ಕಡತ ವಿಲೇವಾರಿ ಈಗ ಸೂಪರ್‌ ಫಾಸ್ಟ್‌


Team Udayavani, Oct 9, 2018, 6:00 AM IST

coalition-government-file.jpg

ಬೆಂಗಳೂರು: ಕಳೆದ ಮೂರು ತಿಂಗಳಲ್ಲಿ ಸಚಿವಾಲಯದಲ್ಲಿ ಕಡತಗಳ ವಿಲೇವಾರಿ ಕಾರ್ಯ ಚುರುಕುಗೊಂಡಿದ್ದು, ಬರೋಬ್ಬರಿ 41 ಸಾವಿರ ಕಡತಗಳು ಇತ್ಯರ್ಥಗೊಂಡಿವೆ.

ಸದ್ಯ ಕಂದಾಯ ಇಲಾಖೆಯಲ್ಲಿ 15,000 ಹಾಗೂ ನಗರಾಭಿವೃದ್ಧಿ ಇಲಾಖೆಯಲ್ಲಿ 13,000 ಕಡತಗಳು ಬಾಕಿ ಇದ್ದು, ಇವುಗಳ ತ್ವರಿತ ವಿಲೇವಾರಿಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯ ಭಾಸ್ಕರ್‌ ಮೇಲ್ವಿಚಾರಣೆ ನಡೆಸುತ್ತಿದ್ದಾರೆ.
ಸಚಿವಾಲಯದಲ್ಲೂ ಕಡತ ವಿಲೇವಾರಿ ನಿರೀಕ್ಷಿತ ಪ್ರಮಾಣದಲ್ಲಿರಲಿಲ್ಲ. ಆ ಹಿನ್ನೆಲೆಯಲ್ಲಿ ಹಿಂದೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿದ್ದ ಟಿ.ಎಂ.ವಿಜಯ ಭಾಸ್ಕರ್‌ ಅವರು ದೈನಂದಿನ ಕಡತ ಬಾಕಿ ಕುರಿತು ಎಸ್‌ಎಂಎಸ್‌ ರವಾನಿಸುವ ವ್ಯವಸ್ಥೆ ಜಾರಿಗೊಳಿಸಿದ್ದರು. ಅಂದರೆ ಅಧಿಕಾರಿಗಳು ಒಂದು ಕಡತವನ್ನು ಐದು ದಿನದಲ್ಲಿ ವಿಲೇವಾರಿ ಮಾಡಬೇಕಿತ್ತು. ಕಡತ ಪರಿಶೀಲಿಸಿ ಮುಂದಿನ ಕ್ರಮಕ್ಕೆ ಮೇಲಿನ ಅಧಿಕಾರಿಗಾಗಲಿ ಇಲ್ಲವೇ ಅಧೀನ ಅಧಿಕಾರಿಗಾಗಲಿ ರವಾನಿಸಬೇಕಿತ್ತು. ಅದರಂತೆ 15 ದಿನಗಳ ಕಾಲ ವಿಲೇವಾರಿ ಮಾಡದೆ ಉಳಿಸಿಕೊಂಡಿರುವ ಕಡತಗಳ ವಿವರವನ್ನು ಎಸ್‌ಎಂಎಸ್‌ ಮೂಲಕ ಕಳುಹಿಸುವಂತೆ ಸೂಚಿಸಿದ್ದರು. ಅದರ ಪ್ರಕಾರ ಆರು ತಿಂಗಳ ಹಿಂದೆ 1.50 ಲಕ್ಷಕ್ಕೂ ಹೆಚ್ಚು ಕಡತಗಳು ಬಾಕಿ ಉಳಿದಿದ್ದವು.

