ರಾಜ್‌ದ್ವಯರ ಮಧ್ಯೆ ಪ್ರಥಮ ಪೈಪೋಟಿ ಉಪಮೇಯರ್‌ ಪಟ್ಟಕ್ಕೂ ಹಣಾಹಣಿ

Team Udayavani, Sep 28, 2017, 12:25 PM IST

bbmp.jpg

ಬೆಂಗಳೂರು: ಬಿಬಿಎಂಪಿ ನೂತನ ಮೇಯರ್‌- ಉಪಮೇಯರ್‌ ಚುನಾವಣೆ ಗುರುವಾರ ನಡೆಯಲಿದ್ದು, ಅಭ್ಯರ್ಥಿಗಳ ಆಯ್ಕೆ ಬಗ್ಗೆ  ಕಾಂಗ್ರೆಸ್‌-ಜೆಡಿಎಸ್‌ನಲ್ಲಿ ತಡರಾತ್ರಿವರೆಗೂ ಕಸರತ್ತು ಮುಂದುವರಿದಿದೆ. ಮೇಯರ್‌ ಸ್ಥಾನಕ್ಕೆ ಕಾಂಗ್ರೆಸ್‌ನ ಸಂಪತ್‌ರಾಜ್‌ ಅಥವಾ ಗೋವಿಂದರಾಜ್‌, ಉಪ ಮೇಯರ್‌ ಸ್ಥಾನಕ್ಕೆ ಜೆಡಿಎಸ್‌ನ ರುಮಿಳಾ ಉಮಾಶಂಕರ್‌ ಅಥವಾ ಪದ್ಮಾವತಿ ನರಸಿಂಹಮೂರ್ತಿ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ.

ಈ ನಡುವೆ ಮೇಯರ್‌ ಸ್ಥಾನವನ್ನು ವೇಲು ನಾಯಕರ್‌ ಅಥವಾ ಆಂಜನಪ್ಪ ಅವರಿಗೇ ನೀಡಬೇಕು ಎಂದು ಸಂಸದ ಡಿ.ಕೆ.ಸುರೇಶ್‌ ಹಾಗೂ ಶಾಸಕ ಮುನಿರತ್ನ ಕೊನೇ ಹಂತದ ಒತ್ತಡ ಹೇರಿದ್ದು, ಅಂತಿಮವಾಗಿ ಸಿಎಂ ತೀರ್ಮಾನಕ್ಕೆ ಬಿಡಲಾಗಿದೆ. ಉಪ ಮೇಯರ್‌ ಆಯ್ಕೆ ಸಂಬಂಧ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು ಪಕ್ಷದ ಕಚೇರಿಯಲ್ಲಿ ಸಭೆ ನಡೆಸಿ ರಮಿಳಾ ಉಮಾಶಂಕರ್‌, ಪದ್ಮಾವತಿ ನರಸಿಂಹಮೂರ್ತಿ, ನೇತ್ರಾ ನಾರಾಯಣ್‌ ಅವರ ಹೆಸರು ಸೂಚಿಸಿ, ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಅವರ ಒಪ್ಪಿಗೆಗೆ ಕಳುಹಿಸಿದ್ದಾರೆ.

ಬಹುತೇಕ ದೇವರಜೀವನಹಳ್ಳಿ ವಾರ್ಡ್‌ನ ಸಂಪತ್‌ರಾಜ್‌ ಮತ್ತು ಕಾವೇರಿಪುರ ವಾರ್ಡ್‌ನ ರುಮಿಳಾ ಉಮಾಶಂಕರ್‌ ಮೇಯರ್‌- ಉಪಮೇಯರ್‌ ಅಭ್ಯರ್ಥಿಯಾಗಬಹುದು ಎಂದು ಮೂಲಗಳು ತಿಳಿಸಿವೆ. ಚುನಾವಣೆಯಲ್ಲಿ ನಾಟಕೀಯ ಬೆಳವಣಿಗೆ ನಡೆಯಬಹುದು ಎಂಬ ಗುಮಾನಿಯಿಂದ ಕಾಂಗ್ರೆಸ್‌ ಮತ್ತು ಜೆಡಿಎಸ್‌ ತನ್ನ ಸದಸ್ಯರಿಗೆ ವಿಪ್‌ ಜಾರಿಗೊಳಿಸಿದೆ.

