ಬೆಂಗಳೂರು ವಿವಿ ಆವರಣದಲ್ಲೂ ಬೆಂಕಿ
Team Udayavani, Feb 26, 2019, 6:28 AM IST
ಬೆಂಗಳೂರು: ಬಿಸಿಲ ತಾಪದಿಂದಾಗಿ ಬೆಂಗಳೂರು ವಿವಿ ಆವರಣ ಸೇರಿ ನಗರದ ಕೆಲವಡೆ ಸೋಮವಾರ ಬೆಂಕಿ ಅನಾಹುತ ಸಂಭವಿಸಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾ ಹಾನಿಯಾಗಿಲ್ಲ. ಬೆಂಗಳೂರು ವಿಶ್ವವಿದ್ಯಾಲಯ ಆವರಣದ ಅರಣ್ಯ ಪ್ರದೇಶದಲ್ಲಿದ್ದ ಒಣ ಹುಲ್ಲಿಗೆ ಬೆಂಕಿ ಹೊತ್ತಿಕೊಂಡು ಕೆಲಕಾಲ ಆತಂಕದ ವಾತಾವಾರಣ ನಿರ್ಮಾಣವಾಗಿತ್ತು.
ಸೋಮವಾರ ಬೆಳಗ್ಗೆ 11.40ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದ್ದು, ಕೂಡಲೇ ಎರಡು ವಾಹನಗಳೊಂದಿಗೆ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ಸತತ ಎರಡು ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ನಾಗರಬಾವಿಯ ಬಿಡಿಎ ಕಾಂಪ್ಲೆಕ್ಸ್ ಸಮೀಪದ ಅನ್ನಪೂರ್ಣೇಶ್ವರಿ ದೇವಾಲಯದ ಸಮೀಪ ನಿಂತಿದ್ದ ಟಾಟಾಸೋಮೋ ಕಾರಿಗೆ ಇದಕ್ಕಿದ್ದಂತೆ ಬೆಂಕಿ ತಗುಲಿದ್ದು, ಕೂಡಲೇ ಸ್ಥಳಕ್ಕೆ ತೆರಳಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಹಾಗೆಯೇ ಎಲೆಕ್ಟ್ರಾನಿಕ್ ಸಿಟಿ, ಹುಳಿಮಾವು, ವೈಟ್‌ಫೀಲ್ಡ್, ಸರ್ಜಾಪುರ ಸೇರೆ ಕೆಲವೆಡೆ ಕಸ ಹಾಗೂ ಖಾಲಿ ಜಾಗದಲ್ಲಿದ್ದ ಒಣ ಹುಲಿಗೆ ಬೆಂಕಿ ಹೊತ್ತಿಕೊಂಡಿತ್ತು.
ತಕ್ಷಣ ಸಿಬ್ಬಂದಿ ಸ್ಥಳಕ್ಕೆ ತೆರಳಿ ಬೆಂಕಿ ನಂದಿಸಿದ್ದಾರೆ. ಸೋಮವಾರ ಬೆಳಗ್ಗೆಯಿಂದ ಸುಮಾರು ಬೆಂಗಳೂರು ವಿವಿ ಆವರಣ, ನಾಗರಬಾವಿ ಸಮೀಪದ ಕಾರಿಗೆ ಬೆಂಕಿ ಅವಘಡ ಸೇರಿ ಸುಮಾರು 50ಕ್ಕೂ ಹೆಚ್ಚು ಕರೆಗಳು ಸಹಾಯವಾಣಿ ಕೇಂದ್ರಕ್ಕೆ ಬಂದಿದೆ ಎಂದು ಅಗ್ನಿಶಾಮಕದಳದ ಅಧಿಕಾರಿಗಳು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮಾಜಿ ಕಾರ್ಪೋರೇಟರ್ ರೇಖಾ ಹತ್ಯೆ; 8 ಮಂದಿಗೆ ಜೀವಾವಧಿ ಶಿಕ್ಷೆ
Gold Fraud Case: ಐಶ್ವರ್ಯ ಗೌಡ ದಂಪತಿಗೆ ಹೈಕೋರ್ಟ್‌ನಿಂದ ಜಾಮೀನು
Aishwarya Gowda Case: ಇನ್ನೊಂದು ಚಿನ್ನದಂಗಡಿಗೆ ವಂಚಿಸಿದ್ದ ಐಶ್ವರ್ಯ ಗ್ಯಾಂಗ್
Arrested: ಟ್ಯಾಟೂ ಆರ್ಟಿಸ್ಟ್ ಬಂಧನ: 2.50 ಕೋಟಿ ರೂ. ಡ್ರಗ್ಸ್ ಜಪ್ತಿ
Arrested: ಹೊಸ ವರ್ಷಾಚರಣೆಗೆ ಮಾದಕ ವಸ್ತು ಮಾರುತ್ತಿದ್ದ 11 ಮಂದಿ ಸೆರೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.