ಇಬ್ಬರು ಮಾದಕ ವಸ್ತು ಮಾರಾಟಗಾರರ ಮೇಲೆ ಗುಂಡಿನ ದಾಳಿ

Team Udayavani, Aug 22, 2018, 12:22 PM IST

ibbarige.jpg

ಬೆಂಗಳೂರು: ಬಂಧಿಸಲು ಹೋದ ಪೊಲೀಸರ ಮೇಲೆಯೇ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಇಬ್ಬರು ಮಾದಕ ವಸ್ತು ಮಾರಾಟಗಾರರ ಮೇಲೆ ಮಾರತ್‌ಹಳ್ಳಿ ಪೊಲೀಸರು ಮಂಗಳವಾರ ಸಂಜೆ ಗುಂಡಿನ ದಾಳಿ ನಡೆಸಿ ಬಂಧಿಸಿದ್ದಾರೆ.

ಕೆ.ಆರ್‌.ಪುರ ನಿವಾಸಿ ಸಾದಿಕ್‌ ಷರೀಫ್ ಹಾಗೂ ಹೊಸಕೋಟೆ ನಿವಾಸಿ ಸಯ್ಯದ್‌ನನ್ನು ಬಂಧಿಸಲಾಗಿದ್ದು, ಆರೋಪಿಗಳ ಎಡಗಾಲಿಗೆ ಗುಂಡೇಟು ತಗುಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬಂಧಿತರಿಂದ ಪಿಎಸ್‌ಐ ಗುರುಪ್ರಸಾದ್‌, ಪೇದೆ ರವಿಶಂಕರ್‌ ಗಂಭೀರವಾಗಿ ಹಲ್ಲೆಗೊಳಗಾಗಿದ್ದು, ಚಿಕಿತ್ಸೆಗೆ ದಾಖಲಾಗಿದ್ದಾರೆ.

ಇದೇ ವೇಳೆ ಕರ್ನಾಟಕಕ್ಕೆ ಗಾಂಜಾ ಸರಬರಾಜು ಮಾಡುತ್ತಿದ್ದ ಆರೋಪದ ಮೇಲೆ ಆಂಧ್ರಪ್ರದೇಶದ ವಿ ಕೋಟಾ ತಾಲೂಕಿನ ಎರ್ನಾಗಪಲ್ಲಿ ಗ್ರಾಮದ ನಾಗರಾಜ್‌ ಮತ್ತು ಷಹಬಾಜ್‌ ಹಾಗೂ ನಗರದಲ್ಲಿ ಮಾರಾಟ ಮಾಡುತ್ತಿದ್ದ 8 ಮಂದಿಯನ್ನು ಬಂಧಿಸಲಾಗಿದೆ.

ಕುರುಕಲು ತಿಂಡಿ ಪ್ಯಾಕ್‌ಗಳಲ್ಲಿ ಸರಬರಾಜು: ಆರೋಪಿಗಳ ಪೈಕಿ ನಾಗರಾಜ್‌ ಆಂಧ್ರದ ಎರ್ನಾಗಪಲ್ಲಿ ಗ್ರಾಮದಲ್ಲಿ ಅಕ್ರಮವಾಗಿ ಗಾಂಜಾ ಬೆಳೆಯುತ್ತಿದ್ದ ವ್ಯಕ್ತಿಗಳನ್ನು ಸಂಪರ್ಕಿಸಿ ಗುಣಮಟ್ಟದ ಗಾಂಜಾ ಸಂಗ್ರಹಿಸುತ್ತಿದ್ದ. ಈತನಿಂದ ಷಹಬಾಜ್‌ ಭಾರೀ ಪ್ರಮಾಣದಲ್ಲಿ ಗಾಂಜಾ ಖರೀದಿಸಿ, ಸಂಗ್ರಹಿಸಿಟ್ಟು ಪ್ರತಿಷ್ಠಿತ ಬ್ರ್ಯಾಂಡ್‌ನ‌ ಕುರುಕಲು ತಿಂಡಿ ಪ್ಯಾಕೆಟ್‌ಗಳಲ್ಲಿ ಅಲ್ಪ ಪ್ರಮಾಣದಲ್ಲಿ ಗಾಂಜಾ ಇಟ್ಟು ಕರ್ನಾಟಕಕ್ಕೆ ಸರಬರಾಜು ಮಾಡುತ್ತಿದ್ದ. ಸಾದಿಕ್‌ ಸೇರಿದಂತೆ ಮುಂತಾದವರು ಮಾರಾಟ ಮಾಡುತ್ತಿದ್ದರು.

