ಅಗ್ನಿ ದುರಂತ: ಬಾಲಕಿ ಸಾವಿಗೆ ಯಾರು ಹೊಣೆ?

Team Udayavani, Mar 26, 2019, 12:22 PM IST

balaki-sa

ಬೆಂಗಳೂರು: ಪೊಲೀಸ್‌ ವಸತಿ ಗೃಹಗಳು ಅವ್ಯವಸ್ಥೆಯ ಆಗರ ಎಂಬ ಆರೋಪಗಳ ನಡುವೆಯೇ ಶಿವಾಜಿನಗರ ಪೊಲೀಸ್‌ ವಸತಿ ಗೃಹದಲ್ಲಿ ಮೂರು ವರ್ಷದ ಬಾಲಕಿಯೊಬ್ಬರು ಅಗ್ನಿಅವಘಡದಲ್ಲಿ ಗಾಯಗೊಂಡು ಚಿಕಿತ್ಸೆ ಫ‌ಲಿಸದೆ ಮೃತಪಟ್ಟಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಕಬ್ಬನ್‌ಪಾರ್ಕ್‌ ಸಂಚಾರ ಠಾಣೆಯಲ್ಲಿ ಪೇದೆ ಲೋಕೇಶಪ್ಪ ದಂಪತಿ ಪುತ್ರಿ ಹರ್ಷಾಲಿ ( 3) ಮೃತಬಾಲಕಿ. ಶಿವಾಜಿನಗರದ ಪೊಲೀಸ್‌ ವಸತಿ ಗೃಹ ಆವರಣದಲ್ಲಿ ಒಣಗಿದ ಮರದ ಕೊಂಬೆಗಳು ಮುರಿದ್ದು ಬಿದ್ದಿದ್ದರಿಂದ ಬೆಂಕಿ ಹಾಕಲಾಗಿತ್ತು.

ಮಾ. 5ರಂದು ಸ್ನೇಹಿತರ ಜತೆ ಆಟವಾಡುತ್ತಿದ್ದ ಹರ್ಷಾಲಿ, ಮರದ ಬುಡದ ಬಳಿ ಬೆಂಕಿ ಹಾಕಿರುವುದು ಗೊತ್ತಾಗದೆ ಬೂದಿಮುಚ್ಚಿದ ಕೆಂಡಗಳ ಮೇಲೆ ಬಿದ್ದಿದ್ದರಿಂದ ಸುಟ್ಟಗಾಯಗಳಿಂದ ಗಂಭೀರವಾಗಿ ಗಾಯಗೊಂಡಿದ್ದಳು. ಚಿಕಿತ್ಸೆ ಫ‌ಲಿಸದೆ ಮಾ. 13ರಂದು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಅಸುನೀಗಿದಳು.

ಈ ಬೆನ್ನಲ್ಲೇ ವಸತಿ ಗೃಹದಲ್ಲಿನ ಮರಕ್ಕೆ ಬೆಂಕಿ ಹಚ್ಚಿದ್ದು ಯಾರು, ಮೂರು ದಿನಗಳಿಂದ ಮರದ ಬುಡ ಹಾಗೂ ಕಸಕ್ಕೆ ಬೆಂಕಿ ಹೊತ್ತಿದ್ದರೂ ಅದನ್ನು ಪೂರ್ಣಪ್ರಮಾಣದಲ್ಲಿ ಆರಿಸಲು ಕ್ರಮವಹಿಸದಿರುವುದೇ ಬಾಲಕಿ ಹರ್ಷಾಲಿ ಸಾವಿಗೆ ಕಾರಣ ಎಂದು ವಸತಿ ಗೃಹದ ಪೊಲೀಸ್‌ ಕುಟುಂಬಗಳು ಆಕ್ರೋಶವ್ಯಕ್ತಪಡಿಸಿವೆ.

