ಚುನಾವಣೆ ಆಯೋಗದ ವೆಬ್‌ಸೈಟ್‌ಗೆ ಕನ್ನ ಹಾಕಿದ ಐವರ ಸೆರೆ


Team Udayavani, Apr 27, 2018, 12:35 PM IST

chunavana.jpg

ಬೆಂಗಳೂರು: ರಾಜ್ಯ ವಿಧಾನಸಭೆ ಮತದಾರರ ಪಟ್ಟಿಯಲ್ಲಿ ಅನಧಿಕೃತವಾಗಿ ಹೆಸರು ಸೇರಿಸುತ್ತಿದ್ದ ಮತ್ತು ನಕಲಿ ಮತದಾರರ ಗುರುತಿನ ಚೀಟಿ ತಯಾರಿಸುತ್ತಿದ್ದ ಬೃಹತ್‌ ಜಾಲವನ್ನು ಪೀಣ್ಯ ಪೊಲೀಸರು ಭೇದಿಸಿದ್ದಾರೆ.

ಈ ಸಂಬಂಧ ಬಾಗಲಗುಂಟೆಯ ನವೀನ್‌ ಕುಮಾರ್‌ (30), ತುಮಕೂರು ಜಿಲ್ಲೆ ಶಿರಾ ತಾಲೂಕಿನ ಸಚಿನ್‌ (26), ದೊಡ್ಡಬಿದರಕಲ್ಲಿನ ದೇವರಾಜ್‌ (25), ಬೀದರ್‌ ಜಿಲ್ಲೆ ಹುಮ್ನಾಬಾದ್‌ನ ಸಂಜಯ್‌ ಕುಮಾರ್‌ ಶೀಲವಂತ (29) ಹಾಗೂ ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲೂಕಿನ ಕರಿಸಿದ್ದೇಶ್ವರ (34) ಎಂಬುವವರನ್ನು ಬಂಧಿಸಲಾಗಿದೆ. 

ಆರೋಪಿಗಳಿಂದ ಕಂಪ್ಯೂಟರ್‌ಗಳು, ಪೆನ್‌ಡ್ರೈವ್‌, ಹೊಸದಾಗಿ ಚುನಾವಣಾ ಗುರುಚಿನ ಚೀಟಿ ಪಡೆಯುವ ನಮೂನೆ ನಂ.6 ಅರ್ಜಿಗಳು, ಅನಧಿಕೃತವಾಗಿ ತಯಾರಿಸಿರುವ ಗುರುತಿನ ಚೀಟಿಗಳನ್ನು ವಶ ಪಡಿಸಿಕೊಳ್ಳಲಾಗಿದೆ. ಆರೋಪಿಗಳ ಪೈಕಿ ಸಂಜಯ್‌ ಕುಮಾರ್‌ ಎಂಜಿನಿಯರಿಂಗ್‌ ವ್ಯಾಸಂಗ ಮಾಡಿದ್ದು, ದಾಸರಹಳ್ಳಿ ವಲಯ ಬಿಬಿಎಂಪಿ ಕಚೇರಿಯಲ್ಲಿ ಸಿಸ್ಟಂ ಆಡ್ಮಿನ್‌ ಆಗಿದ್ದಾನೆ.

ಇದೇ ಕಚೇರಿಯಲ್ಲಿ ಡಾಟಾ ಆಪರೇಟರ್‌ ಆಗಿದ್ದ ನವೀನ್‌ ಕುಮಾರ್‌ ದುರ್ನಡತೆ ಆಧಾರದ ಮೇಲೆ ಒಂದೂವರೆ ವರ್ಷದ ಹಿಂದೆ ಕೆಲಸ ಕಳೆದುಕೊಂಡಿದ್ದ. ಬಳಿಕ ದೊಡ್ಡಬಿದರಕಲ್ಲಿನಲ್ಲಿ ಸೆವೆನ್‌ ಹಿಲ್ಸ್‌ ಎಂಬ ಸೈಬರ್‌ ಕೆಫೆ ನಡೆಸುತ್ತಿದ್ದ ಸ್ನೇಹಿತ ಸಚಿನ್‌ ಮತ್ತು ದೇವರಾಜ್‌ ಜತೆಗಿದ್ದ. ಮತ್ತೂಬ್ಬ ಆರೋಪಿ ಕರಿಸಿದ್ದೇಶ್ವರ ಜಲಮಂಡಳಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾನೆ. 

