ಮೂವರು ಅಧಿಕಾರಿಗಳ ವಿರುದ್ಧ ಎಫ್ಐಆರ್
Team Udayavani, Sep 18, 2018, 12:22 PM IST
ಬೆಂಗಳೂರು: ರಾಜ್ಯ ಸರ್ಕಾರದ ನಿವೃತ್ತ ಕಾರ್ಯದರ್ಶಿ ಅರವಿಂದ ಜಾಧವ್ ಅವರ ತಾಯಿ ಹೆಸರಿಗೆ ಅಕ್ರಮವಾಗಿ ಜಮೀನು ಮಂಜೂರು ಮಾಡಿಕೊಟ್ಟ ಆರೋಪ ಪ್ರಕರಣಕ್ಕೆ ಮರುಜೀವ ನೀಡಿರುವ ಭ್ರಷ್ಟಾಚಾರ ನಿಗ್ರಹ ದಳ, ಮೂವರು ಸರ್ಕಾರಿ ನೌಕರರ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡಿದೆ.
ಆನೇಕಲ್ ತಾಲೂಕಿನ ರಾಮನಾಯಕಹಳ್ಳಿ ಗ್ರಾಮದ ಸರ್ವೇ ನಂಬರ್ 29ರಲ್ಲಿರುವ 76.36 ಎಕರೆ ಸರ್ಕಾರಿ ಭೂಮಿಯಲ್ಲಿ, 8.30 ಎಕರೆ ಜಮೀನನ್ನು ಅರವಿಂದ ಜಾಧವ್ ತಾಯಿ ತಾರಾಬಾಯಿ ಮಾರುತಿರಾವ್ ಜಾಧವ್ ಅವರ ಹೆಸರಿಗೆ ಅಕ್ರಮವಾಗಿ ನೋಂದಣಿ ಮಾಡಿಕೊಡಲಾಗಿದೆ ಎಬ ಆರೋಪ ಸಂಬಂಧ ದಾಖಲಾದ ದೂರಿನ ಅನ್ವಯ, 2015ರಲ್ಲಿ ಆನೇಕಲ್ ತಾಲೂಕು ಕಚೇರಿಯ ಸರ್ವೇ ಚೆಕಿಂಗ್ ಸೂಪರ್ ವೈಸರ್ ಯೋಗಾನಂದ ಗೌಡ, ಸೂಪರ್ ವೈಸರ್ ಡಿ.ಬಿ ಗಂಗಯ್ಯ, ಸರ್ವೇಯರ್ ಅರುಣ್ ವಿರುದ್ಧ ಭ್ರಷ್ಟಾಚಾರ ನಿಗ್ರಹ ಕಾಯಿದೆ ಅನ್ವಯ ಪ್ರಕರಣ ದಾಖಲಾಗಿದೆ.
ರಾಜ್ಯಸರ್ಕಾರದ ಅಂದಿನ ಮುಖ್ಯಕಾರ್ಯದರ್ಶಿ ಅರವಿಂದ ಜಾಧವ್ ತಮ್ಮ ಅಧಿಕಾರ ದುರುಪಯೋಗ ಪಡಿಸಿಕೊಂಡು, ನಕಲಿ ದಾಖಲೆಗಳನ್ನು ಸೃಷ್ಟಿಸಿ ತಮ್ಮ ತಾಯಿ ಹೆಸರಿಗೆ ಸರ್ಕಾರಿ ಜಮೀನು ನೋಂದಣಿ ಮಾಡಿಸಿಕೊಂಡಿದ್ದಾರೆ. ಈ ಅಕ್ರಮದಲ್ಲಿ ಕಂದಾಯ ಇಲಾಖೆ ಅಧಿಕಾರಿಗಳು ಭಾಗಿಯಾಗಿದ್ದು ಈ ಕುರಿತು ತನಿಖೆ ನಡೆಸುವಂತೆ ಕೋರಿ ಆರ್ಟಿಐ ಕಾರ್ಯಕರ್ತ ಎಸ್, ಭಾಸ್ಕರನ್ 2016ರಲ್ಲಿ ಎಸಿಬಿಗೆ ದೂರು ನೀಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cold Weather: ಬೀದರ್, ವಿಜಯಪುರ ಗಡಗಡ: 5-6 ಡಿ.ಸೆ.ಗೆ ತಾಪಮಾನ ಇಳಿಕೆ?
Danger Spot-1: ಹೊಸೂರು ಮುಖ್ಯರಸ್ತೆ ಸಮೀಪ ನಡೆದಾಡುವುದೂ ಅಪಾಯಕಾರಿ!
BIFF:16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕಿಶೋರ್ ರಾಯಭಾರಿ
EV ದ್ವಿಚಕ್ರ ವಾಹನ ಮಾರಾಟ: ಏಥರ್ ಸಂಸ್ಥೆ ಪಾಲು ಶೇ.25
Aishwarya Gowda ವಿರುದ್ದ ಬಲವಂತದ ಕ್ರಮ ಬೇಡ: ಪೊಲೀಸರಿಗೆ ಕೋರ್ಟ್ ಸೂಚನೆ
MUST WATCH
ಹೊಸ ಸೇರ್ಪಡೆ
Sachin Panchal Case: ರಾಜು ಕಪನೂರ ಸೇರಿ ಐವರ ಸಿಐಡಿ ವಿಚಾರಣೆ
Podcast;ನಾನು ದೇವರಲ್ಲ,ತಪ್ಪು ಮಾಡಿದ್ದೇನೆ: ಪ್ರಧಾನಿ ಹೇಳಿಕೆ ಡ್ಯಾಮೇಜ್ ಕಂಟ್ರೋಲ್ ಎಂದ ಕೈ
SSLC-PUC Exam: ಪರೀಕ್ಷಾ ವೇಳಾಪಟ್ಟಿ ಪ್ರಕಟ: ವಿದ್ಯಾರ್ಥಿಗಳು ಗಮನಿಸಿ
INDWvsIREW: ಪ್ರತಿಕಾ ರಾವಲ್ ಭರ್ಜರಿ ಬ್ಯಾಟಿಂಗ್; ಐರ್ಲೆಂಡ್ ವಿರುದ್ದ ಸರಣಿ ಶುಭಾರಂಭ
Mega Concert: Black ಮಾರ್ಕೆಟ್ ಟಿಕೆಟ್ ಮಾರಾಟ ತಡೆಗೆ ಮಾರ್ಗಸೂಚಿ ಬೇಕು: ಪಿಐಎಲ್ ವಜಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.