ಬೆಂಕಿ ಅವಘಡದಲ್ಲಿ ಬಾಲಕಿ ಹರ್ಷಾಲಿ ಮೃತಪಟ್ಟಿರುವ ವಿಚಾರವನ್ನು ವಸತಿಗೃಹದ ಉಸ್ತುವಾರಿ ನೋಡಿಕೊಳ್ಳುತ್ತಿರುವವರು ಹಾಗೂ ಶಿವಾಜಿನಗರ ಠಾಣೆಯ ಪೊಲೀಸರು ಗಂಭೀರವಾಗಿ ಪರಿಗಣಿಸಲೇ ಇಲ್ಲ. ಹಿರಿಯ ಅಧಿಕಾರಿಗಳಿಗೆ ಈ ಬಗ್ಗೆ ಮಾಹಿತಿ ನೀಡಿಲ್ಲ ಎಂದು ಆರೋಪಿಸಿರುವ ನಿವಾಸಿಗಳು, ಸಮಾಜವನ್ನು ಕಾಯುವ ನಮ್ಮ ಮಕ್ಕಳಿಗೆ ಈ ದುರಂತ ಸಂಭವಿಸಿದರೆ ಮಾನವೀಯತೆ ದೃಷ್ಟಿಯಿಂದಾದರೂ ಕ್ರಮವಹಿಸುವುದಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಶಿವಾಜಿನಗರ ಪೊಲೀಸರ ನಿರ್ಲಕ್ಷ್ಯ: ಮಾ. 5ರಂದು ಬೌರಿಂಗ್‌ ಆಸ್ಪತ್ರೆಯಲ್ಲಿ ಹರ್ಷಾಲಿಗೆ ಪ್ರಾಥಮಿಕ ಚಿಕಿತ್ಸೆ ಬಳಿಕ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಯಿತು. ಒಂಬತ್ತು ದಿನಗಳ ಕಾಲ ಹರ್ಷಾಲಿ ಜೀವನ್ಮರಣ ಹೋರಾಟ ನಡೆಸಿ ಕೊನೆಯುಸಿರೆಳೆದರು. ಸುಟ್ಟಗಾಯಗಳಿಂದ ಹರ್ಷಾಲಿ ದಾಖಲಾದ ಬಗ್ಗೆ ಸ್ಥಳೀಯ ಠಾಣೆ ಶಿವಾಜಿನಗರಕ್ಕೆ ಮೆಮೊ ಕಳಿಸಲಾಗಿದೆ.

ಆದರೆ, ಪೊಲೀಸರು ಮೆಮೊ ದಾಖಲಿಸಿಕೊಂಡು ಸುಮ್ಮನಾದರು. ಕನಿಷ್ಠ ಆಸ್ಪತ್ರೆಗೆ ಬಂದು ಹರ್ಷಾಲಿ ಆರೋಗ್ಯ ವಿಚಾರಿಸಿಲ್ಲ. ಆಕೆಯ ಹೇಳಿಕೆ ದಾಖಲಿಸಿಕೊಳ್ಳದೆ ನಿರ್ಲಕ್ಷ್ಯ ವಹಿಸಿದ್ದಾರೆ. ಘಟನೆ ಬಗ್ಗೆ ಹಿರಿಯ ಅಧಿಕಾರಿಗಳು ನಮಗೆ ಮಾಹಿತಿ ಗೊತ್ತಿಲ್ಲ ಎನ್ನುತ್ತಾರೆ. ಹಾಗಾದರೆ ಈ ಕರ್ತವ್ಯ ಲೋಪಕ್ಕೆ ಹೊಣೆಯಾರು ಎಂದು ಹೆಸರು ಹೇಳಲು ಇಚ್ಛಿಸದ ಪೇದೆ ಅಳಲು ತೋಡಿಕೊಂಡರು.

ಘಟನೆ ನಡೆದದ್ದು ಹೇಗೆ?: ಮಾ. 5ರಂದು 4 ಗಂಟೆ ಸುಮಾರಿಗೆ ಹರ್ಷಾಲಿ ತನ್ನ ಸ್ನೇಹಿತರ ಜತೆ ಆಟವಾಡುತ್ತಿದ್ದಾಗ, ಹರ್ಷಾಲಿ ಕೈಯಲ್ಲಿದ್ದ ಬಾಲ್‌ ಪಡೆದುಕೊಳ್ಳಲು ಮತ್ತೂಂದು ಮಗು ಯತ್ನಿಸಿದೆ. ಈ ವೇಳೆ ಹರ್ಷಾಲಿ, ಒಣಗಿದ ಎಲೆಗಳು ಹಾಗೂ ಮರದ ಬುಡದಲ್ಲಿ ಬೂದಿಮುಚ್ಚಿದ ಬೆಂಕಿ ಕೆಂಡಗಳ ಮೇಲೆ ಬಿದ್ದುಬಿಟ್ಟಿದ್ದಾಳೆ.

