Crime: ನಶೆಯಲ್ಲಿ ಹೆಲ್ಮೆಟ್ನಿಂದ ಹೊಡೆದು ಸ್ನೇಹಿತನ ಹತ್ಯೆ
Team Udayavani, Nov 9, 2023, 10:26 AM IST
ಬೆಂಗಳೂರು: ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರ ನಡುವೆ ಉಂಟಾದ ಜಗಳ ಒಬ್ಬನಕೊಲೆಯಲ್ಲಿ ಅಂತ್ಯವಾಗಿರುವ ಘಟನೆಬಾಣಸವಾಡಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಕೆ.ಜಿ.ಹಳ್ಳಿಯ ಬಾಗಲೂರು ಲೇಔಟ್ ನಿವಾಸಿ ಪ್ರವೀಣ್(27) ಕೊಲೆಯಾದ ಯುವಕ. ಈ ಸಂಬಂಧ ಪ್ರವೀಣ್ ಸ್ನೇಹಿತರಾದ ಸುಂದರ್(27), ಪ್ರಭು (25) ಮತ್ತು ಆರುಮುಗಂ(27) ಎಂಬುವರನ್ನು ಬಂಧಿಸಲಾಗಿದೆ.
ಫುಡ್ ಡೆಲಿವರಿ ಬಾಯ್ಯಾಗಿ ಕೆಲಸ ಮಾಡುವ ಪ್ರವೀಣ್ ಹಾಗೂ ಆರೋಪಿಗಳು ಸ್ನೇಹಿತರಾಗಿದ್ದು, ಒಂದೇ ಪ್ರದೇಶದವರಾಗಿದ್ದಾರೆ. ಮಂಗಳವಾರ ತಡರಾತ್ರಿ 12ಗಂಟೆ ಸುಮಾರಿಗೆ ಲಿಂಗರಾಜಪುರದ ಆಯಿಲ್ ಮಿಲ್ ರಸ್ತೆಯಲ್ಲಿ ಎಲ್ಲರೂ ಮದ್ಯ ಸೇವಿಸಿ ಮಾತನಾಡುತ್ತನಿಂತಿದ್ದರು. ಈ ವೇಳೆ ಕ್ಷುಲ್ಲಕ ವಿಚಾರಕ್ಕೆ ಸ್ನೇಹಿತರ ನಡುವೆ ಜಗಳವಾಗಿದೆ. ಈ ವೇಳೆ ಕೋಪಗೊಂಡ ಆರುಮುಗಂ ಹೆಲ್ಮೆಟ್ನಿಂದ ಪ್ರವೀಣ್ ತಲೆಗೆ ಹೊಡೆದಿದ್ದಾನೆ. ಅದೇ ವೇಳೆ ಇತರೆ ಆರೋಪಿಗಳು ಪ್ರವೀಣ್ ಮೇಲೆ ಹಲ್ಲೆ ನಡೆಸಿದ್ದಾರೆ.
ತಲೆಗೆ ಗಂಭೀರ ಪೆಟ್ಟು ಬಿದ್ದಿದ್ದರಿಂದ ಪ್ರವೀಣ್ ಕುಸಿದು ಬಿದ್ದಿದ್ದಾನೆ. ಗಾಬರಿಗೊಂಡ ಆರೋಪಿಗಳು ಎಚ್ಚರಿಸಲು ಮುಂದಾಗಿದ್ದಾರೆ. ಅಷ್ಟರಲ್ಲಿ ಪ್ರವೀಣ್ ಮೃತಪಟ್ಟಿದ್ದಾನೆ. ಬಳಿಕ ಆರೋಪಿಗಳು ಪರಾರಿಯಾಗಿದ್ದರು.
ಕೆಲ ಹೊತ್ತಿನ ಬಳಿಕ ಸ್ಥಳೀಯರ ಮಾಹಿತಿ ಮೇರೆಗೆ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಪ್ರವೀಣ್ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿ, ಆರೋಪಿಗಳ ಪತ್ತೆ ಕಾರ್ಯ ಆರಂಭಿಸಿದ್ದರು. ಬುಧವಾರ ಮುಂಜಾನೆ ಎಲ್ಲ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.
ಬಾಣಸವಾಡಿ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Smart Bus Stan: ಕೋರಮಂಗಲದಲ್ಲಿ ಸ್ಮಾರ್ಟ್ ಬಸ್ ನಿಲ್ದಾಣ!
Bengaluru: ಇವಿ ಬೈಕ್ ಶೋರೂಮ್ನಲ್ಲಿ ಬೆಂಕಿ ಅವಘಡ; ಮಾಲೀಕ, ಮ್ಯಾನೇಜರ್ ಬಂಧನ, ಬಿಡುಗಡೆ
Bengaluru: ನಗರದಲ್ಲಿ ನಿಷೇಧಿತ ಕಲರ್ ಕಾಟನ್ ಕ್ಯಾಂಡಿ ತಯಾರಿಕಾ ಘಟಕ ಬಂದ್
Shobha Karandlaje: ಶೋಭಾ ಲೋಕಸಭಾ ಸದಸ್ಯತ್ವ ರದ್ದು ಕೋರಿ ಅರ್ಜಿ: ಡಿ.6ಕ್ಕೆ ವಿಚಾರಣೆ
Arrested: ನಕಲಿ ದಾಖಲೆ ನೀಡಿ ಟಿಡಿಎಸ್ ಪಡೆಯುತ್ತಿದ್ದ ಆರೋಪಿಯ ಬಂಧಿಸಿದ ಜಾರಿ ನಿರ್ದೇಶನಾಲಯ
MUST WATCH
ಹೊಸ ಸೇರ್ಪಡೆ
Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ,ಮಗಳು
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.