ಪಾಲಿಕೆಯಿಂದ ನಾಲ್ಕು ಖಾಸಗಿ ಆಸ್ಪತ್ರೆಗಳ ವಿರುದ್ಧ ಎಫ್ಐಆರ್‌?

Team Udayavani, Sep 25, 2020, 11:54 AM IST

bng-tdy-2

ಸಾಂದರ್ಭಿಕ ಚಿತ್ರ

ಬೆಂಗಳೂರು: ಕೋವಿಡ್ ಸೋಂಕಿತರ ಚಿಕಿತ್ಸೆಗೆ ಶೇ.50 ಹಾಸಿಗೆಗಳನ್ನು ಬಿಟ್ಟುಕೊಡದ ನಾಲ್ಕು ಪ್ರಮುಖ ಆಸ್ಪತ್ರೆ ಹಾಗೂ ರಾಜಾಜಿನಗರದ ಒಂದು ಆಸ್ಪತ್ರೆ ಮೇಲೆ ಎಫ್ಐಆರ್‌ ದಾಖಲಿಸಲು ಪಾಲಿಕೆ ಮುಂದಾಗಿದೆ. ಇದೇ ವೇಳೆ ರಾಜಾಜಿನಗರದ ಖಾಸಗಿ ಆಸ್ಪತ್ರೆಯೊಂದಕ್ಕೆ ಲಾಸ್ಟ್‌ ಶೋಕಾಸ್‌ ನೋಟಿಸ್‌ ಜಾರಿ ಮಾಡಿದೆ.

ನಗರದಲ್ಲಿ ಕೋವಿಡ್ ಸೋಂಕಿತರಿಗೆ ಶೇ.50ರಷ್ಟು  ಹಾಸಿಗೆಗಳನ್ನು ಬಿಟ್ಟುಕೊಡದ 36 ಖಾಸಗಿ ಆಸ್ಪತ್ರೆಗಳಿಗೆ ಕಾರಣ ಕೇಳಿ ಪಾಲಿಕೆ ಇತ್ತೀಚಿಗೆ ಕಾರಣ ಕೇಳಿ ನೋಟಿಸ್‌ ಜಾರಿ ಮಾಡಿತ್ತು. ಈ ನೋಟಿಸ್‌ಗೆ 48 ಗಂಟೆಗಳ ಒಳಗಾಗಿ ಉತ್ತರ ನೀಡುವಂತೆ ಸೂಚನೆ ನೀಡಲಾಗಿತ್ತು. ಈ ವೇಳೆ ನಾಲ್ಕು ಪ್ರಮುಖ ಆಸ್ಪತ್ರೆಗಳು ನೀಡಿರುವ ವಿವರಣೆ ಸಂಮಜಸವಾಗಿಲ್ಲ ಎಂದು ಬಿಬಿಎಂಪಿಯು ವಿಪತ್ತು ನಿರ್ವಹಣೆ ಕಾಯ್ದೆಯಡಿ ನೋಟಿಸ್‌ ಜಾರಿ ಮಾಡಿದ್ದು, ಈ ಆಸ್ಪತ್ರೆಗಳ ಮೇಲೆ ಎಫ್ಐಆರ್‌ ದಾಖಲಿಸುವಂತೆ ಬಿಬಿಎಂಪಿ ಆಯುಕ್ತ ಎನ್‌. ಮಂಜುನಾಥ್‌ ಪ್ರಸಾದ್‌ ಅವರು ಆಸ್ಪತ್ರೆ ವ್ಯಾಪ್ತಿಯ ಪೊಲೀಸ್‌ ಠಾಣೆಗಳಿಗೆ ಪತ್ರ ಬರೆದಿದ್ದಾರೆ.

ಈ ಆಸ್ಪತ್ರೆಗಳು ಸರ್ಕಾರ ಹಾಗೂ ಬಿಬಿಎಂಪಿ ಶಿಫಾರಸು ಮಾಡುವ ಸೋಂಕಿತರ ಚಿಕಿತ್ಸೆ ನೀಡುವುದಕ್ಕೆ ಪರೋಕ್ಷವಾಗಿ ನಿರಾಕರಣೆ ಮಾಡಿವೆ. ಕೆಪಿಎಂಸಿ ಪೋರ್ಟ್‌ನಲ್ಲಿ ಹಾಸಿಗೆಗಳು ಖಾಲಿ ಇವೆ ಎಂದು ನಮೂದಿಸಲಾಗಿದೆಯಾದರೂ, ಸೋಂಕಿತರನ್ನು ಸೇರಿಸುವ ವೇಳೆ ಹಾಸಿಗೆಖಾಲಿ ಇಲ್ಲ ಎಂದು ಸೋಂಕಿತರ ಚಿಕಿತ್ಸೆಗೆ ನಿರಾಕರಿಸಲಾಗಿದೆ. ಇದು ಸರ್ಕಾರಿ ಆದೇಶದ ಸ್ಪಷ್ಟ ಉಲ್ಲಂಘನೆ.ಅಲ್ಲದೆ, ಹಾಸಿಗೆಗಳನ್ನು ಸೋಂಕಿತರ ಚಿಕಿತ್ಸೆಗೆ ನೀಡದೆ ಕಾನೂನು ಉಲ್ಲಂಘನೆ ಮಾಡಲಾಗಿದೆ. ಹೀಗಾಗಿ, ಈ ಆಸ್ಪತ್ರೆಗಳ ಮುಖ್ಯಸ್ಥರ ವಿರುದ್ದ ವಿಪತ್ತು ನಿರ್ವಹಣಾ ಕಾಯ್ದೆಯಡಿ ಕಾನೂನು ಕ್ರಮ ವಹಿಸುವಂತೆ ಸೂಚನೆ ನೀಡಲಾಗಿದೆ ಎಂದು ಆಯುಕ್ತರು ಆಸ್ಪತ್ರೆಗಳಿಗೆ ಕಳುಹಿಸಲಾಗಿರುವ ನೋಟಿಸ್‌ನಲ್ಲಿ ವಿವರಣೆ ನೀಡಿದ್ದಾರೆ.

