ಕಲಾಗ್ರಾಮದಲ್ಲಿ ಅಗ್ನಿ ಅವಘಡ
Team Udayavani, Dec 14, 2018, 11:24 AM IST
ಬೆಂಗಳೂರು: ಮಲ್ಲತಹಳ್ಳಿಯ ಕಲಾಗ್ರಾಮದಲ್ಲಿರುವ ಸಾಂಸ್ಕೃತಿಕ ಸಮುತ್ಛಯ ಭನದಲ್ಲಿ ಗುರುವಾರ ಮುಂಜಾನೆ ಶಾರ್ಟ್ ಸರ್ಕಿಟ್‌ನಿಂದ ಅಗ್ನಿ ಅವಘಡ ಸಂಭವಿಸಿದ್ದು, ರಾತ್ರಿ ಕಾವಲುಗಾರನ ಸಮಯ ಪ್ರಜ್ಞೆಯಿಂದ ದೊಡ್ಡ ಅನಾಹುತ ತಪ್ಪಿದೆ. ಮುಂಜಾನೆ 4.30ಕ್ಕೆ ಸಾಂಸ್ಕೃತಿಕ ಸಮುತ್ಛಯ ಭನದಲ್ಲಿ ಅಗ್ನಿ ಅನಾಹುತ ಸಂಭವಿಸಿದ್ದು, ಲೈಟಿಂಗ್ ಕೋಣೆ ಸಂಪೂರ್ಣ ಸುಟ್ಟು ಕರುಕಲಾಗಿದೆ. ಅಲ್ಲದೆ ವೈರಿಂಗ್ ಸೇರಿದಂತೆ 30 ಲಕ್ಷ ರೂ. ಮೌಲ್ಯದ ಹಾನಿ ಉಂಟಾಗಿದೆ.
ಬೆಂಕಿ ಕಿಡಿ ಕಾಣಿಸಿಕೊಳ್ಳುತ್ತಿದ್ದಂತೆ ಸಾಂಸ್ಕೃತಿಕ ಸಮುತ್ಛಯದ ಆವರಣದಲ್ಲೇ ಮಲಗಿದ್ದ ಭದ್ರತಾ ಸಿಬ್ಬಂದಿ ಎಚ್ಚರಗೊಂಡು ಕೂಡಲೇ ಅಗ್ನಿಶಾಮಕ ದಳಕ್ಕೆ ಮಾಹಿತಿ ರವಾನಿಸಿದ್ದಾರೆ. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಅಗ್ನಿ ಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದೆ. ಈ ಸಂಬಂಧ ಮಲ್ಲತ್ತಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಪ್ಪಿದ ದುರಂತ: ಕಳೆದ ಕೆಲವು ದಿನಗಳಿಂದ ಕಲಾಗ್ರಾಮದ ಸಾಂಸ್ಕೃತಿಕ ಸಮುತ್ಛಯದಲ್ಲಿ ರಾತ್ರಿ ವೇಳೆ ಯಾವುದೇ ಕಾರ್ಯಕ್ರಮಗಳು ನಡೆದಿಲ್ಲ. ಹೀಗಾಗಿ ರಂಗ ಕಲಾವಿದರು ವಾಸ್ತವ್ಯ ಹೂಡಿರಲಿಲ್ಲ. ಅಲ್ಲದೆ ರಂಗ ಚಟುವಟಿಕೆಗಳು ನಡೆಯುವಾಗ ಬೆಂಕಿ ಬಿದ್ದಿದ್ದರೆ ಭಾರೀ ಅನಾಹುತ ಸಂಭವಿಸುತ್ತಿತ್ತು ಎಂದು ರಾಷ್ಟ್ರೀಯ ನಾಟಕ ಶಾಲೆಯ ಬೆಂಗಳೂರು ಕೇಂದ್ರದ ನಿರ್ದೇಶಕ ಬಸವಲಿಂಗಯ್ಯ ಹೇಳಿದ್ದಾರೆ.