ಆರೋಪಿಗಳು ಪರಸ್ಪರ ಪರಿಚಿತರಾಗಿದ್ದು, ಸಂಜಯ್‌ ಕುಮಾರ್‌ ಸಹಾಯದಿಂದ ಚುನಾವಣಾ ಆಯೋಗದ ಇಆರ್‌ಎಂಎಸ್‌ ವೆಬ್‌ಸೈಟ್‌ನ ಯೂಸರ್‌ ಐಡಿ, ಪಾಸ್‌ವರ್ಡ್‌ ಪಡೆದು ಸಾರ್ವಜನಿಕರಿಗೆ ಮತದಾರರ ಗುರುತಿನ ಚೀಟಿ ತಯಾರಿಸಿಕೊಡುತ್ತಿದ್ದರು. ಅದಕ್ಕಾಗಿ ಅವರಿಂದ ಹಣ ಪಡೆಯುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಒಂದು ಐಡಿಗೆ 600ರೂ: ಚುನಾವಣೆ ಸಮೀಪಿಸುತ್ತಿದ್ದಂತೆ ಆರೋಪಿ ನವೀನ್‌ ಕುಮಾರ್‌, ಸಂಜಯ್‌ ಕುಮಾರ್‌ನನ್ನು ಸಂಪರ್ಕಿಸಿ ಹಣದ ಆಮಿಷವೊಡ್ಡಿ ಚುನಾವಣಾ ಆಯೋಗದ ಇಆರ್‌ಎಂಎಸ್‌ ವೈಬ್‌ಸೈಟ್‌ನ ಯೂಸರ್‌ ಐಡಿ, ಪಾಸ್‌ವರ್ಡ್‌ ಮತ್ತು ಡಿಜಿಟಲ್‌ ಕೀಗಳನ್ನು ಪಡೆದುಕೊಂಡಿದ್ದ.

ಬಳಿಕ ಸಚ್ಚಿನ್‌ ಮತ್ತು ದೇವರಾಜ್‌ ನಡೆಸುತ್ತಿದ್ದ ಸೈಬರ್‌ ಕೆಫೆಯಲ್ಲೇ ಕುಳಿತು ಅನಧಿಕೃತವಾಗಿ ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಿ ಗುರುತಿನ ಚೀಟಿ ನೀಡುತ್ತಿದ್ದ. ಇದಕ್ಕಾಗಿ ಪ್ರತಿಯೊಬ್ಬರಿಂದ ತಲಾ 500ರಿಂದ 600 ರೂ. ಪಡೆಯುತ್ತಿದ್ದ. ಆರೋಪಿಗಳು ನಕಲಿ ಮತದಾರರ ಗುರುತಿನ ಚೀಟಿಗಳನ್ನು ಮನೆ ಬಾಗಿಲಿಗೆ ತಲುಪಿಸುತ್ತಿದ್ದರು. ಹೀಗಾಗಿ ಸಾರ್ವಜನಿಕರು ಹಣ ಕೊಟ್ಟು ಹೆಸರು ನೊಂದಾಯಿಸುತ್ತಿದ್ದರು.

ಗಡುವು ಮುಗಿದರೂ ಬೆಳೆದ ಪಟ್ಟಿ!: ಬಿಬಿಎಂಪಿ ಅಧಿಕಾರಿಗಳು ಆಯೋಗದ ವೆಬ್‌ಸೈಟ್‌ ಪರಿಶೀಲಿಸಿದಾಗ ಹೊಸ ಮತದಾರರ ಪಟ್ಟಿಯಲ್ಲಿ ಆರೋಪಿಗಳು ಗುರುತಿನ ಚೀಟಿ ಮಾಡಿಸಿಕೊಟ್ಟವರ ದಾಖಲೆಗಳು ಅಪ್‌ಲೋಡ್‌ ಆಗಿರಲಿಲ್ಲ. ಕೆಲ ಪ್ರಕರಣಗಳಲ್ಲಿ ಗುರುತಿನ ಚೀಟಿ ಪಡೆದವರ ಮಾಹಿತಿ ಇರಲಿಲ್ಲ.

ಈ ಮಧ್ಯೆ ಏ.14ಕ್ಕೆ ಮತದಾರರ ಪಟ್ಟಿಗೆ ಸೇರ್ಪಡೆ ದಿನಾಂಕ ಮುಕ್ತಾಯವಾದರೂ ವೆಬ್‌ಸೈಟ್‌ನಲ್ಲಿ ದಿನದಿಂದ ದಿನಕ್ಕೆ ಹೆಸರುಗಳು ಹೆಚ್ಚುತ್ತಲೇ ಇದ್ದವು. ಇದರಿಂದ ಅನುಮಾನಗೊಂಡ ದಾಸರಹಳ್ಳಿ ವಲಯದ ಸಹಾಯಕ ಚುನಾವಣಾಧಿಕಾರಿ ನಾಗರತ್ನ ಹಾಗೂ ಹೇರೋಹಳ್ಳಿ ಉಪ ವಲಯ ಸಹಾಯಕ ಚುನಾವಣಾಧಿಕಾರಿ ಅನಂತರಾಮಯ್ಯ ಪೀಣ್ಯ ಪೊಲೀಸ್‌ ಠಾಣೆಗೆ ಈ ಕುರಿತು ದೂರು ನೀಡಿದ್ದರು.

