ನಕಲಿ ಐಡಿ ಬಳಸಿ ಕೋಟ್ಯಂತರ ರೂ. ವಂಚನೆ..!
Team Udayavani, Dec 16, 2021, 9:54 AM IST
ಬೆಂಗಳೂರು: ಸಚಿವಾಲಯದ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ವಿಶೇಷ ಅಧಿಕಾರಿ ಎಂದು ಹೇಳಿಕೊಂಡು ಐಎಎಸ್, ಐಪಿಎಸ್, ಕೆಎಎಸ್ ಸೇರಿದಂತೆ ವಿವಿಧ ಅಧಿಕಾರಿಗಳ ವರ್ಗಾವಣೆ ಜೊತೆಗೆ ಸರ್ಕಾರಿ ಕೆಲಸ ಮಾಡಿಸಿಕೊಡುವುದಾಗಿ ಹೇಳಿ ಸಾರ್ವಜನಿಕರಿಂದ ಕೋಟ್ಯಂತರ ರೂಪಾಯಿ ವಸೂಲಿ ಮಾಡಿ ವಂಚಿಸಿದ್ದ ಅಸಾಮಿಯೊಬ್ಬ ಪೊಲೀಸರ ಬಲೆಗೆ ಬಿದ್ದಿದ್ದಾನೆ.
ಸಿಸಿಬಿ ವಿಭಾಗದ ಪೊಲೀಸ್ ಇನ್ಸ್‌ಪೆಕ್ಟರ್ ಭರತ್ ನೀಡಿದ ದೂರಿನ ಮೇರೆಗೆ ಸರ್ಕಾರದ ನಕಲಿ ವಿಶೇಷ ಅಧಿಕಾರಿ ಆರ್.ಆರ್ .ನಗರದ ಬಿಇಎಂಎಲ್ ಲೇಔಟ್ ನಿವಾಸಿ ಉದಯ ಪ್ರಭು (34) ಎಂಬಾತನನ್ನು ಕೆಂಗೇರಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆರೋಪಿಯಿಂದ1.20 ಲಕ್ಷ ರೂ. ನಗದು,1 ಲ್ಯಾಪ್‌ಟಾಪ್ 4 ಐ-ಫೋನ್, ನಕಲಿ ಗುರುತಿನ ಚೀಟಿ, 1 ಇನೋವಾ ಕಾರು,1 ಜಾಗ್ವಾರ್‌ಕಾರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಇದನ್ನೂ ಓದಿ;- ಪುಲ್ವಾಮಾ ಎನ್‌ಕೌಂಟರ್: ಹಿಜ್ಬುಲ್ ಮುಜಾಹಿದ್ದೀನ್ ಭಯೋತ್ಪಾದಕನ ಹತ್ಯೆಗೈದ ಸೇನೆ
ಆರೋಪಿಯು ಚಿಕ್ಕಬಳ್ಳಾಪುರ ಮೂಲದ ಮೈಲಸಂದ್ರದಿಂದ ಬಂದು ಆರ್.ಆರ್. ನಗರದ ಬಿಇಎಂಎಲ್ ಲೇಔಟ್‌ನ 7ನೇ ಹಂತದ ವಾಟರ್ ಟ್ಯಾಂಕ್ ಬಳಿ ವಾಸವಿದ್ದ. ಜೀವನ ನಿರ್ವಹಣೆಗಾಗಿ ಉದಯ್ ಪ್ರಭು ಕಾಟನ್‌ಪೇಟೆಯಲ್ಲಿ ಬಾಳೆಕಾಯಿ ಮಂಡಿ ನಡೆಸುತ್ತಿದ್ದ. ಹಲವು ಇಲಾಖೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ನೌಕರರಿಗೆ ವರ್ಗಾವಣೆ ಮಾಡಿಸಿ ಕೊಡುವುದಾಗಿ ನಂಬಿಸುತ್ತಿದ್ದ.
ಐಎಎಸ್, ಐಪಿಎಸ್, ಕೆಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿಸಿಕೊಡುವುದು ಹಾಗೂ ಆಯಕಟ್ಟಿನ ಸ್ಥಳದಲ್ಲಿ ಉತ್ತಮ ಸ್ಥಾನ ಕೊಡಿಸುವುದಾಗಿ ವಂಚಿಸುತ್ತಿದ್ದ. ಅಲ್ಲದೇ, ಸರ್ಕಾರದ ಕೆಲಸ ಕೊಡಿಸುವುದಾಗಿ ಮತ್ತು ಸರ್ಕಾರದ ಕೆಲಸ ಮಾಡಿಸಿಕೊಡಿಸುವುದಾಗಿ ನಂಬಿಸಿ ಕೋಟ್ಯಂತರ ರೂ. ವಂಚಿಸಿದ್ದಾನೆ ಎಂದು ತಿಳಿದು ಬಂದಿದೆ.
ಸರ್ಕಾರದ ಫಲಕವಿರುವ ಕಾರು ಬಳಕೆ: ಜನರನ್ನು ವಂಚಿಸಲೆಂದೇ ಬಿಳಿ ಇನ್ನೋವಾ ಕಾರಿಗೆ ಕನ್ನಡ ಮತ್ತು ಇಂಗ್ಲಿಷ್ ಭಾಷೆಯಲ್ಲಿ “ಕರ್ನಾಟಕ ಸರ್ಕಾರ’ ಎಂದು ಫಲಕ ಮತ್ತು ಲಾಂಛನ ಹಾಕಿಕೊಂಡು ಓಡಾಡುತ್ತಿದ್ದ. ಅಧಿಕಾರಿಗಳನ್ನು ನಂಬಿಸಲು ತಾನು ಸರ್ಕಾರದ ವಿಶೇಷ ಅಧಧಿಕಾರಿ ಎಂಬ ನಕಲಿ ಗುರುತಿನ ಚೀಟಿ ತೋರಿಸಿ ವಂಚಿಸುತ್ತಿದ್ದ. ಸಿಸಿಬಿ ಪೊಲೀಸರು ಉದಯ್ ಪ್ರಭುನನ್ನು ವಶಕ್ಕೆ ಪಡೆದಿದ್ದರು.