ಈ ಘಟನೆಯಿಂದಾಗಿ ರಂಗಚಟುವಟಿಕೆಗಳು ನಿಂತು ಹೋಗಿದ್ದು, ಸರ್ಕಾರ ಸಮುತ್ಛಯವನ್ನು ಆದಷ್ಟು ಬೇಗ ದುರಸ್ಥಿ ಮಾಡಿಸಬೇಕು ಎಂದು ಮನವಿ ಮಾಡಿದ್ದಾರೆ. ನಗರದ ಒಳಗಿರುವ ರಂಗಮಂದಿರಗಳು ದುಬಾರಿ ಎಂಬ ಕಾರಣಕ್ಕೆ ಕಲಾ ತಂಡಗಳು ಸಾಂಸ್ಕೃತಿಕ ಸಮುತ್ಛಯದ ಮೊರೆ ಹೋಗುತ್ತಿವೆ.
ಆದರೆ, ಕಲಾಗ್ರಾಮ ನಗರದ ಹೊರವಲಯದಲ್ಲಿರುವ ಕಾರಣ ಸಂಸ್ಕೃತಿ ಇಲಾಖೆ ಮೂಲಸೌಕರ್ಯ ಒದಗಿಸಲು ಆಸಕ್ತಿ ತೋರುತ್ತಿಲ್ಲ ಎಂಬ ಆರೋಪ ಕೇಳಿಬಂದಿದೆ. ಕೆಲ ತಿಂಗಳ ಹಿಂದಷ್ಟೇ ಲೈಟಿಂಗ್ ವ್ಯವಸ್ಥೆ ಕೈಕೊಟ್ಟ ಕಾರಣ ಪ್ರೇಕ್ಷಕರು ಮೊಬೈಲ್ ಬೆಳಕಿನಲ್ಲಿಯೇ ನಾಟಕ ವೀಕ್ಷಿಸಿದ್ದರು.
ಪರ್ಯಾಯ ವ್ಯವಸ್ಥೆ: ಸಾಂಸ್ಕೃತಿಕ ಸಮುತ್ಛಯದಲ್ಲಿ ಮುಂಗಡವಾಗಿ ಬುಕ್ ಆಗಿರುವ ಕಾರ್ಯಕ್ರಮಗಳಿಗೆ ಇಲಾಖೆ ಪರ್ಯಾಯ ವ್ಯವಸ್ಥೆ ಮಾಡಲಿದೆ. ಇಲೆಕ್ಟ್ರಿಕ್ ಇಂಜಿನಿಯರ್‌ಗಳು ಕಾರ್ಯಪ್ರವೃತರಾಗಿದ್ದು, ದುರಸ್ಥಿ ಕಾರ್ಯದಲ್ಲಿ ನಿರತರಾಗಿದ್ದಾರೆ.
ಹೀಗಾಗಿ ಕಲಾಗ್ರಾಮದಲ್ಲಿರುವ ಬಯಲು ರಂಗಮಂದಿರ, ನಯನ ಸಭಾಂಗಣ ಹಾಗೂ ಸಂಸ ಬಯಲು ರಂಗಮಂದಿರದಲ್ಲಿ ಪರ್ಯಾಯ ವ್ಯವಸ್ಥೆ ಮಾಡಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು
Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್
Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ
Toll fee: ಹೆಬ್ಬಾಳ-ಸಿಲ್ಕ್ ಬೋರ್ಡ್ ಸುರಂಗ ರಸ್ತೆ: ಕೇವಲ 18 ಕಿ.ಮೀ.ಗೆ 288 ರೂ. ಸುಂಕ?
Bengaluru: ಕ್ಯಾಬ್ ಡಿಕ್ಕಿ;ಬುಲೆಟ್‌ನಲ್ಲಿ ತೆರಳುತ್ತಿದ್ದ ಸಾಫ್ಟ್ವೇರ್ ಎಂಜಿನಿಯರ್ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Actress: ರೊಮ್ಯಾನ್ಸ್ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್
Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್ ಗಳು ಪತ್ತೆ
INDvAUS: ಬ್ಯಾನ್ ತಪ್ಪಿಸಿಕೊಂಡ ವಿರಾಟ್ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.