ಫರ್ಜಿ ಕೆಫೆ ಪುನರ್ ಪುನಾರಂಭ
Team Udayavani, Mar 21, 2018, 12:37 PM IST
ಬೆಂಗಳೂರು: ಕಳೆದ ಒಂದು ತಿಂಗಳಿನಿಂದ ವಿವಾದದ ಕೇಂದ್ರ ಬಿಂದುವಾಗಿದ್ದ ಯುಬಿ ಸಿಟಿಯ ಫರ್ಜಿ ಕೆಫೆ ಯಲ್ಲಿ ಕಾರ್ಯಚಟುವಟಿಕೆ ಪುನರ್ ಆರಂಭಿಸಲು ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ಅನುಮತಿ ನೀಡಿದ್ದಾರೆ. ಮೊಹಮದ್ ನಲಪಾಡ್ ರಾದ್ಧಾಂತ ಪ್ರಕರಣದಿಂದ ಎಚ್ಚೆತ್ತುಕೊಂಡಿರುವ ಪೊಲೀಸರು, ಫರ್ಜಿ ಕೆಫೆ ಮಾಲೀಕರಿಗೆ ಹಲವು ಷರತ್ತುಗಳನ್ನು ವಿಧಿಸಿ ಕಾರ್ಯಚಟುವಟಿಕೆ ಆರಂಭಿಸಲು ಅನುಮತಿ ನೀಡಿದ್ದಾರೆ.
ನಿಗದಿತ ಟೇಬಲ್ಗಳಿಗಿಂತ ಹೆಚ್ಚು ಜನರಿಗೆ ಪ್ರವೇಶ ನೀಡಬಾರದು. ಕೆಫೆಯಲ್ಲಿ ಧೂಮಪಾನಕ್ಕೆ ಅವಕಾಶ ಮಾಡಿಕೊಡಬಾರದು. ಏನಾದರೂ ಗಲಾಟೆ ನಡೆದರೆ ತಕ್ಷಣ ಪೊಲೀಸರ ಗಮನಕ್ಕೆ ತರಬೇಕು. ಸುರಕ್ಷಾತಾ ದೃಷ್ಟಿಯಿಂದ ಹೆಚ್ಚುವರಿ ಸಿಸಿಟಿವಿ ಕ್ಯಾಮೆರಾ ಅಳವಡಿಕೆ, ಗ್ರಾಹಕರಿಗೆ ಭದ್ರತೆ ಸೇರಿ ಇನ್ನಿತರೆ ಷರತ್ತುಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ತಾಕೀತು ಮಾಡಿ ಅನುಮತಿ ನೀಡಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದರು.
ಫರ್ಜಿ ಕೆಫೆಯಲ್ಲಿ ಫೆ.17ರಂದು ಉದ್ಯಮಿ ಲೋಕನಾಥ್ ಪುತ್ರ ವಿದ್ವತ್ ಮೇಲೆ ಶಾಸಕ ಎನ್.ಎ ಹ್ಯಾರಿಸ್ ಮಗ ಮೊಹಮದ್ ನಲಪಾಡ್ ಹಾಗೂ ಆತನ ಸಹಚರರು ಮಾರಣಾಂತಿಕ ಹಲ್ಲೆ ನಡೆಸಿದ್ದರು. ಪ್ರಕರಣ ಚರ್ಚೆಗೆ ಗ್ರಾಸವಾಗಿದ್ದ ಈ ಘಟನೆ ಬಳಿಕ ಪೊಲೀಸರು, ತನಿಖೆ ಭಾಗವಾಗಿ ಫರ್ಜಿ ಕೆಫೆಯನ್ನು ಒಂದು ತಿಂಗಳು ಬಂದ್ ಮಾಡಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cold Weather: ಬೀದರ್, ವಿಜಯಪುರ ಗಡಗಡ: 5-6 ಡಿ.ಸೆ.ಗೆ ತಾಪಮಾನ ಇಳಿಕೆ?
Danger Spot-1: ಹೊಸೂರು ಮುಖ್ಯರಸ್ತೆ ಸಮೀಪ ನಡೆದಾಡುವುದೂ ಅಪಾಯಕಾರಿ!
BIFF:16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕಿಶೋರ್ ರಾಯಭಾರಿ
EV ದ್ವಿಚಕ್ರ ವಾಹನ ಮಾರಾಟ: ಏಥರ್ ಸಂಸ್ಥೆ ಪಾಲು ಶೇ.25
Aishwarya Gowda ವಿರುದ್ದ ಬಲವಂತದ ಕ್ರಮ ಬೇಡ: ಪೊಲೀಸರಿಗೆ ಕೋರ್ಟ್ ಸೂಚನೆ
MUST WATCH
ಹೊಸ ಸೇರ್ಪಡೆ
Tumkuru; ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಪುತ್ರ ಆತ್ಮಹ*ತ್ಯೆ
Mangaluru: ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ
Vijayapura: ಕರ್ನಾಟಕ ಸಾವಿನ ಮನೆಯಾಗಿದೆ: ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
Viral: ಇದು ಇರುವೆಗಳ ಎಂಜಿನಿಯರಿಂಗ್ ಕೌಶಲ್ಯ! ನೀರು ದಾಟಲು ಇರುವೆಗಳ ಸೇತುವೆ ನಿರ್ಮಾಣ
Indian Cricket: ಕ್ರಿಕೆಟ್ ಜೀವನಕ್ಕೆ ಗುಡ್ ಬೈ ಹೇಳಿದ ಆರ್ಸಿಬಿ ಮಾಜಿ ಆಟಗಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.