ಎಫ್ಐಆರ್ ರದ್ದು: ಶಾಸಕ ಮುನಿರತ್ನ ಅರ್ಜಿ ವಜಾ
Team Udayavani, Apr 4, 2019, 3:00 AM IST
ಬೆಂಗಳೂರು: ಕಳೆದ ವಿಧಾನಸಭೆ ಚುನಾವಣೆ ವೇಳೆ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಅಪಾರ್ಟ್ಮೆಂಟ್ ಒಂದರಲ್ಲಿ ಅಕ್ರಮವಾಗಿ ಸಂಗ್ರಹಿಸಿಡಲಾಗಿತ್ತು ಎನ್ನಲಾದ ಮತದಾರರ ಗುರುತಿನ ಚೀಟಿ ಪತ್ತೆ ಪ್ರಕರಣದಲ್ಲಿ ತನ್ನ ವಿರುದ್ಧ ದಾಖಲಾಗಿರುವ ಎಫ್ಐಆರ್ ರದ್ದುಗೊಳಿಸಬೇಕು ಎಂದು ಕೋರಿ ಶಾಸಕ ಮುನಿರತ್ನ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಬುಧವಾರ ವಜಾಗೊಳಿಸಿದೆ.
ಈ ಕುರಿತ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಅರವಿಂದ್ ಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠ, ಅರ್ಜಿ ವಜಾಗೊಳಿಸಿ ಆದೇಶಿಸಿತು. ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣಾ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಕೆಯಾಗಿದೆ.
ಆದ್ದರಿಂದ ಈ ಅರ್ಜಿಯು ವಿಚಾರಣಾ ಮಾನ್ಯತೆ ಕಳೆದುಕೊಂಡಿದೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ ನ್ಯಾಯಪೀಠ, ಅರ್ಜಿ ವಜಾಗೊಳಿಸಿತು. ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಲಹಳ್ಳಿ ಪೊಲೀಸರು ಎಫ್ಐಆರ್ ದಾಖಲಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.