41,000 ಕಡತ ವಿಲೇವಾರಿ:
ಸಮ್ಮಿಶ್ರ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಮುಖ್ಯ ಕಾರ್ಯದರ್ಶಿಯಾಗಿ ಆಯ್ಕೆಯಾದ ವಿಜಯ ಭಾಸ್ಕರ್‌ ಅವರು ಕಡತ ವಿಲೇವಾರಿಗೆ ಆದ್ಯತೆ ನೀಡಿ ನಿರಂತರವಾಗಿ ಮೇಲ್ವಿಚಾರಣೆ ನಡೆಸಲಾರಂಭಿಸಿದ್ದಾರೆ. ಪರಿಣಾಮವಾಗಿ 41,000ಕ್ಕೂ ಹೆಚ್ಚು ಕಡತಗಳು ಇತ್ಯರ್ಥಗೊಂಡಿವೆ. ಮುಖ್ಯ ಕಾರ್ಯದರ್ಶಿಗಳೇ ಖುದ್ದಾಗಿ ಇದರ ಮೇಲ್ವಿಚಾರಣೆ ನಡೆಸುತ್ತಿದ್ದಾರೆ.

ಮಾಸಿಕ 150ಕ್ಕೂ ಹೆಚ್ಚು ಸಭೆ:
ಕಾರ್ಯಾಂಗದ ಮುಖ್ಯಸ್ಥರಾದ ಮುಖ್ಯ ಕಾರ್ಯದರ್ಶಿಗಳು  ಮಾಸಿಕ 150ಕ್ಕೂ ಹೆಚ್ಚು ಸಭೆಗಳನ್ನು ನಡೆಸಿ ಆಡಳಿತಕ್ಕೆ ಚುರುಕು ಮುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ. ತಿಂಗಳ ಮೊದಲ ದಿನ ಕಾರ್ಯದರ್ಶಿಗಳೊಂದಿಗೆ ಬಜೆಟ್‌ ಅನುಷ್ಠಾನದ ಪ್ರಗತಿ ಪರಿಶೀಲನಾ ಸಭೆ ನಡೆಸುತ್ತಾರೆ. ಮೂರನೇ ದಿನ ಹೈಕೋರ್ಟ್‌, ಮಾನವ ಹಕ್ಕುಗಳ ಆಯೋಗ ಸೇರಿದಂತೆ ಇತರೆ ಇಲಾಖೆಗೆ ಸಂಬಂಧಪಟ್ಟ ವಿಚಾರಗಳ ಬಗ್ಗೆ ಚರ್ಚೆ. ನಾಲ್ಕನೇ ದಿನ ಕೆಪಿಎಸ್‌ಸಿಗೆ ಸಂಬಂಧಪಟ್ಟ ವಿಚಾರ ಕುರಿತು ಸಭೆ. 8ನೇ ದಿನ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ. ನಾನಾ ಯೋಜನೆಗೆ ಭೂಸ್ವಾಧೀನ, ಅರಣ್ಯ ಇಲಾಖೆ ಅನುಮತಿ ಇತರೆ ಪ್ರಗತಿ ಪರಿಶೀಲಿಸುತ್ತಾರೆ.

16ರಂದು ಬಜೆಟ್‌ ಅನುಷ್ಠಾನದ ಬಗ್ಗೆ ಕಾರ್ಯದರ್ಶಿಗಳ ಸಭೆ. 17ರಂದು ಹೈದರಾಬಾದ್‌ ಕರ್ನಾಟಕ ಅಭಿವೃದ್ಧಿ ಮಂಡಳಿ ಸಭೆ. 18ನೇ ತಾರೀಖೀನಂದು ಎಲ್ಲ ಸಿಇಒ, ಜಿಲ್ಲಾ ಆರೋಗ್ಯಾಧಿಕಾರಿಗಳು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳೊಂದಿಗೆ ಮಾತೃಪೂರ್ಣ, ಅಪೌಷ್ಠಿಕತೆ ನಿವಾರಣೆ, ಸ್ವತ್ಛ ಭಾರತ್‌ ಅಭಿಯಾನ ಕುರಿತು ಜಿಲ್ಲಾವಾರು ಪ್ರಗತಿ ಪರಿಶೀಲನೆ. 20ರಂದು ಕೆಡಿಪಿ ಸಭೆ. 25ರಂದು ಹುಬ್ಬಳ್ಳಿ- ಧಾರವಾಡ ನಗರ ಅಭಿವೃದ್ಧಿ ಕುರಿತಂತೆ ಸಭೆ. ಜತೆಗೆ ಇ- ಆಡಳಿತ ಪ್ರಗತಿ ಪರಿಶೀಲನೆ.

