ಬೆಂಕಿ ಪೊಟ್ಟಣ’ ಚಿತ್ರಕ್ಕೆ ಸಬ್ಸಿಡಿ: ಕೋರ್ಟ್ ತಿರಸ್ಕಾರ
Team Udayavani, Sep 16, 2017, 6:20 AM IST
ಬೆಂಗಳೂರು: “ಬೆಂಕಿ ಪೊಟ್ಟಣ’ ಚಲನಚಿತ್ರಕ್ಕೆ 2014ನೇ ಸಾಲಿನ ಸಬ್ಸಿಡಿ ಹಣ ನೀಡಬೇಕೆಂಬ ಚಿತ್ರ ನಿರ್ಮಾಪಕರ ಮನವಿಯನ್ನು ಹೈಕೋರ್ಟ್ ಶುಕ್ರವಾರ ತಿರಸ್ಕರಿಸಿದೆ.
ತಮ್ಮ ಚಿತ್ರಕ್ಕೆ ಸಬ್ಸಿಡಿ ಹಣ ನೀಡಲು ವಾರ್ತಾ ಇಲಾಖೆಯ ನಿರ್ದೇಶಕರಿಗೆ ಸೂಚಿಸಬೇಕೆಂದು ಕೋರಿ ನಿರ್ಮಾಪಕ ಝಾಕೀರ್ ಅಲಿ ಖಾನ್ ರಿಟ್ ಅರ್ಜಿಯನ್ನು ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ.ವೀರಪ್ಪ ಅವರಿದ್ದ ಏಕಸದಸ್ಯ ಪೀಠ, ಆಯ್ಕೆ ಸಮಿತಿಯು ಈಗಾಗಲೇ ಎರಡು ಬಾರಿ ಸಿನಿಮಾ ವೀಕ್ಷಿಸಿ ಸಬ್ಸಿಡಿ ನೀಡುವ ಚಿತ್ರಗಳ ಪಟ್ಟಿಗೆ ಪರಿಗಣಿಸಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟಿದೆ.
ಆದ್ದರಿಂದ ಮತ್ತೂಮ್ಮೆ ನಿರ್ದೇಶನ ನೀಡಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟು ಅರ್ಜಿಯನ್ನು ಇತ್ಯರ್ಥಪಡಿಸಿತು. 2015ರ ಫೆಬ್ರವರಿಯಲ್ಲಿ ಬಿಡುಗಡೆಗೊಂಡಿದ್ದ ಬೆಂಕಿಪೊಟ್ಟಣ ಚಿತ್ರ ಪ್ರೇಕ್ಷಕರ ಮೆಚ್ಚುಗೆ ಪಡೆದಿತ್ತು. 2014ನೇ ಸಾಲಿನ ಸಬ್ಸಿಡಿ ನೀಡುವ
ಚಿತ್ರಗಳ ಪಟ್ಟಿಗೆ ತಮ್ಮ ಚಿತ್ರವನ್ನು ಪರಿಗಣಿಸುವಂತೆ ಚಿತ್ರ ನಿರ್ಮಾಪಕರು ಮನವಿ ಸಲ್ಲಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CID; ಸತತ 2 ಗಂಟೆಗಳ ಕಾಲ ಸಚಿನ್ ಕುಟುಂಬಸ್ಥರ ವಿಚಾರಣೆ
Karnataka Govt. : ನಾಲ್ವರು ಡಿವೈಎಸ್ಪಿಗಳು ವಿವಿಧೆಡೆ ವರ್ಗಾವಣೆ
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.