ನಾಲ್ಕೂ ಕ್ಷೇತ್ರಗಳಲ್ಲಿ ಅಂತಿಮ ದಿನದ ಬಿರುಸಿನ ಪ್ರಚಾರ
Team Udayavani, Apr 17, 2019, 3:00 AM IST
ಬೆಂಗಳೂರು: ಮೊದಲ ಹಂತದಲ್ಲಿ ಮತದಾನ ನಡೆಯಲಿರುವ ಬೆಂಗಳೂರು ಉತ್ತರ, ದಕ್ಷಿಣ, ಕೇಂದ್ರ ಹಾಗೂ ಗ್ರಾಮಾಂತರ ಕ್ಷೇತ್ರಗಳಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟ ಹಾಗೂ ಬಿಜೆಪಿ ಅಭ್ಯರ್ಥಿಗಳು ಕೊನೇ ದಿನವಾದ ಮಂಗಳವಾರ ಇಡೀ ದಿನ ಬಿರುಸಿನ ಪ್ರಚಾರ ಮಾಡಿ ಮತಯಾಚನೆ ಮಾಡಿದರು.
ಬೆಂಗಳೂರು ದಕ್ಷಿಣ: ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿ ಬಿ.ಕೆ.ಹರಿಪ್ರಸಾದ್ ಪರ ಸಚಿವ ಡಿ.ಕೆ.ಶಿವಕುಮಾರ್ ಹಾಗೂ ರಾಜ್ಯಸಭೆ ಸದಸ್ಯರಾದ ಪ್ರೊ.ರಾಜೀವ್‌ಗೌಡ, ಕೆ.ಸಿ.ರಾಮಮೂರ್ತಿ ರೋಡ್ ಶೋ ನಡೆಸಿ ಮತ ನೀಡುವಂತೆ ಮನವಿ ಮಾಡಿದರು.
ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಅವರು ಎಂಟು ವಿಧಾನಸಭೆ ಕ್ಷೇತ್ರಗಳ ವ್ಯಾಪ್ತಿಯ ಬಿಜೆಪಿ ಪಾಲಿಕೆ ಸದಸ್ಯರ ಜತೆ ರೋಡ್ ಶೋ ನಡೆಸಿ ಮತಯಾಚನೆ ಮಾಡಿದರು.
ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟ ಅಭ್ಯರ್ಥಿ ಡಿ.ಕೆ.ಸುರೇಶ್ ಅವರ ಪರ ರಾಜರಾಜೇಶ್ವರಿ ನಗರದ ಶಾಸಕ ಮುನಿರತ್ನ, ಆನೇಕಲ್ ಶಾಸಕ ಶಿವಣ್ಣ, ಬೆಂಗಳೂರು ದಕ್ಷಿಣ ಕ್ಷೇತ್ರದ ಕಾಂಗ್ರೆಸ್ -ಜೆಡಿಎಸ್ ನಾಯಕರು ಬಿರುಸಿನ ಪ್ರಚಾರ ನಡೆಸಿದರು.
ಇದೇ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅಶ್ವಥ್‌ನಾರಾಯಣ ಪರ ಬೆಂಗಳೂರು ದಕ್ಷಿಣ ಶಾಸಕ ಎಂ.ಕೃಷ್ಣಪ್ಪ ಸೇರಿದಂತೆ ಬಿಜೆಪಿ ನಾಯಕರು ರಾಜರಾಜೇಶ್ವರಿನಗರ, ಆನೇಕಲ್, ಬೆಂಗಳೂರು ದಕ್ಷಿಣ ಕ್ಷೇತ್ರಗಳಲ್ಲಿ ಪ್ರಚಾರ ನಡೆಸಿದರು.
ಬೆಂಗಳೂರು ಕೇಂದ್ರ: ಬೆಂಗಳೂರು ಕೇಂದ್ರ ಲೋಕಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿ ರಿಜ್ವಾನ್ ಅರ್ಷದ್ ಪರ ಕೆಪಿಸಿಸಿ ಅಧ್ಯಕ್ಷ ದಿನೇಶ್‌ಗುಂಡೂರಾವ್ ಗಾಂಧಿನಗರ ಕ್ಷೇತ್ರದಲ್ಲಿ ರೋಡ್ ಶೋ ನಡೆಸಿ ಮತಯಾಚನೆ ಮಾಡಿದರು.
ಇದೇ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪಿ.ಸಿ.ಮೋಹನ್ ಅವರು ಪಾಲಿಕೆ ಸದಸ್ಯರ ಜತೆಗೂಡಿ ಶಿವಾಜಿನಗರ, ಚಾಮರಾಜಪೇಟೆ, ಶಾಂತಿನಗರ, ಸರ್ವಜ್ಞನಗರದಲ್ಲಿ ಪಾದಯಾತ್ರೆ ನಡೆಸಿ ಪ್ರಧಾನಿ ನರೇಂದ್ರಮೋದಿಯವರನ್ನು ಮತ್ತೂಮ್ಮೆ ಪ್ರಧಾನಿ ಮಾಡಲು ಮತ ನೀಡುವಂತೆ ಮನವಿ ಮಾಡಿದರು.