ಸ್ಪರ್ಧೆಗಿಳಿದ ಬಿಜೆಪಿ: ಮೇಯರ್‌-ಉಪ ಮೇಯರ್‌ ಚುನಾವಣೆಗೆ ಬಿಜೆಪಿ ಸಹ ಸ್ಪರ್ಧೆಗೆ ತೀರ್ಮಾನಿಸಿದ್ದು, ಮಾಜಿ ಉಪ ಮುಖ್ಯಮಂತ್ರಿ ಆರ್‌.ಅಶೋಕ್‌ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಸಭೆಯಲ್ಲಿ ಮೇಯರ್‌ ಅಭ್ಯರ್ಥಿಯಾಗಿ ಕಾಡುಗೋಡಿ ವಾರ್ಡ್‌ನ ಎಸ್‌.ಮುನಿಸ್ವಾಮಿ ಹಾಗೂ ಉಪಮೇಯರ್‌ ಅಭ್ಯರ್ಥಿಯಾಗಿ ಜೆ.ಪಿ.ಪಾರ್ಕ್‌ ವಾರ್ಡ್‌ನ ಮಮತಾ ವಾಸುದೇವ್‌ ಅವರನ್ನು ಕಣಕ್ಕಿಳಿಸಲು ತೀರ್ಮಾನಿಸಲಾಗಿದೆ.

ಕೇಂದ್ರ ಸಚಿವರು ಗೈರು?: ಕಾಂಗ್ರೆಸ್‌ ಮತ್ತು ಜೆಡಿಎಸ್‌ ಮೈತ್ರಿ ಮುಂದುವರಿದ ಹಿನ್ನೆಲೆಯಲ್ಲಿ ಬಿಜೆಪಿಗೆ ಗೆಲುವಿನ ಸಾಧ್ಯತೆ ಕ್ಷೀಣಿಸಿರುವುದರಿಂದ ಮೇಯರ್‌ ಚುನಾವಣೆಯಲ್ಲಿ ಮತದಾರರಾಗಿರುವ ಕೇಂದ್ರ ಸಚಿವರಾದ ನಿರ್ಮಲಾ ಸೀತಾರಾಂ, ಅನಂತ ಕುಮಾರ್‌, ಸದಾನಂದಗೌಡ ಮತದಾನ ಪ್ರಕ್ರಿಯೆಲ್ಲಿ ಪಾಲ್ಗೊಳ್ಳುವುದು ಅನುಮಾನ ಎಂದು ಹೇಳಲಾಗಿದೆ.

ಮ್ಯಾಜಿಕ್‌ ನಂಬರ್‌ 134: ಬಿಬಿಎಂಪಿ ಅಧಿಕಾರಿಗಳು ಸಿದ್ಧಪಡಿಸಿರುವ ಮತದಾರರ ಪಟ್ಟಿಯಂತೆ ಬಿಬಿಎಂಪಿಯ 198 ಸದಸ್ಯರೂ ಸೇರಿ ಒಟ್ಟು 266 ಜನರು ಮತದಾರರಿದ್ದಾರೆ. ಆ ಪೈಕಿ 28 ಶಾಸಕರು, 25 ವಿಧಾನ ಪರಿಷತ್‌ ಸದಸ್ಯರು, 10 ರಾಜ್ಯಸಭಾ ಸದಸ್ಯರು ಮತ್ತು 5 ಲೋಕಸಭಾ ಸದಸ್ಯರಿದ್ದಾರೆ.