ಈ ವೇಳೆ ಸ್ಥಳೀಯ ವ್ಯಕ್ತಿ ಮಗುವನ್ನು ಬೆಂಕಿಯಿಂದ ರಕ್ಷಿಸಿ, ಬೌರಿಂಗ್‌ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಳಿಕ ವಿಕ್ಟೋರಿಯಾ ಮಹಾಬೋಧಿ ಸುಟ್ಟಗಾಯಗಳ ಆಸ್ಪತ್ರೆಗೆ ಕಳುಹಿಸಿಕೊಡಲಾಗಿದೆ. 9 ದಿನಗಳ ಕಾಲ ಜೀವನ್ಮರಣ ಹೋರಾಟ ನಡೆಸಿದ ಹರ್ಷಾಲಿ ಚಿಕಿತ್ಸೆ ಫ‌ಲಿಸದೆ ಮಾ. 13ರಂದು ಮೃತಪಟ್ಟಿದ್ದಾಳೆ.

ಸುಟ್ಟಗಾಯಗಳಿಂದ ನರಳುತ್ತಿದ್ದ ನನ್ನ ಮಗು ಹರ್ಷಾಲಿ ಆಸ್ಪತ್ರೆಯಲ್ಲಿ ನನ್ನನ್ನು ಕಂಡ ಕೂಡಲೇ ಅಪ್ಪಾ ಎಂದು ತಬ್ಬಿಕೊಂಡಿತು. ಆ ವೇಳೆ ಆಕೆ ಆಸ್ಪತ್ರೆಯಲ್ಲಿ ಮಾತನಾಡುತ್ತಿದ್ದಳು. ಘಟನೆಯ ಬಗ್ಗೆ ಆಕೆಯಿಂದ ಪೊಲೀಸರು ಹೇಳಿಕೆ ದಾಖಲಿಸಿಕೊಳ್ಳಬಹುದಿತ್ತು. ಆದರೂ ಆ ಕೆಲಸ ಮಾಡಲಿಲ್ಲ. ನನ್ನ ಮಗುವಿಗೆ ಆದ ಘಟನೆ ಮತ್ಯಾವ ಮಕ್ಕಳಿಗೂ ಆಗಬಾರದು ಎಂಬುದಷ್ಟೇ ನನ್ನ ಮನವಿ.
-ಲೋಕೇಶಪ್ಪ, ಹರ್ಷಾಲಿ ತಂದೆ

ಶಿವಾಜಿನಗರ ಪೊಲೀಸ್‌ ವಸತಿ ಗೃಹದಲ್ಲಿ ಸಂಭವಿಸಿದ ದುರ್ಘ‌ಟನೆಯಲ್ಲಿ ಬಾಲಕಿ ಹರ್ಷಾಲಿ ಮೃತಪಟ್ಟಿರುವ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ದುರ್ಘ‌ಟನೆಯಲ್ಲಿ ಕರ್ತ್ಯಲೋಪ ಎಸಗಿರುವುದು ಕಂಡು ಬಂದರೆ ಸಂಬಂಧಪಟ್ಟವರ ಬಗ್ಗೆ ಕ್ರಮ ಜರುಗಿಸಲಾಗುವುದು. ಈ ಬಗ್ಗೆ ವರದಿಯನ್ನು ನಗರ ಪೊಲೀಸ್‌ ಆಯುಕ್ತರಿಗೆ ಸಲ್ಲಿಸಲಾಗುವುದು.
-ರಾಹುಲ್‌ಕುಮಾರ್‌ ಶಹಾಪುರವಾಡ್‌, ಡಿಸಿಪಿ ಪೂರ್ವವಿಭಾಗ

ಟಾಪ್ ನ್ಯೂಸ್

champions trophy

Cricket: ಚಾಂಪಿಯನ್ಸ್‌ ಟ್ರೋಫಿ ವೇಳಾಪಟ್ಟಿ ಅಂತಿಮ; ಭಾರತದ ಪಂದ್ಯಗಳಿಗೆ ಯುಎಇ ಆತಿಥ್ಯ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ: ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ; ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

5

Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ

Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್‌ ಚಾಲಕನ ವಿರುದ್ಧ ದೂರು

Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್‌ ಚಾಲಕನ ವಿರುದ್ಧ ದೂರು

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

champions trophy

Cricket: ಚಾಂಪಿಯನ್ಸ್‌ ಟ್ರೋಫಿ ವೇಳಾಪಟ್ಟಿ ಅಂತಿಮ; ಭಾರತದ ಪಂದ್ಯಗಳಿಗೆ ಯುಎಇ ಆತಿಥ್ಯ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ: ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ; ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.