ನಟಿ ಶ್ರುತಿ ಹರಿಹರನ್ ವಿರುದ್ಧ ಎಫ್ಐಆರ್
Team Udayavani, Oct 26, 2018, 12:30 PM IST
ಬೆಂಗಳೂರು: ನಟ ಅರ್ಜುನ್ ಸರ್ಜಾ ಅವರ ವೈಯಕ್ತಿಕ ಮಾಹಿತಿ ಬಳಸಿ ಫೇಸ್ಬುಕ್ ಸೇರಿ ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆಗಳನ್ನು ತೆರೆದು ಅವಹೇಳನಕಾರಿ ಪೋಸ್ಟ್ಗಳನ್ನು ಪ್ರಕಟಿಸಿದ್ದಾರೆ ಎಂಬ ಆರೋಪ ಸಂಬಂಧ ನಟಿ ಶ್ರುತಿಹರಿಹರನ್ ವಿರುದ್ಧ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಗುರುವಾರ ಎಫ್ಐಆರ್ ದಾಖಲಾಗಿದೆ.
ಈ ಕುರಿತು ಶ್ರೀರಾಂ ಫಿಲಂ ಇಂಟರ್ನ್ಯಾಶನಲ್ ಸಂಸ್ಥೆಯ ಶಿವ ಅರ್ಜುನ್ ಸರ್ಜಾ ಅವರು ನೀಡಿದ ದೂರಿನ ಅನ್ವಯ ಶ್ರುತಿ ಹರಿಹರನ್ ಸೇರಿ ಮತ್ತಿತರರ ವಿರುದ್ಧ ವಂಚನೆ, ಮಾನಹಾನಿ ಆರೋಪ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಶ್ರುತಿ ಹರಿಹರನ್ ಸೇರಿ ಮತ್ತಿತರರು ಒಳಸಂಚು ರೂಪಿಸಿ ಅರ್ಜುನ್ ಸರ್ಜಾ ಹಾಗೂ ಅವರ ಕುಟುಂಬದವರ ಗೌರವಕ್ಕೆ ಧಕ್ಕೆ ತಂದಿದ್ದಾರೆ. ಜತೆಗೆ, ಅಧಿಕ ಮೊತ್ತದ ಹಣ ಪಡೆಯಲು ಯತ್ನಿಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.