Bengaluru: ಅನಿಲ ಸೋರಿಕೆಯಿಂದ ಬೆಂಕಿ ಅವಘಡ; ಎಸಿ ಮೆಕ್ಯಾನಿಕ್ ದುರ್ಮರಣ
Team Udayavani, Oct 31, 2024, 3:17 PM IST
![Bengaluru: ಅನಿಲ ಸೋರಿಕೆಯಿಂದ ಬೆಂಕಿ ಅವಘಡ; ಎಸಿ ಮೆಕ್ಯಾನಿಕ್ ದುರ್ಮರಣ](https://www.udayavani.com/wp-content/uploads/2024/10/6-52-620x372.jpg)
![Bengaluru: ಅನಿಲ ಸೋರಿಕೆಯಿಂದ ಬೆಂಕಿ ಅವಘಡ; ಎಸಿ ಮೆಕ್ಯಾನಿಕ್ ದುರ್ಮರಣ](https://www.udayavani.com/wp-content/uploads/2024/10/6-52-620x372.jpg)
ಬೆಂಗಳೂರು: ಆರ್.ಟಿ. ನಗರದ ಚಾಮುಂಡಿ ಬಡಾವಣೆಯ ಮನೆಯೊಂದರಲ್ಲಿ ಸಿಲಿಂಡರ್ ಅನಿಲ ಸೋರಿಕೆಯಿಂದ ಉಂಟಾದ ಬೆಂಕಿ ಅವಘಡದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯುವಕ ಮಂಗಳವಾರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಚಾಮುಂಡಿ ನಗರ ನಿವಾಸಿ ರಾಶಿ (25) ಮೃತ ಯುವಕ. ನಗರದಲ್ಲಿ ಎಸಿ ಮೆಕ್ಯಾನಿಕ್ ಆಗಿದ್ದ ರಾಶಿ, ಅ.27ರಂದು ರಾತ್ರಿ ತಂದೆ-ತಾಯಿ ಹಾಗೂ ಸಹೋದರನ ಜತೆಗೆ ಊಟ ಮುಗಿಸಿ ಮನೆಯ ನೆಲಮಹಡಿಯ ಕೊಠಡಿಯಲ್ಲಿ ನಿದ್ದೆ ಮಾಡುತ್ತಿದ್ದರು. ತಡರಾತ್ರಿ ಎದ್ದು ಮೊದಲ ಮಹಡಿಯಲ್ಲಿ ನೀರು ಕುಡಿಯಲು ಅಡುಗೆ ಮನೆಗೆ ತೆರಳಿದ್ದರು. ಅದೇ ವೇಳೆ ಸಿಲಿಂಡರ್‌ನಿಂದ ಅನಿಲ ಸೋರಿಕೆ ಆಗುತ್ತಿರುವುದು ರಾಶಿ ಗಮನಕ್ಕೆ ಬಂದಿಲ್ಲ. ಹೀಗಾಗಿ ಅಡುಗೆ ಕೋಣೆಯ ಲೈಟ್ ಹಾಕುತ್ತಿದ್ದಂತೆ ಬೆಂಕಿ ಹೊತ್ತಿಕೊಂಡಿದ್ದು, ರಾಶಿಗೆ ಗಾಯವಾಗಿತ್ತು. ತಕ್ಷಣವೇ ವಿಕ್ಟೋರಿಯಾ ಆಸ್ಪತ್ರೆ ದಾಖಲಿಸಲಾಗಿತ್ತು. ಆದರೆ, ಮಂಗಳವಾರ ಬೆಳಿಗ್ಗೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.