5 ಲಕ್ಷ ಸಂಪಾದನೆ: ದಾಸರಹಳ್ಳಿ ಮತ್ತು ಯಶವಂತಪುರ ವಿಧಾನಸಭಾ ಕ್ಷೇತ್ರ ಹಾಗೂ ನಂದಿನಿಲೇಔಟ್‌, ಲಗ್ಗೆರೆ, ರಾಜಗೋಪಾಲನಗರ ವ್ಯಾಪ್ತಿಯ ಮತದಾರರನ್ನು ಸೆಳೆದು ಅಕ್ರಮ ದಂಧೆ ನಡೆಸುತ್ತಿದ್ದ ಆರೋಪಿಗಳು ಇದುವರೆಗೂ 900ರಿಂದ 1000 ನಕಲಿ ಗುರುತಿನ ಚೀಟಿಗಳನ್ನು ನೀಡಿ ವಂಚನೆ ಮಾಡಿದ್ದಾರೆ. ಹೀಗೆ 5 ಲಕ್ಷ ರೂ ಸಂಪಾದನೆ ಮಾಡಿರುವುದು ತನಿಖೆಯಿಂದ ಬೆಳಕಿಗೆ ಬಂದಿದೆ.

ನಮಗೂ ಕಾರ್ಡ್‌ ಬೇಕೆಂದ ಅಧಿಕಾರಿಗಳು: ಆರೋಪಿಗಳ ದಂಧೆ ಬಗ್ಗೆ ದೂರು ದಾಖಲಾಗುತ್ತಿದ್ದಂತೆ ಚುನಾವಣಾಧಿಕಾರಿಗಳ ಸಹಾಯ ಪಡೆದ ಪೊಲೀಸರು, ಅಕ್ರಮವಾಗಿ ಗುರುತಿನ ಚೀಟಿ ಪಡೆದ ಸಾರ್ವಜನಿಕರನ್ನು ಸಂಪರ್ಕಿಸಿದ್ದರು.

ಬಳಿಕ ನಮಗೂ ಗುರುತಿನ ಚೀಟಿ ಬೇಕಿದೆ ಎಂದು ಹೇಳಿ ಆರೋಪಿಗಳ ಬಗ್ಗೆ ಮಾಹಿತಿ ಪದೆಕೊಂಡು ಬಳಿಕ ನೇರವಾಗಿ ದೊಡ್ಡಬಿದರಕಲ್ಲಿನ ಸೈಬರ್‌ ಕೆಫೆಗೆ ಹೋಗಿ ಮತದಾರರ ಗುರುತಿನ ಚೀಟಿ ಬಗ್ಗೆ ವಿಚಾರಿಸಿದ್ದರು. ಆಗ ಸ್ಥಳದಲ್ಲಿದ್ದ ಆರೋಪಿ ನವೀನ್‌ ಕುಮಾರ್‌, ಗುರುತಿನ ಚೀಟಿ ಮಾಡಿಕೊಡುವುದಾಗಿ ಹೇಳಿದ. ಈ ಸಂದರ್ಭದಲ್ಲಿ ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ದಂಧೆಯ ಸಂಪೂರ್ಣ ಮಾಹಿತಿ ತಿಳಿದುಬಂದಿದೆ.