ರಾಜಧಾನಿಯ ಅಭಿವೃದ್ಧಿ ಕಾರ್ಯಗಳಿಗೂ ಗಮನ ನೀಡಿರುವ ಮುಖ್ಯ ಕಾರ್ಯದರ್ಶಿಗಳು ತಿಂಗಳ ಮೊದಲ ಶುಕ್ರವಾರ ಸಬ್‌ಅರ್ಬನ್‌ ರೈಲ್ವೆ ಯೋಜನೆ, ಪೆರಿಫೆರಲ್‌ ರಿಂಗ್‌ ರಸ್ತೆ ಯೋಜನೆ ಪ್ರಗತಿ ಪರಿಶೀಲನೆ ನಡೆಸುತ್ತಾರೆ. ಎರಡನೇ ಶುಕ್ರವಾರ ಬಿಬಿಎಂಪಿ ಸಮನ್ವಯ ಸಮಿತಿ ಸಭೆಯಲ್ಲಿ ಪಾಲ್ಗೊಳ್ಳುತ್ತಾರೆ. ನಿತ್ಯ ಮಧ್ಯಾಹ್ನ 3.30ರಿಂದ 4.30ರವರೆಗೆ ಸಾರ್ವಜನಿಕರನ್ನು ಭೇಟಿಯಾಗುತ್ತಾರೆ.

ಯೋಜನೆಗಳ ತ್ವರಿತ ಅನುಷ್ಠಾನಕ್ಕೆ ಒತ್ತು
ಕಾರ್ಯಾಂಗದ ಸುಗಮ ಕಾರ್ಯ ನಿರ್ವಹಣೆಗೆ ಒತ್ತು ನೀಡಲಾಗಿದ್ದು, ಅದಕ್ಕೆ ಪೂರಕವಾಗಿ ಸಭೆಗಳನ್ನು ನಡೆಸಲಾಗುತ್ತಿದೆ. ಇಲಾಖೆಗಳ ನಡುವೆ ಸಮನ್ವಯಕ್ಕೂ ಒತ್ತು ನೀಡಲಾಗಿದೆ. ನಿತ್ಯ ಕನಿಷ್ಠ ಐದು ಸಭೆಗಳಿರುತ್ತವೆ. ತಿಂಗಳಿಗೆ 125ರಿಂದ 150 ಸಭೆ ನಡೆಸುತ್ತೇನೆ. ಕಡತ ವಿಲೇವಾರಿಗೂ ಆದ್ಯತೆ ನೀಡಲಾಗಿದ್ದು, ವಿಲೇವಾರಿಯಾಗದ ಕಡತಗಳ ಸಂಖ್ಯೆ 1.50 ಲಕ್ಷದಿಂದ 1.09 ಲಕ್ಷಕ್ಕೆ ಇಳಿಕೆಯಾಗಿದೆ ಎಂದು ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯ ಭಾಸ್ಕರ್‌ “ಉದಯವಾಣಿ’ಗೆ ತಿಳಿಸಿದರು.

