ವಾರದಲ್ಲಿ ಮೊದಲ ಸಭೆ: ನ್ಯಾ.ನಾಗಮೋಹನ ದಾಸ್
Team Udayavani, Dec 25, 2017, 6:25 AM IST
ಬೆಂಗಳೂರು: ವೀರಶೈವ ಲಿಂಗಾಯತ ಪ್ರತ್ಯೇಕ ಧರ್ಮಕ್ಕೆ ಅಲ್ಪ ಸಂಖ್ಯಾತ ಮಾನ್ಯತೆ ನೀಡುವ ಕುರಿತು ಪರಿಶೀಲಿಸಲು
ರಚನೆಯಾಗಿರುವ ಸಮಿತಿಯ ಮೊದಲ ಸಭೆಯನ್ನು ಒಂದು ವಾರದಲ್ಲಿ ಕರೆಯುವುದಾಗಿ ನ್ಯಾ.ನಾಗಮೋಹನ್ ದಾಸ್ ಹೇಳಿದ್ದಾರೆ.
“ಉದಯವಾಣಿ’ ಜೊತೆಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಸಮಿತಿ ರಚನೆ ಮಾಡಿರುವ ಬಗ್ಗೆ ಅಧಿಕೃತ ಆದೇಶ ಬಂದಿಲ್ಲ. ಆದರೆ, ಅಧಿಕಾರಿಗಳು ದೂರವಾಣಿ ಮೂಲಕ ಮಾಹಿತಿ ತಿಳಿಸಿದ್ದಾರೆ. ಆದೇಶ ಬಂದ ಮೇಲೆ ಒಂದು ವಾರದಲ್ಲಿ ಸಮಿತಿ ಸದಸ್ಯರ ಸಭೆ ಕರೆದು, ಮುಂದಿನ ನಡೆಯನ್ನು ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತೇವೆಂದು ತಿಳಿಸಿದ್ದಾರೆ.
ಲಿಂಗಾಯತ ಮತ್ತು ವೀರಶೈವ ಎಂಬ ಭಿನ್ನಾಭಿಪ್ರಾಯ ಇರುವುದರಿಂದ ಈ ಬಗ್ಗೆ ಕೂಲಂಕಶ ಅಧ್ಯಯನ ನಡೆಸಿ ವರದಿ
ನೀಡುವುದು ಸವಾಲಿನ ಕೆಲಸ. ಸಮಿತಿಯಲ್ಲಿರುವ ಸದಸ್ಯರು ಸಾಕಷ್ಟು ವಿಷಯ ತಜ್ಞರಿದ್ದಾರೆ. ಅಲ್ಲದೇ ವೀರಶೈವ ಅಥವಾ
ಲಿಂಗಾಯತದ ಪರವಾಗಿ ಬೇಡಿಕೆ ಇಟ್ಟಿರುವವರಿಗೆ ಅವರ ಅಭಿಪ್ರಾಯ ಹಾಗೂ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಬೇಕು
ಎನ್ನುವುದು ನನ್ನ ವೈಯಕ್ತಿಕ ಅಭಿಪ್ರಾಯ. ಇದನ್ನು ಸಮಿತಿ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತೇವೆಂದು ಹೇಳಿದ್ದಾರೆ.
ಸಮಿತಿಯ ಸದಸ್ಯರಾಗಿರುವ ಎಸ್.ಜಿ. ಸಿದ್ದರಾಮಯ್ಯ ಅವರು, ನಾವು ಯಾವುದೇ ಪಕ್ಷದ ದಾಸರಲ್ಲ. ನಾವು ಸಾಹಿತ್ಯ
ಸೇವಕರು, ವೀರಶೈವ ಮತ್ತು ಲಿಂಗಾಯತ ಪ್ರತ್ಯೇಕ ಧರ್ಮ ಕುರಿತಂತೆ ನಮ್ಮ ಮುಂದೆ ಸಾಕಷ್ಟು ಚರಿತ್ರೆಯಿದೆ. ವಚನ ಚಳವಳಿ ಸಂದರ್ಭದಲ್ಲಿ ಹುಟ್ಟಿದ ಕೃತಿಗಳು, ಶೂನ್ಯ ಸಂಪಾದನೆ, ಆ ಸಂದರ್ಭದಲ್ಲಿ ಹುಟ್ಟಿಕೊಂಡ ಶೈವ, ವಿಶಿಷ್ಠಾದ್ವೆ„ತ ಸಿದಾಟಛಿಂತಗಳು ಇವೆ. ಅವೆಲ್ಲ ದಾಖಲೆಗಳನ್ನು ಪರಿಶೀಲಿಸಿ ಸರ್ಕಾರ ನಿಗದಿ ಪಡಿಸಿರುವ ಕಾಲಮಿತಿಯೊಳಗೆ ವರದಿ ನೀಡಲು ಪ್ರಯತ್ನಿಸಲಾಗುವುದೆಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್ಮಿಲ್ ಕುಸಿತ:7 ಮಂದಿಗೆ ಗಾಯ
Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ
Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ
Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.