ಆರೋಪಿಗಳಿಗೆ ಗುಂಡೇಟು: ಈ ಮಾಹಿತಿ ಪಡೆದ ಮಾರತ್‌ಹಳ್ಳಿ ಠಾಣೆ ಇನ್‌ಸ್ಪೆಕ್ಟರ್‌ ಸಾದಿಕ್‌ ಪಾಷಾ ನೇತೃತ್ವದ ಸಬ್‌ ಇನ್‌ಸ್ಪೆಕ್ಟರ್‌ ಗುರುಪ್ರಸಾದ್‌ ಹಾಗೂ ಮುಖ್ಯ ಪೇದೆ ದೇವರಾಜ್‌, ಪೇದೆ ರವಿಶಂಕರ್‌ ತಂಡ ಕೆಲ ದಿನಗಳ ಹಿಂದೆ ನಾಗರಾಜ್‌ ಮತ್ತು ಷಹಬಾಜ್‌ನನ್ನು ವಶಕ್ಕೆ ಪಡೆದು ಸಾದಿಕ್‌ ಷರಿಫ್ ಮತ್ತು ಸಯ್ಯದ್‌ ಬಗ್ಗೆ ಮಾಹಿತಿ ಸಂಗ್ರಹಿಸಿತ್ತು.

ಬಳಿಕ ಈ ಆರೋಪಿಗಳ ಮೇಲೆ ನಿಗಾವಹಿಸಿದ್ದ ತಂಡ ಮಂಗಳವಾರ ಸಂಜೆ 7 ಗಂಟೆ ಸುಮಾರಿಗೆ ಎಚ್‌ಎಎಲ್‌ ಠಾಣಾ ವ್ಯಾಪ್ತಿಯ ಬೋರ್‌ವೆಲ್‌ ಜಂಕ್ಷನ್‌ ಬಳಿ ಪಲ್ಸರ್‌ ಬೈಕ್‌ನಲ್ಲಿ ಹೋಗುತ್ತಿರುವ ಖಚಿತ ಮಾಹಿತಿ ಸಂಗ್ರಹಿಸಿ ಆರೋಪಿಗಳ ದ್ವಿಚಕ್ರ ವಾಹನವನ್ನು ಅಡ್ಡಗಟ್ಟಿದೆ. ಪೊಲೀಸರನ್ನು ಕಂಡ ಆರೋಪಿಗಳು ತಪ್ಪಿಸಿಕೊಳ್ಳುವ ಯತ್ನದಲ್ಲಿ ಪಿಎಸ್‌ಐ ಗುರುಪ್ರಸಾದ್‌ ಮತ್ತು ಸಿಬ್ಬಂದಿ ರವಿಶಂಕರ್‌ ಮೇಲೆ ಹಲ್ಲೆ ನಡೆಸಿದ್ದಾರೆ. ಈ ಮಾಹಿತಿ ಪಡೆದ ಪಿಐ ಸಾದಿಕ್‌ ಪಾಷಾ ಕೂಡ ಸ್ಥಳಕ್ಕೆ ಬಂದು ಆರೋಪಿಗಳಿಗೆ ಶರಣಾಗುವಂತೆ ಸೂಚಿಸಿದ್ದಾರೆ.

