ಮನೆ ನಿರ್ಮಿಸಲು ಹಣಕಾಸು ನೆರವು
Team Udayavani, Dec 2, 2018, 11:55 AM IST
ಮಂಗಳೂರು: ದೇಶದ ಪ್ರತಿಷ್ಠಿತ ಚಿನ್ನಾಭರಣ ಮಾರಾಟ ಮಳಿಗೆ, ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ತನ್ನ ಸಾಂಸ್ಥಿಕ ಮತ್ತು ಸಾಮಾಜಿಕ ಹೊಣೆಗಾರಿಕೆಯಡಿಯಲ್ಲಿ ವಸತಿ ರಹಿತರಿಗೆ ಮನೆ ನಿರ್ಮಾಣಕ್ಕಾಗಿ ಹಣಕಾಸು ನೆರವನ್ನು ನೀಡಿದೆ. ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್‌ನ ಮಂಗಳೂರು ಮಳಿಗೆಯಲ್ಲಿ ಶನಿವಾರ ನಡೆದ ಕಾರ್ಯಕ್ರಮದಲ್ಲಿ 45 ಫಲಾನುಭವಿಗಳಿಗೆ ಹಣಕಾಸು ನೆರವನ್ನು ನೀಡಲಾಯಿತು.
ನಗರಾಭಿವೃದ್ಧಿ ಮತ್ತು ವಸತಿ ಸಚಿವ ಯು.ಟಿ. ಖಾದರ್, ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್, ಮಂಗಳೂರು ಮಹಾನಗರ ಪಾಲಿಕೆ ಮೇಯರ್ ಭಾಸ್ಕರ್ ಕೆ., ಮಂಗಳೂರು ಪಾಲಿಕೆಯ ನಗರ ಯೋಜನೆ ಮತ್ತು ಅಭಿವೃದ್ಧಿ ಸ್ಥಾಯೀ ಸಮಿತಿ ಅಧ್ಯಕ್ಷ ಪ್ರವೀಣ್ ಚಂದ್ರ ಆಳ್ವ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಜಿಲ್ಲಾ ಪಂಚಾಯತ್ ಸದಸ್ಯ ಶಾಹುಲ್ ಹಮೀದ್,
ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್‌ನ ನಿರ್ದೇಶಕರಾದ ಕರುಣಾಕರನ್, ಮಳಿಗೆಯ ಸ್ಟೋರ್ ಮುಖ್ಯಸ್ಥರಾದ ಶರತ್ ಚಂದ್ರನ್, ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್‌ನ ಉಡುಪಿ ಮಳಿಗೆಯ ಸ್ಟೋರ್ ಮುಖ್ಯಸ್ಥರಾದ ಹಫೀಜ್ ರೆಹಮಾನ್ ಉಪಸ್ಥಿತರಿದ್ದರು. ಕಳೆದ ಎರಡು ದಶಕಗಳಿಂದೀಚೆಗೆ ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಸಾಮಾಜಿಕ ಸೇವಾ ಚಟುವಟಿಕೆಗಳಲ್ಲಿ ತೊಡಗಿಕೊಂಡಿದ್ದು ಸಮಾಜದ ಅಶಕ್ತರಿಗೆ ನೆರವು ನೀಡುತ್ತಾ ಬಂದಿದೆ.
ಅನಾರೋಗ್ಯ ಪೀಡಿತ ಬಡವರಿಗೆ ಉಚಿತ ಔಷಧ, ಆಶ್ರಯ ರಹಿತರಿಗೆ ಮನೆ ನಿರ್ಮಾಣಕ್ಕೆ ಹಣಕಾಸು ನೆರವು, ಮಹಿಳಾ ಸಶಕ್ತೀಕರಣ ಕಾರ್ಯಕ್ರಮಗಳು, ವಿದ್ಯಾರ್ಥಿನಿಯರಿಗೆ ಸ್ಕಾಲರ್‌ಶಿಪ್, ಪರಿಸರ ಸಂರಕ್ಷಣೆಯಂಥ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದೆ.
ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ತನ್ನ ವಾರ್ಷಿಕ ಲಾಭಾಂಶದಲ್ಲಿ ಶೇ. 5ರಷ್ಟು ಮೊತ್ತವನ್ನು ಸಮಾಜಸೇವಾ ಚಟುವಟಿಕೆಗಳಿಗಾಗಿ ವ್ಯಯಿಸುತ್ತಿದ್ದು ಕಂಪೆನಿಯ ಹೌಸಿಂಗ್ ಚಾರಿಟೇಬಲ್ ಟ್ರಸ್ಟ್ ಈಗಾಗಲೇ 11,000 ಮನೆಗಳ ನಿರ್ಮಾಣಕ್ಕೆ ಹಣಕಾಸು ನೆರವನ್ನು ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ
Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು
Davanagere: ವಿಪಕ್ಷಗಳು ಆಧಾರವಿಲ್ಲದೆ ಆರೋಪ ಮಾಡಬಾರದು: ಸಿಎಂ ಸಿದ್ದರಾಮಯ್ಯ
Davanagere: ಯುವಜನೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ
Private Bus fare: ಶೀಘ್ರದಲ್ಲೇ ಖಾಸಗಿ ಬಸ್ ಪ್ರಯಾಣ ದರವೂ ಏರಿಕೆ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.