ಮೇಯರ್‌ ಮತ್ತು ಉಪಮೇಯರ್‌ ಹುದ್ದೆಗೇರಲು ಅಭ್ಯರ್ಥಿಯು 134 ಮತಗಳನ್ನು ಪಡೆಯಬೇಕಿದೆ. ಚುನಾವಣೆಯಲ್ಲಿ ಮತದಾನದ ಹಕ್ಕು ಹೊಂದಿರುವವರು ಕೈ ಮೇಲೆತ್ತುವ ಮೂಲಕ ಮತ ಚಲಾವಣೆ ಮಾಡಬೇಕು. ಯಾವ ಅಭ್ಯರ್ಥಿ ಪರ ಎಷ್ಟು ಮತದಾರರು ಕೈ ಮೇಲೆತ್ತಲಿದ್ದಾರೆ ಅದನ್ನು ಆಧರಿಸಿ ಮೇಯರ್‌ ಮತ್ತು ಉಪಮೇಯರ್‌ ಯಾರು ಎಂಬುದನ್ನು ಘೋಷಿಸಲಾಗುತ್ತದೆ.

ಕಾಂಗ್ರೆಸ್‌ ಪಾಳಯದಲ್ಲಿ ಬಂಡಾಯದ ಭಯ: ಮೇಯರ್‌ ಆಯ್ಕೆಗೆ ಕಾಂಗ್ರೆಸ್‌ನಲ್ಲಿ ಕೊನೆ ಹಂತದ ಕಸರತ್ತು ನಡೆದಿರುವ ಜತೆಗೇ, ಬಂಡಾಯದ ಭೀತಿ ಕೂಡ ಆವರಿಸಿದೆ. ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ್‌ ನೇತೃತ್ವದಲ್ಲಿ ಗುರುವಾರ ನಗರದ ಶಾಸಕರು, ಸಂಸದರ ಸಭೆ ನಡೆದಿದೆ. ಈ ವೇಳೆ ಸಂಸದರಾದ ಡಿ.ಕೆ. ಸುರೇಶ್‌, ಬಿ.ಕೆ.ಹರಿಪ್ರಸಾದ್‌, ಕೆ.ಸಿ.ರಾಮಮೂರ್ತಿ, ಶಾಸಕ ಮುನಿರತ್ನ ಹಾಗೂ ಬೈರತಿ ಬಸವರಾಜ್‌ ಅವರು, ಮೇಯರ್‌ ಹುದ್ದೆಗೆ ವೇಲು ನಾಯಕ್‌ ಅವರನ್ನೇ ಆಯ್ಕೆ ಮಾಡುವಂತೆ ಒತ್ತಡ ಹೇರಿದ್ದಾರೆ. ಒಂದೊಮ್ಮೆ ಬೇಡಿಕೆ ಈಡೇರದಿದ್ದರೆ ಚುನಾವಣೆಗೆ ಕೆಲ ಶಾಸಕರು ಗೈರಾಗುವ ಭಯವಿದೆ.

ಸಭೆ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಸಂಸದ ಡಿ.ಕೆ.ಸುರೇಶ್‌, “ನಗರದ ಹೊರ ವಲಯದ ಕಾರ್ಪೊರೇಟರ್‌ಗಳಲ್ಲಿ ಒಬ್ಬರನ್ನು ಮೇಯರ್‌ ಆಗಿ ಆಯ್ಕೆ ಮಾಡುವಂತೆ ಮನವಿ ಮಾಡಿದ್ದೇವೆ. ಅದಕ್ಕೆ ಬಹುತೇಕ ಸಂಸದರು ಒಪ್ಪಿದ್ದಾರೆ. ಮೇಯರ್‌ ಚುನಾವಣೆ ವೇಳೆ ಏನಾಗುತ್ತದೋ ನೋಡೋಣ. ಚುನಾವಣೆ ಬಹಿಷ್ಕರಿಸುವ ಕುರಿತು ಶಾಸಕ ಎಸ್‌.ಟಿ. ಸೋಮಶೇಖರ್‌ ನೀಡಿರುವ ಹೇಳಿಕೆಗೆ ನಮ್ಮ ಸಹಮತ ಇಲ್ಲ,’ ಎಂದು ಅವರು ಹೇಳಿದರು.