ಆದರೂ ಆರೋಪಿಗಳು ಡ್ಯಾ†ಗರ್‌ನಿಂದ ಹಲ್ಲೆಗೆ ಮುಂದಾಗಿದ್ದಾರೆ. ಈ ವೇಳೆ ಆತ್ಮರಕ್ಷಣೆಗಾಗಿ ಇನ್‌ಸ್ಪೆಕ್ಟರ್‌ ಮತ್ತು ಪಿಎಸ್‌ಐ ಇಬ್ಬರು ಆರೋಪಿಗಳ ಮೇಲೆ ಗುಂಡು ಹಾರಿಸಿದ್ದಾರೆ. ಆ ಗುಂಡುಗಳು ಆರೋಪಿಗಳ ಎಡಗಾಲಿಗೆ ತಗುಲಿ ರಕ್ತಗಾಯವಾಗಿ ಕುಸಿದು ಬಿದ್ದಿದ್ದು, ಕೂಡಲೇ ಆರೋಪಿಗಳನ್ನು ಬಂಧಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಗಳ ಬಳಿಯಿದ್ದ 2 ಕೆ.ಜಿ. ಗಾಂಜಾ ಮತ್ತು ಡ್ಯಾ†ಗರ್‌ ಹಾಗೂ ಮಚ್ಚನ್ನು ವಶಕ್ಕೆ ಪಡೆಯಲಾಗಿದೆ.

8 ಮಂದಿಯ ಬಂಧನ: ಸಯ್ಯದ್‌ ಮತ್ತು ಸಾದೀಕ್‌ ಷರೀಫ್ರಿಂದ ಗಾಂಜಾ ಖರೀದಿಸಿ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಮಾರತ್‌ಹಳ್ಳಿಯ ಮೊಹಿದ್ದುರ್‌ ಶೇಖ್‌ (25), ಕೆ.ಆರ್‌.ಪುರ ಮೊಹಮ್ಮದ್‌ ಬಿಲಾಲ್‌ (30), ಗಾರೇಪಾಳ್ಯದ ಹಫೀಜ್‌ ಉಲ್‌ (35), ಪಣತ್ತೂರು ಹಫೀಜ್‌ ಉಲ್‌ ಶೇಖ್‌ (35), ಮುನ್ನೆಕೊಳಾಲು ಮೊಹಮ್ಮದ್‌ ಶುಕರ್‌ (22),  ಮೊಹಮ್ಮದ್‌ ಅಸ್ಲಾಂ (22), ಮೊಹಮ್ಮದ್‌ ಶುಹಾಕ್‌ (25), ಹಫೀಜ್‌ ಉಲ್‌ (32) ಎಂಬುವರನ್ನು ಬಂಧಿಸಲಾಗಿದೆ. ಈ ಆರೋಪಿಗಳಿಂದ 3 ಕೆ.ಜಿ. ಗಾಂಜಾ ವಶಕ್ಕೆ ಪಡೆಯಲಾಗಿದೆ. ಈ ಎಂಟು ಮಂದಿ ಆರೋಪಿಗಳು ಕಳೆದ ನಾಲ್ಕು ವರ್ಷಗಳಿಂದ ತಲಾ 50-60 ಮಂದಿ ಗ್ರಾಹಕರಿಗೆ ಗಾಂಜಾ ಮಾರಾಟ ಮಾಡುತ್ತಿದ್ದರು ಎಂದು ಡಿಸಿಪಿ ಅಬ್ದುಲ್‌ ಅಹದ್‌ ಹೇಳಿದರು.

ಪೊಲೀಸ್‌ ಆಯುಕ್ತರ ಸೂಚನೆ: ಇತ್ತೀಚೆಗೆ ನಗರದಲ್ಲಿ ಮಾದಕ ವಸ್ತು ಮಾರಾಟ ಜಾಲ ವಿಸ್ತರಿಸಿಕೊಳ್ಳುತ್ತಿರುವ ಬಗ್ಗೆ ಸರ್ಕಾರ ಪೊಲೀಸ್‌ ಆಯುಕ್ತರನ್ನು ತೀವ್ರ ತರಾಟೆಗೆ ತೆಗೆದುಕೊಂಡಿತ್ತು. ಈ ಹಿನ್ನೆಲೆಯಲ್ಲಿ ವೈಟ್‌ಫೀಲ್ಡ್‌ ವಲಯ ಡಿಸಿಪಿ ಅಬ್ದುಲ್‌ ಅಹದ್‌ ತಮ್ಮ ವಲಯದಲ್ಲಿ ವಿಶೇಷ ತಂಡ ರಚಿಸಿದ್ದರು. ಈ ತಂಡ ಇದೀಗ ಆರೋಪಿಗಳನ್ನು ಬಂದಿಸಿರುವುದನ್ನು ಆಯುಕ್ತ ಟಿ.ಸುನಿಲ್‌ ಕುಮಾರ್‌ ಹಾಗೂ ಹೆಚ್ಚುವರಿ ಆಯುಕ್ತ ಸೀಮಂತ್‌ ಕುಮಾರ್‌ ಸಿಂಗ್‌ ಅಭಿನಂದಿಸಿ ಬಹುಮಾನ ಘೋಷಿಸಿದ್ದಾರೆ.

