ಮಾಸ್ಕ್ ಧರಿಸದಿದ್ದರೆ ದಂಡ ಪ್ರಯೋಗ

Team Udayavani, May 1, 2020, 10:44 AM IST

ಮಾಸ್ಕ್ ಧರಿಸದಿದ್ದರೆ ದಂಡ ಪ್ರಯೋಗ

ಬೆಂಗಳೂರು: ಮುಖಗವಸು ಕಡ್ಡಾಯ ಗೊಳಿಸಿದರೂ ಸರಿಯಾಗಿ ಪಾಲಿಸದ ಹಿನ್ನೆಲೆಯಲ್ಲಿ ಬಿಬಿಎಂಪಿ ಭಾರಿ “ದಂಡ ಪ್ರಯೋಗ’ಕ್ಕೆ ನಿರ್ಧರಿಸಿದ್ದು, ಕನಿಷ್ಠ ಸಾವಿರದಿಂದ ಗರಿಷ್ಠ 2 ಸಾವಿರ ರೂ.ವರೆಗೆ ದಂಡ ಬೀಳಲಿದೆ. ಹೆಚ್ಚುತ್ತಿರುವ ಸೋಂಕು ತಡೆಗೆ ಪಾಲಿಕೆ ಈ ಕ್ರಮಕ್ಕೆ ಮುಂದಾಗಿದ್ದು, ಸಾರ್ವಜನಿಕ ಸ್ಥಳಗಳಲ್ಲಿ ಮುಖಗವಸು (ಮಾಸ್ಕ್) ಧರಿಸದೆ ಓಡಾಡುವವರ ವಿರುದ್ಧ ಸಾವಿರ ರೂ. ದಂಡ ವಿಧಿಸಲಾಗುವುದು. ಅದೇ ವ್ಯಕ್ತಿಯಿಂದ ಸತತ ಎರಡನೇ ಬಾರಿಯೂ ಈ ತಪ್ಪು ಪುನರಾವರ್ತನೆಯಾದರೆ, ಎರಡು ಸಾವಿರ ರೂ. ವಿಧಿಸಲಾಗುವುದು. ಮೂರನೇ ಬಾರಿಗೆ ಶಿಕ್ಷೆ ವಿಧಿಸುವ ಬಗ್ಗೆಯೂ ಉದ್ದೇಶಿಸಲಾಗಿದೆ.

ಶುಕ್ರವಾರದಿಂದ ಈ ನಿಯಮ ಜಾರಿಗೆ ಬರಲಿದ್ದು, ಈ ಸಂಬಂಧ ಅಧಿಕೃತ ಆದೇಶ ಹೊರಬೀಳುವ ಸಾಧ್ಯತೆ ಇದೆ. ನಿಯಮ ಪಾಲನೆ ಹಾಗೂ ತಪ್ಪಿತಸ್ಥರ ಮೇಲೆ ದಂಡ ಪ್ರಯೋಗಕ್ಕೆ ಈಗಾ ಗಲೇ ಪಾಲಿಕೆ ವ್ಯಾಪ್ತಿಯಲ್ಲಿರುವ ಮಾರ್ಷಲ್‌ಗ‌ಳನ್ನು ಬಳಸಿಕೊಳ್ಳಲು ನಿರ್ಧರಿಸಲಾಗಿದೆ ಎಂದು ಪಾಲಿಕೆ ಅಧಿಕಾರಿಗಳು ತಿಳಿಸಿದ್ದಾರೆ. ಪಾಲಿಕೆ ಆದೇಶದ ಬೆನ್ನಲ್ಲೇ ಶುಕ್ರವಾರದಿಂದ ಮಾಸ್ಕ್ಗಳಿಗೆ ಮತ್ತಷ್ಟು ಬೇಡಿಕೆ ಬರುವ ಸಾಧ್ಯತೆ ಇದೆ. ಈಗಾಗಲೇ ಕೆಲವೆಡೆ ಕೊರತೆ ಇರುವುದರಿಂದ ಸಹಜವಾಗಿ ಹೆಚ್ಚಿನ ಬೆಲೆಗೆ ಖರೀದಿಸಬೇಕಾಗುತ್ತದೆ. ಇನ್ನು ಮಾಸ್ಕ್ ಹೊಂದಿರುವವರು ಕಡ್ಡಾಯವಾಗಿ ಧರಿಸಿ ಹೊರಬೀಳಬೇಕಾಗುತ್ತದೆ. ಕಂಟೈನ್ಮೆಂಟ್‌ ವಲಯಗಳ ನಡುವೆಯೂ ದಿನದಿಂದ ದಿನಕ್ಕೆ ಸೋಂಕು ಪ್ರಕರಣಗಳು ಹೆಚ್ಚುತ್ತಿದೆ. ಸಾರ್ವಜನಿಕ ಸ್ಥಳ ಗಳಲ್ಲಿ ಮಾಸ್ಕ್ ಧರಿಸದವರ ವಿರುದ್ಧ ಭಾರಿ ಪ್ರಮಾಣದ ದಂಡಕ್ಕೆ ಬಿಬಿಎಂಪಿ ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ.