ನಿಯಮಿತ ಸಭೆಗಳಿಂದಾಗಿ ಯೋಜನೆಗಳ ಅನುಷ್ಠಾನವೂ ವೇಗ ಪಡೆಯುತ್ತದೆ. ಅನ್ಯ ರಾಜ್ಯಗಳಿಂದ ರಾಜ್ಯಕ್ಕೆ ವಿದ್ಯುತ್‌ ಪೂರೈಕೆ ಕುರಿತಂತೆ ಪವರ್‌ ಗ್ರಿಡ್‌ ಕಾರ್ಪೊರೇಷನ್‌ ಯೋಜನೆಯೊಂದು ಮೂರ್‍ನಾಲ್ಕು ವರ್ಷದಿಂದ ಬಾಕಿ ಇತ್ತು. ತಮಿಳುನಾಡು, ಆಂಧ ಪ್ರದೇಶದಲ್ಲಿ ಈ ಯೋಜನೆ ಕಾರ್ಯಗತವಾಗಿದೆ. ಮುಖ್ಯಮಂತ್ರಿಗಳ ಸೂಚನೆಯಂತೆ 10 ದಿನಕ್ಕೊಮ್ಮೆ ಪ್ರಗತಿ ಪರಿಶೀಲಿಸಲಾಗುತ್ತಿದ್ದು, ಇದೀಗ ವೇಗ ಪಡೆದುಕೊಂಡಿದೆ. ರೈಲ್ವೆ, ಹೆದ್ದಾರಿ, ಹಾಸ್ಟೆಲ್‌, ವಸತಿ ಶಾಲೆ, ನಿವೇಶನರಹಿತರಿಗೆ ಮನೆ ನಿರ್ಮಾಣ ಯೋಜನೆಗಳಿಗೆ ಆದ್ಯತೆ ಮೇರೆಗೆ ಭೂಸ್ವಾಧೀನಕ್ಕೆ ಒತ್ತು ನೀಡಲಾಗಿದೆ. ಯೋಜನೆಗಳನ್ನು ತ್ವರಿತವಾಗಿ ಅನುಷ್ಠಾನಗೊಳಿಸಿ ಜನರಿಗೆ ಸೌಲಭ್ಯ ಕಲ್ಪಿಸಲು ಒತ್ತು ನೀಡಲಾಗಿದೆ ಎಂದು ಹೇಳಿದರು.

– ಎಂ. ಕೀರ್ತಿಪ್ರಸಾದ್‌

ಟಾಪ್ ನ್ಯೂಸ್

IPL Auction: Mallika Sagar will conduct the entire IPL auction

IPL Auction: ಸಂಪೂರ್ಣ ಐಪಿಎಲ್‌ ಹರಾಜು ನಡೆಸಲಿದ್ದಾರೆ ಮಲ್ಲಿಕಾ ಸಾಗರ್

Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ

Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ

bhairathi ranagal review

Bhairathi Ranagal Review: ರೋಣಾಪುರದ ರಣಬೇಟೆಗಾರ

Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

yathanal-jarakiholi

Waqf Notice: ಬಸನಗೌಡ ಪಾಟೀಲ್‌ ಯತ್ನಾಳ್‌ ತಂಡದಿಂದ 1 ತಿಂಗಳು ಜನ ಜಾಗೃತಿ

BYV-yathnal

Waqf Issue: ಕಾಂಗ್ರೆಸ್‌ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ

IT employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yathanal-jarakiholi

Waqf Notice: ಬಸನಗೌಡ ಪಾಟೀಲ್‌ ಯತ್ನಾಳ್‌ ತಂಡದಿಂದ 1 ತಿಂಗಳು ಜನ ಜಾಗೃತಿ

BYV-yathnal

Waqf Issue: ಕಾಂಗ್ರೆಸ್‌ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ

HD-Kumaraswmy

Black Days: ಜಮೀರ್‌+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್‌.ಡಿ.ಕುಮಾರಸ್ವಾಮಿ

BPL-CARD

Food Department Operation: ಬಿಪಿಎಲ್‌ ಚೀಟಿದಾರರಿಗೆ ಎಪಿಎಲ್‌ ಕಾವು!

Ramalinga reddy 2

Shakti scheme; ಪುರುಷರಿಗೆ ಉಚಿತ ಪ್ರಯಾಣ ಸೌಲಭ್ಯ ಇಲ್ಲ: ರಾಮಲಿಂಗಾರೆಡ್ಡಿ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

IPL Auction: Mallika Sagar will conduct the entire IPL auction

IPL Auction: ಸಂಪೂರ್ಣ ಐಪಿಎಲ್‌ ಹರಾಜು ನಡೆಸಲಿದ್ದಾರೆ ಮಲ್ಲಿಕಾ ಸಾಗರ್

Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ

Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ

bhairathi ranagal review

Bhairathi Ranagal Review: ರೋಣಾಪುರದ ರಣಬೇಟೆಗಾರ

Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

yathanal-jarakiholi

Waqf Notice: ಬಸನಗೌಡ ಪಾಟೀಲ್‌ ಯತ್ನಾಳ್‌ ತಂಡದಿಂದ 1 ತಿಂಗಳು ಜನ ಜಾಗೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.