ಕೊನೆಗೂ ಲಿಷಾಗೆ ಸಿಗಲಿದೆ ಸರಕಾರಿ ಉದ್ಯೋಗ
Team Udayavani, Jun 23, 2017, 12:55 AM IST
ಬೆಂಗಳೂರು: ಮಲ್ಲೇಶ್ವದರ ರಾಜ್ಯ ಬಿಜೆಪಿ ಕಚೇರಿ ಬಳಿ 2013ರಲ್ಲಿ ಸಂಭವಿಸಿದ ಬಾಂಬ್ ಸ್ಫೋಟದಲ್ಲಿ ಅಂಗವಿಕಲೆಯಾಗಿದ್ದ ಲಿಷಾಗೆ ಅನುಕಂಪದ ಆಧಾರದ ಮೇಲೆ ಉದ್ಯೋಗ ಕಲ್ಪಿಸಲು ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಲಿಷಾ ಪಿಯುಸಿ ಓದುತ್ತಿದ್ದಾಗ ನಡೆದ ದುರಂತದಲ್ಲಿ ಗಂಭೀರ ಗಾಯಗೊಂಡಿದ್ದು, ಒಂದು ಕಾಲು ಮುರಿದುಹೋಗಿತ್ತು. ಚಿಕಿತ್ಸೆಗಾಗಿ ಲಕ್ಷಾಂತರ ರೂ. ವೆಚ್ಚ ಮಾಡಿದ್ದರೂ ಆಕೆಯ ಕಾಲು ಇನ್ನೂ ಪೂರ್ಣ ಸ್ವಾಧೀನಕ್ಕೆ ಬಂದಿಲ್ಲ. ಇದೀಗ ಪದವೀಧರೆಯಾಗಿರುವ ಆಕೆಗೆ ಅನುಕಂಪದ ಆಧಾರದಲ್ಲಿ ಗ್ರೂಪ್ ಸಿ ಹುದ್ದೆ ನೀಡಲು ಸಂಪುಟ ಸಭೆ ಒಪ್ಪಿಗೆ ನೀಡಿದೆ.
ಅದೇ ರೀತಿ ಕಳೆದ ಫೆಬ್ರವರಿಯಲ್ಲಿ ಅಪಘಾತದಲ್ಲಿ ಮೃತಪಟ್ಟ ಲೋಕಾಯುಕ್ತ ಎಸ್ಪಿ ಆಗಿದ್ದ ಎಸ್. ರವಿಕುಮಾರ್ ಅವರ ಪತ್ನಿ ಐ.ಎಸ್. ಅನಿತಾ ಅವರಿಗೂ ಅನುಕಂಪದ ಆಧಾರದ ಮೇಲೆ ಸರಕಾರದಲ್ಲಿ ಸಿ ಗ್ರೂಪ್ ಹುದ್ದೆ ನೀಡಲು ತೀರ್ಮಾನಿಸಲಾಗಿದೆ. ಎಂ.ಟೆಕ್ ಪದವೀಧರೆಯಾಗಿರುವ ಅನಿತಾ ಕುಟುಂಬ ಈಗಲೂ ಗುಡಿಸಲಿನಲ್ಲಿ ವಾಸವಾಗಿದೆ ಎಂದು ಸಚಿವ ಜಯಚಂದ್ರ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ
Shimoga; ನಮ್ಮ ನಾಯಕರು ಗಮನ ಹರಿಸಲಿ: ಕುಮಾರ್ ಬಂಗಾರಪ್ಪ ಹೇಳಿಕೆಗೆ ರಾಘವೇಂದ್ರ ತಿರುಗೇಟು
Child marriage: 3 ವರ್ಷದಲ್ಲಿ ರಾಜ್ಯಾದ್ಯಂತ 1,465 ಬಾಲ್ಯ ವಿವಾಹ ಪತ್ತೆ
Drone Prathap: ನೀರಿಗೆ ಸ್ಫೋಟಕ ಎಸೆದ ಪ್ರಕರಣ; ಪ್ರತಾಪ್‌ಗೆ 10 ದಿನ ನ್ಯಾಯಾಂಗ ಬಂಧನ
Sagara: ಜೋಗ ಜಲಪಾತ ಪ್ರವೇಶಕ್ಕೆ ಮೂರು ತಿಂಗಳುಗಳ ಕಾಲ ನಿರ್ಬಂಧ
MUST WATCH
ಹೊಸ ಸೇರ್ಪಡೆ
ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ
Stock Market: ಷೇರುಪೇಟೆ ಸೂಚ್ಯಂಕ 400ಕ್ಕೂ ಅಧಿಕ ಅಂಕ ಕುಸಿತ, ನಿಫ್ಟಿಯೂ ಇಳಿಕೆ
Shimoga; ನಮ್ಮ ನಾಯಕರು ಗಮನ ಹರಿಸಲಿ: ಕುಮಾರ್ ಬಂಗಾರಪ್ಪ ಹೇಳಿಕೆಗೆ ರಾಘವೇಂದ್ರ ತಿರುಗೇಟು
Child marriage: 3 ವರ್ಷದಲ್ಲಿ ರಾಜ್ಯಾದ್ಯಂತ 1,465 ಬಾಲ್ಯ ವಿವಾಹ ಪತ್ತೆ
Mangaluru: ಸಿಟಿ ಸೆಂಟರ್ ಬಳಿ ಹೊತ್ತಿ ಉರಿದ ಕಾರು… ಮಹಿಳೆ ಪಾರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.