Fireworks Tragedy: ಅತ್ತಿಬೆಲೆ ಪಟಾಕಿ ದುರಂತ; ಸಿಐಡಿ ಅಧಿಕಾರಿಗಳಿಂದ ತನಿಖೆ ಆರಂಭ
Team Udayavani, Oct 10, 2023, 11:10 AM IST
ಬೆಂಗಳೂರು: ಅತ್ತಿಬೆಲೆಯ ಪಟಾಕಿ ದುರಂತ ಪ್ರಕರಣ ಸಿಐಡಿಗೆ ವರ್ಗಾವಣೆಗೊಂಡ ಬೆನ್ನಲ್ಲೇ ಸೋಮವಾರ ಸಿಐಡಿಯ ನರಹತ್ಯ ಮತ್ತು ಕಳ್ಳತನ ವಿಭಾಗದ ಹಿರಿಯ ಅಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಇದೇ ವೇಳೆ ತಾಲೂಕು ಮತ್ತು ಪುರಸಭೆಯ ಹಿರಿಯ ಅಧಿಕಾರಿಗಳು ಸ್ಥಳ ಪರಿಶೀಲಿಸಿದ್ದಾರೆ.
ಸಿಐಡಿ ಐಜಿಪಿ ಪ್ರವೀಣ್ ಮಧುಕರ್ ಪವಾರ್ ಮತ್ತು ಎಸ್ಪಿ ವೆಂಕಟೇಶ್ ನೇತೃತ್ವದ ತಂಡ ಮಧ್ಯಾಹ್ನ 12.30ಕ್ಕೆ ಘಟನಾ ಸ್ಥಳ ಮತ್ತು ಮೃತರ ಮರಣೋತ್ತರ ಪರೀಕ್ಷೆ ನಡೆಸಿದ ಆಸ್ಪತ್ರೆ ಹಾಗೂ ಗಾಯಾಳುಗಳು ಚಿಕಿತ್ಸೆ ಪಡೆಯುತ್ತಿ ರುವ ಆಸ್ಪತ್ರೆಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ಎಸ್ಪಿ ವೆಂಕಟೇಶ್ ನೇತೃತ್ವದ ತಂಡ ಕೆಲ ತಜ್ಞರ ಜತೆ ಸ್ಫೋಟ ಗೊಂಡ ಸ್ಥಳದಲ್ಲಿ ಒಂದೂವರೆ ಗಂಟೆಗಳ ಕಾಲ ಪರಿಶೀಲಿಸಿತು. ಪಟಾಕಿ ತುಂಬಿದ ಗೋಡೌನ್, ಅದರ ಹಿಂಭಾಗದ ಸ್ಥಳ ಮತ್ತು ಅವಶೇಷಗಳ ತುಂಬಿದ್ದ ಸ್ಥಳಗಳಲ್ಲಿ ಪರಿಶೀಲಿಸಿದರು. ಬಳಿಕ ಪ್ರತ್ಯಕ್ಷದರ್ಶಿಗಳಿಂದಲೂ ಮಾಹಿತಿ ಪಡೆದುಕೊಂಡರು.
ಸಮಗ್ರ ವರದಿ: ಅನಂತರ ಅತ್ತಿಬೆಲೆ ಪೊಲೀಸ್ ಠಾಣೆಗೆ ಭೇಟಿ ನೀಡಿದ ಎಸ್ಪಿ ವೆಂಕಟೇಶ್, ಠಾಣಾಧಿಕಾರಿಗಳಿಂದ ಎಫ್ಐಆರ್, ಪ್ರಾಥಮಿಕವಾಗಿ ಸಂಗ್ರಹಿಸಿದ ಸಾಕ್ಷ್ಯಗಳು, ಪ್ರತ್ಯಕ್ಷದರ್ಶಿಗಳ ಹೇಳಿಕೆಗಳು ಹಾಗೂ ತಾಂತ್ರಿಕ ತನಿಖೆಯ ವರದಿ ಸೇರಿ ಸಮಗ್ರ ಮಾಹಿತಿ ಪಡೆದುಕೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Adalat: ಲೋಕ್ ಅದಾಲತ್‌ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ
IPS officer D. Roopa: ಸಿಂಧೂರಿ ಮೇಲೆ ಮಾನನಷ್ಟ ಪ್ರಕರಣ ದಾಖಲಿಸಿದ ರೂಪಾ
MUST WATCH
ಹೊಸ ಸೇರ್ಪಡೆ
Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು
Karkala: ಈ ರಸ್ತೆಯಲ್ಲಿ ಬಸ್ ತಂಗುದಾಣಗಳೇ ಇಲ್ಲ!
UP: ಫಸ್ಟ್ ನೈಟ್ ದಿನ ಬಿಯರ್, ಗಾಂಜಾ ತಂದು ಕೊಡಲು ಬೇಡಿಕೆ ಇಟ್ಟ ಪತ್ನಿ; ಪತಿ ಶಾಕ್.!
Belma: ಕುಸಿತ ಭೀತಿಯಲ್ಲಿರುವ ಮನೆ; ಕಾಂಕ್ರೀಟ್ ತಡೆಗೋಡೆಗೆ ಪಿಡಬ್ಲ್ಯುಡಿ ಪ್ರಸ್ತಾವ
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.