ಮಹಿಳಾ ಡಿವೈಎಸ್ಪಿ ಆತ್ಮಹತ್ಯೆ ಪ್ರಕರಣ; ನಾಲ್ವರನ್ನು ವಶಕ್ಕೆ ಪಡೆದ ಪೊಲೀಸರು
Team Udayavani, Dec 17, 2020, 10:35 AM IST
ಬೆಂಗಳೂರು: ಮಹಿಳಾ ಸಿಐಡಿ ಡಿವೈಎಸ್ಪಿಯೋರ್ವರು ಸ್ನೇಹಿತನ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ನಾಗರಭಾವಿಯಲ್ಲಿ ನಡೆದಿದೆ.
ಮಹಿಳಾ ಡಿವೈ ಎಸ್ ಪಿಯನ್ನು ವಿ. ಲಕ್ಷ್ಮಿ ಎಂದು ಗುರುತಿಸಲಾಗಿದ್ದು, 2014ನೇ ಸಾಲಿನಲ್ಲಿ ಕೆಪಿಎಸ್ ಸಿ ಮೂಲಕ ಕರ್ನಾಟಕ ಪೊಲೀಸ್ ಸೇವೆಗೆ ಆಯ್ಕೆಯಾಗಿದ್ದರು. 2017 ನೇ ವರ್ಷದಲ್ಲಿ ಸೇವೆಗೆ ಸೇರಿದ್ದು ಸಿಐಡಿಯಲ್ಲಿ ಡಿವೈಎಸ್ಪಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು.
ಬುಧವಾರ(ಡಿ.16) ನಾಗರಭಾವಿ ವಿನಾಯಕ ಲೇಔಟ್ ನಲ್ಲಿರುವ ಸ್ನೇಹಿತೆ ಮನೆಗೆ ಹೋಗಿದ್ದ ಲಕ್ಷ್ಮೀ ಪಾರ್ಟಿಯ ನಂತರ ಕೋಣೆಯೊಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು ಬುಧವಾರ ರಾತ್ರಿ ಹತ್ತು ಗಂಟೆಗೆ ಪ್ರಕರಣ ಬೆಳಕಿಗೆ ಬಂದಿತ್ತು.
ಸದ್ಯ ಮೃತ ದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಿದ್ದು, ಮರಣೋತ್ತರ ಪರೀಕ್ಷೆಗೆ ನಡೆಸಲಾಗುತ್ತಿದೆ.. ಘಟನೆಗೆ ಸಂಬಂಧಿಸಿದಂತೆ ಅನ್ನಪೂರ್ಣೇಶ್ವರಿ ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ನಾಲ್ವರನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ್ದಾರೆ.
ಇದನ್ನೂ ಓದಿ: ಆರ್.ಎನ್ ಶೆಟ್ಟಿ ಇನ್ನಿಲ್ಲ: ಕರ್ನಾಟಕದ ಸರ್ವಾಂಗೀಣ ಅಭಿವೃದ್ಧಿಗೆ ಇವರ ಕೊಡುಗೆ ಅಪಾರ !
2012ರಲ್ಲಿ ನವೀನ್ ಎಂಬುವರನ್ನು ಪ್ರೀತಿಸಿ ಲಕ್ಷ್ಮೀ ವಿವಾಹವಾಗಿದ್ದರು. ಖಾಸಗಿ ಕಂಪನಿ ಉದ್ಯೋಗಿಯಾಗಿರುವ ನವೀನ್ ಹೈದರಾಬಾದ್ ನಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಅಗಾಗ ಬೆಂಗಳೂರಿಗೆ ಬಂದು ಹೋಗುತ್ತಿದ್ದರು. ದಂಪತಿ ಕುಟುಂಬ ಕೋಣನಕುಂಟೆ ಕ್ರಾಸ್ ನಲ್ಲಿ ವಾಸವಿತ್ತು. ಇತ್ತೀಚಿಗೆ ಲಕ್ಷ್ಮೀ ಕುಡಿತದ ಚಟಕ್ಕೆ ಒಳಗಾಗಿದ್ದರು ಎನ್ನಲಾಗಿದ್ದು, ಈ ಹಿಂದೆ ಕೂಡ ಎರಡು ಬಾರಿ ಆತ್ಮಹತ್ಯೆಗೆ ಯತ್ನಿಸಿದ ಲಕ್ಷ್ಮೀ ಅವರನ್ನು ಆಸ್ಪತ್ರೆಗೆ ಸೇರಿಸಲಾಗಿತ್ತು.
ಇದನ್ನೂ ಓದಿ: ಖ್ಯಾತ ಉದ್ಯಮಿ, ಶಿಕ್ಷಣ ತಜ್ಞ ಆರ್.ಎನ್ ಶೆಟ್ಟಿ ನಿಧನ; ಮುಖ್ಯಮಂತ್ರಿ ಬಿಎಸ್ ವೈ ಸಂತಾಪ
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.