ಟಾಪ್ ನ್ಯೂಸ್

Railway-Minister-MP-DK

Udupi: ಕೊಂಕಣ ರೈಲು ವಿಲೀನಕ್ಕೆ ರೈಲ್ವೆ ಸಚಿವರಿಂದ ಸಹಮತ: ಕೋಟ ಶ್ರೀನಿವಾಸ ಪೂಜಾರಿ

BBK11: ನಿಮ್ಮನ್ನು ಆಚೆ ಕಳ್ಸಿಯೇ ನಾನು ಹೋಗೋದು ಚೈತ್ರಾ ವಿರುದ್ಧ ಗುಡುಗಿದ ರಜತ್

BBK11: ನಿಮ್ಮನ್ನು ಆಚೆ ಕಳ್ಸಿಯೇ ನಾನು ಹೋಗೋದು ಚೈತ್ರಾ ವಿರುದ್ಧ ಗುಡುಗಿದ ರಜತ್

Maharashtra; Ekmath hey to safe hey says Shivsena

Maharashtra: ಏಕ್‌ನಾಥ್‌ ಹೇ ತೋ ಸೇಫ್ ಹೇ: ಶಿಂಧೆ ಶಿವಸೇನೆ ಹೊಸ ಮಂತ್ರ

Ullal: ಎಂಡಿಎಂಎ ಸಾಗಾಟ: ಮೂವರ ಬಂಧನ

Ullal: ಎಂಡಿಎಂಎ ಸಾಗಾಟ: ಮೂವರ ಬಂಧನ

ವಿಷಸೇವಿಸಿ ಆತ್ಯಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ,ಚಿಕಿತ್ಸೆಗೆ ಸ್ಪಂದಿಸದೆ ಸಾವು

ವಿಷಸೇವಿಸಿ ಆತ್ಯಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ,ಚಿಕಿತ್ಸೆಗೆ ಸ್ಪಂದಿಸದೆ ಸಾವು

Draupadi Murmu addresses the joint House at the Old Parliament House

Old Parliament House: ಭಾರತದ ಸಂವಿಧಾನವು ಜೀವಂತಿಕೆಯ, ಪ್ರಗತಿಪರ ದಾಖಲೆ: ರಾಷ್ಟ್ರಪತಿ

Congress: ದ.ಕ ಗ್ರಾಮ ಪಂಚಾಯತ್‌; 24ರಲ್ಲಿ 19 ಸ್ಥಾನ ಕಾಂಗ್ರೆಸ್‌ ಬೆಂಬಲಿತರಿಗೆ ಗೆಲುವು

Congress: ದ.ಕ ಗ್ರಾಮ ಪಂಚಾಯತ್‌; 24ರಲ್ಲಿ 19 ಸ್ಥಾನ ಕಾಂಗ್ರೆಸ್‌ ಬೆಂಬಲಿತರಿಗೆ ಗೆಲುವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು 

Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು 

Drunk and Drive: ಮದ್ಯ ಸೇವಿಸಿ ಚಾಲನೆ: ವಾರದಲ್ಲಿ 71 ಲಕ್ಷ ದಂಡ

Drunk and Drive: ಮದ್ಯ ಸೇವಿಸಿ ಚಾಲನೆ: ವಾರದಲ್ಲಿ 71 ಲಕ್ಷ ದಂಡ

CCB Police: ವಕೀಲೆ ಜೀವಾ ಆತ್ಮಹತ್ಯೆ ಕೇಸ್‌ ಸಿಸಿಬಿಗೆ ವರ್ಗಾವಣೆ

CCB Police: ವಕೀಲೆ ಜೀವಾ ಆತ್ಮಹತ್ಯೆ ಕೇಸ್‌ ಸಿಸಿಬಿಗೆ ವರ್ಗಾವಣೆ

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Railway-Minister-MP-DK

Udupi: ಕೊಂಕಣ ರೈಲು ವಿಲೀನಕ್ಕೆ ರೈಲ್ವೆ ಸಚಿವರಿಂದ ಸಹಮತ: ಕೋಟ ಶ್ರೀನಿವಾಸ ಪೂಜಾರಿ

BBK11: ನಿಮ್ಮನ್ನು ಆಚೆ ಕಳ್ಸಿಯೇ ನಾನು ಹೋಗೋದು ಚೈತ್ರಾ ವಿರುದ್ಧ ಗುಡುಗಿದ ರಜತ್

BBK11: ನಿಮ್ಮನ್ನು ಆಚೆ ಕಳ್ಸಿಯೇ ನಾನು ಹೋಗೋದು ಚೈತ್ರಾ ವಿರುದ್ಧ ಗುಡುಗಿದ ರಜತ್

Maharashtra; Ekmath hey to safe hey says Shivsena

Maharashtra: ಏಕ್‌ನಾಥ್‌ ಹೇ ತೋ ಸೇಫ್ ಹೇ: ಶಿಂಧೆ ಶಿವಸೇನೆ ಹೊಸ ಮಂತ್ರ

2

Malpe: ಬೋಟಿನಲ್ಲಿದ್ದ ಮೀನುಗಾರ ನಾಪತ್ತೆ; ಪ್ರಕರಣ ದಾಖಲು

crime

Padubidri: ಸ್ಕೂಟಿಯಿಂದ ಬಿದ್ದು ಮಹಿಳೆಗೆ ತೀವ್ರ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.