ವಿಪ್‌ ಜಾರಿ: ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ ಮಾತನಾಡಿ, ಮೇಯರ್‌ ಆಯ್ಕೆ ವಿಷಯದಲ್ಲಿ ಯಾವುದೇ ಗೊಂದಲ ಇಲ್ಲ. ಶಾಸಕರು, ಸಚಿವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಅಂತಿಮವಾಗಿ ಹೈ ಕಮಾಂಡ್‌ ತೀರ್ಮಾನ ಮಾಡಲಿದೆ. ಚುನಾವಣೆ ಹಿನ್ನೆಲೆಯಲ್ಲಿ ಎಲ್ಲರಿಗೂ ವಿಪ್‌ ಜಾರಿ ಮಾಡಲಾಗುವುದು ಎಂದು ಹೇಳಿದರು. ಮೇಯರ್‌ ಅಭ್ಯರ್ಥಿ ಆಯ್ಕೆ ಕುರಿತು ನಡೆದ ಸಭೆಗೆ ಯಶವಂತಪುರ ಶಾಸಕ ಎಸ್‌.ಟಿ. ಸೋಮಶೇಖರ್‌, ಗೋವಿಂದರಾಜ ನಗರ ಕ್ಷೇತ್ರದ ಶಾಸಕ ಪ್ರಿಯ ಕೃಷ್ಣ ಹಾಗೂ ಕೃಷಿ ಸಚಿವ ಕೃಷ್ಣ ಬೈರೇಗೌಡ ಗೈರು ಹಾಜರಾಗಿದ್ದರು.

ಸಿಎಂ ಅಭ್ಯರ್ಥಿ ಘೋಷಿಸುವ ಸಂಪ್ರದಾಯವೇ ಇಲ್ಲ: ಇದೇ ಸಂದರ್ಭದಲ್ಲಿ ಮುಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ಕೆಪಿಸಿಸಿ ಐಟಿ ಸೆಲ್‌ ನಡೆಸುತ್ತಿರುವ ಪ್ರಚಾರದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಚುನಾವಣೆಗೂ ಮೊದಲು ಸಿಎಂ ಅಭ್ಯರ್ಥಿ ಘೋಷಣೆ ಮಾಡುವ ಸಂಪ್ರದಾಯ ಕಾಂಗ್ರೆಸ್‌ ಪಕ್ಷದಲ್ಲಿ ಇಲ್ಲ. ಪಕ್ಷಕ್ಕೆ ಬಹುಮತ ಬಂದ ಮೇಲೆ ಯಾರು ಮುಖ್ಯಮಂತ್ರಿಯಾಗಬೇಕೆಂದು ಶಾಸಕಾಂಗ ಸಭೆಯಲ್ಲಿ ತೀರ್ಮಾನ ಆಗುತ್ತದೆ. ಸಿದ್ದರಾಮಯ್ಯ ಹಾಗೂ ನನ್ನ ನೇತೃತ್ವದಲ್ಲಿ ಚುನಾವಣೆ ನಡೆಯಲಿದೆ. ಚುನಾವಣೆಯ ನಂತರ ಸಿಎಂ ಅಭ್ಯರ್ಥಿ ಯಾರೆಂದು ತೀರ್ಮಾನ ಮಾಡಲಾಗುತ್ತದೆ ಎಂದು ತಿಳಿಸಿದರು.

-8 ಗಂಟೆ ಗುರುವಾರ ಬೆಳಗ್ಗೆ ನಾಮಪತ್ರ ಸಲ್ಲಿಕೆ ಪ್ರಾರಂಭ
-11.30 ಚುನಾವಣೆ ಪ್ರಕ್ರಿಯೆ ಪ್ರಾರಂಭ
-266 ಹಕ್ಕು ಹೊಂದಿರುವ ಮತದಾರರು
-142 ಕಾಂಗ್ರೆಸ್‌-ಜೆಡಿಎಸ್‌-ಪಕ್ಷೇತರರ ಬಲ
-124 ಬಿಜೆಪಿ ಹೊಂದಿರುವ ಸದಸ್ಯ ಬಲ

ಟಾಪ್ ನ್ಯೂಸ್

ip

‌IPL Auction: ಕೇನ್‌, ಮಯಾಂಕ್‌, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ

Andaman: ಮೀನುಗಾರಿಕಾ ದೋಣಿಯಲ್ಲಿದ್ದ 5 ಟನ್ ಮಾದಕ ವಸ್ತು ವಶಕ್ಕೆ ಪಡೆದ ಕೋಸ್ಟ್ ಗಾರ್ಡ್

Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ

BBK11: ಧರ್ಮ ಬಿಗ್‌ ಬಾಸ್‌ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್‌ ಹೀರೋʼ ಎಡವಿದ್ದೆಲ್ಲಿ?