ವಿಚಾರಣೆ ವೇಳೆ ಮಾಜಿ ಸಿಎಂ ಒಬ್ಬರ ತಂಗಿ ಮಗನ ಸ್ನೇಹಿತ ಎಂದು ಸುಳ್ಳು ಹೇಳಿ ಪ್ರಕರಣದಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದ ಎಂದು ಹೇಳಲಾಗಿದೆ. ಆರೋಪಿ ಉದಯ್ ಪ್ರಭು ಸಿಸಿಬಿ ಇನ್ಸ್‌ಪೆಕ್ಟರ್‌ವೊಬ್ಬರನ್ನು ವರ್ಗಾವಣೆ ಮಾಡಿಸುವುದಾಗಿ ವಂಚಿಸಿದ್ದ ಎನ್ನಲಾಗಿದೆ.
ಬಲೆಗೆ ಬಿದ್ದದ್ದು ಹೇಗೆ?
ಆರೋಪಿ ಸಾರ್ವಜನಿಕರಿಗೆ ವಂಚಿಸುತ್ತಿರುವ ಬಗ್ಗೆ ತಿಳಿದಿದ್ದ ಸಿಸಿಬಿ ಇನ್ಸ್‌ಪೆಕ್ಟರ್, ತನ್ನ ನೇತೃತ್ವದ ತಂಡದೊಂದಿಗೆ ಡಿ.14ರಂದು ಉದಯ್ ಪ್ರಭು ಮನೆಗೆ ತೆರಳಿ ಪರಿಶೀಲಿಸಿದ್ದರು. ಆ ವೇಳೆ ತನ್ನ ಇನ್ನೋವಾ ಕಾರಿನಲ್ಲಿಕರ್ನಾಟಕ ಸರ್ಕಾರ ಎಂದುಕನ್ನಡ ಹಾಗೂ ಇಂಗ್ಲಿಷ್ ಭಾಷೆಯಲ್ಲಿ ಬರೆದಿರುವುದುಕಂಡು ಬಂದಿತ್ತು.
ಈ ಬಗ್ಗೆ ವಿಚಾರಿಸಿದಾಗ ಇದು ತನ್ನ ಸ್ವಂತ ವಾಹನವಾಗಿದ್ದು, ಪತ್ನಿ ಹೆಸರಿನಲ್ಲಿ ಇರುವುದಾಗಿ ಹೇಳಿದ್ದ. ಆತನ ಬಳಿಯಿದ್ದ ನಕಲಿ ಗುರುತಿನ ಚೀಟಿಯನ್ನು ತೋರಿಸಿ, ತಾನು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ವಿಶೇಷ ಅಧಿಕಾರಿ ಎಂದು ಹೇಳಿದ್ದ. ಇದಕ್ಕೆ ಸಂಬಂಧಿಸಿದ ದಾಖಲೆಗಳನ್ನು ಪೊಲೀಸರುಕೇಳಿದಾಗ ಸರಿಯಾಗಿ ಉತ್ತರಿಸಿಲ್ಲ. ಅದಕ್ಕೆ ಆತನನ್ನು ವಶಕ್ಕೆ ಪಡೆಯಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf: ರೈತರಿಗೆ ನೀಡಿರುವ ನೋಟಿಸ್ ತಕ್ಷಣ ವಾಪಸ್: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ
Kannada Rajyotsava: ಪಾಲಿಕೆ ಆಡಳಿತದಲ್ಲಿ ಸಂಪೂರ್ಣ ಕನ್ನಡ: ತುಷಾರ್
Bengaluru: ಅಕ್ರಮವಾಗಿ ಪಟಾಕಿ ಮಾರಾಟ; 2 ದಿನಗಳಲ್ಲಿ 56 ಕೇಸು ದಾಖಲು
Deepavali: ಐಟಿ ಸಿಟಿಯಲ್ಲಿ ಬೆಳಕಿನ ಹಬ್ಬದ ರಂಗು
Bengaluru: ಬ್ಯಾಗ್ ಪರಿಶೀಲನೆ ವೇಳೆ ವಿಮಾನ ನಿಲ್ದಾಣ ಸಿಬ್ಬಂದಿಗೆ ಬೆದರಿಕೆ: ಕೇಸ್
MUST WATCH
ಹೊಸ ಸೇರ್ಪಡೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು
Sparks Row; ಉಗ್ರರನ್ನು ಹ*ತ್ಯೆ ಮಾಡಬಾರದು…: ಫಾರೂಕ್ ಅಬ್ದುಲ್ಲಾ ಹೇಳಿಕೆ
Shivaji Satam: ಕ್ಯಾಷಿಯರ್ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?
INDIA bloc; ಜಾರ್ಖಂಡ್ ಸೀಟು ಹಂಚಿಕೆ ಒಪ್ಪಂದ ಅಂತಿಮ: ಜೆಎಂಎಂಗೆ 43 ಸ್ಥಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.