಕ… ಭಾರತ ಆರು ವಿಕೆಟಿಗೆ 219

T20: ತಿಲಕ್‌ ವರ್ಮ ಸ್ಫೋಟಕ ಶತಕ… ಭಾರತ ಆರು ವಿಕೆಟಿಗೆ 219

Ranaji Trophy: ಉತ್ತರ ಪ್ರದೇಶ ವಿರುದ್ಧ ಕರ್ನಾಟಕಕ್ಕೆ ಮುನ್ನಡೆ

Ranaji Trophy: ಉತ್ತರ ಪ್ರದೇಶ ವಿರುದ್ಧ ಕರ್ನಾಟಕಕ್ಕೆ ಮುನ್ನಡೆ

Alert: ವಾಟ್ಸ್‌ಆ್ಯಪ್‌ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್‌ ತೆರೆದೀರಿ ಜೋಕೆ!

Alert: ವಾಟ್ಸ್‌ಆ್ಯಪ್‌ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್‌ ತೆರೆದೀರಿ ಜೋಕೆ!

2-vitla

Vitla:ಮಾಣಿ -ಮೈಸೂರು ರಾಜ್ಯ ಹೆದ್ದಾರಿಯಲ್ಲಿ ಲಾರಿ ಮೇಲೆ ಮರ ಬಿದ್ದು ರಸ್ತೆ ಸಂಪೂರ್ಣ ಬ್ಲಾಕ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…

Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…

ಖಾತೆ ಇರದ ಆಸ್ತಿಗಳಿಗೆ ಇನ್ನು ಬಿಬಿಎಂಪಿ ಮಾದರಿ ಇ-ಖಾತಾ

E-Khata: ಖಾತೆ ಇರದ ಆಸ್ತಿಗಳಿಗೆ ಇನ್ನು ಬಿಬಿಎಂಪಿ ಮಾದರಿ ಇ-ಖಾತಾ

MUDA CASE: ಸಿಎಂ ಆಪ್ತ, ಸಂಸದ ಇ.ಡಿ. ವಿಚಾರಣೆ

MUDA CASE: ಸಿಎಂ ಆಪ್ತ, ಸಂಸದ ಇ.ಡಿ. ವಿಚಾರಣೆ

ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷ‌ಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷ‌ಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

Eshwara Khandre: ಪಶ್ಚಿಮಘಟ್ಟ ನದಿ ನೀರು ಪೂರೈಕೆ ನಗರಗಳಿಗೆ ಸೆಸ್‌

Eshwara Khandre: ಪಶ್ಚಿಮಘಟ್ಟ ನದಿ ನೀರು ಪೂರೈಕೆ ನಗರಗಳಿಗೆ ಸೆಸ್‌

MUST WATCH

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

ಹೊಸ ಸೇರ್ಪಡೆ

Ranking: ಐಸಿಸಿ ನೂತನ ರ್‍ಯಾಂಕಿಂಗ್‌ ಪ್ರಕಟ: ಶಾಹೀನ್‌ ಅಫ್ರಿದಿ ಮತ್ತೆ ನಂ.1

Ranking: ಐಸಿಸಿ ನೂತನ ರ್‍ಯಾಂಕಿಂಗ್‌ ಪ್ರಕಟ: ಶಾಹೀನ್‌ ಅಫ್ರಿದಿ ಮತ್ತೆ ನಂ.1

Kalidas Samman: ವರ್ಣಚಿತ್ರಕಾರ ರಘುಪತಿ ಭಟ್ ಅವರಿಗೆ ರಾಷ್ಟ್ರೀಯ ಕಾಳಿದಾಸ್ ಪ್ರಶಸ್ತಿ

Kalidas Samman: ವರ್ಣಚಿತ್ರಕಾರ ರಘುಪತಿ ಭಟ್ ಅವರಿಗೆ ರಾಷ್ಟ್ರೀಯ ಕಾಳಿದಾಸ್ ಪ್ರಶಸ್ತಿ

Hockey: ವನಿತಾ ಏಷ್ಯಾ ಚಾಂಪಿಯನ್ಸ್‌ ಹಾಕಿ… ಇಂದು ಭಾರತಕ್ಕೆ ಥಾಯ್ಲೆಂಡ್‌ ಎದುರಾಳಿ

Hockey: ವನಿತಾ ಏಷ್ಯಾ ಚಾಂಪಿಯನ್ಸ್‌ ಹಾಕಿ… ಇಂದು ಭಾರತಕ್ಕೆ ಥಾಯ್ಲೆಂಡ್‌ ಎದುರಾಳಿ

Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…

Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…

T20: ತಿಲಕ್‌ ವರ್ಮ ಸ್ಫೋಟಕ ಶತಕ… ಭಾರತ ಆರು ವಿಕೆಟಿಗೆ 219

T20: ತಿಲಕ್‌ ವರ್ಮ ಸ್ಫೋಟಕ ಶತಕ… ಭಾರತ ಆರು ವಿಕೆಟಿಗೆ 219

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.