ಬೆಂಗಳೂರು ಉತ್ತರ: ಬೆಂಗಳೂರು ಉತ್ತರ ಲೋಕಸಭೆ ಕ್ಷೇತ್ರದ ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿ ಕೃಷ್ಣ ಬೈರೇಗೌಡ ಅವರು ಕೆ.ಆರ್.ಪುರಂ ಶಾಸಕ ಬೈರತಿ ಬಸವರಾಜ್ ಜತೆಗೂಡಿ ರಾಮಮೂರ್ತಿ ನಗರ ವಾರ್ಡ್‌ನ ಕೌದೇನಹಳ್ಳಿ, ಶಾಂತಿ ಲೇಔಟ್, ಅಂಬೇಡ್ಕರ್‌ನಗರ, ಸರ್ ಎಂ.ವಿ ಬಡಾವಣೆ ಸೇರಿ ಹರಾಮಮೂರ್ತಿನಗರ ವಾರ್ಡ್‌ನ ಕೌದೇನಹಳ್ಳಿ, ಶಾಂತಿ ಲೇಔಟ್, ಅಂಬೇಡ್ಕರ್‌ನಗರ, ಸರ್ ಎಂ.ವಿ ಬಡಾವಣೆ ಸೇರಿ ಹಸುತ್ತಮುತ್ತಲ ಪ್ರದೇಶಗಳಲ್ಲಿ ಪಾದಯಾತ್ರೆ ಮೂಲಕ ಮತಯಾಚನೆ ಮಾಡಿದರು.
ಬೆಂಗಳೂರು ಉತ್ತರ ಕ್ಷೇತ್ರದ ಅಭಿವೃದ್ಧಿಗೆ ನನ್ನದೇ ಆದ ಕನಸು ಕಂಡಿದ್ದು, ಬೆಂಬಲ ನೀಡಿ ಎಂದು ಕೃಷ್ಣ ಬೈರೇಗೌಡರು ಮನವಿ ಮಾಡಿದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮುನೇಗೌಡ, ಕೃಷ್ಣಮೂರ್ತಿ, ಇಟಾಚಿ ಮಂಜುನಾಥ್, ಕೆ.ಸಿ.ಬೀರಪ್ಪ ಜತೆಯಲ್ಲಿದ್ದರು.
ಇದೇ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಿ.ವಿ.ಸದಾನಂದಗೌಡರು, ಯಶವಂತಪುರ, ಬ್ಯಾಟರಾಯನಪುರ ವಿಧಾನಸಭೆ ಕ್ಷೇತ್ರದ ಹಲವೆಡೆ ನಟ ಜಗ್ಗೇಶ್, ಸ್ಥಳೀಯ ಬಿಜೆಪಿ ಪಾಲಿಕೆ ಸದಸ್ಯರು ಹಾಗೂ ಮುಖಂಡರ ಜತೆಗೂಡಿ ರೋಡ್ ಶೋ ನಡೆಸಿ ಮತಯಾಚನೆ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Naxals Surrender: ಮುಖ್ಯಮಂತ್ರಿ ಸಮ್ಮುಖ ಶಸ್ತ್ರಾಸ್ತ್ರ ತ್ಯಜಿಸಿ ಶರಣಾದ 6 ನಕ್ಸಲರು
Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ
Atul Subhash Case: ಮೊಮ್ಮಗನನ್ನು ಟೆಕಿ ಅತುಲ್ ತಾಯಿಯ ಸುಪರ್ದಿಗೆ ವಹಿಸಲು ಸುಪ್ರೀಂ ನಕಾರ
illegal Investigation: ಬಿಬಿಎಂಪಿ ಮುಖ್ಯ ಎಂಜಿನಿಯರ್ ಕಚೇರಿ ಮೇಲೆ ಇ.ಡಿ. ದಾಳಿ
Sangeetha Mobiles: ಜಯನಗರದಲ್ಲಿ ಸಂಗೀತಾ ಗ್ಯಾಜೆಟ್ಸ್ ನೂತನ ಮಳಿಗೆ ಲೋಕಾರ್ಪಣೆ
MUST WATCH
ಹೊಸ ಸೇರ್ಪಡೆ
Review Meeting: ಉನ್ನತ ಶಿಕ್ಷಣಕ್ಕೆ ಬೋಧಕರ ಕೊರತೆ: ಸಿಎಂ ಸಿದ್ದರಾಮಯ್ಯ ಗರಂ
ನಕ್ಸಲರನ್ನು ಅಮಿತ್ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು
Naxal Package: “ಮೊದಲೇ ಪ್ಯಾಕೇಜ್ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ
Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!
Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.