ಟಾಪ್ ನ್ಯೂಸ್

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

101

Daali Dhananjay: ಸರಳವಾಗಿ ನೆರವೇರಿತು ಡಾಲಿ – ಧನ್ಯತಾ ನಿಶ್ಚಿತಾರ್ಥ

No support for liquor bandh: Tourism Hotel Owners Association

Liquor: ಮದ್ಯ ಬಂದ್‌ ಗೆ ಬೆಂಬಲವಿಲ್ಲ: ಪ್ರವಾಸೋದ್ಯಮ ಹೋಟೆಲ್ ಮಾಲೀಕರ ಸಂಘ

: ಸಿಎಂ ಸಿದ್ದರಾಮಯ್ಯ

Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ

Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು

Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು

Shimoga; Omini caught fire while filling with petrol

Shimoga; ಪೆಟ್ರೋಲ್ ಹಾಕುವಾಗ ಹೊತ್ತಿ ಉರಿದ ಓಮಿನಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Agriculture: ಏಕಕಾಲದಲ್ಲಿ ಮೀನು, ತರಕಾರಿ ಬೆಳೆಯುವ ಅಕ್ವಾಫೋನಿಕ್ಸ್‌ ಕೃಷಿ

Agriculture: ಏಕಕಾಲದಲ್ಲಿ ಮೀನು, ತರಕಾರಿ ಬೆಳೆಯುವ ಅಕ್ವಾಫೋನಿಕ್ಸ್‌ ಕೃಷಿ

Agricultural fair: ಕೃಷಿ ಮೇಳಕ್ಕೆ ನಿನ್ನೆ ಸುಮಾರು 10.25 ಲಕ್ಷ ಜನರ ಭೇಟಿ!

Agricultural fair: ಕೃಷಿ ಮೇಳಕ್ಕೆ ನಿನ್ನೆ ಸುಮಾರು 10.25 ಲಕ್ಷ ಜನರ ಭೇಟಿ!

Arrested: 15 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಫ‌ರ್ಹಾನ್‌ ಸೆರೆ

Arrested: 15 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಫ‌ರ್ಹಾನ್‌ ಸೆರೆ

Bengaluru Airport: ಏರ್ ಪೋರ್ಟ್‌ನಲ್ಲಿ ಆಮೆ, ಮೊಸಳೆ ಸಾಗಣೆ ಯತ್ನ

Bengaluru Airport: ಏರ್ ಪೋರ್ಟ್‌ನಲ್ಲಿ ಆಮೆ, ಮೊಸಳೆ ಸಾಗಣೆ ಯತ್ನ

Crime: ಮೊಬೈಲ್‌ಗಾಗಿ ಜಗಳ; ಪುತ್ರನ ಕೊಂದ ಅಪ್ಪ!

Crime: ಮೊಬೈಲ್‌ಗಾಗಿ ಜಗಳ; ಪುತ್ರನ ಕೊಂದ ಅಪ್ಪ!

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

4(1)

Lupus Nephritis: ಲೂಪಸ್‌ ನೆಫ್ರೈಟಿಸ್‌ ರೋಗಿಗಳಿಗೆ ಒಂದು ಮಾರ್ಗದರ್ಶಿ

Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ

Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

101

Daali Dhananjay: ಸರಳವಾಗಿ ನೆರವೇರಿತು ಡಾಲಿ – ಧನ್ಯತಾ ನಿಶ್ಚಿತಾರ್ಥ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.