BBK11: ಧರ್ಮ ಬಿಗ್‌ ಬಾಸ್‌ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್‌ ಹೀರೋʼ ಎಡವಿದ್ದೆಲ್ಲಿ?

Maharashtra: ಕಾಂಗ್ರೆಸ್‌ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ

Maharashtra: ಕಾಂಗ್ರೆಸ್‌ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ

Ajit Pawar supports Devendra Fadnavis; CM tussle continues in Maharashtra

Politics: ಫಡ್ನವೀಸ್‌ ಗೆ ಬೆಂಬಲ ನೀಡಿದ ಅಜಿತ್;‌ ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ

Video: ನೋಟಿನ ಮಾಲೆಯಲ್ಲಿ ನೋಟು ಎಗರಿಸಿ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ

Video: ನೋಟಿನ ಮಾಲೆಯ ನೋಟು ಎಗರಿಸಿದ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

Bengaluru: ಮನೆಯ ಮುಂದೆ ಕುಳಿತು ಮೊಬೈಲ್‌ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!

Bengaluru: ಮನೆಯ ಮುಂದೆ ಕುಳಿತು ಮೊಬೈಲ್‌ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!

Bengaluru: ಪಾರ್ಕ್‌ನಲ್ಲಿ ಮಲಗಿದ್ದಾಗ ಮರ ಬಿದ್ದು ಬಿಬಿಎಂಪಿ ಕಸದ ಲಾರಿ ಚಾಲಕ ಸಾವು

Bengaluru: ಪಾರ್ಕ್‌ನಲ್ಲಿ ಮಲಗಿದ್ದಾಗ ಮರ ಬಿದ್ದು ಬಿಬಿಎಂಪಿ ಕಸದ ಲಾರಿ ಚಾಲಕ ಸಾವು

Fraud: ಸೈಟ್‌ ಮಾರುವುದಾಗಿ ನಂಬಿಸಿ 56 ಲಕ್ಷ ರೂ. ವಂಚನೆ

Fraud: ಸೈಟ್‌ ಮಾರುವುದಾಗಿ ನಂಬಿಸಿ 56 ಲಕ್ಷ ರೂ. ವಂಚನೆ

4

Bengaluru: ಹೋಟೆಲ್‌ನ ಬಾತ್‌ರೂಮ್‌ನಲ್ಲಿ ಕಾರ್ಪೆಂಟರ್ ನೇಣಿಗೆ ಶರಣು

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

ip

‌IPL Auction: ಕೇನ್‌, ಮಯಾಂಕ್‌, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ

Andaman: ಮೀನುಗಾರಿಕಾ ದೋಣಿಯಲ್ಲಿದ್ದ 5 ಟನ್ ಮಾದಕ ವಸ್ತು ವಶಕ್ಕೆ ಪಡೆದ ಕೋಸ್ಟ್ ಗಾರ್ಡ್

Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ

Kundapura: ಮೋಜಿನ ತಾಣಗಳಾಗುತ್ತಿರುವ ಬೀಚ್‌ಗಳು-ಕಡಲಾಮೆಗೆ ಅಪಾಯ!

Kundapura: ಮೋಜಿನ ತಾಣಗಳಾಗುತ್ತಿರುವ ಬೀಚ್‌ಗಳು-ಕಡಲಾಮೆಗೆ ಅಪಾಯ!

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ

BBK11: ಧರ್ಮ ಬಿಗ್‌ ಬಾಸ್‌ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್‌ ಹೀರೋʼ ಎಡವಿದ್ದೆಲ್ಲಿ?

BBK11: ಧರ್ಮ ಬಿಗ್‌ ಬಾಸ್‌ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್‌ ಹೀರೋʼ ಎಡವಿದ್ದೆಲ್ಲಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.