ನಗರದ 36ಖಾಸಗಿ ಆಸ್ಪತ್ರೆಗಳಿಗೆ ಶೋಕಾಸ್‌ ನೋಟಿಸ್‌ ಜಾರಿ ಮಾಡಿ ವಿವರ ನೀಡುವಂತೆ ಕೇಳಲಾಗಿತ್ತು. ಇದರಲ್ಲಿ ಹಲವು ಆಸ್ಪತ್ರೆಗಳು ಡಯಾಲಿಸಿಸ್‌, ಹೃದ್ರೋಗ ಸೇರಿದಂತೆ ವಿವಿಧಕಾರಣಗಳಿಗೆ ಹಾಸಿಗೆ ಮೀಸಲಿಟ್ಟಿರುವುದಾಗಿ ವಿವರಣೆ ನೀಡಿವೆ. ಇನ್ನುಕೆಲವು ಆಸ್ಪತ್ರೆಗಳ ವಿವರಣೆ ಸಮರ್ಪಕವಾಗಿಲ್ಲ. ಹೀಗಾಗಿ, ಎಫ್ಐಆರ್‌ ದಾಖಲಿಸಲು ಮುಂದಾಗಿದ್ದೇವೆ. ಎನ್‌. ಮಂಜುನಾಥ್‌ ಪ್ರಸಾದ್‌, ಬಿಬಿಎಂಪಿ ಆಯುಕ್ತ

ಟಾಪ್ ನ್ಯೂಸ್

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

11-elephant

Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Smart Bus Stan: ಕೋರಮಂಗಲದಲ್ಲಿ ಸ್ಮಾರ್ಟ್‌ ಬಸ್‌ ನಿಲ್ದಾಣ!

Smart Bus Stan: ಕೋರಮಂಗಲದಲ್ಲಿ ಸ್ಮಾರ್ಟ್‌ ಬಸ್‌ ನಿಲ್ದಾಣ!

Bengaluru: ಇವಿ ಬೈಕ್‌ ಶೋರೂಮ್‌ನಲ್ಲಿ ಬೆಂಕಿ ಅವಘಡ; ಮಾಲೀಕ, ಮ್ಯಾನೇಜರ್‌ ಬಂಧನ, ಬಿಡುಗಡೆ

Bengaluru: ಇವಿ ಬೈಕ್‌ ಶೋರೂಮ್‌ನಲ್ಲಿ ಬೆಂಕಿ ಅವಘಡ; ಮಾಲೀಕ, ಮ್ಯಾನೇಜರ್‌ ಬಂಧನ, ಬಿಡುಗಡೆ

Bengaluru: ನಗರದಲ್ಲಿ ನಿಷೇಧಿತ ಕಲರ್‌ ಕಾಟನ್‌ ಕ್ಯಾಂಡಿ ತಯಾರಿಕಾ ಘಟಕ ಬಂದ್‌

Bengaluru: ನಗರದಲ್ಲಿ ನಿಷೇಧಿತ ಕಲರ್‌ ಕಾಟನ್‌ ಕ್ಯಾಂಡಿ ತಯಾರಿಕಾ ಘಟಕ ಬಂದ್‌

3

Shobha Karandlaje: ಶೋಭಾ ಲೋಕಸಭಾ ಸದಸ್ಯತ್ವ ರದ್ದು ಕೋರಿ ಅರ್ಜಿ: ಡಿ.6ಕ್ಕೆ ವಿಚಾರಣೆ 

Arrested: ನಕಲಿ ದಾಖಲೆ ನೀಡಿ ಟಿಡಿಎಸ್‌ ಪಡೆಯುತ್ತಿದ್ದ ಆರೋಪಿಯ ಬಂಧಿಸಿದ ಜಾರಿ ನಿರ್ದೇಶನಾಲಯ

Arrested: ನಕಲಿ ದಾಖಲೆ ನೀಡಿ ಟಿಡಿಎಸ್‌ ಪಡೆಯುತ್ತಿದ್ದ ಆರೋಪಿಯ ಬಂಧಿಸಿದ ಜಾರಿ ನಿರ್ದೇಶನಾಲಯ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ಮಿಕ್ಸಿಂಗ್ ವಾಹನ ಪಲ್ಟಿ… ತಪ್ಪಿದ ಅನಾಹುತ

ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

12-

Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ

11-elephant

Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ

10-

Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.