ಅಸಮರ್ಪಕ ವಿಲೇವಾರಿಗೂ ದಂಡ?: ಅಷ್ಟೇ ಅಲ್ಲ, ಮಾಸ್ಕ್ಗಳ ಸಮರ್ಪಕ ವಿಲೇವಾರಿ ಮಾಡದಿದ್ದರೂ ದಂಡ ವಿಧಿಸಲು ಪಾಲಿಕೆ ಮುಂದಾಗಿದೆ. ಮಾಸ್ಕ್ ಬಳಸಿದ ನಂತರ ಅದನ್ನು ಇತರೆ ತ್ಯಾಜ್ಯದೊಂದಿಗೆ ವಿಲೇವಾರಿ ಮಾಡುತ್ತಿರುವುದು ಕಂಡು ಬರುತ್ತಿದೆ. ಇದರಿಂದಲೂ ಸೋಂಕು ಹರಡುವ ಸಾಧ್ಯತೆ ಇರುತ್ತದೆ. ಈ ಹಿನ್ನೆಲೆಯಲ್ಲಿ ದಂಡ ವಿಧಿಸಲು ಚಿಂತನೆ ನಡೆದಿದೆ.

ಟಾಪ್ ನ್ಯೂಸ್

Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ

Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್.. ವಿಡಿಯೋದಲ್ಲಿ ಸುಳಿವು

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

BGV-Gruhalkmi

Belagavi: ಮಹಿಳೆಯರ ಸಬಲರಾಗಿಸುವ ಗೃಹಲಕ್ಷ್ಮಿ ಯೋಜನೆ ನಿಲ್ಲಿಸುವ ಮಾತೇ ಇಲ್ಲ: ಸಿದ್ದರಾಮಯ್ಯ

Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ

Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಹಸುಗೂಸನ್ನೂ ಕೊಲ್ಲಲು ಯತ್ಲಿಸಿದ ತಂದೆಯ ಹತ್ಯೆ

Bengaluru: ಹಸುಗೂಸನ್ನೂ ಕೊಲ್ಲಲು ಯತ್ಲಿಸಿದ ತಂದೆಯ ಹತ್ಯೆ

4

Arrested: ದುಬೈ ಸೈಬರ್‌ ವಂಚಕರಿಗೆ ನೆರವು: 10 ಮಂದಿ ಸೆರೆ

Bengaluru: ಪೊಲೀಸರಿಂದ ಅಪ್ರಾಪ್ತೆಯ ಫೋಟೋ ಕೇಸ್‌: ನೋಟಿಸ್‌

Bengaluru: ಪೊಲೀಸರಿಂದ ಅಪ್ರಾಪ್ತೆಯ ಫೋಟೋ ಕೇಸ್‌: ನೋಟಿಸ್‌

Bengaluru: ಪೊಲೀಸರ ಬೇಟೆ; 26 ಕೋಟಿ ರೂ. ಮಾದಕ ವಸ್ತು ವಶ

Bengaluru: ಪೊಲೀಸರ ಬೇಟೆ; 26 ಕೋಟಿ ರೂ. ಮಾದಕ ವಸ್ತು ವಶ

Bengaluru: ಟೆಕಿ ಅತುಲ್‌ನಂತೆ ಪತ್ನಿ ಕಿರುಕುಳ ತಾಳದೆ ಕಾರ್ಮಿಕ ಆತ್ಮಹತ್ಯೆ

Bengaluru: ಟೆಕಿ ಅತುಲ್‌ನಂತೆ ಪತ್ನಿ ಕಿರುಕುಳ ತಾಳದೆ ಕಾರ್ಮಿಕ ಆತ್ಮಹತ್ಯೆ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

byndoor

Udupi: ಸ್ಕೂಟರ್‌ ಢಿಕ್ಕಿ; ಪಾದಚಾರಿಗೆ ಗಾಯ

Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ

Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ

crimebb

Kasaragod ಅಪರಾಧ ಸುದ್ದಿಗಳು; ತಂಬಾಕು ಉತ್ಪನ್ನಗಳ ಸಹಿತ ಇಬ್ಬರ ಬಂಧನ

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್.. ವಿಡಿಯೋದಲ್ಲಿ ಸುಳಿವು

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು

hejjenu 1

Kundapura: ಹೆಜ್ಜೇನು ದಾಳಿ; ವ್ಯಕ್ತಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.